Horoscope 16 Nov: ದಿನಭವಿಷ್ಯ, ಅಧಿಕಾರ ಮತ್ತು ವರ್ಚಸ್ಸು ಹೆಚ್ಚಿಸಿಕೊಳ್ಳುವ ಅವಕಾಶ ಬರುವುದು

| Updated By: ಗಂಗಾಧರ​ ಬ. ಸಾಬೋಜಿ

Updated on: Nov 16, 2023 | 12:02 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ನವೆಂಬರ್​ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 16 Nov: ದಿನಭವಿಷ್ಯ, ಅಧಿಕಾರ ಮತ್ತು ವರ್ಚಸ್ಸು ಹೆಚ್ಚಿಸಿಕೊಳ್ಳುವ ಅವಕಾಶ ಬರುವುದು
ಪ್ರಾತಿನಿಧಿಕ ಚಿತ್ರ
Follow us on

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಸುಕರ್ಮಾ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 34 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಮಧ್ಯಾಹ್ನ 01:43 ರಿಂದ 03:08ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:35 ರಿಂದ 08:00ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:26 ರಿಂದ 10:52ರ ವರೆಗೆ.

ಮೇಷ ರಾಶಿ: ನಿಮ್ಮ ಬಗ್ಗೆ ಕೆಲವು ಅಪಸ್ವರಗಳು ಬಂದರೂ ಆ ಬಗ್ಗೆ ಕಿವಿಗೊಡದೆ ಸ್ಥೈರ್ಯವನ್ನು ಕಾಪಾಡಿಕೊಳ್ಳಿ. ಅಸಂಗತ ಸಮಾಚಾರವನ್ನು ಒಪ್ಪಬೇಕಿಲ್ಲ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ಕಣ್ಣಿಗೆ ಪ್ರತ್ಯಕ್ಷ ಕಂಡರೂ ಪ್ರಾಮಾಣಿಸಿ ನೋಡು ಎನ್ನುವಂತೆ ಪರಿಶೀಲಿಸಿ ಕಾರ್ಯ ಪ್ರವೃತ್ತರಾಗಿ. ನಿಮ್ಮ ಪ್ರಯತ್ನವನ್ನು ಇತರರಿಗೂ ತಿಳಿಸುವ ಸಮಯ ಇಂದು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ಕೆಟ್ಟ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಕೆಲವು ಸಮಸ್ಯೆಯು ನಿಮ್ಮ ಮಾನಸಿಕತೆಯಿಂದಾಗಿಯೇ ಇರುವುದು. ಇದು ಶಾಶ್ವತವಾಗಿ ಇರದು ಎಂಬುದನ್ನು ಮರೆಯಬಾರದು.

ವೃಷಭ ರಾಶಿ: ಭವಿಷ್ಯದ ಬಗ್ಗೆ ಇರಬೇಕಾದ ಕಾಳಜಿಯು ಕಡಿಮೆ ಆಗುವುದು. ಸ್ನೇಹಿತರ ಬೆಂಬಲವನ್ನು ನೀವು ಪೂರ್ಣವಾಗಿ ಒಪ್ಪಲಾರಿರಿ. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ನಿಮ್ಮ ಏಳಿಗೆ ಕಂಡು ಅಸೂಯೆ ಪಡುವವರ ಸಂಖ್ಯೆ ಹೆಚ್ಚಾಗಲಿದೆ. ಅದಕ್ಕೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ವಿದೇಶಪ್ರಯಾಣದ ಗುಂಗಿನಿಂದ ಹೊರಬನ್ನಿ. ಕುಟುಂಬದ ಪ್ರೋತ್ಸಾಹವು ನಿಮಗೆ ಸಿಗಬಹುದು. ಸಂಗಾತಿಯ ಜೊತೆ ಸಮಯವನ್ನು ಕಳೆಯಬೇಕು ಎನಿಸಬಹುದು. ಶೈಕ್ಷಣಿಕವಾಗಿ ಹೆಚ್ಚಿನ ಪ್ರಗತಿಯನ್ನು ವಿದ್ಯಾರ್ಥಿಗಳು ಸಾಧಿಸುವರು.

ಮಿಥುನ ರಾಶಿ: ಹೂಡಿಕೆಯ ವಿಚಾರ‌ ಬಂದಾಗ ಆಮೂಲಾಗ್ರ ದೃಷ್ಟಿಯು ಇರಲಿ. ಸುಮ್ಮನೇ ಒಪ್ಪಿಗೆ ಬೇಡ. ಮಾನಸಿಕ ನೋವನ್ನು ಸಹಿಸಲಾಗದು. ನಿಮ್ಮ ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಕೆ ಆದೀತು. ಜಾಗರೂಕರಾಗಿ ಜನರಿಂದ ದೂರವಿರುವುದು ಒಳ್ಳೆಯದು. ನಿಮ್ಮದೇ ಆದ ಕುಟುಂಬದಲ್ಲಿ ಹಲವರು ಕಿರಿಕಿರಿ ಮಾಡಬಹುದು. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಪ್ರತ್ಯಕ್ಷವಾಗಿ ಕಾಣುವ ವ್ಯಕ್ತಿಗಳಿಗೆ ನಿಮ್ಮ ಬಗೆಗಿನ ದೃಷ್ಟಿಕೋನವೇ ಬದಲಾಗುವುದು. ಆರ್ಥಿಕತೆಯ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೈಯಲ್ಲಿ ಹಣವಿದ್ದಷ್ಟು ಖರ್ಚು ತಾನಾಗಿಯೇ ಹುಡುಕಿಕೊಂಡು ಬರಬಹುದು. ಕೃಷಿ ಚಟುವಟಿಕೆಗಳ ಬಗ್ಗೆ ನಿಮಗೆ ಅಸಕ್ತಿಯು ಹೆಚ್ಚಿರುವುದು. ಅನನುಕೂಲತೆಯನ್ನು ಬಳಸಿಕೊಂಡು ಸಕಾರಾತ್ಮಕವಾಗಿ ಸಾಧಿಸುವಿರಿ.

ಕಟಕ ರಾಶಿ: ಅನವಶ್ಯಕ ವಸ್ತುಗಳನ್ನು ದೂರ ಮಾಡುವಿರಿ. ಸಂಯಮದಿಂದ ವರ್ತಿಸುವುದು ಅವಶ್ಯಕ. ಇಂದು ನಿಮ್ಮ ಜೇಬು ತುಂಬಿದಂತೆ ಕಂಡರೂ ಒಳಗೆ ರಂಧ್ರವಿರುವುದು ಗೊತ್ತಾಗದೇ ಹೋಗುವುದು. ಮನಸ್ಸಿಗೆ ಮಂಕು ಕವಿದಂತೆ ಇರುವಿರಿ. ಜೀವನವು ಅಸಾರವಾದುದ್ದು ಎಂಬ ಭಾವವು ಬರಬಹುದು. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ಒತ್ತಡವನ್ನು ಹೇರಿ ಕೆಲಸವನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ, ಮೇಲಧಿಕಾರಿಗಳೊಂದಿಗೆ ಗುಟ್ಟಾಗಿ ನಿಮ್ಮ ಬಗ್ಗೆ ಚಾಡಿ ಮಾತುಗಳು ಒಂದಾದಮೇಲೊಂದು ಬರುವುವು. ನಿಮ್ಮ ಕಾರ್ಯವೇ ಉತ್ತರವಾಗಿರಲಿ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು. ವಾಸದ ಸ್ಥಳವನ್ನು ನೀವು ಬದಲಿಸಬೇಕಾಗಬಹುದು.

ಸಿಂಹ ರಾಶಿ: ಯೋಜನೆಗೆ ಸರಿಯಾದ ರೂಪವಿರಲಿ. ಯಾರನ್ನೋ ತಪ್ಪಿಗೆ ತಂದು ನಿಲ್ಲಿಸುವ ಅವಶ್ಯಕತೆ ಇರದು. ಮಕ್ಕಳ ವಿವಾಹದ ಚಿಂತೆಯು ಕಾಡಬಹುದು. ಅಧಿಕಾರ ಮತ್ತು ವರ್ಚಸ್ಸು ಹೆಚ್ಚಿಸಿಕೊಳ್ಳುವ ಅವಕಾಶ ಬರುವುದು. ಸಕಾರಾತ್ಮಕ ಯೋಚನೆಯಿಂದ ಮುಂದಡಿ ಇಡಬೇಕಾದೀತು. ನಿಮ್ಮ ಬುದ್ಧಿಶಕ್ತಿಗೆ ತಕ್ಕಂತೆ ಕೆಲಸದಲ್ಲಿ ಜಯವನ್ನು ಸಾಧಿಸುವಿರಿ. ಧೈರ್ಯದಿಂದ ಮುನ್ನಡೆಯುವ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಿ. ಸ್ವಂತ ಉದ್ಯೋಗವನ್ನು ನಡೆಸಲು ಚಿಂತಿಸುವುದು ಉತ್ತಮ. ವಂಚನೆಯ ಕರೆಗಳಿಂದ ಆದಷ್ಟು ಎಚ್ಚರವಾಗಿರಿ. ನಿಮ್ಮ ಸುತ್ತಮುತ್ತಲಿನವರಿಂದ ತೊಂದರೆಯಾಗಬಹುದು. ಇಂದು ನೀವು ಒತ್ತಡದ ಕೆಲಸದಿಂದ ವಿರಾಮ ಪಡೆದುಕೊಳ್ಳಲು ಬಯಸುವಿರಿ. ನಕ್ಷತ್ರಗಳ ಸೌಂದರ್ಯವನ್ನು ಹತ್ತಿರ ಹೋಗಿ ನೋಡಲಾಗದು. ದೂರದಿಂದಲೇ ಸುಂದರ.

ಕನ್ಯಾ ರಾಶಿ: ರುಚಿಯಾದ ಆಹಾರವನ್ನು‌ ಮಾಡಲು ಎಲ್ಲವೂ ಒಂದೇ ಪ್ರಮಾಣದಲ್ಲಿ ಬೇಕಿಲ್ಲ. ರುಚಿಯಾಗುವಂತೆ ಪ್ರಮಾಣವು ಇರಬೇಕು. ನಿಮ್ಮ ಯಶಸ್ಸಿಗೆ ವಿರೋಧಿಗಳು ಅಡ್ಡಗಾಲು ಹಾಕಬಹುದು. ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ. ಉದ್ವೇಗದಿಂದ ಸಿಟ್ಟುಗೊಂಡು ಅಪ್ರಿಯರಾಗುವಿರಿ. ಉದ್ಯೋಗದ ಬದಲಾವಣೆಯ ವಿಚಾರದಲ್ಲಿ ನೀವು ದ್ವಂದ್ವವಿರಲಿದೆ. ಇಂದಿನ ಕೆಲಸಗಳು ಬೇಗ ಮುಕ್ತಾಯವಾಗಿ ನಿಶ್ಚಿಂತೆಯಿಂದ ಇರುವಿರಿ. ಮರೆವು ನಿಮಗೆ ವರವಾದಂತೆ ಅನ್ನಿಸುವುದು. ವಿದ್ಯಾಭ್ಯಾಸಕ್ಕೆ ಮನೆಯನ್ನು ಬಿಟ್ಟು ದೂರವಿರಲು ನಿರ್ಧಾರ ಮಾಡುವಿರಿ. ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ಸಂಗಾತಿಯು ನಿಮಗೆ ಬೇಸರವಾಗುವಂತೆ ಮಾತನಾಡಬಹುದು. ಇಂದು ನೀವು ಗಂಭೀರವಾದ ಆಲೋಚನೆಯಲ್ಲಿ ಮುಳುಗುವಿರಿ.

ತುಲಾ ರಾಶಿ: ಮನೆ ಹಾಗೂ ಕಛೇರಿಯ ಜವಾಬ್ದಾರಿಯು ಹೆಚ್ಚಾಗುವುದು. ಹಣಕಾಸಿನ ವಿಚಾರದಲ್ಲಿ ತಜ್ಞರ ಸಲಹೆ ಪಡೆಯಬೇಕಾಗುವುದು. ಆಪತ್ತು ಎದುರಾದಾಗ ಯುಕ್ತಿಯಿಂದ‌ ಕೆಲಸವನ್ನು ಮಾಡಿ. ಮಾಡಲು ಹೊರಟ ಕೆಲಸದಲ್ಲಿ ಸಂಪೂರ್ಣ ಯಶಸ್ಸು ನಿಮ್ಮದಾಗುವುದು. ನಿಮ್ಮ ತಾಳ್ಮೆಯೇ ಗುರಿಯನ್ನು ತಲುಪಲು ಸಹಕಾರಿಯಾಗಿರುವುದು. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಮಕ್ಕಳ ವೃತ್ತಿಯಲ್ಲಿ ಹೆಚ್ಚಿನ ಏಳ್ಗೆಯನ್ನು ಕಂಡು ಸುಖಿಸುವಿರಿ. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗಿಸಿ. ಸ್ಥಿರಾಸ್ತಿಯಲ್ಲಿ ಲಾಭವನ್ನು ಪಡೆಯಲು ತಂತ್ರವನ್ನು ಬಳಸುವಿರಿ. ಮಕ್ಕಳ ವಿಚಾರದಲ್ಲಿ ನೀವು ಬಹಳ ಮೃದು ಸ್ವಭಾವವಿರುವುದು. ಮುಖ್ಯವಾದದನ್ನು ಬಿಟ್ಟು ಮತ್ತೆಲ್ಲೋ ಗಮನವಿರುವುದು. ನಿಮ್ಮ ಮನಃಸ್ಥಿತಿಯನ್ನು ಯಾರಾದರೂ ದುರುಪಯೋಗ ಮಾಡಿಕೊಳ್ಳಬಹುದು.

ವೃಶ್ಚಿಕ ರಾಶಿ: ಮಕ್ಕಳ ಬಗೆಗೆ ಎಷ್ಟೇ ಚಿಂತಿಸಿದರೂ ಪರಿಹಾರ ಮಾರ್ಗ ಸಿಗದೇ ಬೇಸರವಾಗುವುದು. ಆದರೆ ಉನ್ನತ ಅಧಿಕಾರಿಗಳು ಸಾಮಾನ್ಯರಿಗೆ ಸ್ಪಂದಿಸುವ ಕರ್ತವ್ಯವನ್ನು ಮರೆಯಬಾರದು. ಇಂದು ಮಡದಿ, ಮಕ್ಕಳಿಂದಲೇ ಟೀಕೆಯನ್ನು ಕೇಳಬೇಕಾದೀತು. ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಪಾರದರ್ಶಕತೆ ಮಾತ್ರ ಇರಲಿ. ಮಕ್ಕಳ ವಿವಾಹದ ಬಗ್ಗೆ ಚಿಂತಿಸಿ ಭಾವುಕರಾಗುವಿರಿ. ಕುಟುಂಬಕ್ಕಾಗಿ ಮಾಡಿದ ಸಾಲವನ್ನು ನೆನೆಸಿಕೊಂಡು ಸಂಕಟಪಡುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು. ಇನ್ನೊಬ್ಬರ ನೋವಿಗಿ ಸ್ಪಂದಿಸುವ್ವಿರಿ. ದಾಂಪತ್ಯದಲ್ಲಿ ಸಾಮರಸ್ಯದ ಅಗತ್ಯವು ಬಹಳ ಇರಲಿದೆ. ನೀವು ಉದ್ಯೋಗವನ್ನು ಪಡೆಯಲು ಮಾಡಿದ ಪ್ರಯತ್ನಗಳು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ. ದುರಭ್ಯಾಸವನ್ನು ಮಿತಿಯಲ್ಲಿ ಇರಿಸಿಕೊಳ್ಳಿ.

ಧನು ರಾಶಿ: ಜವಾಬ್ದಾರಿಯ ಸ್ಥಾನದಲ್ಲಿ ಇದ್ದು ಮಾತನಾಡುವಾಗ ಎಚ್ಚರಿಕೆ ಇರಲಿ. ನಿಮ್ಮ ಕಣ್ಣು ಆಯಾಸವನ್ನು ಸ್ಪಷ್ಟವಾಗಿ ಹೇಳುವುದು. ಸಕಾರಾತ್ಮಕವಾಗಿ ಚಿಂತಿಸಿ ಕಾರ್ಯದಲ್ಲಿ ತೊಡಗಿಕೊಳ್ಳಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಇರಲಿದೆ. ಸ್ಥಿರಾಸ್ತಿಯನ್ನು ಖರೀದಿಸಲು ಉತ್ತಮ ಕಾಲವಿದು. ಗೃಹ ನಿರ್ಮಾಣದಂತಹ ಕಾರ್ಯಕ್ಕೆ ಕೈ ಹಾಕುವುದು ಬೇಡ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಮಕ್ಕಳು ನಿಮ್ಮ ವರ್ತನೆಯನ್ನು ವಿರೋಧಿಸಬಹುದು. ಅಂತರಂಗವನ್ನು ಆದಷ್ಟು ಗೌಪ್ಯವಾಗಿ ಇಡುವುದು ಬೇಕಾದೀತು‌. ನಿಮ್ಮ ಹಾರಿಕೆಯ ಮಾತುಗಳು ನಿಮ್ಮ ಬಗ್ಗೆ ನಂಬಿಕೆಯು ಇರದಂತೆ ಮಾಡುವುದು. ವ್ಯಾಪಾರದ ಉದ್ದೇಶಕ್ಕೆ ಹೊರ ನಿಮ್ಮ ವಿದೇಶ ಪ್ರವಾಸವು ಶುಭವನ್ನು ತರಲಿದೆ.

ಮಕರ ರಾಶಿ: ವಿದೇಶದಿಂದ ಸ್ನೇಹಿತರ ಆಗಮನವಾಗಲಿದೆ. ಸಹೋದ್ಯೋಗಿಗಳ ಜೊತೆ ಕಲಹವನ್ನು ಮಾಡಿಕೊಳ್ಳುವಿರಿ. ಹಿರಿಯರ ಮಧ್ಯಸ್ಥಿಕೆಯಿಂದ ಶಾಂತವಾಗುವುದು. ನಿಮ್ಮ ಸಮಸ್ಯೆಗಳಿಗೆ ಹಲವರು ಹಲವು ರೀತಿಯ ಸಲಹೆಗಳನ್ನು ನೀಡಬಹುದು. ಸಲಹೆಯನ್ನು ಏಕಚಿತ್ತದಿಂದ ಸ್ವೀಕರಿಸಿ, ನಿಮ್ಮ ವಿವೇಕದಿಂದ ಬಳಸಿಕೊಳ್ಳಿ. ಅನ್ಯರಿಂದ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸನ್ನಿವೇಶವು ಬರಬಹುದು. ಎಲ್ಲವೂ ನಿಮ್ಮಿಂದ ಆದರೂ ಹೇಳಿಕೊಳ್ಳುವಾಗ ಗೌಣವಾಗಿರಲಿ. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ. ತಂದೆಯಿಂದ ಧನಾಗಮನವನ್ನು ನಿರೀಕ್ಷಿಸುವಿರಿ. ಬೇಸರವನ್ನು ಕಳೆಯಲು ಒಂಟಿಯಾಗಿ ದೂರ ಹೋಗಿ. ಪ್ರೇಯಸಿಯನ್ನು ದೂರಮಾಡಿಕೊಂಡು ದುಃಖಿಸುವ ಸಾಧ್ಯತೆ ಇದೆ. ನಿಮ್ಮ ಸಾಮರ್ಥ್ಯವನ್ನು ಸುಧಾರಿಸಲು ಒಂದು ಅವಕಾಶ ಸಿಗಲಿದೆ.

ಕುಂಭ ರಾಶಿ: ನಿಮ್ಮ ಪರಿಶ್ರಮದ ಆಧಾರದ ಮೇಲೆ ಫಲಾಫಲಗಳು ನಿರ್ಣಯವಾಗುವುದು. ಯಾರಿಗೂ ಉಪದೇಶ ನೀಡಲು ಹೋಗಬೇಡಿ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮಾನಸಿಕವಾಗಿ ಸದೃಢರಾಗುವಿರಿ. ನೀವು ಅಂದಿಕೊಂಡಂತೆ ಸಹೋದರಿಯರಿಂದ ಸಹಕಾರ ದೊರೆಯುವುದಿಲ್ಲ. ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಕುಟುಂಬದಲ್ಲಿ ನಿಮ್ಮ ಬಗ್ಗೆ ಭಯವು ಇರಲಿದೆ. ಮಾತು ಎಷ್ಟೇ ಸಹೃದಯತೆಯಿಂದ ಇದ್ದರೂ ಕೇಳಿಸಿಕೊಳ್ಳುವ ಸಹೃದಯರು ಸಿಗುವುದಿಲ್ಲ. ಉದ್ವಿಗ್ನತೆಯು ಉಂಟಾದಾಗ ಏನನ್ನಾದರೂ ಮಾಡಿಕೊಳ್ಳುವಿರಿ. ಅವಿವಾಹಿತರು ಯೋಗ್ಯವಾದ ಸಂಗಾತಿಯನ್ನು ಪಡೆಯುವರು. ನವವಿವಾಹಿತರಿಗೆ ಸಂತಸದ ಸುದ್ದಿಯು ಇರಲಿದೆ.

ಮೀನ ರಾಶಿ: ನಿಮ್ಮ ಬಗೆಗಿನ ಗೌರವ ಜನರಲ್ಲಿ ಹೆಚ್ಚಿರುವುದು. ಅವನ್ನು ಬಹಿರಂಗವಾಗಿಯೂ ಪ್ರಕಟಗೊಳಿಸುವರು. ಮತ್ತು ಧನ್ಯತಾಭಾವವೂ ಮೂಡುವುದು. ಆಧ್ಯಾತ್ಮಿಕ ಚಿಂತನೆಗಳಿಂದ ಮನಸ್ಸಿಗೆ ಶಾಂತತೆಯನ್ನು ಪಡೆಯುವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ನಿಮ್ಮ ಪರಿಶ್ರಮಕ್ಕೆ ತಕ್ಕಷ್ಟು ಹಣ ಬರದೆ ತೊಂದರೆ ಅನುಭವಿಸುವಿರಿ. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ನಿಮಗೆ ಆತ್ಮತೃಪ್ತಿಯು ಇರುವುದು. ವಾಹನ ಚಲಾಯಿಸುವಾಗ ಎಚ್ಚರ ಇರಲಿ. ಏಕತಾನತೆಯ ಜೀವನವು ನಿಮಗೆ ಬೇಸರವನ್ನು ಕೊಟ್ಟಿದ್ದು, ಹೊಸತನ್ನು ನೀವು ಬಯಸುವಿರಿ. ಇಂದು ನೀವು ಹೊಸ ಹೂಡಿಕೆಗೆ ಮನಸ್ಸು ಮಾಡುವಿರಿ. ಅತಿಯಾದ ಆಸೆಯಿಂದ ನಿಮಗೆ ಕೆಲವು ತೊಂದರೆಗಳು ಬರಬಹುದು. ಆರ್ಥಿಕವಾಗಿ ಸಬಲತೆಗೆ ಕ್ರಮವನ್ನು ಕೈಗೊಳ್ಳುವಿರಿ.

-ಲೋಹಿತಶರ್ಮಾ – 8762924271 (what’s app only)