Rashi Bhavishya: ರಾಶಿಭವಿಷ್ಯ; ಈ ರಾಶಿಯವರಿಗೆ ನೋವನ್ನು ನುಂಗಿ ಬದುಕುವ ರೀತಿ ಗೊತ್ತಾಗಲಿದೆ
ಯಾವುದೇ ಕಾರ್ಯವನ್ನು ಪ್ರಾರಂಭಿಸುವ ಮುನ್ನ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕರ್ಕಾಟಕ ರಾಶಿಯವರಾಗಿದ್ದರೆ ಇಂದಿನ (ಜನವರಿ 27) ನಿಮ್ಮ ದಿನ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ.
ಇಂದಿನ (ಜನವರಿ 27) ರಾಶಿ ಭವಿಷ್ಯದಲ್ಲಿ (Horoscope) ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಮಘಾ, ಯೋಗ: ಆಯುಷ್ಮಾನ್, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 27 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:54 ರಿಂದ 11:20ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:11 ರಿಂದ 03:37ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:03 ರಿಂದ 08:29ರ ವರೆಗೆ.
ಮೇಷ ರಾಶಿ: ಇಂದು ಆದಷ್ಟು ಕಾಲ್ಪನಿಕ ಜಗತ್ತಿನಿಂದ ವಾಸ್ತವಕ್ಕೆ ಬಂದು ಆಲೋಚಿಸಿ. ವಿದ್ಯಾರ್ಥಿಗಳು ತಮ್ಮ ಬುದ್ಧಿವಂತಿಕೆಯನ್ನು ತೋರಿಸಬಹುದು. ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ. ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳುವುದು ಅನಿವಾರ್ಯ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ಸ್ನೇಹಿತರಿಂದ ಅಲ್ಪ ಆರ್ಥಿಕ ಲಾಭವು ನಿಮಗೆ ಸಿಗುವುದು. ಆರಾಮಾಗಿ ಇರಲು ನೀವು ಹೆಚ್ಚು ಇಷ್ಟಪಡುವಿರಿ. ಅತಿಯಾದ ಆಯಾಸವನ್ನು ಮಾಡಿಕೊಳ್ಳದೇ ಕಾರ್ಯವನ್ನು ಮಾಡುವಿರಿ. ಕಛೇರಿಯಲ್ಲಿ ಸಹೋದ್ಯೋಗಿಗಳಿಂದ ಇಂದು ನಿಮಗೆ ಸಹಾನುಭೂತಿಯು ಸಿಗುವುದು. ಸಂಬಂಧಗಳನ್ನು ಬಳಸಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ.
ವೃಷಭ ರಾಶಿ: ನಿಮ್ಮ ಕಾರ್ಯದುಂದ ಖ್ಯಾತಿಯನ್ನು ಪಡೆಯುತ್ತೀರಿ. ಕುಟುಂಬದ ಜೊತೆಗಿನ ನಿಮ್ಮ ಈ ದಿನವು ಉತ್ತಮವಾಗಿರುತ್ತದೆ. ವ್ಯವಹಾರದಲ್ಲಿ ಸಹೋದ್ಯೋಗಿಗಳ ನಿರೀಕ್ಷಿತ ಬೆಂಬಲವು ಸಿಗುವುದು. ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ. ನೋವನ್ನು ನುಂಗಿ ಬದುಕುವ ರೀತಿಯು ನಿಮಗೆ ಗೊತ್ತಾಗಲಿದೆ. ಇನ್ನೊಬ್ಬರನ್ನು ನೋವನ್ನು ನೀವು ಅರ್ಥ ಮಾಡಿಕೊಳ್ಳದೇ ವ್ಯವಹತಿಸುವಿರಿ. ನೂತನ ವಸ್ತುಗಳನ್ನು ಖರೀದಿಸುವಿರಿ. ಕಾಲಹರಣದ ಬದಲು ಉಪಯೋಗಕ್ಕೆ ಬರುವಂತೆ ಈ ದಿನವನ್ನು ರೂಪಿಸಿಕೊಳ್ಳಿ. ಹಸಿವು ಅಧಿಕವಾಗಿರಬಹುದು.
ಮಿಥುನ ರಾಶಿ: ನಿಮ್ಮ ವ್ಯಾಪಾರವು ವಿವಿಧ ಕಾರಣಗಳಿಂದ ವಿಸ್ತರಿಸಬಹುದು. ಮಕ್ಕಳ ಬಗ್ಗೆ ನಿಮ್ಮೊಳಗೆ ಆತಂಕವು ಉಂಟಾಗಬಹುದು. ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ. ನಿಮ್ಮ ಆಲೋಚನೆಗಳು ಅಸ್ಥಿರ ಮತ್ತು ದ್ವಂದ್ವಗಳಿಂದ ಕೂಡಿರುತ್ತದೆ. ವಾಹನ ಸೌಕರ್ಯವು ಪ್ರಾಪ್ತಿಯಾಗಲಿದೆ. ಹೊಸ ಬಟ್ಟೆ ಖರೀದಿಸಲಾಗುವುದು. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ಹೊಸ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯವು ಸಾಲದು. ಅಪರಿಚಿತರ ಜೊತೆ ಸಲುಗೆ ಅನವಶ್ಯಕ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು. ಹೊಂದಾಣಿಕೆಯ ಮನೋಭಾವವು ಇರಬೇಕಾದೀತು. ಹಣವನ್ನು ಉಳಿಸಿಕೊಳ್ಳಲು ನಿಮ್ಮ ಪ್ರಯತ್ನವು ಫಲಕೊಡುವುದು.
ಕಟಕ ರಾಶಿ: ನೀವು ಇಂದು ಹೊಸ ಕೆಲಸವನ್ನು ಪ್ರಾರಂಭಿಸದಿರುವುದು ಒಳ್ಳೆಯದು. ರೋಗಕ್ಕೆ ಸೂಕ್ತ ಚಿಕಿತ್ಸೆಯನ್ನು ಮಾಡಿಕೊಳ್ಳುವ ಕಡೆ ಗಮನವಿರಲಿ. ಮಾತು ಮತ್ತು ನಡವಳಿಕೆಯನ್ನು ಮಿತವಾಗಿರಿಸಿಕೊಳ್ಳುವುದು ಪ್ರಯೋಜನಕಾರಿಯಾಗುವುದು. ಅತಿಸೂಕ್ಷ್ಮವಾಗುವುದೂ ಮನಸ್ಸಿಗೆ ತೊಂದರೆಯಾಗುತ್ತದೆ. ಹಣ ಹೆಚ್ಚು ಖರ್ಚಾಗುತ್ತದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಿ. ಮನಸ್ಸಿನ ಶಾಂತಿಯನ್ನು ಪಡೆಯಲು ಶ್ರಮಿಸಬೇಕು. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕ ಇರುವುದು. ಕಳೆದುಕೊಂಡದ ವಸ್ತುವಿನ ಬಗ್ಗೆ ಮೋಹವಿರುವುದು. ಗೊಂದಲವನ್ನು ಮಾಡಿಕೊಳ್ಳದೇ ಕೆಲಸವನ್ನು ಸರಳ ಮಾಡಿಕೊಳ್ಳಿ.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ