Rashi Bhavishya: ದಿನಭವಿಷ್ಯ; ಸಣ್ಣ ಕಾರಣಕ್ಕೆ ಜೀವನ ಸಂಗಾತಿಯಿಂದ ದೂರಾಗುವ ಸಾಧ್ಯತೆಯಿದೆ-ಎಚ್ಚರ

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 25) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.

Rashi Bhavishya: ದಿನಭವಿಷ್ಯ; ಸಣ್ಣ ಕಾರಣಕ್ಕೆ ಜೀವನ ಸಂಗಾತಿಯಿಂದ ದೂರಾಗುವ ಸಾಧ್ಯತೆಯಿದೆ-ಎಚ್ಚರ
ರಾಶಿ ಭವಿಷ್ಯ

Updated on: Jan 25, 2024 | 12:30 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 24) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪೌರ್ಣಿಮಾ, ನಿತ್ಯನಕ್ಷತ್ರ: ಪುಷ್ಯ, ಯೋಗ: ವಿಷ್ಕಂಭ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 07 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 26 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:10 ರಿಂದ 03:36ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:03 ರಿಂದ 08:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:54 ರಿಂದ 11:19ರ ವರೆಗೆ.

ಸಿಂಹ ರಾಶಿ : ಸಂಗಾತಿಯ ಬೆಂಬಲವನ್ನು ದುರುಪಯೋಗ ಮಾಡಿಕೊಳ್ಳುವುದು ಬೇಡ. ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಲಾಭ ಪಡೆಯುತ್ತೀರಿ. ಉದ್ಯೋಗ ಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆಗಳಿಂದ ನಿಮಗೆ ಪರಿಹಾರ ಸಿಗುತ್ತದೆ. ಪ್ರೀತಿಯ ಜೀವನದಲ್ಲಿ ಹೆಚ್ಚಿನ ನಿರೀಕ್ಷೆಗಳು ನಿರಾಸೆಗೆ ಕಾರಣವಾಗಬಹುದು. ಕೊಡು ಕೊಳ್ಳುವ ವ್ಯವಹಾರಗಳಲ್ಲಿ ಲಾಭ ಕಂಡು ಬಂದರೂ, ಜಾಗ್ರತೆ ವಹಿಸುವುದು ಅಗತ್ಯ. ಸಮಸ್ಯೆಗಳೆಲ್ಲವೂ ಪರಿಹಾರವಾಗಲಿದೆ. ವೈವಾಹಿಕ ಜೀವನವನ್ನು ಇಂದು ಕೂಡ ಅತ್ಯಂತ ಸಂತೋಷದಿಂದ ಕಳೆಯುವಿರಿ. ಆರೋಗ್ಯದ ವಿಷಯದಲ್ಲಿ ಇಂದು ಸ್ವಲ್ಪ ತೊಂದರೆಯಾಗಬಹುದು. ಜೀರ್ಣಕ್ರಿಯೆ ಮತ್ತು ಕಣ್ಣಿನ ಅಸ್ವಸ್ಥತೆಗಳ ಸಮಸ್ಯೆಗಳಾಗಬಹುದು. ನೀವು ಸೇವಿಸುವ ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ. ಈ ಸಮಯದಲ್ಲಿ, ಹೊರಗೆ ಏನನ್ನಾದರೂ ತಿನ್ನುವುದನ್ನು ತಪ್ಪಿಸಿ.

​ಕನ್ಯಾ ರಾಶಿ : ಇಂದು ನೀವು ನಿಮ್ಮ ಸುತ್ತ ಆಹ್ಲಾದಕರ ವಾತಾವರಣವನ್ನು ಹೊಂದಿರುತ್ತೀರಿ. ಮಂಗಳ ಕಾರ್ಯದಿಂದಾಗಿ, ಕುಟುಂಬ ಸದಸ್ಯರ ಸಂತೋಷ ಹೆಚ್ಚಾಗುತ್ತದೆ. ಹಲವು ದಿನಗಳಿಂದ ನಡೆಯುತ್ತಿರುವ ವಹಿವಾಟು ಪ್ರಮುಖ ಸಮಸ್ಯೆಯನ್ನು ಪರಿಹರಿಸಬಹುದು. ಕೈಯಲ್ಲಿ ಸಾಕಷ್ಟು ಹಣವನ್ನು ಹೊಂದಿರುವ ನೀವು ನೆಮ್ಮದಿಯಿಂದ ಇರುವಿರಿ. ಜೀವನ ಸಂಗಾತಿಯಿಂದ ಸಂಪೂರ್ಣ ಬೆಂಬಲ ಸಿಗುತ್ತದೆ. ಶುಭ ಕಾರ್ಯದ ಚಿಂತನೆ ಅನಿರೀಕ್ಷಿತವಾಗಿ ನಡೆಯಲಿದೆ. ಉದ್ಯಮ, ವ್ಯವಹಾರದಲ್ಲಿಯೂ ಹೊಸ ಅಧ್ಯಾಯ ತೆರೆಯಲಿದೆ. ಹೂಡಿಕೆ ವಿಸ್ತರಣೆಗೆ ಅವಸರ ಬೇಡ. ನಿಮ್ಮ ಧಾರ್ಮಿಕ ಚಟುವಟಿಕೆಗಳನ್ನು ನೀವು ಗಮನದಲ್ಲಿರಿಸಿಕೊಳ್ಳುತ್ತೀರಿ. ನಿಮ್ಮ ವಿರೋಧಿಗಳಿಗೆ ನೀವು ತಲೆನೋವಾಗಿ ಉಳಿಯುತ್ತೀರಿ. ದಂಪತಿಗಳು ಜೀವನದಲ್ಲಿ ಸಂತೋಷವಾಗಿರುತ್ತಾರೆ. ನಿಮ್ಮ ಮಗುವಿನ ಆರೋಗ್ಯದ ಬಗ್ಗೆ ನಿಮಗೆ ಸ್ವಲ್ಪ ಕಾಳಜಿ ಇರಬಹುದು.

​ತುಲಾ ರಾಶಿ : ಸಣ್ಣ ಕಾರಣಕ್ಕೆ ಜೀವನ ಸಂಗಾತಿಯಿಂದ ದೂರಾಗುವ ಸಾಧ್ಯತೆಯಿದೆ. ಸ್ನೇಹಿತರಿಗೆ ಸಹಾಯ ಮಾಡಲು ಅವಕಾಶವಿರುತ್ತದೆ. ಉದ್ಯೋಗ ಮತ್ತು ವ್ಯವಹಾರ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಯತ್ನಗಳಿಂದ ಊಹಿಸಲಾಗದ ಯಶಸ್ಸನ್ನು ಸಾಧಿಸುವಿರಿ. ನೀವು ಮಕ್ಕಳ ಕಡೆಯಿಂದ ತೃಪ್ತಿದಾಯಕ ಒಳ್ಳೆಯ ಸುದ್ದಿ ಪಡೆಯುತ್ತೀರಿ. ಕಾನೂನು ವಿವಾದ ಅಥವಾ ಮೊಕದ್ದಮೆಯಲ್ಲಿನ ಗೆಲುವು ನಿಮಗೆ ಸಂತೋಷಕ್ಕೆ ಕಾರಣವಾಗಬಹುದು. ವ್ಯಾಪಾರ, ವ್ಯವಹಾರಗಳ ಮುನ್ನಡೆಗಾಗಿ ಪ್ರಯಾಣದ ಮಾತುಕತೆಯ ಸಾಧ್ಯತೆ ಇರುತ್ತದೆ. ದಾಯಾದಿಗಳ ಆಗಮನ ಕಿರಿಕಿರಿ ತರಲಿದೆ. ಕೆಲವು ಕೆಲಸದ ಭರಾಟೆಯಲ್ಲಿ ಇಂದು ಸಮಯವು ನಿಮ್ಮದಾಗಿರದು. ವಾತಾವರಣವು ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸಂಗಾತಿಯ ಸಾಕಷ್ಟು ಬೆಂಬಲ ಮತ್ತು ಒಡನಾಟವನ್ನು ಪಡೆಯುತ್ತೀರಿ.

​ವೃಶ್ಚಿಕ ರಾಶಿ : ಹೊಸ ಆದಾಯದ ಮೂಲಗಳನ್ನು ಸೃಷ್ಟಿಸಿಕೊಳ್ಳುವಿರಿ. ಮಾತಿನ ಮೃದುತ್ವವು ನಿಮಗೆ ಗೌರವವನ್ನು ತರುತ್ತದೆ. ಕಣ್ಣು ನೋವು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ನಿಮ್ಮ ಶತ್ರುಗಳು ತಮ್ಮ ನಡುವೆ ಹೋರಾಡುವ ಮೂಲಕ ನಾಶವಾಗುತ್ತಾರೆ. ವಿದೇಶದಿಂದ ವ್ಯಾಪಾರವು ಸಕಾರಾತ್ಮಕ ಫಲಿತಾಂಶಗಳನ್ನು ತರುತ್ತದೆ. ಆತ್ಮೀಯ ವ್ಯಕ್ತಿ ಸುವಾರ್ತೆಯನ್ನು ಸ್ವೀಕರಿಸುತ್ತಾನೆ. ಚಿಂತಿತ ವ್ಯವಹಾರಗಳು ಹಂತ ಹಂತವಾಗಿ ಬಲಗೊಳ್ಳಲಿವೆ. ಅದೃಷ್ಟ ಬಲದಿಂದ ಹೂಡಿಕೆಗಳು ಲಾಭದಾಯಕವಾಗಲಿವೆ. ನಿಮ್ಮ ಸ್ಥಾನವು ಆರ್ಥಿಕವಾಗಿ ಸದೃಢವಾಗಿರುತ್ತದೆ. ಮನೆಯಲ್ಲಿ ಸಹಕಾರ ಮತ್ತು ಸಂತೋಷದ ವಾತಾವರಣವೂ ಇರುತ್ತದೆ. ಯಾವುದೇ ವೆಚ್ಚದಲ್ಲಿ ಮಾತಿನ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳಬೇಡಿ. ಇಲ್ಲದಿದ್ದರೆ ನಷ್ಟವು ನಿಮ್ಮದಾಗುತ್ತದೆ. ಪ್ರೀತಿಪಾತ್ರರನ್ನು ಭೇಟಿ ಮಾಡಲು ನಿಮ ಇಷ್ಟವಾಗುವುದು.