AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Astrology: ಈ ರಾಶಿಯವರು ತಮ್ಮಷ್ಟಕ್ಕೆ ತಾವು ಹೇಗೋ ಇರುವರು, ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 27 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ಈ ರಾಶಿಯವರು ತಮ್ಮಷ್ಟಕ್ಕೆ ತಾವು ಹೇಗೋ ಇರುವರು, ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ
ನಿತ್ಯ ಭವಿಷ್ಯ
ಗಂಗಾಧರ​ ಬ. ಸಾಬೋಜಿ
|

Updated on: Jun 27, 2024 | 12:02 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಗುರುವಾರ (ಜೂನ್. 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಪ್ರೀತಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 14:13 ರಿಂದ 15:50ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 6:08 ರಿಂದ ಬೆಳಿಗ್ಗೆ 7:45ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 9:22 ರಿಂದ 10:59ರ ವರೆಗೆ.

ಮೇಷ ರಾಶಿ: ಇಂದು ನೀವು ಎಲ್ಲ ಕಾರ್ಯವನ್ನೂ ಶಿಸ್ತಿನಿಂದ ಮಾಡಲು ಬಯಸುವಿರಿ. ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ. ಉತ್ತಮವಾದ ಮಾರ್ಗಾನ್ವೇಷಣೆಯಲ್ಲಿ ಇರಿ. ಸಲ್ಪ ಅಂತರದಲ್ಲಿ ನಿಮಗೆ ಸಿಗಬೇಕಾದ ಆಸ್ತಿಯು ಬೇರೆಯವರ ಕೈ ಸೇರುವುದು. ವಾಹನ ರಿಪೇರಿಗೆ ಹಣವು ಖರ್ಚಾಗಬಹುದು. ಎಂತಹ ಒತ್ತಡದಲ್ಲಿಯೂ ಅದನ್ನು ಸಡಿಲಿಸಿಕೊಳ್ಳುವ ಅರಿವು ನಿಮಗೆ ಗೊತ್ತಿದೆ. ಅವರಿಗೆ ಕೊಟ್ಟುಬಿಡಿ. ಮತ್ತೂ ಅತಿಯಾದ ಅನಗತ್ಯ ಬಯಕೆಯೂ ನಿಮ್ಮ ನಿತ್ಯ ಜೀವನಕ್ಕೆ ಒಳ್ಳೆಯದಲ್ಲ. ಅವಶ್ಯಕತೆಗಳನ್ನು ಪೂರೈಸಿಕೊಳ್ಳ ನಿಮ್ಮ ಹಣದ ವಿನಿಯೋಗವಾಗಲಿ. ಬಂದ ಹಣವು ಮತ್ತಾವುದೋ ರೀತಿಯಲ್ಲಿ ಹೋಗಲಿದೆ. ನಿಮಗೆ ಯಾರಾದರೂ ಏನಾದರೂ ಮಾಡಿಸಿದ್ದಾರೇನೋ ಎನ್ನುವ ಅನುಮಾನವೂ ಕಾಡಬಹುದು. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು. ಇನ್ನೊಬ್ಬರ ಸಲಹೆಯನ್ನು ಅನಿವಾರ್ಯವಾಗಿ ಒಪ್ಪಿಕೊಳ್ಳುವಿರಿ.

ವೃಷಭ ರಾಶಿ: ಇಂದು ನೀವು ಯಾರ ಮಾತನ್ನು ಒಪ್ಪಿದರೂ ನಿಮ್ಮ ಆಲೋಚನೆಯನ್ನು ಬದಲಾಯಿಸುವುದಿಲ್ಲ. ತಂದೆಯಿಂದ ಬರುವ ಧನವು ವಿಳಂಬವಾಗಿ ಬರಬಹುದು. ಸ್ನೇಹಿತರ ಜೊತೆ ಸೇರಿ ಖರ್ಚನ್ನು ಮಾಡುವಿರಿ. ಯಾರಾದರೂ ನಿಮ್ಮನ್ನು ಅಳೆಯಬಹುದು. ಅದಕ್ಕೆ ಸರಿಯಾಗಿ ಉತ್ತರಿಸಿ. ಕಾಣುವಷ್ಟು ಸುಲಭವಾಗಿ ಯಾವುದೂ ಇಲ್ಲವೆಂಬುದು ಗೊತ್ತಾಗಲಿದೆ. ಅಗೌರವ ಸಿಗುವ ಕಡೆ ಸುಮ್ಮನೆ ಹೋಗಬೇಡಿ. ಆಸ್ತಿಯ ವಿಚಾರದಲ್ಲಿ ಯಾರೋ ಮಧ್ಯಸ್ತಿಕೆ ವಹಿಸಿಕೊಳ್ಳಲು ಬರಬಹುದು. ಕಛೇರಿಯಲ್ಲಿ ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸಲು ಕಷ್ಟವಾದೀತು. ಪರರ ಭಾವನೆಗೆ ಅನಾದರ ತೋರುವುದು ಬೇಡ. ನಿಮ್ಮಷ್ಟಕ್ಕೆ ನೀವು ಹೇಗೋ ಇರುವಿರಿ. ಸಹೋದರರ‌ ನಡುವೆ ಸೌಹಾರ್ದತೆ ಇರಲಿದೆ. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು.

ಮಿಥುನ ರಾಶಿ: ಇಂದು ತಂದೆಯು ಯಾವುದೋ ಕಾರ್ಯಕ್ಕೆ ಧನವನ್ನು ನಿರೀಕ್ಷಿಸಬಹುದು. ಕುಟುಂಬದ ಸಮಸ್ಯೆಯನ್ನು ಬಗೆಹರಿಸಲಾಗದೇ ಇಂದು ಕೈಚೆಲ್ಲಿ ಕುಳಿತುಕೊಳ್ಳುವಿರಿ. ಹಣದ ವಿಚಾರದಲ್ಲಿ ನಿಮ್ಮನ್ನು ವಂಚಿಸುವರು. ನಿಮ್ಮ ತಪ್ಪೇ ನಿಮಗೆ ಮುಳ್ಳದೀತು. ಸ್ತ್ರೀಯರಿಗೆ ವಿನಾಕಾರಣ ಅಪವಾದ ಬಂದೀತು. ಹೊಸ ಕೆಲಸದ ಉತ್ಸಾಹದಲ್ಲಿ ಇರುವಿರಿ. ಸಂಪಾದನೆಯು ಅಲ್ಪವೆನಿಸಿ ಆದಾಯದ ಮೂಲವನ್ನು ಬದಲಿಸಬೇಕಾಗಬಹುದು. ನೂತನ ವಾಹನವನ್ನು ಖರೀದಿಸಿದ ಖುಷಿ ಇರಲಿದೆ. ಸಂಗಾತಿಯ ಜೊತೆ ಇಂದು ಕಛೇರಿಯ ವಿಚಾರವನ್ನು ಹಂಚಿಕೊಳ್ಳುವಿರಿ. ಸಹೋದರರ ನಡುವೆ ಮನೆಯ ಬಗ್ಗೆ ಚರ್ಚಿಸುವಿರಿ. ದಿನದ ಕೊನೆಯಲ್ಲಿ ಸಂತೃಪ್ತಿ ಇರಲಿದೆ. ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಿ. ನಿಮ್ಮ ನೋವಿಗೆ ಯಾರಾದರೂ ಸ್ಪಂದಸುವರು. ಕಷ್ಟಕ್ಕೆ ಸ್ಪಂದಿಸುವ ಮನೋಭಾವವಿರಲಿ. ಸಂಗಾತಿಯ ಖರ್ಚನ್ನು ನಿಭಾಯಿಸುವ ಜವಾಬ್ದಾರಿಯನ್ನು ನೀವೇ ಹೊರಬೇಕಾದೀತು.

ಕಟಕ ರಾಶಿ: ಇಂದು ನೀವು ಉದ್ಯೋಗದ ಕಾರಣಕ್ಕೆ ಬೇರೆ ಕಡೆಗೆ ಹೋಗುವಿರಿ. ನಿಮ್ಮ ನಡವಳಿಕೆಯಿಂದ ಮೇಲಧಿಕಾರಿಗಳಿಗೆ ಅಸಮಾಧಾನವಾಗಲಿದೆ. ನಿಮ್ಮ ಸ್ಪಷ್ಟ ನಿರ್ಧಾರವನ್ನು ಮನೆಯಲ್ಲಿ ಹೇಳಿ. ಗೊಂದಲವನ್ನು ಮಾಡಿಕೊಂಡು ಇರಬೇಡಿ. ಬುದ್ಧಿವಂತರೆಂಬ ಅಹಂಕಾರ ಬೇಡ. ಎಡವಿ ಬೀಳುವ ಮೊದಲು ಎಚ್ಚರವಹಿಸಿ. ನಿಮ್ಮ ಪ್ರೇಮ ವಿಚಾರವನ್ನು ಕೇಳಿ ಮನೆಯಲ್ಲಿ ಆಶ್ಚರ್ಯವಾಗಬಹುದು. ಅವರು ಇದನ್ನು ಒಪ್ಪದೇ ಇರಬಹುದು. ಅದಕ್ಕಾಗಿ ನಿಮ್ಮದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ವಾತಾವರಣ ತಿಳಿಯಾದಮೇಲೆ ಆ ಬಗ್ಗೆ ಚರ್ಚಿಸಿ. ನೀವಿಂದು ಅಪರಿಚಿತರಿಗೆ ಸಹಾಯಮಾಡಲಿದ್ದೀರಿ. ರಾಜಕೀಯ ವ್ಯಕ್ತಿಗಳಿಗೆ ಜನಮನ್ನಣೆಯು ಹೆಚ್ಚಾಗುವುದು. ಅತಿಯಾಗಿ ಯಾವುದು ಸಿಕ್ಕರೂ ಅದು ತೊಂದರೆಯೇ. ಅಲ್ಪ ಪ್ರಯಾಣದಿಂದಲೂ ನಿಮಗೆ ಆಯಾಸವಾಗಬಹುದು. ಕೆಲವು ವಿಚಾರಗಳಲ್ಲಿ ಕುತೂಹಲವು ಇರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆಯನ್ನು ಕಡಿಮೆ ಮಾಡಿಕೊಳ್ಳಿ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ