Horoscope: ರಾಶಿಭವಿಷ್ಯ; ನಿಮ್ಮ ಪ್ರೀತಿಗೆ ವಂಚನೆಯಾಗುವ ಸಾಧ್ಯತೆ ಇದೆ-ಎಚ್ಚರ

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 01 ಮಾರ್ಚ್​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ; ನಿಮ್ಮ ಪ್ರೀತಿಗೆ ವಂಚನೆಯಾಗುವ ಸಾಧ್ಯತೆ ಇದೆ-ಎಚ್ಚರ
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 01, 2024 | 12:15 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಧ್ರುವ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 50 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:16 ರಿಂದ 12:45ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:42 ರಿಂದ 05:11ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 08:19 ರಿಂದ 09:48ರ ವರೆಗೆ.

ಮೇಷ ರಾಶಿ : ನಿಮ್ಮ ಮಾತನ್ನು ಉಳಿಸಿಕೊಳ್ಳುವ ಭರದಲ್ಲಿ ಏನನ್ನಾದರೂ ಮಾಡಿಕೊಳ್ಳುವಿರಿ. ನಿಮ್ಮ ಪ್ರೇಮವನ್ನು ಸಾಬೀತುಪಡಿಸಬೇಕಾದೀತು. ಮನೋರಂಜನೆಯ ಬಗ್ಗೆ ನಿಮಗೆ ಆಸಕ್ತಿ ಇರದು. ನಿಮ್ಮ ಪ್ರೀತಿಗೆ ವಂಚನೆಯಾಗುವ ಸಾಧ್ಯತೆ ಇದೆ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ಸಣ್ಣ ಮಟ್ಟಿನ ಸಾಲವನ್ನು ನೀವು ಮಾಡಬೇಕಾದ ಸ್ಥಿತಿಯು ಬರಬಹುದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ನಿರಂತರ ಕೆಲಸದಿಂದ ನಿಮಗೆ ಸ್ವಲ್ಪ ವಿಶ್ರಾಂತಿಯ ಅವಶ್ಯಕತೆ ಇದೆ. ಯಾವ ಬಂಧನಕ್ಕೂ ಒಳಪಡದೇ ಮನಸ್ಸು ಮುಕ್ತವಾಗಿರಲು ಬಯಸುವುದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಅಭ್ಯಾಸ ವಿಷಯದಲ್ಲಿ ನಿಮಗೆ ಪೂರ್ಣ ತೃಪ್ತಿ ಇರದು. ಯಾರ ಮೇಲೂ ನಂಬಿಕೆ‌ ಇಡದೇ ನಿಮ್ಮಷ್ಟಕ್ಕೆ ನೀವಿರುವಿರಿ. ನಾಗದೇವರ ಉಪಾಸನೆಯನ್ನು ಮಾಡಿ.

ವೃಷಭ ರಾಶಿ : ಇಂದು ನಿಮಗೆ ಎಲ್ಲರ ಮಾತೂ ಕಿರಿಕಿರಿಯನ್ನು ಉಂಟುಮಾಡಬಹುದು. ಯಾರ ಮಾತಿನ ಮೇಲೂ ನಿಮಗೆ ವಿಶ್ವಾಸವಿರದು. ಕ್ರಿಯಾತ್ಮಕವಾಗಿ ನೀವು ಯೋಚಿಸಲಾರಿರಿ. ಕೆಲವು ಅಸಮಾಧಾನವನ್ನು ನೀವು ನುಂಗಿಕೊಳ್ಳುವಿರಿ. ಹಿತಶತ್ರುಗಳನ್ನು ನೀವು ನಿಭಾಯಿಸುವುದು ಕಷ್ಟವಾದೀತು. ಅಮೂಲ್ಯ ವಸ್ತುವನ್ನು ನಿರ್ಲಕ್ಷ್ಯದಿಂದ ಎಲ್ಲಿಯೋ ಇಟ್ಟು ಕಳೆದುಕೊಳ್ಳುವಿರಿ. ನಿಮ್ಮ ವಿಶ್ರಾಂತಿಯ ಸಮಯವು ಬದಲಾಗಿ ಆರೊಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುವುದು. ಬಹಳ ದಿನಗಳಿಂದ ಕೆಟ್ಟಿದ್ದ ಆರೋಗ್ಯವು ಸರಿಯಾದರೂ ಆರೋಗ್ಯ ಪೂರ್ಣ ಮನಸ್ಸು ಸರಿಯಾಗಲು ಸಮಯು ಬೇಕು. ನಿಮ್ಮ ಹೊಣೆಗಾರಿಕೆ ಕಡಿಮೆ ಆದಂತೆ ಅನ್ನಿಸುವುದು. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಅನುಮಾನದ ಬುದ್ಧಿಯನ್ನು ಕಡಿಮೆ ಮಾಡಿ, ಯಾವುದಾದರೂ ಸದ್ವಿಚಾರಕ್ಕೆ ಗಮನಕೊಡಿ. ದುರ್ಗಾದೇವಿಯ ಆರಾಧನೆಯನ್ನು ಮಾಡಿ.

ಮಿಥುನ ರಾಶಿ : ನಿಮ್ಮ ಅಧ್ಯಾತ್ಮದ ಬಲವೇ ನಿಮ್ಮನ್ನು ಕಷ್ಟದ ಸ್ಥಿತಿಯಲ್ಲಿಯೂ ಸ್ಥಿರವಾಗಿ ಇರಿಸಿದೆ. ನಿಮ್ಮ ಯಾವುದಾದರೂ ವಸ್ತುವು ಕಣ್ಮರೆಯಾಗಬಹುದು. ಆಲಸ್ಯದಿಂದ ನೀವು ಜಾರಬೇಕಾಗಿದೆ. ಆತ್ಮವಂಚನೆಯನ್ನು ಮಾಡಿಕೊಳ್ಳಲು ನೀವು ಸಿದ್ಧರಿಲ್ಲ. ಮಾತನ್ನು ಅಧಿಕವಾಗಿ ಆಡಿ ಇತರರಿಗೆ ಬೇಸರವನ್ನು ತರಿಸುವಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮ್ಮ ಗಮನ ಮುಖ್ಯವಾಗಿರಲಿ. ಸ್ನೇಹಿತರ ಜೊತೆ ಮೋಜಿನಲ್ಲಿ ಕಾಲ ಕಳೆಯುವಿರಿ. ಮನಸ್ಸು ಬಹಳ ಖಿನ್ನತೆಗೆ ಹೋಗಬಹುದು. ಯಾವ ವಿಚಾರವನ್ನೂ ತೀರ್ಮಾನಿಸಲಾಯಿತು ಆಗದು. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಮಕ್ಕಳ ಶಿಕ್ಷಣದ ವಿಚಾರದಲ್ಲಿ ನಿಮಗೆ ಸಮಾಧಾನವು ಪೂರ್ಣವಾಗಿ ಇರದು. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಏಕಾಗ್ರತೆಯನ್ನು ಬೆಳೆಸಿಕೊಳ್ಳಲು ಅಭ್ಯಾಸ ಮಾಡುವಿರಿ.

ಕಟಕ ರಾಶಿ : ನಿಮ್ಮ ಕೋಪವನ್ನು ನಿಯಂತ್ರಣದಲ್ಲಿ ಇರಿಸಿದರೂ ಸುಲಭಕ್ಕೆ ಸಾಧ್ಯವಾಗದು. ಕಛೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಮಾತು ನಡೆಯಬಹುದು. ಯಾರ ಬಗ್ಗೆಯೂ ನೀವೇ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವಾಹನವನ್ನು ಪರೀಕ್ಷಿಸಿ ಖರೀದಿಸಿ. ಶತ್ರುಗಳು ನಿಮ್ಮ ಮೇಲೆ ಆರೋಪಗಳನ್ನು ಮಾಡಬಹುದು. ಎಲ್ಲದರಲ್ಲಿಯೂ ನೀವೇ ಬುದ್ಧಿವಂತರು ಎಂದು ತೋರಿಸಿಕೊಳ್ಳುವುದು ಬೇಡ. ಅಧಿಕಾರದಿಂದ ಕೂಡಿದ ಮಾತು ನಿಮಗೆ ಪ್ರಯೋಜನವಾಗದು. ನೀರಿನ ಉತ್ಪನ್ನಗಳನ್ನು ಮಾಡುವವರಿಗೆ ಲಾಭವು ಸಿಗುವ ಸಾಧ್ಯತೆ ಇದೆ. ಅತಿಥಿಗಳ ಆಗಮನದಿಂದ ನಿಮಗೆ ಸಂತೋಷವಾಗಲಿದೆ. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ಕುಲದೇವರ ಉಪಾಸನೆಯನ್ನು ಮಾಡಿ.

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್