Nitya Bhavishya: ರಾಶಿಭವಿಷ್ಯ: ಹೊಸ ಕ್ಷೇತ್ರದಲ್ಲಿ ಜೀವನೋಪಾಯದ ಪ್ರಯತ್ನಗಳು, ಹೆತ್ತವರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 25, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Nitya Bhavishya: ರಾಶಿಭವಿಷ್ಯ: ಹೊಸ ಕ್ಷೇತ್ರದಲ್ಲಿ ಜೀವನೋಪಾಯದ ಪ್ರಯತ್ನಗಳು, ಹೆತ್ತವರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 25, 2024 | 12:10 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಜನವರಿ 25) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪೌರ್ಣಿಮಾ, ನಿತ್ಯನಕ್ಷತ್ರ: ಪುಷ್ಯ, ಯೋಗ: ವಿಷ್ಕಂಭ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 07 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 26 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:10 ರಿಂದ 03:36ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:03 ರಿಂದ 08:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:54 ರಿಂದ 11:19ರ ವರೆಗೆ.

ಮೇಷ ರಾಶಿ: ನಿಮ್ಮ ಸಂಗಾತಿಯ ಜೊತೆ ಸಣ್ಣ ವಿಷಯಗಳಿಗೆ ಆಗುವ ವಿವಾದವನ್ನು ತಪ್ಪಿಸಿ. ವಿದ್ಯಾರ್ಥಿಗಳು ಕಲಿಕೆಗೆ ಹೊಸ ಸಾಧ್ಯತೆಗಳು ಹುಡುಕಿಕೊಳ್ಳುವುದು ಅಗತ್ಯ. ಸಂಬಂಧಿಕರ ಜೊತೆ ವ್ಯವಹರಿಸುವುದನ್ನು ತಪ್ಪಿಸಿ, ಇಲ್ಲವಾದರೆ ಸಂಬಂಧವು ಹದಗೆಡಬಹುದು. ಪುಣ್ಯ ಪ್ರದೇಶಗಳಿಗೆ ಪ್ರಯಾಣಿಸಿ ದಾನ-ಧರ್ಮದಲ್ಲಿ ಭಾಗಿಯಾಗಿಯಾಗುವಿರಿ. ಮಾನಸಿಕವಾಗಿ ಋುಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಕೊರೆಯಲಿವೆ. ನಿಮ್ಮ ಆಸಕ್ತಿಯಿಂದ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾವಣೆಗಳಿರಬಹುದು. ನಿಮ್ಮ ಸಹೋದ್ಯೋಗಿಗಳು ನಿಮ್ಮ ಬಗ್ಗೆ ಅಸೂಯೆ ಪಡಬಹುದು. ಆದರೆ ನಿಮ್ಮ ಉತ್ತಮ ನಡವಳಿಕೆಯನ್ನು ನೋಡಿ, ಜನರು ನಿಮ್ಮನ್ನು ಒಲಿಸಿಕೊಳ್ಳಲು ಬಯಸುತ್ತಾರೆ.

ವೃಷಭ ರಾಶಿ: ಸ್ನೇಹಿತರ ವಂಚನೆಯಿಂದ ನಿಮಗೆ ಬೇಸರವಾಗುವುದು. ಒಡಹುಟ್ಟಿದವರೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಪ್ರೀತಿಯಲ್ಲಿ ಮಾತಿನ ಕಠೋರತೆಯಿಂದ ಸಂಬಂಧಗಳಲ್ಲಿ ಬಿರುಕು ಬರಬಹುದು.ತಾಯಿಯ ಕಡೆಯಿಂದ ಸಂಬಂಧಗಳು ಸುಧಾರಿಸುತ್ತವೆ. ವ್ಯಾಪಾರ, ವ್ಯವಹಾರದಲ್ಲಿ ಡೋಲಾಯಮಾನವಾದ ಸ್ಥಿತಿ ಇರುವುದು. ಆರ್ಥಿಕವಾಗಿ ಖರ್ಚು ವೆಚ್ಚಗಳಲ್ಲಿ ಬಲವಾದ ಹಿಡಿತವಿರಲಿದೆ. ವಿದ್ಯಾರ್ಥಿಗಳಿಗೆ ಕರ್ತವ್ಯವನ್ನು ನೆನಪಿಸುವಂತಾಗುತ್ತದೆ. ನಿಮ್ಮ ಸ್ಥಗಿತಗೊಂಡ ಕಾರ್ಯಗಳನ್ನು ಪೂರ್ಣಗೊಳ್ಳಬಹುದು. ಇಂದು ನೀವು ಸಂತೋಷವಾಗಿರುವುದರಿಂದ ಎಲ್ಲದರಲ್ಲೂ ಯಶಸ್ಸನ್ನು ಪಡೆಯುತ್ತೀರಿ. ಅತಿಥಿಯ ಆಗಮನವು ನಿಮಗೆ ಸಂತೋಷವನ್ನು ತರುತ್ತದೆ.

ಮಿಥುನ ರಾಶಿ: ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ಜೀವನೋಪಾಯ ಕ್ಷೇತ್ರದಲ್ಲಿ ಹೊಸ ಪ್ರಯತ್ನಗಳು ಅವಶ್ಯಕ. ನೌಕರರಿಂದ ಗೌರವವು ನಿಮಗೆ ಸಿಗುತ್ತದೆ. ಮದುವೆಯಾಗಲು ಪ್ರಯತ್ನಿಸುವವವರಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ಹೆತ್ತವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ. ಯಾವುದೇ ಜಗಳ ಮತ್ತು ವಿವಾದಗಳಿಗೆ ಸಿಲುಕಬೇಡಿ. ಉದ್ಯೋಗಿಗಳಿಗೆ ಉದ್ಯಮದಲ್ಲಿಉತ್ತಮ ಅವಕಾಶಗಳು ಬರಲಿವೆ. ಮೌಲ್ಯಯುತವಾದ ಏನನ್ನಾದರೂ ಪಡೆಯುವ ಬಯಕೆಯನ್ನು ಇಂದು ಪೂರೈಸಬಹುದು. ನಿಮ್ಮ ಎಂದೋ ಆರಂಭಿಸಬೇಕೆಂದುಕೊಂಡ ಯೋಜನೆಗಳನ್ನು ಇಂದು ಪ್ರಾರಂಭಿಸಬಹುದು. ವಾಹನಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸುವುದು ಅತ್ಯಗತ್ಯ.

ಕಟಕ ರಾಶಿ: ವಿದ್ಯಾರ್ಥಿಗಳು ಯಶಸ್ಸಿಗಾಗಿ ಹೆಚ್ಚು ಶ್ರಮಿಸಬೇಕಾಗಬಹುದು. ನಿಮ್ಮ ಕೆಲಸವನ್ನು ನೋಡಿದ ವಿರೋಧಿಗಳು ನಿಮ್ಮನ್ನು ಹೊಗಳುತ್ತಾರೆ. ವ್ಯವಹಾರವನ್ನು ಹೆಚ್ಚಿಸಲು ಕುಟುಂಬದೊಂದಿಗೆ ಸಮಾಲೋಚನೆ ಮಾಡಬೇಕಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿಮಗೆ ಅವಕಾಶಗಳು ಸಿಗುತ್ತವೆ. ವೃತ್ತಿರಂಗದಲ್ಲಿ ಪ್ರತಿಷ್ಠಿತರ ಸಹಯೋಗದಿಂದ ಕಾರ್ಯಸಿದ್ಧಿ. ಹಣಕಾಸಿನ ವಿಚಾರದಲ್ಲಿ ಮುಖ್ಯವಾಗಿ ಖರ್ಚು ವೆಚ್ಚಗಳ ಬಗ್ಗೆ ಯೋಚಿಸುವಂತಾಗಲಿದೆ. ರಾಜಕೀಯವಾಗಿ ಮುನ್ನಡೆಯ ದಿನಗಳಿವು. ನಿಮ್ಮ ವ್ಯಾಪಾರ ಯೋಜನೆಗಳು ಇದೀಗ ಉತ್ತೇಜನವನ್ನು ಪಡೆಯುತ್ತವೆ ಮತ್ತು ನೀವು ಹೆಚ್ಚಿನ ಪ್ರಮಾಣದ ಲಾಭವನ್ನು ಸಹ ಪಡೆಯುತ್ತೀರಿ. ಭಾವನಾತ್ಮಕವಾಗಿ ತೆಗೆದುಕೊಳ್ಳುವ ನಿರ್ಧಾರಗಳು ನಿಮ್ಮ ಸ್ಥಾನವನ್ನು ದುರ್ಬಲಗೊಳಿಸಬಹುದು. ಯಾವುದಾದರೂ ಕಾರ್ಯವನ್ನು ಮಾಡುವ ಮುನ್ನ ಒಮ್ಮೆ ಯೋಚಿಸಿ ನಂತರ ನಿರ್ಧಾರವನ್ನು ತೆಗೆದುಕೊಳ್ಳಿ.

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ