Nitya Bhavishya: ಮಕ್ಕಳ ಮದುವೆ ಚಿಂತೆ, ಮಾನಸಿಕ ಒತ್ತಡಕ್ಕೆ ಕಾರಣ ಸಾಧ್ಯತೆ ಎಚ್ಚರ!
ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 27, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.
ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಜನವರಿ 28) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಸೌಭಾಗ್ಯ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 28 ನಿಮಿಷಕ್ಕೆ, ರಾಹು ಕಾಲ ಸಂಜೆ 05:03 ರಿಂದ 06:28ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:46 ರಿಂದ 02:11 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:37 ರಿಂದ 05:03ರ ವರೆಗೆ.
ಮೇಷ ರಾಶಿ: ಇಂದು ನಿಮ್ಮ ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ ಆದರೆ ಮಾನಸಿಕ ಒತ್ತಡ ಇರಬಹುದು. ನೀವು ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಆದರೆ ನಿಮ್ಮ ಕೆಲಸದಲ್ಲಿ ನೀವು ಸಂತೋಷವಾಗಿರುವುದಿಲ್ಲ. ವೈವಾಹಿಕ ಜೀವನವು ಒತ್ತಡದಿಂದ ಇರಲಿದೆ. ನಿಮ್ಮ ಪ್ರೀತಿಪಾತ್ರರ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. ಪ್ರೀತಿಯ ಹೊಸ ಅಧ್ಯಾಯವನ್ನು ಆರಂಭ ಮಾಡುವಿರಿ. ಒಂಟಿಯಾಗಿ ಕುಳಿತು ಕಳೆದ ದಿನಗಳನ್ನು ನೆನೆಯುವಿರಿ. ಮಕ್ಕಳ ಮದುವೆಯ ಚಿಂತೆಯೂ ಒಮ್ಮಿಂದೊಮ್ಮೆಲೆ ಬರಬಹುದು. ನಿಮ್ಮ ಮಾತಿಗೆ ಕುಟುಂಬವು ಸಮ್ಮತಿಸಬಹುದು. ಮನೆಯ ಪ್ರಶಾಂತ ವಾತಾವರಣವು ಉದ್ವಿಗ್ನಗೊಂಡೀತು. ಔದಾರ್ಯವು ಅಧಿಕವಾಗಿ ಬೇಡ. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ಮಾಡುವುದಿಲ್ಲ. ಆರ್ಥಿಕವಾಗಿ ಬಲಗೊಳ್ಳಲು ನೀವು ದೈವಕ್ಕೆ ಶರಣಾಗುವಿರಿ. ಪಾಲುದಾರಿಕೆಯಲ್ಲಿ ಬಹುಪಾಲು ನಿಮ್ಮದಿರುವುದು.
ವೃಷಭ ರಾಶಿ: ನಿಮ್ಮ ಖರ್ಚು ಗಮನಾರ್ಹವಾಗಿ ಹೆಚ್ಚಾಗಬಹುದು. ಇದು ನೀವೇ ಕೆಲವು ಸಮಸ್ಯೆಗಳನ್ನು ಹುಟ್ಟುಹಾಕುವಿರಿ. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. ನಿಮ್ಮ ಜೀವನ ಸಂಗಾತಿಯ ಸೃಜನಶೀಲತೆಯನ್ನು ನೋಡಿ ನೀವು ತುಂಬಾ ಸಂತೋಷಪಡುತ್ತೀರಿ. ಅತಿಯಾದ ನಂಬಿಕೆಯು ನಿಮಗೆ ಸರಿಯಾಗದು. ನಿಮ್ಮ ಸ್ನೇಹಿತರೊಬ್ಬರಿಂದ ನೀವು ಸ್ವಲ್ಪ ಸಹಾಯ ಪಡೆಯಬಹುದು. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ಮಾತಿನಿಂದ ಸಮಾಧಾನವು ಬರುವುದು. ದೂರದಲ್ಲಿರುವ ಮಕ್ಕಳನ್ನು ನೋಡುವ ಆಸೆಯಾಗಬಹುದು. ಉದ್ಯಮದ ಕಾರಣ ಪ್ರಯಾಣ ಮಾಡುವ ಸ್ಥಿತಿಯು ಬರಬಹುದು. ಅಪ್ತರ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಿರಿ. ಹಿರಿಯರ ಬೋಧನೆಯು ಉಪಯುಕ್ತವೆನಿಸುವುದು. ಮನೆಯಿಂದ ದೂರವಿರುವ ನಿಮಗೆ ಮನೆಗೆ ಹೋಗಬೇಕು ಎಂದು ಅನ್ನಿಸುವುದು.
ಮಿಥುನ ರಾಶಿ: ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವುದು ನಿಮಗೆ ಸವಾಲಾಗಿ ಪರಿಣಮಿಸಬಹುದು. ನೀವು ಚಿಂತಿತರಾಗಿರುವ ಕಾರಣ ಮಾನಸಿಕ ಒತ್ತಡವೂ ಇರುತ್ತದೆ. ಖರ್ಚುಗಳು ಕಡಿಮೆಯಾಗುತ್ತವೆ ಮತ್ತು ಆದಾಯವು ಉತ್ತಮವಾಗಿರುತ್ತದೆ. ದಾಂಪತ್ಯ ಜೀವನದಲ್ಲಿ ಪ್ರೀತಿ ಇರುತ್ತದೆ. ಮಕ್ಕಳಿಂದ ಸಂತಸ ಇರುತ್ತದೆ. ಪ್ರೀತಿಯ ಜೀವನವನ್ನು ನಡೆಸುತ್ತಿರುವವರು ತಮ್ಮ ಹೃದಯದ ಭಾವನೆಗಳನ್ನು ತಮ್ಮ ಪ್ರೀತಿಪಾತ್ರರಿಗೆ ವ್ಯಕ್ತಪಡಿಸಿ ಆನಂದಿಸುವಿರಿ. ಮಾನಸಿಕ ಸ್ಥಿತಿಯೂ ಬಹಳ ಆಹ್ಲಾದದಿಂದ ಇರಲಿದೆ. ಯಾವ ಹೂಡಿಕೆಯು ನಿಮಗೆ ಲಾಭದಾಯಕವಾಗುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿಯನ್ನು ಇಟ್ಟುಕೊಂಡವರು ಗುರುವಿನ ಆಶೀರ್ವಾದವನ್ನು ಪಡೆದುಕೊಳ್ಳಿ. ನಿಮಗಾದ ವಂಚನೆಯನ್ನು ಗೌಪ್ಯವಾಗಿ ಇರಿಸಿಕೊಳ್ಳಿ. ಗೌರವವು ಕಡಿಮೆ ಆದಂತೆ ಅನ್ನಿಸೀತು. ಸಂಗಾತಿಯ ವಿಚಾರದಲ್ಲಿ ಸಂಪೂರ್ಣ ಖುಷಿ ಇರುವುದು.
ಕಟಕ ರಾಶಿ: ಇಂದು ನೀವು ಭವಿಷ್ಯಕ್ಕಾಗಿ ಹೊಸದನ್ನು ಯೋಚಿಸುವಿರಿ. ನಿಮ್ಮ ಕುಟುಂಬದ ಹಿರಿಯರ ಆಶೀರ್ವಾದದಿಂದ ನಿಮ್ಮ ಕೆಲಸವು ನೆರವೇರುತ್ತದೆ. ಉದ್ಯೋಗಸ್ಥರು ಇಂದು ಕೆಲವು ನಿರಾಶೆಯನ್ನು ಎದುರಿಸಬೇಕಾಗಬಹುದು. ವ್ಯಾಪಾರ ಮಾಡುವವರಿಗೆ ಇಂದು ಉತ್ತಮ ದಿನವಾಗಿರುತ್ತದೆ. ವೈವಾಹಿಕ ಜೀವನ ಸಾಮಾನ್ಯವಾಗಿರುತ್ತದೆ. ದುರಭ್ಯಾಸದಿಂದ ದೂರವಿರುವ ಮನಸ್ಸು ಬರಬಹುದು. ದೇಹಾರೋಗ್ಯದ ಬಗ್ಗೆ ಚಿಂತೆಯು ಹೆಚ್ಚಾದೀತು. ನಿಮ್ಮ ವಿಳಂಬ ಕಾರ್ಯಕ್ಕೆ ಹೇಳಿಸಿಕೊಳ್ಳಬೇಕಾದೀತು. ಪದೋನ್ನತಿಯ ಬಗ್ಗೆ ಕೇಳಿದರೂ ಏನೂ ಪ್ರಯೋಜನವಾಗದು. ಹಣಕಾಸಿನ ವ್ಯವಹಾರದ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿಕೊಳ್ಳಿ. ಬಂಗಾರದ ಬಗ್ಗೆ ವ್ಯಾಮೋಹ ಹೆಚ್ಚಾಗಲಿದೆ. ಸಂಗಾತಿಯನ್ನು ಹಣಕ್ಕಾಗಿ ಪೀಡಿಸುವಿರಿ. ಪ್ರೀತಿ ಪಾತ್ರರನ್ನು ನೀವು ದೂರಮಾಡುವಿರಿ. ವಿದ್ಯಾರ್ಥಿಗಳು ತಮ್ಮ ಅಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು. ನಿರಂತರ ಕೆಲಸದಿಂದ ಸ್ವಲ್ಪ ವಿಶ್ರಾಂತಿಯು ಮುಖ್ಯವಾದೀತು.