AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ಈ ರಾಶಿಯವರು ತಮ್ಮ ಮನಸ್ಸಿನಿಂದ ಕೆಲವು ವಿಚಾರ ತೆಗೆದುಹಾಕುವುದು ಉತ್ತಮ

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಫೆಬ್ರವರಿ​​​​ 13) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ರಾಶಿಭವಿಷ್ಯ; ಈ ರಾಶಿಯವರು ತಮ್ಮ ಮನಸ್ಸಿನಿಂದ ಕೆಲವು ವಿಚಾರ ತೆಗೆದುಹಾಕುವುದು ಉತ್ತಮ
ದಿನಭವಿಷ್ಯImage Credit source: Getty Images
Rakesh Nayak Manchi
|

Updated on: Feb 13, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ರೇವತೀ, ಯೋಗ : ಸಿದ್ಧ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 58 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 6 ಗಂಟೆ 36 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:41 ರಿಂದ 05:08ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:53 ರಿಂದ 11:20ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:47 ರಿಂದ 02:14ರ ವರೆಗೆ.

ಸಿಂಹ ರಾಶಿ: ನಿಮಗೆ ಇಂದು ಪ್ರಭಾವೀ ವ್ಯಕ್ತಿಗಳ ಭೇಟಿ ನಿಮ್ಮ ಮನೋಬಲವನ್ನು ಹೆಚ್ಚಿಸುತ್ತದೆ. ಕುಟುಂಬದೊಂದಿಗೆ ಸಮಸ್ಯೆಗಳನ್ನು ಹಂಚಿಕೊಳ್ಳಿ. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಳ್ಳಬೇಡಿ. ಅದು ನಿಮಗೆ ಮುಳ್ಳಾಗಬಹುದು. ಎಲ್ಲದಕ್ಕೂ ಅತಿಯಾದ ತೊಂದರೆ ಇರುವಂತೆ ಅನ್ನಿಸಬಹುದು. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ ಸಮಯವನ್ನು ಕಳೆಯಲು ಒತ್ತಾಯಿಸಬಹುದು. ನಿಮ್ಮ ಅಂತರಂಗವನ್ನು ವ್ಯಕ್ತಪಡಿಸಲು ನಿಮಗೆ ಸೂಕ್ತ ಸಮಯವು ಲಭ್ಯವಾಗದೇ ಇರಬಹುದು. ಕಲಾವಿದರು ಉತ್ತಮ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳುವರು. ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು. ಇನ್ನೊಬ್ಬರನ್ನು ಪ್ರಶಂಸಿಸುವ ಮನೋಭಾವ ನಿಮ್ಮಲ್ಲಿ ಇರದು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯ. ಇಂದು ತುರ್ತಾಗಿ ಬೇಕಾಗಿರುವ ಹಣವನ್ನು ಹೊಂದಿಸಲು ನಿಮಗೆ ಕಷ್ಟವಾಗುವುದು.

ಕನ್ಯಾ ರಾಶಿ: ನೀವೇ ಇಂದು ಕುಟುಂಬದ ಅಸಮಾಧಾನಕ್ಕೆ ಕಾರಣವಾಗಬಹುದು. ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪ್ರಣಯದ ಸಂಬಂಧಿಸಿದಂತೆ ಹೆಚ್ಚು ಬೇಡಿಕೆಗಳು ಬರಬಹುದು. ಆಪ್ತರೊಂದಿಗೆ ಹೊಸ ಉದ್ಯೋಗವನ್ನು ಆರಂಭಿಸಬಹುದು. ಜೀವನದಲ್ಲಿ ಆಸಕ್ತಿದಾಯಕ ವಿಷಯಗಳಿಗೆ ಕಾಯುತ್ತಿದ್ದಲ್ಲಿ ಅದನ್ನು ಮಾಡಿ. ನಿಮ್ಮದಾದ ಕೆಲವು ಅಸಂಬದ್ಧ ವ್ಯವಸ್ಥೆಯನ್ನು ನೀವು ಸರಿ ಮಾಡಿಕೊಳ್ಳಬೇಕಾಗುವುದು. ಹೊಸ ವಸ್ತುವಿನ ಖರೀದಿಯಲ್ಲಿ ನಿಮಗೆ ಮೋಸ ಆಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜೊತೆ ಇಂದು ಸಲುಗೆಯಿಂದ ಇರುವಿರಿ. ಮನಸ್ಸಿಗೆ ಇಷ್ಟವಾಗದ ಕಾರ್ಯವನ್ನು ನೀವು ಮಾಡಬೇಕಾದೀತು. ನಿಮ್ಮ ಯೋಜನೆಯನ್ನು ಪ್ರಯೋಗಕ್ಕೆ ತರಲು ಪೂರ್ಣ ಯಶಸ್ಸನ್ನು ಪಡೆಯಲಾರಿರಿ. ಮನಸ್ಸಿನಿಂದ ನೀವು ಕೆಲವು ವಿಚಾರವನ್ನು ತೆಗೆದುಹಾಕುವುದು ಉತ್ತಮ. ಅಪನಂಬಿಕೆಯಿಂದ ನಿಮಗೆ ತೊಂದರೆ ಆಗಬಹುದು. ವಸತಿ ಸ್ಥಾನವನ್ನು ಬದಲಿಸಬೇಕಾದೀತು.

ತುಲಾ ರಾಶಿ: ಇಂದು ಏನಾದರೂ ಅಪ್ರಯೋಜನ ಎಂದನಿಸಿದ್ದನ್ನು ಮಾಡುವ ಮೊದಲು ಅದರ ಪರಿಣಾಮದ ಬಗ್ಗೆಯೂ ಆಲೋಚಿಸಿ. ಹಿರಿಯರ ಸಲಹೆಯನ್ನು ಪಡೆಯುವುದು ನಿಮಗೆ ಅಪಮಾನದಂತೆ ಕಂಡೀತು. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿದ್ದ ಹಾಗೆ ಪ್ರೇಮ ಜೀವನ ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ. ನೀವು ನಿರಾಸೆ ಅನುಭವಿಸುತ್ತೀರಿ. ಬಿಡುವಿನ ವೇಳೆಯಲ್ಲಿ ಆಧ್ಯಾತ್ಮಿಕ ಪುಸ್ತಕಗಳ ಅಧ್ಯಯನ ಮಾಡಬೇಕು. ಉಗುರಿನಿಂದ ಆಗುವ ಕಾರ್ಯಕ್ಕೆ ಕೊಡಲಿ ಏಟು ತರುವುದು ಉಚಿತವಲ್ಲ. ವಿಷಯ, ಸಮಯ ಎಲ್ಲವನ್ನೂ ನೋಡಿ ವ್ಯವಹರಿಸಿ. ದುಡುಕಿ ಯಾವುದನ್ನೂ ಮಾಡುವುದು ಬೇಡ. ನಿಮಗಮ ಸ್ಥಿರಾಸ್ತಿಯ ಮಾರಾಟದಲ್ಲಿ ಏಕಮುಖವಾದ ಅಭಿಪ್ರಾಯ ಬೇಡ.

ವೃಶ್ಚಿಕ ರಾಶಿ: ಇಂದು ನಿಮ್ಮ ಆಪ್ತರಿಗೆ ಸ್ನೇಹಿರಿಗೆ ಧನದ ಸಹಕಾರವನ್ನು ನೀಡಬೇಕಾಗಿಬರಬಹುದು. ಸಂಗಾತಿಯ, ಪ್ರೇಯಸಿ ಜೊತೆಯಲ್ಲಿ ಸುತ್ತಾಟ ಅಧಿಕವಾಗಿರುವುದು. ಮಾತು ಕಡಿಮೆ ಇದ್ದಷ್ಟೂ ಒಳ್ಳೆಯದು. ಇಲ್ಲದಿದ್ದರೆ ಚಿತ್ರಣದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ವ್ಯಾಪಾರಿಗಳಿಗೆ ಹಳೆಯ ಹೂಡಿಕೆಯ ಕಾರಣದಿಂದಾಗಿ ಇಂದು ನಷ್ಟವಾಗುವ ಸಾಧ್ಯತೆ ಇದೆ. ಬರುವ ಸಮಸ್ಯೆಯನ್ನು ಗಂಭೀರವಾಗಿ ಸ್ವೀಕರಿಸುವುದು ಬೇಡ. ಹಿಂದೆ ಕೊಟ್ಟ ಸಾಲವು ಮರಳಿ ಬರುವ ನಿರೀಕ್ಷೆಯಲ್ಲಿ ಇರುವಿರಿ. ಸುಮ್ಮನೇ ವಾದ ಮಾಡುವ ಚಪಲವನ್ನು ಬಿಟ್ಟು ಸಹಜವಾಗಿ ಎಲ್ಲರ ಜೊತೆ ಮಾತನಾಡಿ. ದೈಹಕ ಕಾರ್ಯದಲ್ಲಿ ತೊಡಗಿದವರಿಗೆ ಹೆಚ್ಚು ಆದಾಯವು ಇರುವುದು. ಕಾರ್ಯಕ್ಕಾಗಿ ಹೆಚ್ಚು ಓಡಾಡಬೇಕಾಗುವುದು. ನಿದ್ರಾಹೀನತೆಯಿಂದ ಕಿರಿಕಿರಿ ಉಂಟಾಗುವುದು. ಮಕ್ಕಳ ವರ್ತನೆಯು ಹಿಡಸದೇ ಇರುವುದು. ಸಾಮಾಜಿಕ ಕಾರ್ಯದಲ್ಲಿ ಆದ ನೋವನ್ನು ಮರೆಯುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ