AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ರಾಶಿಭವಿಷ್ಯ; ಮಕ್ಕಳ ಶಿಕ್ಷಣಕ್ಕಾಗಿ ಹಣವನ್ನು ಹೊಂದಿಸಬೇಕಾದೀತು, ಖರ್ಚು ಮಾಡುವ ಅನಿವಾರ್ಯತೆ ಸಾಧ್ಯತೆ

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 31, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Rashi Bhavishya: ರಾಶಿಭವಿಷ್ಯ; ಮಕ್ಕಳ ಶಿಕ್ಷಣಕ್ಕಾಗಿ ಹಣವನ್ನು ಹೊಂದಿಸಬೇಕಾದೀತು, ಖರ್ಚು ಮಾಡುವ ಅನಿವಾರ್ಯತೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jan 31, 2024 | 12:10 AM

Share

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಜನವರಿ 31) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಸುಕರ್ಮಾ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 29 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:46 ರಿಂದ 02:012ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:28 ರಿಂದ 09:54ರ ವರೆಗೆ, ಗುಳಿಕ ಕಾಲ 11:20 ರಿಂದ ಮಧ್ಯಾಹ್ನ 12:46ರ ವರೆಗೆ.

ಮೇಷ ರಾಶಿ: ಇಂದು ನಿಮ್ಮ ವ್ಯಾಪಾರದಿಂದ ಖ್ಯಾತಿಯು ಹೆಚ್ಚಾಗಬಹುದು. ವೈವಾಹಿಕ ಸುಖವನ್ನು ಆನಂದದಿಂದ ಅನುಭವಿಸುವಿರಿ. ಸ್ನೇಹಿತರ ಜೊತೆ ಮೋಜಿನ ಸಮಯವನ್ನು ಕಳೆಯುವಿರಿ. ಧಾರ್ಮಿಕ ಕಾರ್ಯಗಳಲ್ಲಿ ತೋರ್ಪಡಿಕೆ ಬೇಡ. ನಿಮ್ಮ ವೃತ್ತಿಜೀವನದಲ್ಲಿ ದೊಡ್ಡ ಅವಕಾಶಗಳನ್ನು ಪಡೆಯಬಹುದು. ಜಾಣ್ಮೆಯ ವ್ಯವಹಾರದಿಂದ ಇಂದು ವ್ಯಾಪಾರದಲ್ಲಿ ಲಾಭ ಪಡೆಯುವಿರಿ. ಅನಿರೀಕ್ಷಿತವಾಗಿ ಸಿಕ್ಕ ಸಂಪತ್ತನ್ನು ಯಾರಿಗಾದರೂ ಕೊಡುವಿರಿ. ದುರ್ವ್ಯಸನವು ನಿಮ್ಮನ್ನು ಅಂಟಿಕೊಳ್ಳಬಹುದು. ಬಹಳಷ್ಟು ಕಾರ್ಯಗಳಿದ್ದರೂ ಎಲ್ಲವನ್ನೂ ಬಿಟ್ಟು ಆರಾಮಾಗಿ ಇರುವಿರಿ. ಕಳೆದ ಸಮಯವನ್ನು ನೀವು ಮೆಲುಕು ಹಾಕಿಕೊಂಡು ಸಂತೋಷಪಡುವಿರಿ. ನೀವು ತೆಗೆದುಕೊಳ್ಳುವ ನಿರ್ಧಾರವು ಸ್ಪಷ್ಟವಾಗಿ ಇರಲಿದೆ. ಸಮಯಸ್ಫೂರ್ತಿಯಿಂದ ಕೆಲಸವನ್ನು ಮಾಡುವಿರಿ. ಬೇಕಾದಷ್ಟನ್ನೇ ಮಾತನಾಡಿ.

ವೃಷಭ ರಾಶಿ: ಇಂದು ಯಾವುದೇ ಕಾರ್ಯದಲ್ಲಿ ನಿರತರಾಗಿದ್ದರೂ, ನಿಮ್ಮ ಮನಸ್ಸು ಮರ್ಯಾವುದರಮೇಲೋ ಇರಬಹುದು. ಯಾರೊಂದಿಗೂ ಅನಗತ್ಯ ವಿಚಾರಗಳನ್ನು ಚರ್ಚಿಸಬೇಡಿ. ಇತರರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದು ಬೇಡ. ವೈವಾಹಿಕ ಸುಖವು ಕ್ಷೀಣಿಸಬಹುದು. ಇಂದು ಕುಟುಂಬದವರ ಮಾತುಗಳು ನಿಮ್ಮ ಮನಸ್ಸಿಗೆ ನಾಟಬಹುದು. ವಿದ್ಯಾರ್ಥಿಗಳು ಶುಭ ಫಲಿತಾಂಶದಿಂದ ಸಂತೋಷಗೊಳ್ಳುವರು. ನಿಮ್ಮ ಅಪೂರ್ಣ ಕಾರ್ಯಗಳನ್ನು ಇಂದು ಪೂರ್ಣಮಾಡಿಕೊಳ್ಳುವಿರಿ. ಪೂರ್ವಪುಣ್ಯವು‌ ನಿಮ್ಮನ್ನು ಕಾಪಾಡಲಿದೆ. ಕೆಲವು ಅಪರಿಪೂರ್ಣವಾದ ಕಾರ್ಯವನ್ನು ಮಾಡಿ ಮುಗಿಸುವಿರಿ. ನಿಮ್ಮನ್ನು ಅಪಹಾಸ್ಯ ಮಾಡಲಿದ್ದು ನಿಮಗೆ ಕೋಪ ಬರುವುದು. ಕೋಪವನ್ನು ಕೋಪದಿಂದಲೇ ತೆಗೆಯಲು ಪ್ರಯತ್ನಿಸುವಿರಿ.

ಮಿಥುನ ರಾಶಿ: ಧಾರ್ಮಿಕ ಆಚರಣೆಯು ನಿಮಗೆ ಬಾಲಿಶ ಎನಿಸಬಹುದು. ಉನ್ನತ ಶಿಕ್ಷಣದಲ್ಲಿ ಸಾಧನೆ ಮಾಡುವಿರಿ. ಉದ್ಯಮವನ್ನು ಚುರುಕುಗೊಳಿಸುವ ಅಗತ್ಯವಿದೆ. ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಸಿಗಬಹುದು. ಇಂದು ನೀವು ಅನುಭವಸ್ಥರ ಮಾರ್ಗದರ್ಶನವನ್ನು ತೆಗೆದುಕೊಳ್ಳಬೇಕು. ಯಾರನ್ನೋ ದೂರುತ್ತ ನಿಮ್ಮ ಕೆಲಸದ ಅವಧಿಯನ್ನು ವ್ಯರ್ಥ ಮಾಡುವುದು ಬೇಡ. ವೈವಾಹಿಕ ಜೀವನದ ಬಗ್ಗೆ ಮಾತನಾಡುತ್ತಾ ಹಳೆಯದನ್ನು ನೆನಪಿಸಿಕೊಳ್ಳುವಿರಿ. ಶಿಸ್ತಿಗೆ ಹೆಚ್ಚು ಗಮನವನ್ನು ಇಂದು ಕೊಡುವಿರಿ. ನಿಮ್ಮ ಪ್ರೇಮಪ್ರಕರಣವು ದುಃಖಾಂತವಾಗಲಿದೆ. ಸೃಜನಾತ್ಮಕ ಕೆಲಸದಿಂದ ಹೆಚ್ಚಿನ ಯಶಸ್ಸನ್ನು ಸಾಧಿಸುವಿರಿ. ಸಂಗಾತಿಗಳಿಬ್ಬರೂ ದೂರಾಗುವ ಯೋಚನೆ ಮಾಡಬಹುದು. ನಿಮ್ಮ ಮಾತು ನಿಷ್ಪಕ್ಷಪಾತದಿಂದ ಇರಲಿ.

ಕಟಕ ರಾಶಿ: ಇಂದು ಪ್ರಯಾಣವು ಕಾರ್ಯಸಿದ್ಧಿಗೆ ಪೂರಕವಾದೀತು. ನಿಮ್ಮ ನಿರ್ಧಾರಗಳು ಇತರರಿಗೆ ಒಪ್ಪಿಗೆಯಾಗದೇ ಹೋಗಬಹುದು. ಮಕ್ಕಳ ಶಿಕ್ಷಣಕ್ಕಾಗಿ ಹಣವನ್ನು ಹೊಂದಿಸಬೇಕಾದೀತು. ನೀವು ಹೂಡಿಕೆಯಿಂದ ಆರ್ಥಿಕವಾಗಿ ಬಲವುಳ್ಳವರಾಗಲು ಯೋಚಿಸುವಿರಿ. ಪ್ರೇಮ ಜೀವನದಲ್ಲಿ ಪ್ರೀತಿ ಹೆಚ್ಚಾಗಿ ಉತ್ಸಾಹದಿಂದ ಇರುವಿರಿ. ಯಾರಾದರೂ ತಪ್ಪು ತಿಳಿದಾರು ಎಂಬ ಭಾವವು ನಿಮ್ಮನ್ನು ಕಾಡಬಹುದು. ನೀವು ಹೊಸ ವಾಹನವನ್ನು ಸ್ನೇಹಿತರ ಒತ್ತಾಯಕ್ಕೆ ಖರೀದಿ ಮಾಡುವಿರಿ. ಒಂದೇ ತರದ ಜೀವನವು ನಿಮಗೆ ಬೇಸರವಾಗುವುದು. ಇಂದು ಹೆಚ್ಚು ಖರ್ಚು ಮಾಡುವ ಅನಿವಾರ್ಯತೆ ಬರಬಹುದು. ನಿಮ್ಮ ಕಾರ್ಯಗಳನ್ನು ವೇಗವಾಗಿ ಮುಗಿಸಿಕೊಂಡು ನಿಶ್ಚಿಂತೆಯಿಂದ ಇರುವಿರಿ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್