Horoscope: ಈ ರಾಶಿಯವರು ಮನೆಯಲ್ಲಿ ಜಗಳವಾಡಿ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ-ಎಚ್ಚರ

 ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಇಂದಿನ (ಫೆಬ್ರವರಿ​​​​ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ಮನೆಯಲ್ಲಿ ಜಗಳವಾಡಿ ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ-ಎಚ್ಚರ
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 29, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ​​​​ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 50 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:14 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:51 ರಿಂದ 08:20ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:48 ರಿಂದ 11:17ರ ವರೆಗೆ.

ಸಿಂಹ ರಾಶಿ : ಇಂದು‌ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಖಿನ್ನರಾಗುವಿರಿ. ನೀವು ಸಂತೋಷದ ಬೆಲೆಯನ್ನು ಅರ್ಥಮಾಡಿಕೊಂಡಿರುವಿರಿ. ನಿಮ್ಮ ಮನಃಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಭೇಟಿಕೊಡಿ. ವಾಹನವನ್ನು ಚೆನ್ನಾಗಿ ಚಲಾಯಿಸಲು ಬಯಸುತ್ತಿದ್ದರೆ, ಆರ್ಥಕವಾದ ಸಬಲತೆಹೆ ಬಳಸಿಕೊಳ್ಳಿ. ತಮ್ಮ ಪ್ರೀತಿಪತ್ರರೊಡನೆ ಸಣ್ಣ ಪ್ರಯಾಣ ಕೈಗೊಳ್ಳುವಿರಿ. ನಿಮ್ಮ ಕೈಕೆಳಗಿನವರು ನಿಮ್ಮ ನಿರೀಕ್ಷೆಯಂತೆ ಕೆಲಸ ಮಾಡಿರದಿದ್ದರಿಂದ ನಿಮಗೆ ಅಸಮಾಧಾನವಾಗಬಹುದು. ಆದಾಯದಲ್ಲಿ ಇತರರಿಗೆ ಸಮಾನವಾಗಿದ್ದರೂ ಖರ್ಚು ಹಾಗಿರುವುದಿಲ್ಲ. ಏನಾದರೊಂದು ಹುಟ್ಟಿಕೊಳ್ಳುತ್ತದೆ. ಕುಟುಂಬಕ್ಕೆ ನಿಮ್ಮಿಂದ ಧನಸಹಾಯದ ಅಪೇಕ್ಷೆ ಇರುವುದು. ನಿಮ್ಮ ಕೈ ಮೀರಿದ ಕೆಲಸದಲ್ಲಿ ನಿಮಗೆ ಆತಂಕ ಬೇಡ. ಪ್ರೇಮವು ನಿಮಗೆ ಬಂಧನದಂತೆ ಕಾಣಿಸುವುದು. ನಿಮ್ಮ ಸೋಲನ್ನು ನೀವು ಒಪ್ಪಿಕೊಳ್ಳಲಾರಿರಿ. ಅವಸರವಸರವಾಗಿ ಇಂದಿನ ಕಾರ್ಯಗಳನ್ನು ಮಾಡುವಿರಿ.

ಕನ್ಯಾ ರಾಶಿ : ನಿಮ್ಮ ಆಕರ್ಷಕ ವರ್ತನೆಯು ಇತರರ ಗಮನ ಸೆಳೆಯುತ್ತದೆ. ಇಂದು ಸಾಲಗಾರನು ನಿಮಗೆ ಹೇಳದೆ ನಿಮಗೆ ಹಣವನ್ನು ನೀಡಬಹುದು. ನಿಮ್ಮ ಪ್ರೇಮದ ಸಂಗಾತಿ ನಿಮ್ಮನ್ನು ಹೊಗಳಬಹುದು. ಅವರನ್ನು ಏಕಾಂಗಿಯಾಗಿ ಬಿಡಬೇಡಿ. ಇಂದು ನೀವು ನಿಮ್ಮ ಗಳಿಕೆಯ ಶಕ್ತಿಯನ್ನು ಹೆಚ್ಚಿಸಲು ಶಕ್ತಿ ಮತ್ತು ಜ್ಞಾನವನ್ನು ಹೊಂದಿರುತ್ತೀರಿ. ನಿಮ್ಮ ವ್ಯಕ್ತಿತ್ವವು ಸಕಾರಾತ್ಮಕವಾಗಿ ಬೆಳೆಯುತ್ತಿರುವುದು ನಿಮಗೂ ಇತರರಿಗೂ ಸಂತೋಷದ ಸಂಗತಿಯಾಗಿದೆ. ಇಂದು ಆರಂಭಿಸಿದ ಕೆಲಸಗಳನ್ನು ಇಂದೇ ಮುಗಿಸುವಂತೆ ನೋಡಿಕೊಳ್ಳಿ. ಸಾಮಾಜಿಕ‌ ಕೆಲಸಗಳು ನಿಮಗೆ ಇನ್ನಷ್ಟೂ ಉತ್ಸಾಹವನ್ನು ಕೊಡುವುದು. ವೈದ್ಯರು ಇಂದು ಒತ್ತಡದಿಂದ ಇರುವರು.‌ ನೀವು ಕಷ್ಟವನ್ನು ಆನಂದದಿಂದ ಕಳೆಯುವಿರಿ. ಸಿಗಬೇಕಾದ ವಸ್ತುವನ್ನು ನೀವು ಬಹಳ ಪ್ರಯತ್ನದಿಂದ ಪಡೆದುಕೊಂಡರೂ ಉಳಿಸಿಕೊಳ್ಳುವುದು ಕಷ್ಟವಾದೀತು.

ತುಲಾ ರಾಶಿ : ನಿಮ್ಮ ಮನೆಯ ಸದಸ್ಯರಿಂದ ಹಣವನ್ನು ಸಾಲ ತೆಗೆದುಕೊಂಡಿದ್ದರೆ ಮರುಪಾವತಿಸಿ.‌ ಇಲ್ಲವಾದರೆ ಸಂಬಂಧವು ಹಾಳಾಗಬಹುದು. ನಿಮ್ಮ ಹೊಸ ಯೋಜನೆಗಳು ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಒಳ್ಳೆಯದು. ಪ್ರೇಮದಲ್ಲಿ ನಿಮ್ಮನ್ನು ತಪ್ಪಾಗಿ ತಿಳಿದುಕೊಳ್ಳುವ ಸಾಧ್ಯತೆಯಿದೆ. ನಿಮ್ಮ ಚಟುವಟಿಕೆಯ ಕ್ಷೇತ್ರದಲ್ಲಿ ನೀವು ಅಪರಿಮಿತ ಯಶಸ್ಸು ಸಾಧಿಸುವಿರಿ. ಮಿತಿಯಿಲ್ಲದ ಸೃಜನಶೀಲತೆ ಮತ್ತು ಉತ್ಸಾಹ ನಿಮಗೆ ಶ್ರೇಯಸ್ಸನ್ನು ಕೊಟ್ಟೀತು. ಇಂದು ನಿಮ್ಮ ಭವಿಷ್ಯದ ಗುರಿಯನ್ನು ನಿರ್ಧಾರ ಮಾಡಿಕೊಳ್ಳುವುದು ಉತ್ತಮ. ಆಧ್ಯಾತ್ಮಿಕ ಚಿಂತನೆಯನ್ನು ಹೆಚ್ಚು ಮಾಡುವಿರಿ. ಹತ್ತಿರದ ಬಂಧುಗಳ ಒಡನಾಟವು ಹೆಚ್ಚಿರಲಿದೆ. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ನೇರ ನುಡಿಯಿಂದ ಆಪ್ತರು ದೂರ ಸರಿಯಬಹುದು. ಮನೋರಂಜನೆಯಿಂದ ನಿಮಗೆ ಸಮಾಧಾನ ಸಿಗಲಿದೆ. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ. ಕೃಷಿಯ ಉತ್ಪನ್ನಗಳನ್ನು ಮಾರಾಟ ಮಾಡುವಿರಿ.

ವೃಶ್ಚಿಕ ರಾಶಿ : ಇಂದು ನೀವು ಸುದೀರ್ಘವಾದ ಅನಾರೋಗ್ಯದಿಂದ ವಿಶ್ರಾಂತಿ ಪಡೆಯುವಿರಿ. ಆತ್ಮವಿಶ್ವಾಸವು ಪ್ರಯೋಜನಕ್ಕೆ ಬರಬಹುದು. ನಿಮ್ಮ ಮಕ್ಕಳ ಚಿಂತನೆಗಳನ್ನು ಬೆಂಬಲಿಸುವುದು ಅಗತ್ಯ. ಸ್ಪಷ್ಟವಾಗಿ ಅರ್ಥಮಾಡಿಕೊಳ್ಳುವ ಮೂಲಕ ಮಾತ್ರ ನೀವು ನಿಮ್ಮ ಪತ್ನಿಗೆ ಭಾವನಾತ್ಮಕ ಬೆಂಬಲ ನೀಡುವಿರಿ. ವಿಶೇಷವಾಗಿ ಕೆಲಸದ ಸ್ಥಳದಲ್ಲಿ ಉದ್ಭವಿಸುವ ವಿರೋಧಕ್ಕೆ ವಿವೇಚನಾಯುಕ್ತರಾಗಿರಿ. ನಿಮ್ಮ ಆರ್ಥಿಕ ಯೋಜನೆಗಳು ದಾರಿ ತಪ್ಪಿ ಹೋಗಬಹುದು. ಕುಟುಂಬದ ಜೊತೆ ನಿಕಟ ಸಂಬಂಧವನ್ನು ಇಟ್ಟುಕೊಳ್ಳುವ ಮನಸ್ಸಾಗುವುದು.‌ ಕಾರ್ಯಗಳಿಂದ ಹೆಚ್ಚಿನ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಉದ್ಯಮದಲ್ಲಿ ಜನರ ವಿಶ್ವಾಸವನ್ನು ಗಳಿಸುವುದು ಮುಖ್ಯವಾಗಿರುವುದು. ಪ್ರವಾಸ ಹೋಗುವ ಮನಸ್ಸಾದೀತು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು. ನಿಮಗೆ ಬೇಡ ಎನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿ ಬಂದು‌ ಮಾನಸಿಕ ಹಿಂಸೆಯಾದೀತು. ಮನೆಯಲ್ಲಿ ಜಗಳವಾಡಿ ನೀವು ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ.

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ