ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ಸಾಧ್ಯ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ 15:39 ರಿಂದ 17:14ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 9:21 ರಿಂದ 10:55 ರ ವರೆಗೆ, ಗುಳಿಕ ಕಾಲ 12:30 ರಿಂದ 14:05ರ ವರೆಗೆ
ಮೇಷ ರಾಶಿ: ಕೆಲವು ಸಂಗತಿಗಳನ್ನು ನೀವು ಗೊತ್ತಿಲ್ಲದಂತೆ ಇರುವುದು ಒಳ್ಳೆಯದು. ಇಂದು ನಿಮ್ಮ ಪರೀಕ್ಷೆಯ ಕಾಲ. ಅದಕ್ಕೆ ಯೋಗ್ಯವಾದ ಉತ್ತರವನ್ನು ಕೊಡುವ ಭರದಲ್ಲಿ ಅವಘಡಗಳು ಆಗಬಹುದು. ನೀವು ಯಾವುದನ್ನು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಸಂಗಾತಿಯ ಜೊತೆ ಕಾಲವನ್ನು ಕಳೆದರೂ ಸಂತೋಷವಾಗಿ ಇಡಲಾಗದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಆಪ್ತವಾದ ವಿಚಾರಗಳ ಜೊತೆ ಹೆಚ್ಚು ಚರ್ಚೆ ಮಾಡುವಿರಿ.
ವೃಷಭ ರಾಶಿ: ಎಲ್ಲವೂ ಇದ್ದರೂ ಕೊರತೆ ಕಾಣಿಸುವುದು. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಾತಿಗೆ ಬೆಲೆಯು ಕಡಿಮೆಯಾದೀತು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ಮನಸ್ಸನ್ನು ಏಕಾಗ್ರ ಮಾಡುವುದು ಕಷ್ಟವಾದೀತು. ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ. ಪ್ರಯಾಣದ ಸುಖವೂ ಇರಲಿದೆ. ನಿಮ್ಮ ವಿಶ್ರಾಂತಿಯ ಸಮಯವು ಬದಲಾಗಿ ಆರೊಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುವುದು. ಬಹಳ ದಿನಗಳಿಂದ ಕೆಟ್ಟಿದ್ದ ಆರೋಗ್ಯವು ಸರಿಯಾದರೂ ಆರೋಗ್ಯ ಪೂರ್ಣ ಮನಸ್ಸು ಸರಿಯಾಗಲು ಸಮಯು ಬೇಕು. ನಿಮ್ಮ ಹೊಣೆಗಾರಿಕೆ ಕಡಿಮೆ ಆದಂತೆ ಅನ್ನಿಸುವುದು. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ಹೊಂದಾಣಿಕೆಯು ನಿಮಗೆ ಅನಿವಾರ್ಯವಾದೀತು.
ಮಿಥುನ ರಾಶಿ: ನೀವಿಂದು ಬದಲಾವಣೆಯನ್ನು ಇಷ್ಟಪಡುತ್ತೀರಿ. ಮಕ್ಕಳ ವಿಚಾರದಲ್ಲಿ ನಿಮಗೆ ಬೇಸರವಾಗಲಿದೆ. ಹೆಸರಾಂತ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಎಂದೋ ಮಾಡಿದ ಇಂದು ನಿಮ್ಮ ಆಪತ್ತಿಗೆ ಬರಲಿದೆ. ಸತ್ಯವನ್ನು ಮುಚ್ಚಿಡಲು ಹೋಗಬೇಡಿ. ಮುಂದೆ ಅದೇ ದೊಡ್ಡ ಕಂಟಕವಾದೀತು. ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು. ಮಾತಿಗೆ ಕಟ್ಟು ಬೀಳುವ ಅಗತ್ಯವಿಲ್ಲ. ಯಾವ ವಿಚಾರವನ್ನೂ ತೀರ್ಮಾನಿಸಲಾಯಿತು ಆಗದು. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಏಕಾಗ್ರತೆಯನ್ನು ಬೆಳೆಸಿಕೊಳ್ಳಲು ಅಭ್ಯಾಸ ಮಾಡುವಿರಿ. ವಾಹನದ ವಿಚಾರಕ್ಕೆ ಹೊಂದಾಣಿಕೆ ಕಷ್ಟವಾಗಬಹುದು.
ಕಟಕ ರಾಶಿ: ನಿಮಗೆ ಅವಶ್ಯಕ ವಸ್ತುಗಳ ಬಗ್ಗೆ ಅತಿಯಾದ ಹಂಬಲವಿರುವುದು. ಮೇಲಿನಿಂದ ಬಿದ್ದು ಪೆಟ್ಟುಮಾಡಿಕೊಳ್ಳುವಿರಿ. ನೀವಿಂದು ಪ್ರೀತಿಸಲು ಆರಂಭಿಸುವಿರಿ. ಅವಸರದಲ್ಲಿ ಅನಾಹುತವಾದೀತು. ಧಾರ್ಮಿಕಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನಿಮ್ಮ ವ್ಯಕ್ತಿತ್ವವನ್ನು ಕಂಡು ಕೆಲವರು ಸಲಹೆಗಳನ್ನು ಕೊಡಲು ಬರಬಹುದು. ಯಾವುದೇ ಪ್ರತ್ಯುತ್ತರಗಳನ್ನು ಕೊಡಲು ಹೋಗಬೇಡಿ. ಸಮಾಧಾನದಿಂದ ಆಲೋಚಿಸಿ. ನಿಮಗೆ ಅವಶ್ಯಕವಾದವೂ ಇರುತ್ತವೆ. ಯಾರದೋ ವೈಯಕ್ತಿಕ ವಿಚಾರಗಳು ನಿಮ್ಮ ದಾಂಪತ್ಯದಲ್ಲಿ ಒಡಕು ತರಬಹುದು. ಅತಿಥಿಗಳ ಆಗಮನದಿಂದ ನಿಮಗೆ ಸಂತೋಷವಾಗಲಿದೆ. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು.