ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 24) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ವೈಧೃತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 26 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:45 ರಿಂದ 02:10ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:28 ರಿಂದ 09:54ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 11:19 ರಿಂದ 12:45ರ ವರೆಗೆ.
ಸಿಂಹ ರಾಶಿ: ಸುಪ್ತವಾದ ಪ್ರತಿಭೆಯನ್ನು ಪ್ರಕಟ ಮಾಡಲು ವೇದಿಕೆ ಸಿಗಲಿದ್ದು, ಉತ್ತಮ ರೀತಿಯಲ್ಲಿ ಅದನ್ನು ಬಳಸಿಕೊಂಡು ಭವಿಷ್ಯವನ್ನು ಕಟ್ಟಿಕೊಳ್ಳಬಹುದಾಗಿದೆ. ಸಣ್ಣ ವ್ಯಾಪಾರವು ಅಧಿಕಫಲವನ್ನು ಕೊಡುವುದು. ಕೆಟ್ಟ ಅಭ್ಯಾಸಕ್ಕೆ ಹಣವನ್ನು ಖರ್ಚು ಮಾಡುವಿರಿ. ನಿಮ್ಮ ಸರಳ ಉಪಾಯವನ್ನು ಕಾರ್ಯದಲ್ಲಿ ಹಾಕುವಿರಿ. ನಿಮ್ಮ ಮಾತು ಸಂಗಾತಿಯನ್ನು ಮೌನಿಯನ್ನಾಗಿ ಮಾಡುವುದು. ನೀವು ಮನೆಯ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕಾದೀತು. ಅತಿಯಾದ ಮಾತಿನಿಂದ ಇತರರಿಗೆ ಕಷ್ಟವಾದೀತು. ಮನೆಯ ಕಾರ್ಯವು ನಿಮಗೆ ತೃಪ್ತಿ ಕೊಡುವುದು. ಉಪಕಾರದ ಸ್ಮರಣೆಯನ್ನು ನೀವು ಇಟ್ಟುಕೊಳ್ಳುವುದು ಅನಿವಾರ್ಯ. ವಾಹನ ಸಂಚಾರಕ್ಕೆ ತೊಂದರೆಯಾಗುವುದು. ಕೆಲವು ದೇಹಾಯಾಸದ ಕಾರ್ಯವನ್ನು ಮಾಡುವಿರಿ.
ಕನ್ಯಾ ರಾಶಿ: ವ್ಯವಹಾರದಲ್ಲಿ ಚಾಣಕ್ಷತೆ ಇದ್ದರೂ ಮುಗ್ಗರಿಸುವ ಸಂದರ್ಭವು ಬರಬಹುದು. ನಿಮ್ಮನ್ನು ಕುಗ್ಗಿಸುವ ಪ್ರಯತ್ನವು ಇರುವುದು. ನಿಮ್ಮಅಹಂಕಾರದ ಮಾತುಗಳಿಂದ ಮಿತ್ರರೇ ನಿಮ್ಮ ವಿರುದ್ಧ ತಿರುಗಿ ನಿಲ್ಲಬಹುದು. ಇನ್ನೊಬ್ಬರನ್ನು ಕಂಡು ಕೊರಗುವುದು ಬೇಡ. ನಿಮ್ಮ ತಪ್ಪನ್ನು ಒಪ್ಪಿಕೊಂಡು ಹೊಂದಾಣಿಕೆ ಮಾಡಿಕೊಳ್ಳುವಿರಿ. ನಿಮ್ಮ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಚಾಂಚಲ್ಯದ ಕಾರಣ ಉದ್ಯೋಗದಲ್ಲಿಯೂ ಸರಿಯಾದ ಏಕಾಗ್ರತೆಯಿಂದ ಕೆಲಸವನ್ನು ಮಾಡಲಾಗದು. ಸಾಮಾಜಿಕವಾಗಿ ಕಾರ್ಯಗಳಿಗೆ ನಿಮ್ಮ ಹಣವನ್ನೇ ಬಳಸುವಿರಿ. ಮನೆಯಲ್ಲಿ ನಿಮ್ಮ ಕಾರ್ಯಗಳಿಗೆ ಹಿರಿಯರಿಂದ ವಿರೋಧ ಬರಲಿದೆ. ದೇಹಕ್ಕೆ ಏನಾದರೂ ಬಲವಾದ ಏಟು ಬೀಳುವ ಸಾಧ್ಯತೆ ಇದೆ.
ತುಲಾ ರಾಶಿ: ಇಂದಿನ ನಿಮ್ಮ ಪೂರ್ವನಿಶ್ಚಿತ ಪ್ರಯಾಣವು ಬದಲಾಗಿದ್ದು ಬಹಳ ಬೇಸರವಾದೀತು. ದಾಂಪತ್ಯದಲ್ಲಿ ಇನ್ನೊಬ್ಬರ ಕಾರಣದಿಂದ ಕಲಹವಾಗಬಹುದು. ರಾಜಕೀಯದಲ್ಲಿ ತೃಪ್ತಿ ಸಿಗದೇ ತೊಳಲಾಟ ಇರಲಿದೆ. ಸಂಗಾತಿಯ ಆರೋಗ್ಯದ ಕಡೆ ನಿಮ್ಮ ಗಮನವು ಹೆಚ್ಚಿರುವುದು. ಹಿರಿಯರ ಮಾರ್ಗದರ್ಶನವನ್ನು ಶಿರಸಾ ಅಲಿಸುವಿರಿ. ಅವ್ಯಕ್ತವಾದ ನೆಮ್ಮದಿಯಿಂದ ಬೀಗಬಹುದು. ಕಿರಿಯರಿಂದ ಆಕಸ್ಮಿಕವಾಗಿ ಗೌರವಕ್ಕೆ ಪಾತ್ರರಾಗುವಿರಿ. ಅಸಹಜ ಮಾತುಗಳಿಗೆ ಸ್ಪಂದನೆ ಸಿಗದು. ಪ್ರತ್ಯೇಕತೆಯನ್ನು ನೀವು ಬಯಸುತ್ತಿರುವಿರಿ. ಹೂಡಿಕೆಯಿಂದ ಆರ್ಥಕ ಅಭಿವೃದ್ಧಿಯಾಗಲಿದೆ ಎಂಬ ನೆಮ್ಮದಿ ಇರುವುದು. ಮುಖ್ಯ ಜವಾಬ್ದಾರಿಯನ್ನು ನಿರ್ವಹಿಸಬೇಕಾದೀತು. ದಾಂಪತ್ಯ ಜೀವನವನ್ನು ಬಹಳ ಆನಂದಿಸುವಿರಿ. ನಿಮ್ಮ ಬಗ್ಗೆಯೂ ಅಪ್ರಚಾರ ಮಾಡುತ್ತಾರೆ ಎಂಬುದು ತಿಳಿಯುವುದು.
ವೃಶ್ಚಿಕ ರಾಶಿ: ಇಂದಿನ ನಿಮ್ಮ ತಪ್ಪು ತಿಳಿವಳಿಕೆಯು ಹಲವಾರು ಗೊಂದಲಗಳಿಗೆ ಕಾರಣವಾಗಬಹುದು. ಸಂಪಾದನೆಯ ಆಸೆ ಅತಿಯಾಗಿರುವುದು. ನಿಮ್ಮ ಬಗ್ಗೆ ಇರುವ ಭಾವವು ಬದಲಾಗಲಿದ್ದು ನಕಾರಾತ್ಮಕ ಪ್ರತಿಕ್ರಿಯೆಯು ನಿಮ್ಮಂದ ಬರಲಿದೆ. ಭೂಮಿಯ ಲಾಭವು ಆಗಲಿದ್ದು ಅನೇಕ ದಿನದ ಚಿಂತೆಗಳು ದೂರಾಗುವುದು. ಅಧಿಕ ಆದಾಯಕ್ಕಾಗಿ ಉದ್ಯೋಗವನ್ನು ನೀವು ತ್ಯಾಗಮಾಡುವಿರಿ. ಹೊಸ ಉದ್ಯಮದ ಕಡೆ ಸೆಳೆತವು ಅತಿಯಾಗಬಹುದು. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ. ಮಾತಿಗೆ ಸಂಬಂಧಿಸದಂತೆ ದೋಷವು ನಿಮಗೆ ಕಾಣಸಿಗುವುದು. ನಿಮ್ಮ ಕೆಲಸವನ್ನು ಶಿಸ್ತಿನಿಂದ ಮಾಡಿ ಮುಗಿಸುವಿರಿ. ಇಂದು ಆಗಬೇಕಾದ ಕೆಲಸಕ್ಕೆ ಹೆಚ್ಚು ಓಡಾಡಬೇಕಾಗುವುದು. ಇಂದು ಪ್ರಯತ್ನಿಸಿದ ಕಾರ್ಯವು ಆಗದೇ ಇರುವುದಕ್ಕೆ ಬೇಸರಿಸುವಿರಿ. ಎಲ್ಲವನ್ನು ವಿಮರ್ಶಿಸುವ ಕಾರ್ಯಕ್ಕೆ ತೊಡಗುವಿರಿ.