Astrology: ದಿನಭವಿಷ್ಯ: ಮಕ್ಕಳ ಆರೋಗ್ಯದ ಮೇಲೆ ಗಮನವಿಡಿ, ಸುಮ್ಮನೇ ಎಲ್ಲದಕ್ಕೂ ತಲೆ ಆಡಿಸಬೇಡಿ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 30 ಮೇ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ದಿನಭವಿಷ್ಯ: ಮಕ್ಕಳ ಆರೋಗ್ಯದ ಮೇಲೆ ಗಮನವಿಡಿ, ಸುಮ್ಮನೇ ಎಲ್ಲದಕ್ಕೂ ತಲೆ ಆಡಿಸಬೇಡಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: May 30, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮೇ​​​​​ 30ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವೈಧೃತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 56 ನಿಮಿಷಕ್ಕೆ, ರಾಹು ಕಾಲ 14:07ರಿಂದ 15:44ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:04 ರಿಂದ ಬೆಳಿಗ್ಗೆ 07:41ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:17 ರಿಂದ ಬೆಳಿಗ್ಗೆ 10:540ರ ವರೆಗೆ.

ಮೇಷ ರಾಶಿ: ಭೂಮಿಯ ಉತ್ಪನ್ನವನ್ನು ತಯಾರಿಸುತ್ತಿದ್ದರೆ ಉತ್ತಮ‌ ಲಾಭವಿದೆ. ಸಾಲಬಾಧೆಯಿಂದ ಕೆಟ್ಟ ಕೆಲಸವನ್ನು ಮಾಡಲು ಪ್ರೇರಣೆಯಾಗಬಹುದು. ಇದರಿಂದ ಇನ್ನಷ್ಟು ತೊಂದರೆ ಸಿಕ್ಕಿಹಾಕಿಕೊಳ್ಳುವ ಸ್ಥಿತಿ ಎದುರಾದೀತು. ಸ್ನೇಹಿತರು ನಿಮ್ಮ ಜೊತೆಗೇ ಇದ್ದು ನಿಮ್ಮ ಎಲ್ಲ ಆಗುಹೋಗುಗಳಿಗೂ ಜೊತೆಯಾಗುವರು. ಅಜ್ಞಾನವನ್ನು ತೋರಿಸಿ, ಅಪಮಾನಗೊಳ್ಳಬೇಡಿ. ಉದ್ವಿಗ್ನಗೊಳ್ಳದೇ ಸಮಾಧಾನದಿಂದ ಇರಬೇಕಾದ ಅವಶ್ಯಕತೆಯಿದೆ. ನಿಮ್ಮ ಆದಾಯ ಮತ್ತು ಖರ್ಚಿಗೆ ನೀವು ಯೋಜನೆ ಸಿದ್ಧಪಡಿಸಿದರೆ ಅದು ನಿಮಗೆ ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಪ್ರಯತ್ನಗಳಲ್ಲಿ ನೀವು ತೊಡಗಿರುವಿರಿ. ಇದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕಾರ್ಯಗಳನ್ನು ಹಂಚಿ ನೀವು ನಿಶ್ಚಿಂತರಾಗುವಿರಿ. ಯಾರದ್ದಾದರೂ ಪ್ರಲೋಭನೆಗೆ ಒಳಗಾಗುವ ಸಾಧ್ಯತೆ ಇದೆ. ಯಾರದೋ ಕೆಲಸವನ್ನು ಮಾಡಿಕೊಡಬೇಕಾಗುವುದು. ಯಾರದೋ ಕೋಪಕ್ಕೆ ಇನ್ಯಾರನ್ನೋ ದೂರುವಿರಿ.

ವೃಷಭ ರಾಶಿ: ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಆತುರದ ತೀರ್ಮಾನ ಹಾಗೂ ಒತ್ತಡಗಳಿಗೆ ಸಿಲಿಕದೇ ಎಚ್ಚರಿಕೆಯಿಂದಿರಿ. ಕೊಟ್ಟ ಸಾಲ ಮರಳಿಬರಹುದು. ಸ್ನೇಹಿತರ ಒತ್ತಾಯ ಮೇರಗೆ ಸುತ್ತಾಟ ನಡೆಸುವಿರಿ. ಆಯಾಸವಾಗಿ ವಿಶ್ರಾಂತಿಯನ್ನು ಪಡೆಯುವಿರಿ. ನಿಮ್ಮ ವಿರುದ್ಧ ಸಲ್ಲದ ಮಾತುಗಳು ಕೇಳಿಬರಬಹುದು. ಅಸಮರ್ಪಕ ಸಮಯದ ಹೊಂದಾಣಿಕೆಯಿಂದ ಕಷ್ಟವಾಗುವುದು. ಸಮರ್ಥನೆಯನ್ನು ಕೊಟ್ಟು ಸಮಯವನ್ನು ವ್ಯರ್ಥಮಾಡಬೇಡಿ. ಸ್ವಲ್ಪ‌ಕಾಲದಲ್ಲಿ ಎಲ್ಲವೂ ಸ್ಪಷ್ಟವಾಗಿ ಗೋಚರವಾಗುವುದು. ಆರ್ಥಿಕ ಯೋಜನೆಗಳಿಗೆ ಉತ್ತೇಜನ ದೊರೆಯಲಿದೆ. ನಿಮ್ಮ ಕೆಲವು ಹೊಸ ಪ್ರಯತ್ನಗಳು ಫಲ ನೀಡುತ್ತವೆ. ನಿಮ್ಮ ವೈಯಕ್ತಿಕ ಕಾರ್ಯಗಳು ಹಲವು ಹಾಗಯೇ ಉಳಿದುಕೊಂಡಿರುವುದು. ಸಾಲದ ಬಾಧೆಯು ನಿಮ್ಮ ಮನಸ್ಸನ್ನು ಚುಚ್ಚುವುದು. ನೆಮ್ಮದಿಗೆ ನಿಮ್ಮದೇ ಮಾರ್ಗವನ್ನು ಅನುಸರಿಸಿ.

ಮಿಥುನ ರಾಶಿ: ಇಂದು ನಿಮಗೆ ಕುಟುಂಬ ಜೊತೆ ಸಲುಗೆಯಿಂದ ಕಾಲವನ್ನು ಕಳೆಯುವ ಮನಸ್ಸಿರುವುದು. ಕಾರ್ಯದ ಒತ್ತಡದಿಂದ ಪೂರ್ತಿಯಾಗಿ ಆಗದೇ ಹೋಗಬಹುದು. ಸಹೋದರರಿಂದ ಉದ್ಯೋಗಕ್ಕೆ ಸಂಬಂಧಿಸಿದ ಕೆಲವು ಮಾಹಿತಿಗಳು ಸಿಗಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಹಣದ ಅಭಾವವಾಗಲಿದೆ. ಜವಾಬ್ದಾರಿಯ ಸ್ಥಾನವನ್ನು ಸರಿಯಾಗಿ ನಿರ್ವಹಿಸಬೇಕಾಗುವುದು. ಇದೇ ನಿಮಗೆ ಛಲವಾಗಿಯೂ ಪರಿಣಾಮ ಬೀರಿ ಉತ್ತಮವಾದ ಯೋಜನೆಗಳನ್ನು ರೂಪಿಸಿ. ಪ್ರೇಮವು ಅಂಕುರಿಸಬಹುದು. ಸ್ಪರ್ಧಾಮನೋಭಾವವಿಲ್ಲದೇ ಎಲ್ಲರ ಜೊತೆ ಖುಷಿಯಿಂದ ಭಾಗವಹಿಸಿ. ಉದಾಸೀನತೆಯೇ ನಿಮ್ಮ ಉದ್ಯೋಗಕ್ಕೆ ಮುಳುವಾಗಬಹುದು. ಉದ್ಯಮದ ಕಾರಣಕ್ಕೆ ಅಧಿಕ ಸುತ್ತಾಟವು ಇರುವುದು. ಪ್ರೀತಿಯನ್ನು ನೀವು ಒಪ್ಪಿಕೊಳ್ಳದೇ ನಿಮ್ಮದೇ ವಾದ ಮಾಡುವಿರಿ. ಸಂಗಾತಿಯ ಮಾತುಗಳು ನಿಮಗೆ ಕಿರಿಕಿರಿಯನ್ನು ಕೊಡುವುದು.

ಕಟಕ ರಾಶಿ: ನೀವು ಹಣವನ್ನು ಯಾವುದಕ್ಕೂ ಖರ್ಚು ಮಾಡದೇ ಜಿಪುಣ ಎನಿಸಬಹುದು. ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ. ಘಟನೆಗಳು ಉತ್ತಮ ಮತ್ತು ಗೊಂದಲಮಯವಾಗಿರುವ ಒಂದು ದಿನ – ಇದು ನಿಮ್ಮನ್ನು ದಣಿವು ಹಾಗೂ ಗೊಂದಲದಲ್ಲಿರಿಸುತ್ತದೆ. ಒತ್ತಡಗಳಿಂದ ನಿಮಗೆ ಸಂಕಟವಾಗಬಹುದು. ಮಕ್ಕಳ ಆರೋಗ್ಯದ ಮೇಲೆ ಗಮನಬೇಕಿದೆ. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯವಾಗಿದೆ. ಆಪ್ತರು ಎನಿಸಿದ ಸ್ನೇಹಿತರ ಜೊತೆ ಆಗಿದ್ದ ನೋವನ್ನು ಹೇಳಿಕೊಂಡು ಹಗುರಾಗಿ. ವೈಯಕ್ತಿಕ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳಿಕೊಳ್ಳುವುದು ಕಷ್ಟವಾದೀತು. ಸುಮ್ಮನೇ ಎಲ್ಲದಕ್ಕೂ ಒಪ್ಪಿಗೆಯನ್ನು ಸೂಚಿಸುವುದು ಬೇಡ. ಬೇಕಾದವರನ್ನು ಮಾತಿನಿಂದ ದೂರ ಮಾಡಿಕೊಳ್ಳುವಿರಿ. ಕಛೇರಿಯಲ್ಲಿ ನಿಮ್ಮ ಅಭಿಪ್ರಾಯವೂ ಮುಖ್ಯವಾಗಬಹುದು.