AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಈ ರಾಶಿಯವರು ಇಂದು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 27) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.

Rashi Bhavishya: ಈ ರಾಶಿಯವರು ಇಂದು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: Jan 27, 2024 | 12:30 AM

Share

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 27) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಮಘಾ, ಯೋಗ: ಆಯುಷ್ಮಾನ್, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 27 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:54 ರಿಂದ 11:20ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:11 ರಿಂದ 03:37ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:03 ರಿಂದ 08:29ರ ವರೆಗೆ.

ಸಿಂಹ ರಾಶಿ : ಇಂದು ನೀವು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಮೇಲಧಿಕಾರಿಗಳ ಋಣಾತ್ಮಕ ಹೇಳಿಕೆಯು ನಿಮಗೆ ನೋವುಂಟು ಮಾಡಬಹುದು. ಈ ದಿನ ನೀವು ಆಲಸ್ಯದಿಂದ ಇರುವಿರಿ. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ನೀಡಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ. ಕೆಲವರ ಸ್ವಭಾವು ಇಷ್ಟವಾಗದೇ ಅವರಿಂದ ದೂರವಿರಲು ಪ್ರಯತ್ನಿಸುವಿರಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ. ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯ ನಡವಳಿಕೆಯು ಇಷ್ಟವಾಗದು. ಕೆಲವನ್ನು ನೀವು ನಿರ್ಲಕ್ಷಿಸುವುದೇ ಸೂಕ್ತ. ವ್ಯಾಪರವು ಹೆಚ್ಚಿನ ಲಾಭವನ್ನು ಕೊಟ್ಟರೂ ಖರ್ಚು ಮಾಡುವ ಅನಿವಾರ್ಯತೆಯು ಬರಬಹುದು. ಸಂಗಾತಿಯ ಕಡೆಯಿಂದ ನಿಮಗೆ ಹೊಗಳಿಕೆ ಸಿಗುವುದು.

ಕನ್ಯಾ ರಾಶಿ : ಇಂದು ನಿಮ್ಮ ಉದ್ಯೋಗ ಹಾಗೂ ವ್ಯವಹಾರದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಹಿರಿಯರ ಜೊತೆ ಪ್ರಮುಖ ವಿಚಾರಗಳ ಕುರಿತು ಚರ್ಚೆಗಳಲ್ಲಿ ಭಾಗವಹಿಸುವಿರಿ. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ತಾಯಿಗೆ ನಿಮ್ಮಂದ‌ ಯಾವುದಾದರೊಂದು ಲಾಭವಾಗಬಹುದು. ಯಾರದೋ ಮೂಲಕ ಸರ್ಕಾರಿ ಕೆಲಸದಲ್ಲಿ ಯಶಸ್ಸನ್ನು ಕಾಣುವಿರಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು ಶ್ರಮವು ಅಪೇಕ್ಷಿತವಾಗಬಹುದು. ಅಚಾತುರ್ಯದಿಂದ ನಡೆದ ಘಟನೆಯು ನಿಮ್ಮನ್ನು ಕಾಡಬಹುದು. ಅಧ್ಯಯನ ವಿಧಾನವನ್ನು ಬದಲಿಸಿಕೊಳ್ಳಿ. ಭೂಮಿಯ ವ್ಯವಹಾರದಲ್ಲಿ ಲಾಭವಿರದೇ ಕೇವಲ ಓಡಾಟವಾಗುವುದು. ಮಾತನಾಡಬೇಕಾದ ಸಂದರ್ಭದಲ್ಲಿ ಮೌನ ವಹಿಸಿ ಎಲ್ಲರ ಕೋಪಕ್ಕೆ ಗುರಿಯಾಗುವಿರಿ.

ತುಲಾ ರಾಶಿ : ಇಂದು ಸಂತೋಷ ಮತ್ತು ಉತ್ಸಾಹದ ದಿನವಾಗಿರಲಿದೆ. ಇಂದು ವಿವಿಧ ಕ್ಷೇತ್ರಗಳಲ್ಲಿ ಲಾಭ ಸಾಧ್ಯ. ಇಂದು ಮಹಿಳೆಯ ಪಾತ್ರ ನಿಮ್ಮ ಜೀವನದಲ್ಲಿ ಪ್ರಮುಖಗಬಹುದು. ಸ್ನೇಹಿತರ ಜೊತೆ ಸುಂದರವಾದ ಸ್ಥಳಗಳಿಗೆ ಹೋಗುವಿರಿ. ಸಂತಾನದಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ತೊಡಕಾಗಬಹುದು. ದಾಂಪತ್ಯದಲ್ಲಿ ಮುಸುಕಿನ ಸಮರ ನಡೆಯುತ್ತಿರುವುದು. ಇನ್ನೊಬ್ಬರ ಬಳಿ ಇರುವ ದಾಖಲೆಯನ್ನು ಜಾಣ್ಮೆಯಿಂದ ಪಡೆದುಕೊಳ್ಳುವಿರಿ. ಸಮಯವನ್ನು ಹಾಳುಮಾಡದೇ ಕೆಲಸದಲ್ಲೇ ಗಮನವಿರಲಿ. ಮನೆಯವರ ಜೊತೆ ಸಮಯವನ್ನು ನೀವು ಕಳೆಯಬೇಕು ಎನ್ನಿಸಬಹುದು.

ವೃಶ್ಚಿಕ ರಾಶಿ : ಇಂದು ನೀವು ತುಂಬಾ ಭಾವುಕರಾಗುವ ಸನ್ನಿವೇಶಗಳು ಎದುರಾಗಬಹುದು. ಮಹಿಳೆಯ ಕಾರಣದಿಂದ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ವಿವಾದಿತ ಚರ್ಚೆ ಅಥವಾ ವಾದಗಳಿಂದ ದೂರವಿರುವುದು ಸೂಕ್ತ. ಕಾನೂನಿನ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು. ನಿಮ್ಮ ನಡವಳಿಕೆಯು ವಿವೇಕಯುತವಾಗಿರಲಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಆರೋಗ್ಯದ ಸುಧಾರಣೆಗೆ ಖರ್ಚಾಗುವುದು. ಇನ್ಮೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು. ಎಲ್ಲರ ಜೊತೆ ಬೆರೆಯುವುದನ್ನು ಇಷ್ಟಪಡುವಿರಿ. ಕೆಲಸವು ನಿಧಾನವಾಗುವುದು. ಮಕ್ಕಳ ಕಲಿಕೆಗೆ ಬೇಕಾದ ಸಹಕಾರವನ್ನು ನೀಡುವಿರಿ. ತಾಯಿಯ ಪ್ರೀತಿಗೆ ಸೋಲುವಿರಿ. ನೂತನ ಗೃಹವನ್ನು ಖರೀದಿ ಮಾಡುವ ಅವಕಾಶವು ಬರಬಹುದು.

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ