Nitya Bhavishya: ಈ ರಾಶಿಯವರನ್ನು ಮಾತಿನಿಂದ ಯಾರಾದರೂ ಕಟ್ಟಿಹಾಕಬಹುದು, ತಾಳ್ಮೆ ಮುಖ್ಯ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 26, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Nitya Bhavishya: ಈ ರಾಶಿಯವರನ್ನು ಮಾತಿನಿಂದ ಯಾರಾದರೂ ಕಟ್ಟಿಹಾಕಬಹುದು, ತಾಳ್ಮೆ ಮುಖ್ಯ
ಪ್ರಾತಿನಿಧಿಕ ಚಿತ್ರImage Credit source: iStock Photo
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 26, 2024 | 12:10 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಜನವರಿ 26) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಪ್ರೀತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 27 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:20 ರಿಂದ 12:45ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:36 ರಿಂದ 17:02 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:29 ರಿಂದ 09:54ರ ವರೆಗೆ.

ಮೇಷ ರಾಶಿ: ಹಳೆಯದನ್ನು ಮರೆತು ಹೊಸ ಹಾದಿಯತ್ತ ಹೆಜ್ಜೆ ಹಾಕುವ ಮನಸ್ಸಾದೀತು. ತೆಗೆದುಕೊಳ್ಳುವ ನಿರ್ಣಯವು ಪೂರ್ಣ ಬೆಂಬಲದಿಂದ ಕೂಡಿರದು. ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸನ್ನು ಕೆಡಿಸುವುದು. ಅಸಾಧ್ಯವಾದುದನ್ನು ಸಾಧಿಸುವ ಭ್ರಮೆಯಿಂದ ಹೊರಬನ್ನಿ. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆದರೂ ಮನಸ್ಸಿಗೆ ನೆಮ್ಮದಿ ಸಿಗದು. ಖರೀದಿಸುವ ಎಲ್ಲದಕ್ಕೂ ಹೆಚ್ಚುವರಿ ಹಣವನ್ನು ಕೊಡಬೇಕಾದೀತು‌. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು. ಮಕ್ಕಳ‌ ವಿವಾಹ ಕಾರ್ಯದಲ್ಲಿ ನೀವು ಮಗ್ನರಾಗುವಿರಿ. ಕುತರ್ಕಗಳು ನಿಮ್ಮ ವ್ಯಕ್ತಿತ್ವವನ್ನು ಸೂಚಿಸುತ್ತದೆ.

ವೃಷಭ ರಾಶಿ: ದ್ವೇಷವನ್ನು ಸಾಧಿಸಲು ನಿಮಗೆ ಇಂದು ಸರಿಯಾದ ಕಾರಣ ಸಿಗಬಹುದು. ಮಾತಿನಿಂದ ಯಾರಾದರೂ ನಿಮ್ಮನ್ನು ಕಟ್ಟಿಹಾಕಬಹುದು. ಅನುಭವವು ಸುಳ್ಳಾದಂತೆ ಕಾಣಿಸುವುದು. ಕೃತಜ್ಞತೆಯನ್ನು ಬೆಳೆಸಿಕೊಳ್ಳುವುದು ನಿಮ್ಮ ವ್ಯಕ್ತಿತ್ವವನ್ನು ಬದಲಿಸಬಹುದು. ಪ್ರೇಮದಲ್ಲಿ ಹಿನ್ನಡೆಯಾಗಲಿದೆ. ತಾಳ್ಮೆಯಿಂದ ಮುಖ್ಯ ಆಯುಧವಾಗಿರಲಿ. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು. ಒಂದೇ ವಿಚಾರವನ್ನು ಮನನ‌ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ. ಪ್ರಯಾಣದಿಂದ ಆಯಾಸವಾಗಬಹುದು. ಉನ್ನತ ಅಭ್ಯಾಸದಿಂದ ಹಿಂದೇಟುಹಾಕುವ ಸ್ಥಿತಿ ಬರಬಹುದು. ನಿಮ್ಮ ಆಸೆಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಂಡು ಸಮಾಧಾನ ಪಡುವಿರಿ. ತುರ್ತು ಅವಶ್ಯಕತೆ ಇರುವುದು. ಇನ್ನೊಬ್ಬರ ಯೋಜನೆಯನ್ನು ನಿಮ್ಮದೆಂದು ಸಾಧಿಸುವಿರಿ.‌

ಮಿಥುನ ರಾಶಿ: ದೈಹಿಕ‌ ದೌರ್ಬಲ್ಯವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಿ. ನಿಮಗೆ ತಿಳಿದ ವಿಚಾರದ ಬಗ್ಗೆ ಹುಡುಕಾಟ ನಡೆಸುವಿರಿ. ವಿದ್ಯಾರ್ಥಿಗಳು ಸಂಶೋಧನೆಯತ್ತ ಗಮನವನ್ನು ಕೊಡುವರು. ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆ ಇರುವುದು. ವಿದ್ಯಾರ್ಥಿಗಳು ಅನಾರೋಗ್ಯದಿಂದ ವಿಶ್ರಾಂತಿ ಪಡೆಯಬೇಕಾಗಬಹುದು. ಸರಿಯಾದ ಹಂಚಿಕೊಂಡು ಕೆಲಸವನ್ನು ಮಾಡುವುದು ಸೂಕ್ತ. ಕಛೇರಿಯ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ಇಂದು ಮಾನಸಿಕವಾಗಿ ನೀವು ಕುಗ್ಗುವಿರಿ. ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ಭೂಮಿಯ ವ್ಯವಹಾರವು ಸುಲಭಕ್ಕೆ ಕೈ ಹಿಡಿಯದು. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು. ಅಪರಿಚಿತರ ಜೊತೆ ಮಾತನಾಡಲು ಬಹಳ ಹಿಂಜರಿಕೆ ಇರುವುದು.

ಕಟಕ ರಾಶಿ: ಇಂದು ಪಾಲುದಾರಿಕೆಯಿಂದ ಉತ್ತಮ ಆದಾಯವನ್ನು ಪಡೆಯಬಹುದು. ನಿಮ್ಮನ್ನು ಯಾವುದೋ ಕಾರಣಕ್ಕೆ ಹೊಗಳಬಹುದು. ಉದ್ವೇಗದಲ್ಲಿ ನೀವು ಏನನ್ನಾದರೂ ಹೇಳಬಹುದು. ಇಂದಿನ ಕೆಲವು ಮಾತುಗಳು ನಿಮಗೆ ಇಷ್ಟವಾಗದೇ ಹೋಗುವುದು. ಕೆಲವು ವಿಚಾರದಲ್ಲಿ ನೀವು ಆತುರರಾಗುವಿರಿ. ಭವಿಷ್ಯದ ಬಗ್ಗೆ ಪತಿಯಾದ ಚಿಂತನೆ ಇರಲಿದೆ. ನಿಮ್ಮರನ್ನು ನೀವು ಕಳೆದುಕೊಳ್ಳುವ ಭೀತಿಯು ಇರುವುದು. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಸಾಧ್ಯತೆ ಇದೆ. ಆಲಸ್ಯದಿಂದ ನಿಮ್ಮ ಅನೇಕ ಕಾರ್ಯಗಳು ಹಿಂದುಳಿಯಬಹುದು. ಮಕ್ಕಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ಬೇಡದ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡುವಿರಿ. ಮನೆಯ ವಾತಾರಣದಲ್ಲಿ ಇರಲು ಖುಷಿಯಾಗುವುದು.‌ ನಿಮ್ಮ ರಹಸ್ಯವನ್ನು ನೀವು ಗೊತ್ತಿಲ್ಲದೇ ಬೇರೆಯವರ ಜೊತೆ ಹಂಚಿಕೊಳ್ಳುವಿರಿ. ಯಾವುದನ್ನಾದರೂ ಸಂತೋಷದಿಂದ ಸ್ವೀಕರಿಸುವ ಮನೋಭಾವವಿರಲಿ.

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ