AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಈ ರಾಶಿಯವರಿಗೆ ಬೇಡವೆಂದರೂ ಕೆಟ್ಟವರ ಸಹವಾಸವೇ ಸಿಗುವುದು

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಫೆಬ್ರವರಿ 01, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Rashi Bhavishya: ಈ ರಾಶಿಯವರಿಗೆ ಬೇಡವೆಂದರೂ ಕೆಟ್ಟವರ ಸಹವಾಸವೇ ಸಿಗುವುದು
ರಾಶಿ ಭವಿಷ್ಯ
TV9 Web
| Edited By: |

Updated on: Feb 01, 2024 | 12:20 AM

Share

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಫೆಬ್ರವರಿ 01) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಧೃತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 30 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:12 ರಿಂದ 03:38ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:02 ರಿಂದ 08:ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:54 ರಿಂದ 11:20ರ ವರೆಗೆ.

ಮೇಷ ರಾಶಿ : ನೀವು ತೋರಿಸುವ ಅನುಕಂಪವು ಇನ್ನೊಬ್ಬರಿಗೆ ಅರಗಿಸಿಕೊಳ್ಳಲು ಕಷ್ಟವಾದೀತು. ಭೂಮಿ ಖರೀದಿಸುವ ನಿಮ್ಮ ಕೆಲಸವು ಹೆಚ್ಚಾಗಬಹುದು. ಕುಟುಂಬದ ಸದಸ್ಯರಿಗಾಗಿಯೂ ನೀವು ಸ್ವಲ್ಪ ಸಮಯವನ್ನು ಮೀಸಲಿಡಬೇಕು. ನಿಮ್ಮವರನ್ನು ಚೆನ್ನಾಗಿ ಇಟ್ಟುಕೊಳ್ಳುವುದೂ ನಿಮ್ಮ ಮುಖ್ಯ ಕೆಲಸವಾಗಬಹುದು. ನೀವು ಕೆಲವು ಪ್ರಮುಖ ವಿಷಯಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ನೆಚ್ಚಿನ ಜನರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಸ್ತ್ರೀಯರು ನಿಮ್ಮ ಮೇಲೆ ಏನಾದರೂ ಆರೋಪ ಮಾಡಿಯಾರು. ಯಾರ ಮೇಲೂ ನಿಮ್ಮದೇ ಆದ ನಿಲವು ಬೇಡ. ನೋವಿನಿಂದ ಹೊರಬರಲು ನಿಮಗೆ ಕಷ್ಟವಾದೀತು. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌ ನಿಮ್ಮ ಮನಸ್ಸು ಬಹಳ ದುರ್ಬಲವಾಗಿದ್ದು ಬಲಮಾಡಿಕೊಳ್ಳು ಮಾರ್ಗವನ್ನು ಕಂಡುಕೊಳ್ಳಿ. ಮಾತಿನಲ್ಲಿ ಕುಚೋದ್ಯ ಮಾಡುವುದನ್ನು ಕಡಿಮೆ ಮಾಡಿ.

ವೃಷಭ ರಾಶಿ : ನೀವು ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳುವುದು ಕಷ್ಟವಾಗಬಹುದು. ನಿಮ್ಮ ಕೆಲಸದಲ್ಲಿ ಇನ್ನೊಬ್ಬರಿಗೆ ಪ್ರವೇಶವನ್ನು ಕೊಡುವುದು ಬೇಡ. ಹಣಕಾಸಿನ ಪರಿಸ್ಥಿತಿಯನ್ನು ನೆನೆದು ಚಿಂತಿತರಾಗಬಹುದು. ಆರ್ಥಿಕ‌ಸ್ಥಿತಿಯನ್ನು ಯಾರೊಂದಿಗೂ ಹಂಚಿಕೆ ಮಾಡಿಕೊಳ್ಳುವುದು ಬೇಡ. ಸರ್ಕಾರಿ ನಿಯಮಗಳ ಉಲ್ಲಂಘನೆ ಬೇಡ‌. ಸ್ತ್ರೀಯರಿಂದ ಲಾಭವನ್ನು ಪಡೆಯುವಿರಿ. ಇಂದಿನ‌ ಸ್ನೇಹಿತರ ಭೇಟಿಯಿಂದ ನಿಮ್ಮಲ್ಲಿ‌ ಉತ್ಸಾಹವನ್ನು ಜಾಗರೂಕಗೊಳಿಸುವುದು. ಕಛೇರಿಯಲ್ಲಿ ನಿಮ್ಮ ಶ್ರಮವು ಲೆಕ್ಕಕ್ಕೆ ಬಾರದೇ ಹೋದೀತು. ಶ್ರಮಕ್ಕೆ ಫಲವನ್ನು ನಿರೀಕ್ಷಿಸುತ್ತ‌ ಸಮಯವನ್ನು ವ್ಯರ್ಥ ಮಾಡುವಿರಿ. ಮಾತಿನಲ್ಲಿ ಮಾರ್ದವವು ಇಲ್ಲವಾಗುವುದು. ಅತಿಯಾದ ಭಾರದ ವಸ್ತುಗಳನ್ನು ಒಯ್ಯುವಿರಿ. ನಿಮ್ಮ ಚೌಕಟ್ಟನ್ನು ಮೀರಿ ವರ್ತಿಸದೇ ಇರುವುದು ಒಳಿತು.

ಮಿಥುನ ರಾಶಿ : ವ್ಯಾಪಾರ ವ್ಯವಹಾರಗಳಲ್ಲಿ ನೀವು ಸುಲಭವಾಗಿ ಪ್ರಗತಿಯನ್ನು ಕಾಣುವಿರಿ. ನೀವು ಕೊಟ್ಟ ಆಶ್ವಾಸನೆಯನ್ನು ಸುಲಭವಾಗಿ ಪೂರೈಸಲು ಸಾಧ್ಯವಾಗುತ್ತದೆ. ಅದರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಕೆಲವು ಹೊಸ ಮೂಲಗಳನ್ನು ವ್ಯಾಪಾರದಲ್ಲಿ ಸೇರಿಸಿಕೊಳ್ಳಬಹುದು. ಯಾರಾದರೂ ನಿಮ್ಮನ್ನು ರೇಗಿಸಬಹುದು. ನಿಮ್ಮ ಕೆಲವು ವಿರೋಧಿಗಳು ನಿಮಗೆ ತೊಂದರೆ ಕೊಡಲು ಪ್ರಯತ್ನಿಸಬಹುದು. ನಿಮ್ಮ ಜಾಣ್ಮೆಯಿಂದ ನೀವು ಸುಲಭವಾಗಿ ಏನನ್ನಾದರೂ ಸಾಧಿಸುವಿರಿ. ದೇಹಾರೋಗ್ಯವು ಸರಿಯಾಗಿ ಇಲ್ಲದ ಕಾರಣ ಮನಸ್ಸು ಸರಿಯಾಗಿ ಕೆಲಸ ಮಾಡದು. ಉದ್ಯೋಗದ ಕಾರಣದಿಂದ ಬೇರೆ ಕಡೆ ಇದ್ದರೂ ಮನೆಯ ನೆನಪು ಕಾಡುವುದು. ಉದ್ಯೋಗವು ಸಾಕು ಎನಿಸಬಹುದು.‌ ನಿಮ್ಮ ಆಚರಣೆಯು ಇತರರಿಗೆ ಇಷ್ಟವಾಗುವುದು. ಅತಿಯಾದ ಒತ್ತಡದಿಂದ ಹೊರಬರಲು ಸಹೋದ್ಯೋಗಿಗಳ ಸಹಾಯವನ್ನು ಪಡೆಯುವಿರಿ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಓದು ಹೆಚ್ಚು ಫಲಿಸುವುದು.

ಕಟಕ ರಾಶಿ : ನೀವು ಇತರರ ಹಿತಾಸಕ್ತಿಯ‌ ಬಗ್ಗೆ ಹೆಚ್ಚು ಗಮನವಿರಲಿದೆ. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರು ಗೌರವವನ್ನು ಪಡೆಯುವರು. ಕೃತಜ್ಞತೆಯ ಭಾವವು ನಿಮ್ಮೊಳಗೆ ಬೇರೂರಲಿ. ನೀವು ಅವಕಾಶಗಳತ್ತ ಗಮನ ಹರಿಸಬೇಕು. ಮಕ್ಕಳ ವಿಚಾರದಲ್ಲಿ ನಿಮಗೆ ಸಮಾಧಾನವು ಸಿಗದೇ ಇರಬಹುದು. ತಮ್ಮ ಶಿಕ್ಷಣವನ್ನು ಪಡೆಯಲು ವಿದೇಶಕ್ಕೆ ಹೋಗಲು ಬಯಸುವರು ವಿದ್ಯಾರ್ಥಿಗಳು. ಸಮಯೋಚಿತ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಕೆಟ್ಟವರ ಸಹವಾಸ ಸಿಗುವ ಸಾಧ್ಯತೆ ಇದೆ. ಬೇಡವೆಂದರೂ ಕೆಟ್ಟವರ ಸಹವಾಸವೇ ಸಿಗುವುದು. ನಂಬಿಕೆಯನ್ನು ಕಳೆದುಕೊಳ್ಳಬಹುದು. ನಿಮಗೆ ಸಂಬಂಧಿಸದ ವಿಚಾರದಲದಲಿ ಹೆಚ್ಚು ಮಾತನಾಡುವಿರಿ. ಹೂಡಿಕೆಯ ಬಗ್ಗೆ ಗಂಭೀರವಾಗಿ ಚಿಂತಿಸುವ ಅಗತ್ಯವಿದೆ.

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ