AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಈ ರಾಶಿಯವರ ವ್ಯಕ್ತಿತ್ವಕ್ಕೆ ಕಳಂಕವನ್ನು ಬಳಿಯಬಹುದು -ಎಚ್ಚರ

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 26) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.

Rashi Bhavishya: ಈ ರಾಶಿಯವರ ವ್ಯಕ್ತಿತ್ವಕ್ಕೆ ಕಳಂಕವನ್ನು ಬಳಿಯಬಹುದು -ಎಚ್ಚರ
ಪ್ರಾತಿನಿಧಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jan 26, 2024 | 12:29 AM

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 25) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಪ್ರೀತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 27 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:20 ರಿಂದ 12:45ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:36 ರಿಂದ 17:02 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:29 ರಿಂದ 09:54ರ ವರೆಗೆ.

ಸಿಂಹ ರಾಶಿ : ಇಂದು ಕೆಲವು ಸಂದರ್ಭದಲ್ಲಿ ಉಕ್ಕಿಬರುವ ಸಿಟ್ಟನ್ನು ನಿಯಂತ್ರಿಸುವ ಕಲೆಯನ್ನು ತಿಳಿದುಕೊಳ್ಳಿ. ಉದ್ಯೋಗದಲ್ಲಿ ಬದಲಾವಣೆಯನ್ನು ನೀವು ನಿರೀಕ್ಷಿಸುತ್ತ ಇರುವಿರಿ. ಊಹಿಸದೇ ಇರುವ ಕಡೆಯಿಂದ ನಿಮಗೆ ಬೇಕು ಎನಿಸಿದ ಸಂಪತ್ತು ದೊರೆಯುವುದು. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ಉದ್ಯೋಗದಲ್ಲಿ ಹೆಚ್ಚುಗಾರಿಕೆ ಇರುವುದು. ತಾಳ್ಮೆಯಿಂದ ಕಾರ್ಯವನ್ನು ಮಾಡಿ. ನೂತನ‌ ಸ್ನೇಹವನ್ನು ಬೆಳೆಸಿಕೊಳ್ಳುವಿರಿ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ. ವಿದೇಶದ ಪ್ರಯಾಣಕ್ಕೆ ಆಯಾಸವು ಆಯಾಸವು ಅಡ್ಡಿಬರಬಹುದು. ದೇಹವನ್ನು ದಂಡಿಸುವ ಅನಿವಾರ್ಯತೆ ಇರಲಿದೆ. ಆಕರ್ಷಕ ಮಾತಿಗೆ ಮನಸೋತು ಪ್ರೀತಿಯಲ್ಲಿ ಬೀಳುವಿರಿ.

ಕನ್ಯಾ ರಾಶಿ : ಎಷ್ಟೋ ದಿನಗಳ ಹಿಂದಿನ ಮನದ ಆಸೆಗಳನ್ನು ನೆರವೇರಿಸಿಕೊಳ್ಳುವಿರಿ. ಇಂದು ಸ್ವಂತ ಕಾರ್ಯಗಳಿಗೆ ಸಮಯವನ್ನು ಹೊಂದಿಸಿಕೊಳ್ಳುವುದು ಕಷ್ಟವಾಗುವುದು. ಮುಖವನ್ನು ಗಂಟು ಹಾಕಿಕೊಂಡು ಇರುವುದು ನಿಮ್ಮಿಂದ ಜನರನ್ನು ದೂರವಿರಿಸುವುದು. ಅತಿಯಾದ ಆಡಂಬರವು ನಿಮಗೆ ಇಷ್ಟವಾಗದು. ನಿಮ್ಮಲ್ಲಿರುವ ಅಲ್ಪ ಹಣವನ್ನು ಸೇರಿಸಿ ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ಇಂದಿನ ನಿಮ್ಮ ಮಾರಾಟದಿಂದ ಅಧಿಕಲಾಭವೂ ಆಗದು. ಸತ್ಪಾತ್ರರಿಗೆ ದಾನವನ್ನು ಮಾಡಿ. ನಿಮ್ಮ ವ್ಯಕ್ತಿತ್ವಕ್ಕೆ ಕಳಂಕವನ್ನು ಬಳಿಯಬಹುದು. ಬೆನ್ನಿನ ನೋವು ನಿಮ್ಮ ಕಾರ್ಯಗಳ‌ ಏಕಾಗ್ರತೆಯನ್ನು ಕೆಡಿಸೀತು. ಉದ್ಯೋಗಕ್ಕೆ ವಿರಾಮ ಹೇಳಿ ಹೊರಗೆ ಸುತ್ತಾಟವನ್ನು ಮಾಡುವಿರಿ. ಎಲ್ಲ ಕಾರ್ಯವನ್ನೂ ನೀವೇ ಮಾಡಬೇಕು ಎಂಬ ಹೆಬ್ಬಯಕೆ ಬೇಡ. ಸಂತೋಷಕೂಟಕ್ಕೆ ಹಣವನ್ನು ಖರ್ಚು ಮಾಡಬೇಕಾದೀತು.

ತುಲಾ ರಾಶಿ : ಇಂದು ನೀವು ವ್ಯಾಪಾರರಕ್ಕೆ ಹಾಕಿದ ಬಂಡವಾಳಕ್ಕೆ ಮೋಸವಾಗದು. ಸಹೋದ್ಯೋಗಿಗಳು ಹಿರಿಯ ಅಧಿಕಾರಿಗಳ ಮುಂದೆ ನಿಮ್ಮನ್ನು ಪ್ರಶಂಸಿಸಬಹುದು. ಇಂದು ನೀವು ತೋರಿಕೆಗೆ ಬಹಳ ಶಾಂತರಂತೆ ಕಂಡರೂ ಒಳಗೇ ಜ್ವಾಲಗ್ನಿಯಂತೆ ಕುದಿಯುವಿರಿ. ಎಲ್ಲ ವಿಚಾರದಲ್ಲಿಯೂ ಅಸಮಾಧನವು ಇರಲಿದೆ. ಅತಿಯಾದ ಒತ್ತಡವು ನಿಮ್ಮ ದಕ್ಷತೆಯನ್ನು ಕಡಿಮೆ‌ ಮಾಡುವುದು. ಒಂದೇ ಕೆಲಸದಲ್ಲಿ ಮಗ್ನರಾಗಿ ಮಾಡಬೇಕಾದ ಕೆಲವು ಕೆಲಸವನ್ನು ಮರೆಯುವಿರಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಬೇಕು ಎಂದು ಅನ್ನಿಸುವುದು. ನಿಮ್ಮ ಉತ್ತಮ ಹವ್ಯಾಸವು ಪ್ರಯೋಜನಕ್ಕೆ ಬಂದೀತು. ಇಂದು ಖರೀದಿಸಿದ ಹೊಸ ವಸ್ತುಗಳು ನಿಮಗೆ ಬಹಳ ಖುಷಿಯನ್ನು ಕೊಡುವುದು. ವೃತ್ತಿಯಲ್ಲಿ ನಿಮ್ಮನ್ನು ಗುರುತಿಸಿರುವುದು ಮನಸ್ಸನ್ನು ಹಿಗ್ಗಿಸಿರುವುದು. ಮಾತನ್ನು ಚೆನ್ನಾಗಿ ಇಟ್ಟುಕೊಂಡು ವ್ಯವಹಾರವನ್ನು ಮುನ್ನಡೆಸುವಿರಿ.

ವೃಶ್ಚಿಕ ರಾಶಿ : ಇಂದು ಉದ್ಯಮದಲ್ಲಿ ಬರುವ ಸವಾಲುಗಳನ್ನು ಸುಲಭವಾಗಿ ಗೆಲ್ಲುವಿರಿ. ತಂದೆಗೆ ಬೇಕಾದ ಹಣವನ್ನು ನೀವು ಕೊಟ್ಟು ಮುನ್ನಡೆಸುವಿರಿ. ಮೇಲಿಂದ ಮೇಲೆ‌ ಬೀಳುವ ಪೆಟ್ಟಿನಿಂದ ಮನಸ್ಸು ದುರ್ಬಲವಾಗಬಹುದು. ಯಾವ ಹೊಸತನ್ನೂ ಸ್ವೀಕರಿಸುವ ಮಾನಸಿಕತೆ ಇಂದು ಇರದು. ಎಲ್ಲ ವಿಚಾರಕ್ಕೂ ನಿಮ್ಮ ಮೌನಮುದ್ರೆಯು ಒತ್ತಿರುವುದು. ಹೂಡಿಕೆಯನ್ನು ಹಿಂಪಡೆಯುವ ಸಾಧಿಸುವಿರಿ ಇದೆ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ. ಯಾರನ್ನೋ ನಂಬಿ‌ ಹಣಕಾಸಿನ ವ್ಯವಹಾರವನ್ನು ಮಾಡುವಿರಿ. ತೊಂದರೆಯಾದೀತು. ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆ ಸ್ಪಂದನ ಇರದು. ಅಶುಭವಾದ ಕೆಲಸಕ್ಕೆ ಗೊತ್ತಿಲ್ಲದೇ ನೀವು ಹಣವನ್ನು ನೀಡುವಿರಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುನ್ನಡೆದರೆ ಸಾಧಿಸುವ ಹಾದಿಯು ಸರಳವಾಗುವುದು.

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ