Horoscope 28 March: ದಿನಭವಿಷ್ಯ; ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ, ವೃತ್ತಿಯಲ್ಲಿ ಸವಾಲುಗಳು ಎದುರಾಗಬಹುದು

Rashi Bhavishya: 2024 ಮಾರ್ಚ್​ 28 ಗುರುವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಇಂದಿನ ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope 28 March: ದಿನಭವಿಷ್ಯ; ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ, ವೃತ್ತಿಯಲ್ಲಿ ಸವಾಲುಗಳು ಎದುರಾಗಬಹುದು
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 28, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ತೃತೀಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಹರ್ಷಣ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 32 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:09 ರಿಂದ 03:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:32 ರಿಂದ 08:03ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:35 ರಿಂದ 11:06

ಮೇಷ ರಾಶಿ: ಜನಸಾಮಾನ್ಯರಂತೆ‌ ವರ್ತಿಸುವುದು ಇಷ್ಟವಾಗಬಹುದು. ದೈನಂದಿನ ಖರ್ಚುಗಳನ್ನು ಸುಲಭವಾಗಿ ಪೂರೈಸಲು ಬೇರೆ ಬೇರೆ ಮಾರ್ಗವನ್ನು ಆಯ್ದುಕೋಳ್ಳು. ವ್ಯಾಪಾರಿಗಳಿಗೆ ಇಂದು ಮಿಶ್ರ ಫಲಿತಾಂಶ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಯಾವುದನ್ನೂ ಮಾತನಾಡಿದಷ್ಟು ಸುಲಭವಾಗಿ ಮಾಡಲಾಗದು. ತಾಳ್ಮೆಯಿಂದ ಕೆಲಸವನ್ನು ಮಾಡುವುದು ಉತ್ತಮ. ದುಡುಕುವ ಸನ್ನಿವೇಶದಲ್ಲಿ ಸುಮ್ಮನಿದ್ದುಬಿಡುವುದು ಉತ್ತಮ. ವಿದ್ಯಾರ್ಥಿಗಳು ತಮ್ಮ ಬುದ್ಧಿವಂತಿಕೆಯನ್ನು ತೋರಿಸಬಹುದು. ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ಸ್ನೇಹಿತರಿಂದ ಅಲ್ಪ ಆರ್ಥಿಕ ಲಾಭವು ನಿಮಗೆ ಸಿಗುವುದು.

ವೃಷಭ ರಾಶಿ: ನಿಮ್ಮ ನೂತನ ಸಂಗಾತಿಯ ಜೊತೆ ನಿಮ್ಮ ಮಾತುಗಳು ಹೆಚ್ಚು ಪ್ರಬುದ್ಧವಾಗುತ್ತದೆ. ಹಣದ ವಿಷಯದಲ್ಲಿ ಈ ದಿನ ಅಷ್ಟು ಉತ್ತಮವಲ್ಲ. ಹಣ ಸಂಪಾದಿಸುವ ಬಂದರೂ ಅವಕಾಶ ನಿಮ್ಮ ಕೈಯಿಂದ ಜಾರಿಕೊಳ್ಳಬಹುದು. ಈ ಸಮಯವು ನಿಮಗೆ ಬಹಳ ಮುಖ್ಯವಾಗಿರಲಿದೆ. ವ್ಯಾಪಾರಿಗಳು ಇಂದು ಯಾವುದೇ ಹೊಸ ಮಾಡಿಕೆ ಮಾಡಲು ಹೋಗಬೇಡಿ. ನಿಮಗೆ ತೃಪ್ತಿಯಾಗುವ ಕೆಲಸವನ್ನು ಮಾಡುವಿರಿ. ಹೂಡಿಕೆಯ ಕಾರಣ ಆರ್ಥಿಕವಾಗಿ ಕಷ್ಟವಾಗಬಹುದು. ಕುಟುಂಬದ ಜೊತೆಗಿನ ನಿಮ್ಮ ಈ ದಿನವು ಉತ್ತಮವಾಗಿರುತ್ತದೆ. ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ನಿಮ್ಮ ಆವಿಷ್ಕಾರಕ್ಕೆ ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ. ನೋವನ್ನು ನುಂಗಿ ಬದುಕುವ ರೀತಿಯು ನಿಮಗೆ ಗೊತ್ತಾಗಲಿದೆ. ಇನ್ನೊಬ್ಬರನ್ನು ನೋವನ್ನು ನೀವು ಅರ್ಥ ಮಾಡಿಕೊಳ್ಳದೇ ವ್ಯವಹತಿಸುವಿರಿ.

ಮಿಥುನ ರಾಶಿ: ನಿಮ್ಮ ಎಲ್ಲ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಮಾಡುವಿರಿ. ಎಂತಹ ಸ್ಥಿತಿಯನ್ನೂ ಎದುರಿಸುವ ಆತ್ಮಬಲವು ನಿಮ್ಮದಾಗುವುದು. ವೈವಾಹಿಕ ಮಾತುಕತೆಗಳನ್ನು ಇಂದೇ ಮಾಡುವುದು ಉತ್ತಮ. ಆದಾಯದ ನಿಖರತೆಯನ್ನು ಸ್ಪಷ್ಟವಾಗಿಸಿಕೊಂಡು ಏನನ್ನಾದರೂ ಖರೀದಿಸುವಿರಿ. ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ. ನಿಮ್ಮ ಆಲೋಚನೆಗಳು ಅಸ್ಥಿರ ಮತ್ತು ದ್ವಂದ್ವಗಳಿಂದ ಕೂಡಿರುತ್ತದೆ. ವಾಹನ ಸೌಕರ್ಯವು ಪ್ರಾಪ್ತಿಯಾಗಲಿದೆ. ನಿಮ್ಮ ದ್ವಂದ್ವ ನೀತಿಯು ಮನೆಯವರಿಗೆ ಕಷ್ಟವಾಗುವುದು. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ಹೊಸ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯವು ಸಾಲದು. ಅಪರಿಚಿತರ ಜೊತೆ ಸಲುಗೆ ಅನವಶ್ಯಕ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ.

ಕಟಕ ರಾಶಿ: ನಿಮಗೆ ಇಂದು ದೇಹದ ಬಗ್ಗೆ ಮೋಹ ಆರಂಭವಾಗಿ, ದೇಹವನ್ನು ಸುಂದರ ಮಾಡಿಕೊಳ್ಳುವ ಬಗ್ಗೆ ಚಿಂತೆ ಮಾಡುವಿರಿ. ಖಾಸಗಿ ಹಾಗೂ ವೃತ್ತಿಯ ಜೀವನವನ್ನು ತಳಕುಹಾಕಿಕೊಳ್ಳಬಾರದು. ಉದ್ಯಮಿಗಳು ಇಂದು ಬಯಸಿದ ಲಾಭವನ್ನು ಪಡೆಯುತ್ತಾರೆ. ನಿಮ್ಮ ಆಕಾರ್ಷಕ ಸ್ವಭಾವದಿಂದ ಬೇಕಾದುದನ್ನು ಪಡೆಯುವಿರಿ. ವ್ಯಾಪಾರದಲ್ಲಿ ಇಂದು ಗಮನಾರ್ಹ ಬದಲಾವಣೆ ಅಗಲಿದೆ. ಸುಲಭವಾದ ಕಾರ್ಯವನ್ನು ಕಷ್ಟದಿಂದ ಮಾಡಬೇಕಾಗುವುದು. ರೋಗಕ್ಕೆ ಸೂಕ್ತ ಚಿಕಿತ್ಸೆಯನ್ನು ಮಾಡಿಕೊಳ್ಳುವ ಕಡೆ ಗಮನವಿರಲಿ. ಅತಿಯಾದ ನಿಮ್ಮ ಸೂಕ್ಷ್ಮ ಸ್ವಭಾವದಿಂದ ನಿಮಗೇ ತೊಂದರೆಯಾಗುತ್ತದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಿ. ಮನಸ್ಸಿನ ಶಾಂತಿಯನ್ನು ಪಡೆಯಲು ಶ್ರಮಿಸಬೇಕು. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ.

ಸಿಂಹ ರಾಶಿ: ಇಂದಿನ ನಿಮ್ಮ ಮಾತುಗಳು ವಿವಾದಕ್ಕಾಗಿಯೇ ಆಡಿದಂತೆ ಕಾಣಿಸುವುದು. ಇನ್ನೊಬ್ಬರ ಹಣದ ಮೂಲದ ಬಗ್ಗೆ ಅಧಿಕ ಆಸಕ್ತಿ ಇರಲಿದೆ. ಕೆಲವನ್ನು ನೀವೇ ಮಾಡಿಕೊಳ್ಳುವ ತೊಡಕುಗಳಾಗಿವೆ. ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯದಲ್ಲಿ ಯಶಸ್ಸನ್ನು ಪಡೆಯುವ ಸುಲಭವಾದ ದಾರಿ ಸಿಗಬಹುದು. ಆದಷ್ಟು ಬೇಗ ಪ್ರೇಮಿಯನ್ನು ನೋಡುವ ತವಕದಲ್ಲಿ ಇರುವಿರಿ. ಸಂಗಾತಿಯಾಗುವವರ ಬಗ್ಗೆ ವಿವರಗಳನ್ನು ಪಡೆದುಕೊಳ್ಳುವಿರಿ. ಮೇಲಧಿಕಾರಿಗಳ ನಿಮ್ಮ ಬಗ್ಗೆ ಋಣಾತ್ಮಕವಾಗಿ ನೀಡಿದ ಹೇಳಿಕೆಯು ನಿಮಗೆ ನೋವುಂಟು ಮಾಡಬಹುದು. ಈ ದಿನ ನೀವು ಆಲಸ್ಯದಿಂದ ಇರುವಿರಿ. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ನೀಡಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ. ಕೆಲವರ ಸ್ವಭಾವು ಇಷ್ಟವಾಗದೇ ಅವರಿಂದ ದೂರವಿರಲು ಪ್ರಯತ್ನಿಸುವಿರಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ.

ಕನ್ಯಾ ರಾಶಿ: ನಿಮ್ಮ ಇಂದು ಸ್ಥಿತಿಯು ಭವಿಷ್ಯಕ್ಕೆ ಸಂಬಂಧಿಸಿದ ಗಟ್ಟಿಯಾದ ನಿರ್ಧಾರವನ್ನು ಪಡೆಯಲಾರಿರಿ. ನಿಮ್ಮ ಕಟ್ಟುಪಾಡುಗಳು ನಿಮ್ಮನ್ನೇ ಬಂಧಿಸಬಹುದು. ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಅಸಭ್ಯ ವರ್ತನೆ ಇಂದು ನಿಮ್ಮ ಒತ್ತಡವನ್ನು ಹೆಚ್ಚಿಸಬಹುದು. ವ್ಯಾಪಾರಸ್ಥರು ಆರ್ಥಿಕವಾಗಿ ಲಾಭ ಪಡೆಯಬಹುದು. ವಿಶೇಷವಾಗಿ ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ, ನಿಮ್ಮ ಸರಿಯಾದ ನಿರ್ಧಾರಗಳಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಆರೋಗ್ಯದ ದೃಷ್ಟಿಯಿಂದ ಇಂದು ಸರಾಸರಿ ದಿನವಾಗಿರುತ್ತದೆ. ಇನ್ನೊಬ್ಬರ ಬಗ್ಗೆ ತೋರುವ ಸಹಾನುಭೂತಿಯು ಬೇರೆಯವರಿಗೆ ಇಷ್ಟವಾಗುವುದು. ನಿಮ್ಮ ಸಂಗಾತಿಗೆ ಒತ್ತಡಕ್ಕೆ ಇಂದಿನ ಕಾರ್ಯವನ್ನು ಮಾಡಬೇಕಾಗುವುದು. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಯಾರದೋ ಮೂಲಕ ಸರ್ಕಾರಿ ಕೆಲಸದಲ್ಲಿ ಯಶಸ್ಸನ್ನು ಕಾಣುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು ಶ್ರಮವು ಅಪೇಕ್ಷಿತವಾಗಬಹುದು.

ತುಲಾ ರಾಶಿ: ಇಂದು ನಿಮ್ಮ ದಾಂಪತ್ಯದಲ್ಲಿ ಎಂದಿಗಿಂತ ಹೆಚ್ಚಿನ ಶಾಂತಿ ಇರಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿಸಲು ಎಲ್ಲರ ಪಾತ್ರ ಇರುವುದು. ಉದ್ಯಮ‌ಕ್ಷೇತ್ರದಲ್ಲಿ ಬದಲಾವಣೆಯ ಅವಶ್ಯಕತೆ ಇರಲಿದೆ. ಕಚೇರಿಯಲ್ಲಿ, ನಿಮ್ಮ ಕೆಲಸದ ಮೇಲೆ ಸಂಪೂರ್ಣವಾಗಿ ಗಮನಹರಿಸಲು ಆಗದು. ಹೊಸ ಯೋಜನೆಯನ್ನು ಸಣ್ಣ ಅಂತರದಲ್ಲಿ ಕೈ ತಪ್ಪಬಹುದು. ಅಧಿಕ ಖರ್ಚಿನ ಕಾರಣ ಹೆಚ್ಚಿನ ಆದಾಯದ ಕಡೆ ನಿಮಗೆ ಆಸಕ್ತಿ ಬರುವುದು. ನಿಮ್ಮ ಬಗ್ಗೆ ನೀವೇ ಆಡಿಕೊಳ್ಳುವುದು ಸರಿಯಾಗದು. ಎಲ್ಲವನ್ನೂ ಲಘುವಾಗಿ ತೆಗೆದುಕೊಂಡರೆ ಕಷ್ಟವಾಗಬಹುದು. ಹೆಚ್ಚಿನ ಹೂಡಿಕೆಗೆ ಒತ್ತು ನೀಡುವಿರಿ. ಇಂದು ಮಹಿಳೆಯ ಪಾತ್ರ ನಿಮ್ಮ ಜೀವನದಲ್ಲಿ ಪ್ರಮುಖಗಬಹುದು. ಮಕ್ಕಳಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ತೊಡಕಾಗಬಹುದು.

ವೃಶ್ಚಿಕ ರಾಶಿ: ಇಂದು ನಿಮಗೆ ಕುಟುಂಬದ ಹಿರಿಯ ಲ ಸದಸ್ಯರ ಆರೋಗ್ಯವು ಉತ್ತಮವಾಗಿಲ್ಲದ ಕಾರಣ ಇಂದು ನೀವು ಅವರಿಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುಬುದು. ಸಂಗಾತಿಯ ಜೊತೆಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ವ್ಯಾಪಾರದಲ್ಲಿ ಆರ್ಥಿಕ ವಹಿವಾಟು ಚನ್ನಾಗಿರಲಿದೆ. ದೊಡ್ಡ ಪ್ರಯೋಜನಗಳನ್ನು ಪಡೆಯಲು ಸಣ್ಣ ದಾರಿ ಬೇಡ. ಯಾವುದೋ ಕಾರಣಕ್ಕೆ ದೂರ ಇಟ್ಟವರು ಇಂದು ನಿಮ್ಮ ಬಳಿ ಬರಬಹುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಅನ್ಯರಿಂದ ಪ್ರೋತ್ಸಾಹ ಸಿಗುವುದು. ಆಕಾಂಕ್ಷೆಗಳನ್ನು ಪೂರೈಸುವ ಅವರ ಸಾಧನೆಗಳಿಗೆ ಸಾಕ್ಷಿಯಾಗುತ್ತದೆ. ಮಹಿಳೆಯ ಕಾರಣದಿಂದ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಆರೋಗ್ಯದ ಸುಧಾರಣೆಗೆ ಖರ್ಚಾಗುವುದು. ಇನ್ಮೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು. ಇಂದು ನಿಮಗೆ ಬಂಧನದಂತೆ ಅನ್ನಿಸಬಹುದು.‌ ಭಯದಿಂದ ಕೆಲಸ ಮಾಡಿಸಿಕೊಳ್ಳುವಿರಿ.

ಧನು ರಾಶಿ: ಇಂದು ಕೋಪದ ಬದಲಿಗೆ ತಾಳ್ಮೆಯಿಂದ ಆಗಬೇಕಾದ ಕೆಲಸವನ್ನು ಪೂರ್ಣಮಾಡಿ.‌ ಆದಾಯದ ಮೂಲದಿಂದ ಕಡಿಮೆ ಹಣವು ಸಿಗಲಿದೆ. ನೀವು ಹೂಡಿಕೆ ಮಾಡಿದ್ದರೆ, ನೀವು ಸರಿಯಾದ ಫಲಿತಾಂಶವನ್ನು ಪಡೆಯಬಹುದು. ನೀವು ಹೊಸ ಆಸ್ತಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ ನೀವು ಮುಂದುವರಿಯಬಹುದು. ಕಚೇರಿಯ ವಾತಾವರಣವು ಸಕಾರಾತ್ಮಕವಾಗಿರುತ್ತದೆ. ಅನಗತ್ಯ ಚಿಂತೆಗಳಿಂದ ದೂರವಿರಿ. ನಿಮ್ಮ ಸಿಟ್ಟಿನ ಸ್ವಭಾವದಿಂದ ಏನನ್ನೂ ಸಾಧಿಸಲಾಗದು. ಸಾಮಾಜಿಕ ಕಾರ್ಯಗಳಿಗೆ ಬೇಕಾದ ತಂಡವನ್ನು ಕಟ್ಟುವ ಆಸೆ ಇರುವುದು. ಯಾರನ್ನೋ ನೋಡಿ ನೀವು ಅಸೂಯೆ ಪಡೆಯುವುದು ಬೇಡ.‌ ಹೊರಗಿನ ಆಹಾರದಿಂದ ಸಂತೋಷವಾಗಬಹುದು. ಉದ್ವೇಗಕ್ಕೆ ಒಳಗಾಗುವುದು ಬೇಡ, ಉತ್ತಮ ಸಮಯದ ನಿರೀಕ್ಷೆಯಲ್ಲಿ ನೀವು ಇರುವಿರಿ. ದೂರದ ಬಂಧುಗಳ ಸಮಾಗಮವಾಗಬಹುದು. ಜನರ ಜೊತೆ ಬೆರೆಯುವುದು ನಿಮಗೆ ಇಷ್ಟವಾಗದು.

ಮಕರ ರಾಶಿ: ಇಂದು ವಿದ್ಯಾರ್ಥಗಳಿಗೆ ವಿದ್ಯಾಭ್ಯಾಸಕ್ಕೆ ಉತ್ತಮ‌ ದಿನವಾಗಲಿದೆ. ವ್ಯಾಪಾರದವರು ಹಣಕಾಸಿನ ನಷ್ಟವಾಗಬಹುದು. ಆತುರಾತುರವಾಗಿ ತೆಗೆದುಕೊಳ್ಳುವ ನಿರ್ಧಾರವು ಅಸ್ಪಷತಟವಾಗಿ ಇರುವುದು. ನಿಮ್ಮ ಆರ್ಥಿಕ ಸ್ಥಿತಿಯು ಇಂದು ಸಾಮಾನ್ಯವಾಗಿರುತ್ತದೆ. ಹಾಗಾಗಿ ಹೆಚ್ಚು ಹಣ ಖರ್ಚು ಮಾಡಬೇಡಿ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ. ಇಂದು ರಾಜಕೀಯದಲ್ಲಿ ಆದ ಬೆಳವಣಿಗೆಯು ನಿಮ್ಮ ಪರವಾಗಿ ಇರುವುದು. ಪ್ರಭಾವಿ ವ್ಯಕ್ತಿಗಳಿಂದ ತೊಂದರೆಯು ದೂರಾಗಬಹುದು. ನಿಮಗೆ ಹಿಡಿಸದ ವಿಚಾರದಲ್ಲಿ ಪ್ರಯತ್ನವನ್ನು ಮುಂದುವರಿಸುವುದು ಯೋಗ್ಯವಾಗದು. ಉದ್ಯೋಗದ ಸ್ಥಳದಲ್ಲಿ ನೀವು ಸಹೋದ್ಯೋಗಿಗಳ ಜೊತೆ ಸ್ನೇಹಪರ ವಾತಾವರಣದಲ್ಲಿ ಕೆಲಸ ಮಾಡಲು ಇಂದು ಸಾಧ್ಯವಾಗುತ್ತದೆ. ಹೊಸ ವ್ಯವಹಾರಕ್ಕೆ ಹಿಂದೇಟು ಹಾಕುವಿರಿ. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು.

ಕುಂಭ ರಾಶಿ: ಜೀವನದಲ್ಲಿ ಏರಿಳಿತಗಳಿರಬಹುದು. ಪ್ರತಿಕೂಲ ಸಂದರ್ಭಗಳಲ್ಲಿ, ನಿಮ್ಮ ಪ್ರೀತಿಪಾತ್ರರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮವಾಗಿದೆ. ಬಾಕಿ ಇರುವ ಕೆಲಸದ ಹೊರೆ ಹೆಚ್ಚಾಗಬಹುದು. ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕುಟುಂಬ ಸದಸ್ಯರಿಂದ ನೀವು ಭಾವನಾತ್ಮಕ ಬೆಂಬಲವನ್ನು ಪಡೆಯುತ್ತೀರಿ. ಸತತ ಓಡಾಟದಿಂದ ಆರೋಗ್ಯದಲ್ಲಿ ಸಮಸ್ಯೆಯಾಗಬಹುದು. ಬಹಳ ದಿನಗಳಿಂದ ಬಾರದೇ ಇರುವ ಹಣಕ್ಕೆ ಚಿಂತೆ ಮಾಡಿಕೊಳ್ಳುವಿರಿ. ಮೇಲಧಿಕಾರಿಗಳ ಪ್ರಶಂಸೆಯು ನಿಮಗೆ ಮಾಡುವ ಕೆಲಸದಲ್ಲಿ ಉತ್ಸಾಹ ಹೆಚ್ಚಿಸುವುದು. ನೀವು ಕಾಲ್ಪನಿಕ ಪ್ರಪಂಚಕ್ಕೆ ಪ್ರಯಾಣಿಸುವಿರಿ. ಕುಟುಂಬದ ವಿಷಯಗಳಲ್ಲಿ ಆಸಕ್ತಿ ವಹಿಸುತ್ತೀರಿ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ನೀವು ಹಣಕಾಸಿನ ವ್ಯವಹಾರಗಳಿಗೆ ಹೆಚ್ಚು ಗಮನ ಹರಿಸಬಹುದು.

ಮೀನ ರಾಶಿ: ಇಂದು ವ್ಯಾಪಾರಸ್ಥರು ಹೊಸ ಯೋಜನೆಯಲ್ಲಿ ಕೆಲಸವನ್ನು ಆರಂಭಿಸಲು ಭಯಪಡುವರು. ನಿಮ್ಮ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿಮಗೆ ಸಲಹೆ ಬೇಕಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಸುಧಾರಿಸಿದ್ದು ಹೆಚ್ಚು ಅನುಕೂಲತೆ ಒದಗುವುದು. ಕುಟುಂಬ ಸದಸ್ಯರಿಂದ ನೀವು ಭಾವನಾತ್ಮಕ ಬೆಂಬಲವನ್ನು ಪಡೆಯುತ್ತೀರಿ. ನಿಮ್ಮ ಸ್ನೇಹಿತರ ಒತ್ತಾಯಕ್ಕೆ ಅನವಶ್ಯಕ ವಸ್ತುವಾದರೂ ಖರೀದಿಸುವಿರಿ. ವೃತ್ತಿಯಲ್ಲಿ ಸವಾಲುಗಳು ಬರಬಹುದು. ಎಲ್ಲ ಕಡೆಗಳಿಂದ ಸಕಾರಾತ್ಮಕ ಫಲಿತಾಂಶವನ್ನು ನಿರೀಕ್ಷಿಸುವಿರಿ. ಇಂದು ಬಿಡುವಿಲ್ಲದ ದಿನವಾಗಿರುವುದು. ಕೆಲವು ವಿಚಾರಕ್ಕೆ ತುಂಬಾ ಭಾವುಕರಾಗಬಹುದು. ವ್ಯಾವಹಾರಿಕ ಮಾತುಗಳನ್ನು ಬಿಟ್ಟು ಬೇರೆ ಮಾತನಾಡಲು ಸಂಯಮವಿಲ್ಲದೆ ಇರಬಹುದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆದಷ್ಟು ಸ್ಥಿರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಜಲಮೂಲಗಳಿಂದ ಆದಾಯ ಸಿಗಬಹುದು. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯುವಿರಿ.

ಲೋಹಿತ ಹೆಬ್ಬಾರ್-8762924271 (what’s app only)

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ