Nitya Bhavishya: ಈ ರಾಶಿಯವರು ಅಪರಿಚಿತರ ಜೊತೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು

| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 12, 2024 | 12:34 AM

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಫೆಬ್ರವರಿ​​​​ 12) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Nitya Bhavishya: ಈ ರಾಶಿಯವರು ಅಪರಿಚಿತರ ಜೊತೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು
ರಾಶಿ ಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಶ್ರವಣಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಉತ್ತರಾಭಾದ್ರಾ, ಯೋಗ: ಶಿವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 59 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 34 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:26 ರಿಂದ 09:53ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:20 ರಿಂದ 12:47 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:14 ರಿಂದ 03:41ರ ವರೆಗೆ.

ಸಿಂಹ ರಾಶಿ : ಇಂದು ನೀವು ವಹಿಸಿಕೊಂಡ ಜವಾಬ್ದಾರಿಯನ್ನು ಇನ್ನೊಬ್ಬರಿಗೆ ನೀಡುವಿರಿ. ಹೊಸ ಪರಿಚಯದವರ ಜೊತೆ ವೃತ್ತಿಯನ್ನು ಮಾಡಬೇಕಾದೀತು. ಯಾರದೋ ಒತ್ತಾಯ ಮೇರೆಗೆ ಹೂಡಿಕೆಯು ಅನಿವಾರ್ಯವಾದೀತು. ಪರೋಪಕಾರಗುಣವು ನಿಮ್ಮಲ್ಲಿ ಇಂದು ಅಧಿಕವಾಗುವುದು. ರಾಜಕೀಯದಿಂದ ಪ್ರೇರಣೆ ಸಿಗಬಹುದು. ಮಕ್ಕಳ ಪ್ರೀತಿಯನ್ನು ಪಡೆದುಕೊಳ್ಳುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುವುದು. ಪ್ರೀತಿಯಲ್ಲಿ ಸಣ್ಣ ಕಲಹವಾಗಬಹುದು. ಸಂಗಾತಿಯ ಪ್ರೀತಿಯನ್ನು ನೀವು ಅರಗಿಸಿಕೊಳ್ಳಲಾರಿರಿ. ಇಂದು ನಿಮ್ಮ ಆರ್ಥಿಕತೆಯ ಸ್ಥಿತಿಯು ದರಿಯಾ ಗೊತ್ತಾಗಲಿದೆ. ಆಕಸ್ಮಿಕವಾಗಿ ಬರುವ ಹಣವನ್ನು ಭವಿಷ್ಯಕ್ಕಾಗಿ ಕೂಡಿ ಇಡುವಿರಿ. ಖಾಸಗಿ ಸಂಸ್ಥೆಯಲ್ಲಿ ನಿಮ್ಮ ಸ್ಥಾನವು ಏರಲಿದೆ. ಅಧಿಕಾರ ಇದೆ ಎಂದು ಏನನ್ನಾದರೂ ಹೇಳುವುದು ಬೇಡ. ಸಮಯದ ಸದ್ಬಳಕೆಯನ್ನು ಮಾಡಿಕೊಳ್ಳುವಿರಿ. ಪರ ಊರಿನಲ್ಲಿರುವ ನಿಮಗೆ ಆರೋಗ್ಯವು ಹದ ತಪ್ಪಬಹುದು.‌

ಕನ್ಯಾ ರಾಶಿ : ನೀವೇ ಪ್ರಬಲರೆಂಬ ಭಾವವು ಬೇಡ. ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರದ ಪ್ರಯೋಗವು ಆಗಲಿದೆ. ನಿಮ್ಮ ಸ್ಥಾನವನ್ನು ನೀವು ಬಿಟ್ಟುಕೊಡುವುದು ಬೇಡ. ನಿಮ್ಮ ಗಮನವು ಇಂದು ದಾನ ಕಾರ್ಯಗಳ ಕಡೆ ಇರುವುದು. ಕೌಟುಂಬಿಕ ವಿಷಯಗಳಲ್ಲಿ, ನೀವು ಬಾಹ್ಯ ವ್ಯಕ್ತಿಯನ್ನು ಸಂಪರ್ಕಿಸುವುದು ಬೇಡ. ಹೆತ್ತವರ ಆಶೀರ್ವಾದವು ನಿಮಗೆ ಬೆಂಬಲವಾಗಿ ಇರುವುದು. ಮಾರುಕಟ್ಟೆಯ ವ್ಯವಹಾರವನ್ನು ಅರಿತು ಹೂಡಿಕೆ ಮಾಡಿ. ಅನಿರೀಕ್ಷತ ಸಂಕಟಕ್ಕೆ ಹಣದ ಕೊರತೆ ಕಾಣಿಸುವುದು. ಅದನ್ನು ಹೊಂದಿಸುವುದು ಕಷ್ಟವಾದೀತು. ಸಂಗಾತಿಯ ಮಾತಿಗೆ ಸ್ಪಂದನೆಯೂ ಇರದು. ವಾಗ್ವಾದವಾಗುವುದೆಂಬ ಭಯವೂ ನಿಮ್ಮನ್ನು ಕಾಡುವುದು. ನಿಮ್ಮ ಆರ್ಥಿಕತೆಯನ್ನು ಗೌಪ್ಯವಾಗಿ ಇಡಬೇಕು ಎನಿಸುವುದು. ಭೂಮಿಯ ವ್ಯವಹಾರವು ಪೂರ್ಣ ಲಾಭವನ್ನು ತಂದುಕೊಡದು. ಚಿಂತೆಗಳೇ ಇರುವ ಮನಸ್ಸಿನಲ್ಲಿ ದೇವರ ಭಕ್ತಿಯನ್ನು ತುಂಬಿಕೊಂಡು ಸಮಾಧಾನದಿಂದ ಇರಿ. ಸಲ್ಲದ ಆಲೋಚನೆಗಳು ಬರಬಹುದು.

ತುಲಾ ರಾಶಿ : ನೀವು ಅಧ್ಯಾತ್ಮದಲ್ಲಿ ಆಸಕ್ತಿ ಇರುತ್ತದೆ. ಹಿರಿಯರ ಮಾರ್ಗದರ್ಶನದಲ್ಲಿ ನೀವು ಮುಂದುವರಿಯಿರಿ. ನಿಮ್ಮ ವೈಯಕ್ತಿಕ ವಿಷಯದಲ್ಲಿ ಯಾರಾದರೂ ಮಧ್ಯಪ್ರವೇಶ ಮಾಡಬಹುದು. ನಿಮ್ಮ ಆಪ್ತರೊಂದಿಗೆ ನೀವು ಮನೋರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುವಿರಿ. ಪ್ರವಾಸದ ಮನೋಭಾವದಲ್ಲಿ ಚುರುಕುತನ ಇಂದು ಹೆಚ್ಚಿರುವುದು. ನಿಮ್ಮ ವಿದ್ಯಾಭ್ಯಾಸದ ಕನಸನ್ನು ಕುಟುಂಬದಲ್ಲಿ ಹಂಚಿಕೊಳ್ಳುವಿರಿ. ನಿಮ್ಮ ಹಳೆಯ ಪ್ರತಿಜ್ಞೆಯನ್ನು ಇಂದು ಪೂರ್ಣ ಮಾಡಿದ ಸಂತೋಷವು ಇರುವುದು. ವಿವಾಹದ ಸುಖದಲ್ಲಿ ನೀವಿರುವಿರಿ. ಯಾರನ್ನೂ ಸರಿಯಾಗಿ ಅರ್ಥಮಾಡಿಕೊಳ್ಳದೇ ನಿಮ್ಮ ಬಳಿ ಅವರನ್ನು ಬಿಟ್ಟುಕೊಳ್ಳಬೇಡಿ. ಹಳೆಯ ಯೋಜನೆಗಳಿಗೆ ಮರುಜೀವ ಕೊಡುವಿರಿ. ಯಾರದೋ ಕೈಗೊಂಬೆಯಾಗಿ ವರ್ತಿಸಬೇಕಗುವುದು. ವೃತ್ತಿಯಲ್ಲಿ ನಿಮ್ಮ ತಿಳಿವಳಿಕೆಯನ್ನು ಪ್ರದರ್ಶಿಸಿ ನಿಮ್ಮ ಸಾಮರ್ಥ್ಯವನ್ನು ಪರಿಚಯಿಸುವಿರಿ.

ವೃಶ್ಚಿಕ ರಾಶಿ : ಇಂದು ಸಾಮಾಜಿಕ ಸೇವಾಕ್ಷೇತ್ರಕ್ಕೆ ಪ್ರಶಂಸೆ ಸಿಗುವುದು. ಸ್ನೇಹಿತರ ಬೆಂಬಲವು ನಿಮಗೆ ಅಗತ್ಯವಾಗಿ ಸಿಗಲಿದೆ. ಕೆಲವು ಅಪರಿಚಿತರ ಜೊತೆ ನೀವು ಎಚ್ಚರಿಕೆಯಿಂದ ಇರುವುದು ಮುಖ್ಯವಾಗಲಿ. ಅವಸರದಲ್ಲಿ ಯಾವುದೇ ಕಾರ್ಯವನ್ನು ಮಾಡುವುದು ಬೇಡ. ಮನಸ್ಸು ದುರ್ಬಲವಾದಂತೆ ಅನ್ನಿಸಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸುವಿರಿ. ಮನೆಗೆ ಬೇಕಾದ ವಸ್ತುಗಳ ಖರೀದಿಯಲ್ಲಿ ನೀವು ಮಗ್ನರಾಗುವಿರಿ. ಗೃಹನಿರ್ಮಾಣದ ದಾಖಲಾತಿಗೆ ನೀವು ಓಡಾಟ ಮಾಡಬೇಕಾಗುವುದು. ಆಡಂಬರಕ್ಕೆ ಹೆಚ್ಚು ಒತ್ತು ನೀಡುವಿರಿ. ಸಾರ್ವಜನಿಕ ಮನ್ನಣೆಯನ್ನು ಗಳಿಸವಿರಿ. ಉದ್ಯಮದ ವಿಸ್ತರಣೆಗೆ ನಿಮ್ಮ ಕ್ರಮವು ಯಶಸ್ವಿಯಾಗುವುದು. ಏಕಾಗ್ರ ಮನಸ್ಸಿನಿಂದ ನೀವು ಇಂದಿನ ಕೆಲಸದಲ್ಲಿ ತೊಡಗುವಿರಿ. ಕೆಲವು ಘಟನೆಗಳು ಕೌಟುಂಬಿಕ ಕಾಳಜಿಯನ್ನು ಹೆಚ್ಚು ಮಾಡುವುದು.