Rashi Bhavishya: ಇಂದಿನ ವ್ಯವಹಾರವು ಲಾಭದಾಯಕವಾಗಿರುತ್ತದೆ, ಈ ರಾಶಿಯವರಿಗೆ ಬಿಡುವಿಲ್ಲದ ದಿನವಾಗಿರುತ್ತದೆ

|

Updated on: Feb 02, 2024 | 12:10 AM

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಫೆಬ್ರವರಿ 02, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Rashi Bhavishya: ಇಂದಿನ ವ್ಯವಹಾರವು ಲಾಭದಾಯಕವಾಗಿರುತ್ತದೆ, ಈ ರಾಶಿಯವರಿಗೆ ಬಿಡುವಿಲ್ಲದ ದಿನವಾಗಿರುತ್ತದೆ
ಪ್ರಾತಿನಿಧಿಕ ಚಿತ್ರ
Follow us on

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಫೆಬ್ರವರಿ 02) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಶೂಲ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 30 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:20 ರಿಂದ 12:46ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:05ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:28 ರಿಂದ 09:54ರ ವರೆಗೆ.

ಮೇಷ ರಾಶಿ: ಇಂದು ಮನಸ್ಸಿನ ಏರಿಳಿತಗಳಿಂದ ಜೊತೆಗಾರರಿಗೆ ಕಷ್ಟವಾದೀತು. ಕುಟುಂಬದ ಆಪ್ತರ ಆರೋಗ್ಯದ ಬಗ್ಗೆ ಕಾಳಜಿ ಇರುವುದು. ಇಂದು ವ್ಯಾಪಾರಿಗಳಿಗೆ ಒತ್ತಡ ಉಂಟಾಗಬಹುದು. ಆನ್‌ಲೈನ್ ಖರೀದಿಯು ಅಧಿಕವಾಗಿದ್ದು, ಗೊತ್ತಾಗದಂತೆ ಖರ್ಚು ಮಾಡಿಕೊಳ್ಳುವಿರಿ. ವಾಹನ ಖರೀದಗೆ ಹೆಚ್ಚು ಒತ್ತು ಕೊಡಲಿದ್ದೀರಿ. ಇಂದು ನಿಮ್ಮ ಮಾತು ಮಿತಿಯನ್ನು ಮೀರಬಹುದು. ಅಧಿಕ ವೇತನದ ಉದ್ಯೋಗಕ್ಕೆ ಅವಕಾಶವು ಬರಬಹುದು. ಯೋಚಿಸಿ ತೀರ್ಮಾನ ಮಾಡಿ. ಸ್ನೇಹಕ್ಕೆ ಒತ್ತಾಯ ಮಾಡುವುದು ಬೇಡ. ಅಳತೆ ಮೀರಿ ವರ್ತಿಸುವುದು ಬೇಡ. ಸಂಗಾತಿಯ ವಿಚಾರದಲ್ಲಿ ನಿಮಗೆ ಅಸಮಾಧಾನ ಆಗುವುದು. ನಿಮ್ಮನ್ನು ಇಷ್ಟಪಡುವವರಿಗೆ ಸಮಯವನ್ನು ಕೊಡದೇ ಅಹಂಕಾರ ತೋರಿಸುವಿರಿ. ನಿಮ್ಮ‌ ಸಹಾಯ ಗುಣವನ್ನು ದುರ್ಬಳಕೆ ಮಾಡಿಕೊಳ್ಳಬಹುದು. ವಿಚಾದಲ್ಲಿ ನಿಮಗೆ ತಾಳ್ಮೆ ಕಡಿಮೆ‌ ಎನಿಸಬಹುದು. ಯಾರನ್ನೂ ಹಗುರಾಗಿ ಕಾಣಲಾರಿರಿ.

ವೃಷಭ ರಾಶಿ: ಇಂದು ವ್ಯಾಪಾರವು ಗಳಿಕೆಯ ಕಡೆ ಮುಖ ಮಾಡಬಹುದು. ಇಂದು ನೀವು ಮತ್ತು ನಿಮ್ಮ ಸಂಗಾತಿಯು ಉತ್ತಮ ಆರೋಗ್ಯವನ್ನು ಹೊಂದಿರುತ್ತೀರಿ. ನಿಮ್ಮ ಮನಸ್ಸಿಗೆ ತೃಪ್ತಿ ಇರುತ್ತದೆ. ಕುಟುಂಬದಲ್ಲಿ ದೀರ್ಘಕಾಲದವರೆಗೆ ಯಾವುದೇ ಭಿನ್ನಾಭಿಪ್ರಾಯಗಳು ನಡೆಯುತ್ತಿದ್ದರೆ, ಇಂದು ಅದು ಕೊನೆಗೊಳ್ಳಬಹುದು. ಆಸ್ತಿಯ ವಿಚಾರದಲ್ಲಿ ನಿಮಗೆ ಅಪಕ್ವತೆಯು ಕಾಣುತ್ತದೆ. ಸುಲಭ ಸಂಗತಿಯನ್ನು ನೀವು ಕ್ಲಿಷ್ಟ ಮಾಡಿಕೊಳ್ಳುವಿರಿ. ಶತ್ರುಗಳಿಂದ ಉದ್ಯಮಕ್ಕೆ ತೊಂದರೆ ಆಗಬಹುದು. ಹಣವನ್ನು ಕೊಡಲು ಯಾರಾದರೂ ಪೀಡಿಸಬಹುದು. ಮಕ್ಕಳಿಗೆ ಧೈರ್ಯವನ್ನು ಹೇಳುವಿರಿ. ನೂತನ ಗೃಹನಿರ್ಮಾಣಕ್ಕೆ ಸಂಗಾತಿಗೆ ಒತ್ತಡವನ್ನು ತರುವಿರಿ. ನಿಮ್ಮನ್ನು ಸಂತೋಷಪಡಿಸಲು ನಿಮ್ಮನ್ನು ಹೊಗಳುವರು. ಪುಣ್ಯಸ್ಥಳಕ್ಕೆ ಹೋಗಲು ಇಚ್ಛಿಸುವಿರಿ. ನಿಮ್ಮ ದಾರಿಯನ್ನು ಸುಗಮ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಬಹಳ ದಿನಗಳಿಂದ ಇದ್ದ ಆಸೆಯನ್ನು ಪೂರ್ಣಮಾಡಿಕೊಳ್ಳುವಿರಿ.

ಮಿಥುನ ರಾಶಿ: ಇಂದಿನ ವ್ಯವಹಾರವು ಲಾಭದಾಯಕವಾಗಿರುತ್ತದೆ. ಆರ್ಥಿಕತೆಯ ಬಗ್ಗೆ ಕೆಲಸ ಮಾಡುವವರಿಗೆ ಇದು ಬಿಡುವಿಲ್ಲದ ದಿನವಾಗಬಹುದು. ಕೆಲಸದ ನಿಮಿತ್ತ ನೀವು ಇಂದು ಪ್ರಯಾಣ ಮಾಡಬೇಕಾಗಬಹುದು. ನಿಮ್ಮ ಪ್ರಗತಿಯ ಮಾರ್ಗಗಳನ್ನು ತೆರೆಯಬಹುದು. ನೀವು ಉತ್ತಮ ವ್ಯವಹಾರದಿಂದ ಇಂದು ಯಶಸ್ವಿಯಾಗುತ್ತೀರಿ. ನಿಮ್ಮ ಪೋಷಕರು ಮತ್ತು ಒಡಹುಟ್ಟಿದವರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಕಲಹರಣಕ್ಕೆ ಯಾರ ಜೊತೆಗಾದರೂ ಮಾತನಾಡುತ್ತಾ ಇರುವಿರಿ. ಸಮಯೋಚಿತ ಸ್ಪಂದ‌ನೆಯಿಂದ ಗೌರವ ಸಿಗುವುದು. ಸ್ನೇಹಿತರ ಮೇಲೆ ಸಂದೇಹ ಉಂಟಾಗಬಹುದು. ಹಣಕಾಸಿನ ವಿಚಾರವನ್ನು ನೀವು ಯಾರ ಬಳಿಯೂ ಹೇಳುವುದಿಲ್ಲ. ಕಛೇರಿಯಲ್ಲಿ ನಿಮ್ಮನ್ನು ನೋಡುವ ದೃಷ್ಟಿಯು ಬದಲಾಗುವುದು. ಎಲ್ಲವನ್ನೂ ಹಣದಿಂದ ಲೆಕ್ಕಹಾಕಲಾಗದು.

ಕರ್ಕ ರಾಶಿ: ಇಂದು ನಿಮ್ಮ ಮನಸ್ಸಿನಲ್ಲಿ ಉದ್ಯೋಗಕ್ಕೆ ಸಂಬಂಧಿಸಿದ ಏನಾದರೂ ಗೊಂದಲವಿರಬಹುದು. ಯಾವುದೋ ಅವಘಡದ ಸೂಚನೆಯಿಂದ ನೀವು ಹೆದರುವಿರಿ. ಇದು ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚುಮಾಡೀತು. ನಿಮ್ಮ ವೈವಾಹಿಕ ಸಂಬಂಧಕ್ಕೆ ಸಂಬಂಧಿಸಿದಂತೆ, ನಿಮ್ಮ ಸಂಗಾತಿಯ ನಿಮ್ಮ ಪ್ರೀತಿ ಮತ್ತು ಸಾಮರಸ್ಯ ಉಳಿಯುತ್ತದೆ. ನೀವು ಧರ್ಮ ಕರ್ಮದ ಕೆಲಸಗಳಲ್ಲಿ ಆಸಕ್ತಿ ತೋರಿಸುವಿರಿ. ಇಂದು ಮನೆಯ ಹಿರಿಯರಿಂದ ಆಶೀರ್ವಾದ ಬಲಬಂದಂತೆ ಅನ್ನಿಸಬಹುದು. ಹತ್ತಾರು ವಿಚಾರಗಳನ್ನು ನೀವು ಏಕಕಾಲದಲ್ಲಿ ಚಿಂತಿಸಿ ತಲೆಯನ್ನು ಹಾಳು ಮಾಡಿಕೊಳ್ಳುವಿರಿ. ಎಲ್ಲವೂ ವಿಧಿಯಂತೆ ಆಗುತ್ತದೆ ಎಂಬ ಸತ್ಯವನ್ನು ನೀವು ಅರಿತರೂ ದುಃಖಿಸುವಿರಿ. ಬೇಡವೆಂದರೂ ನಕಾರಾತ್ಮಕ ಚಿಂತನೆಗಳೇ ನಿಮ್ಮ ಮನಸ್ಸಿಗೆ ಬರುವುದು. ಒಂದೇ ತಕ್ಕಡಿಯಲ್ಲಿ ಎಲ್ಲರನ್ನೂ ತೂಗಲಾಗದು. ನಿಮಗೆ ಬರುವ ವಿವಾಹ ಸಂಬಂಧವನ್ನು ಬೇರೆ ಬೇರೆ ಕಾರಣಗಳನ್ನು ಕೊಟ್ಟು ನಿರಾಕರಿಸುವಿರಿ.‌