AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿತ್ಯ ಭವಿಷ್ಯ; ತಮ್ಮ ವರ್ತನೆಯಿಂದ ಈ ರಾಶಿಯವರಿಗೆ ಅಧಿಕಾರವು ಸಿಗಬಹುದು, ಅನುಮಾನದ ಸ್ವಭಾವ ಬೇಡ

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 10 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ತಮ್ಮ ವರ್ತನೆಯಿಂದ ಈ ರಾಶಿಯವರಿಗೆ ಅಧಿಕಾರವು ಸಿಗಬಹುದು, ಅನುಮಾನದ ಸ್ವಭಾವ ಬೇಡ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Apr 10, 2024 | 12:10 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಅಶ್ವಿನಿ, ಯೋಗ: ವಿಷ್ಕಂಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:34 ರಿಂದ 02:07ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:56 ರಿಂದ 09:29 ರ ವರೆಗೆ, ಗುಳಿಕ ಕಾಲ 11:01 ರಿಂದ ಮಧ್ಯಾಹ್ನ 12:34ರ ವರೆಗೆ.

ಮೇಷ ರಾಶಿ: ನಿಮ್ಮ ತಪ್ಪುಗಳನ್ನು ನೀವೇ ಅರ್ಥಮಾಡಿಕೊಂಡರೆ ನಿಮಗೇ ಉತ್ತಮ. ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ಯಾವುದೋ ಅಗಾಧ ಯೋಚನೆಯಲ್ಲಿ ನೀವು ಇರುವಿರಿ. ವ್ಯಾಪಾರದಲ್ಲಿ ನಷ್ಟ ಸಂಭವಿಸಬಹುದು. ತೆರಿಗೆಯನ್ನು ನೀವು ಸರಿಯಾಗಿ ಕೊಡುವ ಬಗ್ಗೆ ಆಲೋಚನೆ ಇರುವುದು. ನೌಕರರ ಬಗ್ಗೆ ನಿಮಗೆ ಖುಷಿ ಇರುವುದು. ಬಂದಿದ್ದರಲ್ಲಿ ಸುಖವಾಗಿರಲು ಪ್ರಯತ್ನಿಸುವಿರಿ. ಅಧ್ಯಾತ್ಮದಲ್ಲಿ ಮನಸ್ಸು ಇರಲಿದೆ. ಕೆಲವರಿಗೆ ಮಾತ್ರ ನಿಮ್ಮ ಬಗ್ಗೆ ಗೊತ್ತಾಗಲಿದ್ಸು ದ್ವೇಷಿಸುವವರನ್ನು ಇಷ್ಟಪಡುವಿರಿ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ನಾಲ್ಕಾರು ಕಾರ್ಯಗಳನ್ನು ಒಟ್ಟಿಗೆ ಮಾಡಬೇಕಾದ ದಿನವಾಗುವುದು.

ವೃಷಭ ರಾಶಿ: ಇಂದು ಇನ್ನೊಬ್ಬರ ಬಗ್ಗೆ ನಿಮಗೆ ಸಹಜವಾದ ಕರುಣೆ ಇರುವುದು. ವಿದ್ಯಾಭ್ಯಾಸದಲ್ಲಿ ಶ್ರಮದ ಅಗತ್ಯ ಬಹಳ ಕಾಣಿಸುವುದು. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲಿ ನೀವು ಧೈರ್ಯವನ್ನು ಕಾಪಾಡಿಕೊಳ್ಳುವಿರಿ. ನಿಮ್ಮ ಮಕ್ಕಳ ಜೊತೆ ನೀವು ಯಾವುದಕ್ಕಾದರೂ ಕೋಪಗೊಳ್ಳುವಿರಿ. ರಾಜಕೀಯದಲ್ಲಿ ಡೋಲಾಯಮಾನವಾಗಿ ಇರಲಿದ್ದು ಆತಂಕವೂ ಇರಲಿದೆ. ಇಂದು ಎಲ್ಲ ಕಾರ್ಯಗಳಲ್ಲಿ ಸಾವಧಾನತೆ ಇರದು. ಕೆಲಸವೊಂದು ಯೋಚಿಸುವುದು ಮತ್ತೊಂದು ಆಗಬಹುದು. ಯಾರನ್ನಾದರೂ ಮಾದರಿ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂಬ ತೀರ್ಮಾನ ಬೇಡ. ಇಂದು ನೀವು ಮಾಡಲು ಹೊರಟ ಕಾರ್ಯವು ನಿರ್ವಿಘ್ನವಾಗಿ ಮುಗಿಯುವುದು.

ಮಿಥುನ ರಾಶಿ: ನಿಮಗೆ ಯಾರಾದರೂ ಇಂದು ಆಮಿಷವನ್ನು ತೋರಿಸಿ ಕೆಲಸವನ್ನು ಮಾಡಿಸಿಕೊಳ್ಳಬಹುದು. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳು ಉಪಯುಕ್ತ ಮಾಹಿತಿಯನ್ನು ಕೊಟ್ಟಾರು.‌ ನೀವು ಹೊಸ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ, ನಿಮಗೆ ಉತ್ತಮವಾಗಿರುತ್ತದೆ. ನೂತನ ಮನೆಯ ನಿರೀಕ್ಷೆಯಲ್ಲಿ ನೀವು ಇರುವಿರಿ. ನಿಮ್ಮ ಹವ್ಯಾಸವು ಬದಲಾಗಬಹುದು. ಪ್ರವಾಸಕ್ಕೆ ಹೋಗಲು ಉತ್ಸಾಹವು ಇರಲಿದೆ. ಎಲ್ಲರೂ ನಿಮ್ಮ ಬಗ್ಗೆ ಹೇಳಿ ಸಾಕಾದೀತು. ಅಧಿಕಾರಿಗಳಿಂದ ನಿಮಗೆ ಬೇಕಾದುದನ್ನು ಜಾಣತನದಿಂದ ಮಾಡಿಸಿಕೊಳ್ಳುವಿರಿ. ಮನೆಯ ವಿಚಾರವನ್ನು ಯಾರ ಬಳಿಯೂ ಹಂಚಿಕೊಳ್ಳುವುದು ಬೇಡ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ. ನಿಮ್ಮ ಬಗ್ಗೆ ಅತಿಯಾದ ವಿಶ್ವಾಸವು ಕೊನೆಯ ಕ್ಷಣದಲ್ಲಿ ಕಾರ್ಯವನ್ನು ಮಾಡುವಂತೆ ಮಾಡುವುದು.

ಕರ್ಕಾಟಕ ರಾಶಿ: ನಿಮ್ಮ ವರ್ತನೆಯಿಂದ ಅಧಿಕಾರವು ಸಿಗಬಹುದು. ಆಸ್ತಿಯ ಬಗ್ಗೆ ಸರಿಯಾದ ದಾಖಲೆಗಳು ಇರಲಿ. ಕೈ ತಪ್ಪಿ ಹೋಗುವ ಕೆಲಸವನ್ನು ಹೇಗಾದರೂ ಉಳಿಸಿಕೊಳ್ಳುವಿರಿ. ಅನುಮಾನದ ನಿಮ್ಮ ಸ್ವಭಾವವು ಅಧಿಕವಾಗುದು. ಎಲ್ಲವನ್ನೂ ಸಮಾನವಾಗಿ ನೋಡಲು ಕಷ್ಟವಾಗಬಹುದು. ಕಲಹಕ್ಕೆ ಏನಾದರೂ ವಿಷಯವನ್ನು ಹುಡುಕಿಕೊಳ್ಳುವಿರಿ. ಅನಿರೀಕ್ಷಿತ ಧನಾಗಮನವು ಸಂತೋಷವನ್ನು ಕೊಡುವುದು. ಮಕ್ಕಳ ಕಡೆಯಿಂದ ಆರ್ಥಿಕ ಸಹಾಯವನ್ನು ನಿರೀಕ್ಷಿಸಿ ಹತಭಾಗ್ಯರಾಗುವಿರಿ. ವಾಹನ ಸಂಚಾರದಲ್ಲಿ ಮಂದಗತಿ ಇರಲಿ. ನಿಮ್ಮ ಮಾತು ಬಾಲಿಶದಂತೆ ತೋರುವುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು. ಬದ್ಧತೆಯನ್ನು ರೂಢಿಸಿಕೊಳ್ಳುವುದು ನಿಮಗೆ ಸುಲಭವಾಗದು.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು