AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಹಿನ್ನಡೆ ಕಾಣಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಆಗಸ್ಟ್​ 27: ಅಪರಿಚಿತ ದೂರವಾಣಿಯ ಕರೆಯಿಂದ ನಿಮಗೆ ಲಾಭವಾಗುವುದು. ವಿಜ್ಞಾನದ ವಿದ್ಯಾರ್ಥಿಗಳಿಗೆ ಸ್ವಲ್ಪ ಹಿನ್ನಡೆ ಎನಿಸಬಹುದು. ಸಂಗಾತಿಯನ್ನು ಮಾತನಾಡಿಸಲು ಹೋಗಿ ಅವರ ಜೊತೆ ಕಲಹವಾಡಿ ಬರುವಿರಿ. ನೀವು ಇಷ್ಟ ಬಂದಕಡೆ ತೆರಳುವಿರಿ. ಹಾಗಾದರೆ ಆಗಸ್ಟ್​ 27ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಹಿನ್ನಡೆ ಕಾಣಬಹುದು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 27, 2024 | 12:15 AM

Share

ಸಾಮಾನ್ಯವಾಗಿ ಜ್ಯೋತಿಷ್ಯ ಶಾಸ್ತ್ರದೊಂದಿಗೆ ಸಂಬಂಧಿಸಿದೆ. ಜ್ಯೋತಿಷ್ಯವು ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ಚಿಹ್ನೆಗಳಾಗಿ ವಿಂಗಡಿಸಲಾಗಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತವೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ನವಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಧ್ರುವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:46 ಗಂಟೆ, ರಾಹು ಕಾಲ ಮಧ್ಯಾಹ್ನ 03:40 ರಿಂದ 05:13, ಯಮಘಂಡ ಕಾಲ ಬೆಳಿಗ್ಗೆ 09:28 ರಿಂದ 11:01ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:34 ರಿಂದ 02:07ರ ವರೆಗೆ.

ಸಿಂಹ ರಾಶಿ: ಇಂದು ಉದ್ಯೋಗದಲ್ಲಿ ನಿಮಗೆ ಬದಲಾವಣೆ ಬೇಕು ಎಂದು ಎನಿಸುವುದು. ದೊಡ್ಡ ಸ್ಥಾನದಲ್ಲಿದ್ದು ಸಣ್ಣ ಮನಸ್ಸು ಮಾಡುವುದು ಬೇಡ. ಅಪರಿಚಿತ ದೂರವಾಣಿಯ ಕರೆಯಿಂದ ನಿಮಗೆ ಲಾಭವಾಗುವುದು. ವಿಜ್ಞಾನದ ವಿದ್ಯಾರ್ಥಿಗಳಿಗೆ ಸ್ವಲ್ಪ ಹಿನ್ನಡೆ ಎನಿಸಬಹುದು. ಸಂಗಾತಿಯನ್ನು ಮಾತನಾಡಿಸಲು ಹೋಗಿ ಅವರ ಜೊತೆ ಕಲಹವಾಡಿ ಬರುವಿರಿ. ನೀವು ಇಷ್ಟ ಬಂದಕಡೆ ತೆರಳುವಿರಿ. ದೇವಾಲಯದಲ್ಲಿ ಸ್ವಲ್ಪ ಕಾಲ ಕಳೆದು ಬರುವ ಮನಸ್ಸಾಗಲಿದೆ. ವಿದ್ಯಾರ್ಥಿಗಳು ಒಮ್ಮನಸ್ಸಿನಿಂದ ಓದಲು ಕುಳಿತುಕೊಳ್ಳುವುದು ಅವಶ್ಯಕ. ಹಳೆಯ ಸ್ನೇಹಿತರು ಅಕಸ್ಮಾತ್ ಸಿಗಬಹುದು. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ. ಯಾವುದನ್ನೂ ಪೂರ್ಣವಾಗಿ ಒಪ್ಪಲಾರಿರಿ. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ಲೆಕ್ಕಪತ್ರದ ವ್ಯವಹಾರದಲ್ಲಿ ಕಲಹವಾಗವುದು.

ಕನ್ಯಾ ರಾಶಿ: ಇಂದು ನೀವು ದಾಂಪತ್ಯದಲ್ಲಿ ಕಲಹ ಸಹಜವೆಂದು ಸುಮ್ಮನಿರಬೇಡಿ. ಗ್ರಾಹಕರ ಬೇಡಿಕೆಯನ್ನು ಈಡೇರಿಸುವಿರಿ. ನಿಮ್ಮ ಪ್ರಯತ್ನಕ್ಕೆ ಪ್ರತಿಫಲವು ಸಿಗಬೇಕೆಂದು ನೀವು ಅಂದುಕೊಳ್ಳುವುದು ಸರಿಯಾಗದು. ನಿಮ್ಮವರಲ್ಲದವರ ಮೇಲೆ ದ್ವೇಷವನ್ನು ಬೆಳೆಸಿಕೊಳ್ಳುವುದು ಬೇಡ. ಯಾರಿಂದಲಾದರೂ ನಿಮಗೆ ಜಡಕು ಸಮಸ್ಯೆಗೆ ಪರಿಹಾರ ಲಭ್ಯವಾಗುವುದು. ನಿಮ್ಮ ಇಂದಿನ ಮಾತಿನಿಂದ ಕುಟುಂಬದಲ್ಲಿ ಉಂಟಾಗುವ ಕಲಹವನ್ನು ತಪ್ಪಿಸಬಹುದು. ಆಪ್ತರನ್ನು ಕಳೆದುಕೊಂಡ ಸುದ್ದಿಯು ನಿಮಗೆ ದುಃಖವನ್ನು ತರಬಹುದು.‌ ಗೌರವವನ್ನು ಪಡೆಯುವುದಕ್ಕಿಂತ ಉಳಿಸಿಕೊಳ್ಳುವುದು ಕಷ್ಟ. ಹಳೆಯ ವಿದ್ಯಮಾನಗಳನ್ನು ನೀವು ಮರೆತು ಮುನ್ನಡೆಯುವಿರಿ. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ಎಲ್ಲವನ್ನೂ ನೀವು ನಿಮ್ಮ ಊಹೆಯ ಆಧಾರದ ಮೇಲೆ ನಿರ್ಣಯಿಸುವಿರಿ. ನಿಮ್ಮ ಉನ್ನತ ಶಿಕ್ಷಣದ ಆಸೆಯು ಭಗ್ನವಾಗಬಹುದು.

ತುಲಾ ರಾಶಿ; ಇಂದು ಕುರುಡ ಕತ್ತವನ್ನು ಹೊಸೆದಂತೆ ಆಗಬಹುದು. ಬಂಧುಗಳ ಮನೆಗೆ ಹೋಗಿ ಬರಲಿದ್ದೀರಿ. ಯಥೇಚ್ಛ ಸುತ್ತಾಟವು ನಿಮಗೆ ಆಯಾಸವನ್ನು ತಂದೀತು.‌ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಕಷ್ಟ. ನಿಮಗೆ ಭೂಮಿಯನ್ನು ಕೊಡುವುದು ಅನಿವಾರ್ಯವಾಗಿದ್ದು ಅಲ್ಪ ಮೌಲ್ಯಕ್ಕೆ ಮಾರಾಟ ಮಾಡುವಿರಿ. ಇಂದು ಗುಂಪಿನಲ್ಲಿ ಕೆಲಸ‌ಮಾಡುವುದು ನಿಮಗೆ ಕಿರಿಕಿರಿಯಾದೀತು. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವ ಸೂಚನೆ ಸಿಗುವುದು. ನಿಮಗೆ ಸಂಬಂಧಿಸದ ವಿಚಾರಕ್ಕೆ ತಲೆಹಾಕುವುದನ್ನು ನಿಲ್ಲಿಸಿ. ನಿಮ್ಮ ಸಂತೋಷವನ್ನು ಇತರರ ಜೊತೆ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ನೂತನವಾಗಿ ಖರೀದಿಸಿದ ಯಂತ್ರವು ಕೈ ಕೊಡಬಹುದು. ನಿಮ್ಮ ಮನಸ್ಸನ್ನು ಬದಲಿಸಲು ಬಹಳ ಪ್ರಯತ್ನ ನಡೆಯುವುದು.‌ ಹಿಂದಿನ ಘಟನೆಯೇ ಪುನರಾವರ್ತನೆ ಆಗುವುದು. ನಿಮ್ಮನ್ನು ದ್ವೇಷಿಸುವ ಜನರನ್ನು ನೀವು ನಿರ್ಲಕ್ಷಿಸಿ ಮುನ್ನಡೆದರೆ ಉತ್ತಮ. ನಿಮಗೆ ಏನಾದರೂ ಉಪಯೋಗವಿದ್ದರೆ ಮಾತ್ರ ಇಂದು ಬರುವ ಕಾರ್ಯವನ್ನು ಮಾಡಿ.

ವೃಶ್ಚಿಕ ರಾಶಿ: ಇಂದು ನೀವು ಮುಂದೆ ಮಾಡಬೇಕಾದ ಕೆಲವು ಕಾರ್ಯಗಳ ನಿರ್ಧಾರವನ್ನು ಮಾಡಿ ಮುಂದುವರಿಯುವಿರಿ. ಬೇಡದ ಸಲಹೆಗಳು ನಿಮ್ಮ ಮನಸ್ಸನ್ನು ಹಾಳುಮಾಡುವುದು. ಇಂದು ನೀವು ಅಧಿಕವಾಗಿ ಮಾತನಾಡದೇ ಸುಮ್ಮನಿರುವುದು ಉತ್ತಮ. ಕಾಲಹರಣಕ್ಕೆ ನಿಮಗೆ ಇನ್ನೊಬ್ಬರ ವಿಚಾರವನ್ನು ಆಡಿಕೊಳ್ಳುವಿರಿ. ಕಛೇರಿಯಲ್ಲಿ ನೀವು ಪಕ್ಷಪಾತ ಮಾಡುವಂತೆ ಕೋರುವುದು. ಸಂಗಾತಿಯ ಮನಸ್ಸನ್ನು ನೋಯಿಸಿ ಅದನ್ನು ಸರಿಪಡಿಸುವಿರಿ.‌ ಹಳೆಯ ಸ್ನೇಹಿತರ ಜೊತೆ ದೂರಪ್ರಯಾಣವನ್ನು ಮಾಡುವಿರಿ. ತಂದೆಯನ್ನು ನೋಡುವ ಹಂಬಲ ಅಧಿಕವಾಗುದು. ನಿಮ್ಮ‌ ಲೆಕ್ಕಾಚಾರವು ಬುಡಮೇಲಾದೀತು. ಭೂವ್ಯವಹಾರವು ಸುಖಾಂತ್ಯವಾಗಲಿದೆ. ನಿಮ್ಮ ಒಳ್ಳೆಯ‌ ಸ್ವಭಾವದ ಬಗ್ಗೆ ಮಾತನಾಡುವರು. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ವೇಗದಲ್ಲಿ ಸಿಗುವ ಯಶಸ್ಸೇ ನಿಮಗೆ ತೊಂದರೆ ಕೊಡುವುದು. ಸ್ನೇಹಿತರ ಜೊತೆ ಪ್ರವಾಸ ಹೋಗುವಿರಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ