Horoscope: ಇನ್ನೊಬ್ಬರ ಸುಖವನ್ನು ಕಸಿದುಕೊಳ್ಳುವಿರಿ, ಕುಟುಂಬದಲ್ಲಿ ಜಗಳ
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 06 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಏಪ್ರಿಲ್ 06) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಶುಭ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:30ರಿಂದ 11:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:40 ರಿಂದ 03:40 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06: 26 ರಿಂದ ಬೆಳಗ್ಗೆ 07:58ರ ವರೆಗೆ.
ಸಿಂಹ ರಾಶಿ: ಇನ್ನೊಬ್ಬರ ಸುಖವನ್ನು ಕಸಿದುಕೊಂಡು ಯಾವ ಸುಖವನ್ನು ಅನುಭವಿಸುವಿರಿ? ನಿಮ್ಮ ಬಗೆಗಿನ ಸದ್ಭಾವಗಳು ಬದಲಾದಾವು. ರಸಿಕತೆಯಲ್ಲಿ ಸ್ಥಾನವನ್ನೂ, ಬುದ್ಧಿಯನ್ನೂ ಸ್ಥಳವನ್ನೂ ಸಂದರ್ಭವನ್ನೂ ವ್ಯಕ್ತಿಯನ್ನೂ ನಗಣ್ಯಗೊಳಿಸಬೇಡಿ. ನಿಮ್ಮ ಕುಟುಂಬದ ಬಗ್ಗೆ ಹೆಮ್ಮೆಯ ಭಾವ ಮೂಡುತ್ತದೆ. ನೀವು ಆರಾಮಾಗಿದ್ದೀರಿ ಎಂದು ತೋರಿಸಲು ಹೋಗಬೇಡಿ. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಕುಟುಂಬದಲ್ಲಿ ಜಗಳ ನಿಮಗಾಗುವಂತಹ ಕಾರ್ಯವನ್ನು ಒಪ್ಪಿಕೊಳ್ಳಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಅತಿಯಾದ ಕಾರ್ಯದಿಂದ ನಿಮಗೆ ತೊಂದರೆಯಾದೀತು. ಮನೆಯಲ್ಲಿಯೇ ವಾಸಿಸುವವರು ಸಣ್ಣ ಆದಾಯದ ಬಗ್ಗೆ ಆಲೋಚಿಸುವಿರಿ. ಯಾರಾದರೂ ಮುಖಸ್ತುತಿಯನ್ನು ಮಾಡಬಹುದು. ಮುಜುಗರವೂ ನಿಮಗೆ ಆದೀತು. ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು.
ಕನ್ಯಾ ರಾಶಿ: ಇಂದು ಮನೆಯ ಸಣ್ಣ ಖರ್ಚುಗಳೂ ದೊಡ್ಡದಾದ ಮೊತ್ತವನ್ನು ಕಳೆಯುವುದು. ನಿಮ್ಮ ಜೀವನವನ್ನು ನೀವೇ ಲಘುವಾಗಿ ಕಾಣುವುದು ಬೇಡ. ನಿಮ್ಮ ಮಾನಸಿಕ ಸ್ಥಿತಿ ಬಲಾಢ್ಯವಾಗಿರಲಿ. ಅಲ್ಲಿಯ ತನಕ ತಾಳ್ಮೆಯಿಂದ ಇರಬೇಕಾದ ಕರ್ತವ್ಯವಿದೆ. ಒಳ್ಳೆಯವರ ಸಂಗ ಸಿಗಬಹುದು. ಸಿಗದಿದ್ದರೆ ನೀವೇ ಹೋಗಿ. ಒಳ್ಳೆಯ ಪುಸ್ತಕವನ್ನು ತಂದು ಓದಿ. ಸ್ನೇಹಿತನ ಕೆಲಸವನ್ನು ಅದು ಮಾಡುವುದು. ಇಂದು ನಿಮ್ಮ ಭಾವನೆಗಳನ್ನು ನಿಯಂತ್ರಿಸಲಾಗದೇ ಎಲ್ಲವನ್ನೂ ಹೊರಹಾಕುವಿರಿ. ನೀವು ಮನೆಯ ಸೌಂದರ್ಯದ ಬಗ್ಗೆ ಹೆಚ್ಚು ಗಮನ ಇರಲಿದೆ. ನಿಮ್ಮ ಆದಾಯವು ಮೊದಲಿಗಿಂತ ಉತ್ತಮವಾಗಿದ್ದು ಅದನ್ನು ಒಂದು ಕಡೆ ಸ್ಥಿರವಾಗಿಸಿಕೊಳ್ಳಿ. ಹಿರಿಯರು ನಿಮ್ಮ ಬಗ್ಗೆ ವ್ಯಂಗ್ಯವಾಗಿ ಮಾತನಾಡಬಹುದು. ಉದ್ಯೋಗದ ಕಾರಣ ದೂರ ಪ್ರಯಾಣ ಮಾಡಲು ಇಷ್ಟವಾಗದು. ರಾಜಕೀಯವಾಗಿ ಹಿನ್ನಡೆಯಾಗಬಹುದು. ನಿಮ್ಮದಾದ ದ್ವೀಪವನ್ನು ಮಾಡಿಕೊಂಡು ನೀವಿರುವಿರಿ.
ತುಲಾ ರಾಶಿ: ನೀವು ಇಂದು ಅನುಮಾನ ಬರುವಂತಹ ಹಾವಭಾವದಲ್ಲಿ ಇರುವಿರಿ. ಸ್ವಲ್ಪ ಕಾಲದ ಏನನ್ನೂ ಯೋಚಿಸದೇ ಇರಲು ಪ್ರಯತ್ನಿಸಿ. ಮನಸ್ಸಿನ ಶಕ್ತಿ ದ್ವಿಗಣವಾಗುವುದು. ನಕಾರಾತ್ಮಕತೆ ಆಲೋಚನೆಗಳೂ ದೂರವಾಗುವುದು. ಹಣದ ಸಮಸ್ಯೆಗಳು ಎದುರಾಗಬಹುದು. ವಿಶ್ವಾಸಘಾತಕ ಕಾರ್ಯಗಳಿಗೆ ಮುನ್ನುಗ್ಗಲು ಯಾರಿಂದಲಾದರೂ ಪ್ರೇರಣೆ ಸಿಕ್ಕೀತು. ಪೆಟ್ಟು ತಿಂದರೆ ಮತ್ತೇಳುವುದು ಕಷ್ಟ. ಯಾವುದೇ ಕಾರಣಕ್ಕೂ ಬಿಟ್ಟುಕೊಡಲು ಇಷ್ಟಪಡಲಾರಿರಿ. ಎಲ್ಲರ ಜೊತೆ ಬೆರೆಯುವುದು ನಿಮಗೆ ಖುಷಿಯ ವಿಚಾರವಾಗಲಿದೆ. ನಿಮ್ಮ ಹಿರಿಯರ ಜೊತೆ ಗೌರವವನ್ನು ಕಾಪಾಡಿಕೊಳ್ಳಿ. ಪ್ರಯಾಣದಲ್ಲಿ ಯಾವುದೇ ತೊಂದರೆಗಳು ಬಾರದು. ಕೆಲವು ಜನರ ಭೇಟಿಯು ನಿಮಗೆ ಖುಷಿ ಕೊಡುವುದು. ಹೂಡಿಕೆಯ ವಿಚಾರದಲ್ಲಿ ಸಮಸ್ಯೆಯಾಗಬಹುದು. ಕಾನೂನಿನ ತೀರ್ಮಾನಕ್ಕೆ ತಲೆಬಾಗುವುದು ಸೂಕ್ತ.
ವೃಶ್ಚಿಕ ರಾಶಿ: ನಿಮಗೆ ಕಲ್ಪನೆಯಂತೆ ಬದುಕು ನಡೆಯದು ಎಂಬ ಸತ್ಯ ಇಂದು ಮನವರಿಕೆಯಾಗಲಿದೆ. ದೂರಪ್ರಯಾಣ ಸುಖಕರವಾಗಿ ಇರುವಿದಾದರೂ ಅನಂತರ ಕಷ್ಟಪಡಬೇಕಾದೀತು. ಯಾರನ್ನೋ ಅವಮಾನಿಸಲು ಹೋಗಿ ಹಳ್ಳಕ್ಕೆ ಬೀಳಬೇಡಿ. ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿರುವುದು. ಸಿಟ್ಟಿನ ಮೂಟೆಯನ್ನು ಕೆಳಗಿಳಿಸಿ. ಆಗ ಸಿಗುವ ಆನಂದಕ್ಕೆ ಬೆಲೆಯೆಷ್ಟು? ನಿಮ್ಮ ಆಲೋಚನೆಗಳನ್ನು ಇತರ ಜೊತೆ ಹಂಚಿಕೊಂಡರೆ ನಿಮ್ಮ ಸ್ಥಾನಕ್ಕೆ ಚ್ಯುತಿ ಬಂದೀತು. ನಿಮ್ಮ ಕಾರ್ಯಗಳಿಂದ ಪ್ರೀತಿಪಾತ್ರರ ಹೃದಯವನ್ನು ಗೆಲ್ಲಲು ಸಫಲರಾಗುವಿರಿ. ಬಹಳ ದಿನಗಳ ಅನಂತರ ನಿಮ್ಮ ಸಂಗಾತಿಯ ಜೊತೆ ಸ್ವಲ್ಪ ಸಮಯ ಕುಳಿತು ಆಪ್ತವಾಗಿ ಮಾತನಾಡುವಿರಿ. ಯಾರನ್ನೂ ಅವಲಂಬಿಸುವುದು ನಿಮಗೆ ಕಷ್ಟವಾಗುವುದು. ಮಕ್ಕಳಿಂದ ನಿಮಗೆ ಕೀರ್ತಿಯು ಪ್ರಾಪ್ತವಾಗುವುದು. ಮಾತಿನಿಂದ ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಿ ಹಣವನ್ನು ವ್ಯಯ ಮಾಡುವಿರಿ. ನಿಮಗೆ ಆಗಬೇಕಾದ ಕೆಲಸವನ್ನು ವಿವಾದ ಇಲ್ಲದೇ ಮಾಡಿಕೊಳ್ಳಿ.