Astrology: ಹೊಸ ಒಪ್ಪಂದಗಳು ಬರುವ ಸಾಧ್ಯತೆ ಇದೆ, ಸಮಸ್ಯೆ ಕೆದಕಿದಷ್ಟೂ ದೊಡ್ಡದಾಗುವುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜೂ.18 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Astrology: ಹೊಸ ಒಪ್ಪಂದಗಳು ಬರುವ ಸಾಧ್ಯತೆ ಇದೆ, ಸಮಸ್ಯೆ ಕೆದಕಿದಷ್ಟೂ ದೊಡ್ಡದಾಗುವುದು
ಹೊಸ ಒಪ್ಪಂದಗಳು ಬರುವ ಸಾಧ್ಯತೆ ಇದೆ, ಸಮಸ್ಯೆ ಕೆದಕಿದಷ್ಟೂ ದೊಡ್ಡದಾಗುವುದು
Follow us
|

Updated on: Jun 18, 2024 | 12:10 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜೂನ್. 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಸ್ವಾತಿ, ಯೋಗ: ಪರಿಘ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ 15:48 ರಿಂದ 17:25ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:20 ರಿಂದ ಬೆಳಿಗ್ಗೆ 10:57ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:34 ರಿಂದ 14:11ರ ವರೆಗೆ.

ಸಿಂಹ ರಾಶಿ: ಇಂದು ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ಭಯದಿಂದ ಹಿಂಜರಿಯುವಿರಿ. ಸಮಯ ಮುಂದುವರೆದಂತೆ ನಿಮ್ಮ ಆಲೋಚನೆಗಳನ್ನು ಅಳವಡಿಸಿಕೊಳ್ಳುವುದು ಯಶಸ್ಸಿಗೆ ಕಾರಣವಾಗುತ್ತದೆ. ಹೊಸವಾಹನ ಖರೀದಿಗೆ ಮನಸ್ಸು ಮಾಡಿದರೆ ಸ್ವಲ್ಪ ಮುಂದೂಡುವುದು ಉಚಿತ. ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು. ಸಮಾರಂಭದಲ್ಲಿ ಮುಖ್ಯಸ್ಥಾನವನ್ನು ಪಡೆಯುವಿರಿ. ಅಪವಾದಗಳನ್ನು ಕೇಳುವ ಸ್ಥಿತಿಯೂ ಬರಬಹುದು. ಮನಸ್ಸಿನಲ್ಲಿ ದೃಢತೆ ಇರಲಿ. ಇಂದು ಅನಿವಾರ್ಯವೊಂದು ಒದಗಿ ಬಂದಾಗ ಇದನ್ನು ಮೊದಲೇ ಕಲಿಯಬೇಕಿತ್ತು ಎಂದನ್ನಿಸುವುದು. ನಿಮಗೆ ಕೊಟ್ಟ ಹುದ್ದೆಯನ್ನು ನಿರ್ವಹಿಸುವಾಗ ಅದರ ಭಾರವೆಷ್ಟು ಎಂದು ಅರಿಯಿರಿ. ನಿಮ್ಮನ್ನು ಅಳೆಯುತ್ತಿರುವರು ಎಂಬುದನ್ನು ಗಮನಿಸಿ. ಬಹಳ‌ ದಿನಗಳ ಅನಂತರ ಪುಣ್ಯ ಸ್ಥಳಗಳಿಗೆ ಹೋಗುವಿರಿ. ಮನಸ್ಸು ಇಂದು ಒಂದೆಡೆ ಕುಳಿತುಕೊಳ್ಳಲು ಬಿಡದು.

ಕನ್ಯಾ ರಾಶಿ: ನೀವು ಹೂಡಿಕೆಯನ್ನು ಗೌಪ್ಯವಾಗಿ ಇಡಲಾಗದು. ಅನಂತರ ಪಶ್ಚಾತ್ತಾಪ ಪಡಬೇಕಾಗುವುದು. ನಿಮ್ಮ ಬಿಡುವಿನ ವೇಳೆಯನ್ನು ಸ್ವಯಂ ಸೇವಕರಾಗಿ ಅಥವಾ ಇತರರಿಗೆ ಸಹಾಯ ಮಾಡಲು ಕಳೆಯಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತಿದ್ದು ನಿಮಗೆ ಅಚ್ಚರಿಯಾಗಬಹುದು. ಸದ್ಯ ಗ್ರಹಗತಿಗಳ ಬದಲಾವಣೆಯಿಂದ ಇದು ಸಾಧ್ಯವಾಗಿದೆ. ಅದನ್ನು ದುರುಪಯೋಗಪಡಿಸಿಕೊಳ್ಳಬೇಡಿ. ಇನ್ನೊಬ್ಬರ ವಿಷಯಕ್ಕೆ ಮೂಗು ತೂರಿಸಲು ಹೋಗದೇ ನಿಮ್ಮ ಕಾರ್ಯದಲ್ಲಿ ಮಗ್ನರಾಗಿರಿ. ಆಘಾತದ ಸ್ಥಿತಿಯನ್ನೂ ಎದುರಿಸಬೇಕಾಗುವುದು. ಕಂಡಿದ್ದನ್ನು ಮಾತ್ರ ಸತ್ಯವೆಂದು ನಂಬಬೇಡಿ. ಸಮಯ ಸರಿದಾಗ ಎಲ್ಲವೂ ಅರಿವಾಗುವುದು. ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು. ಸ್ತ್ರೀಯರ ವಿಚಾರದಲ್ಲಿ ಅಧಿಕ ದುರ್ಬಲರಾಗುವಿರಿ.

ತುಲಾ ರಾಶಿ: ನಿಮ್ಮ ಸಂತೋಷವನ್ನು ಕಹಿಯಾದ ಮಾತುಗಳು ಇಂದು ಕಸಿದುಕೊಳ್ಳಬಹುದು. ವಾಹನದ ಖರೀಗೆ ಸಾಲ ಮಾಡಬೇಕಾಗುವುದು. ಮಕ್ಕಳಿಗೆ ಹೆಚ್ಚಿನ ಗಮನವನ್ನು ಕೊಡಬೇಕಾಗುವುದು. ಊರಿಂದ ಊರಿಗೆ ವರ್ಗಾವಣೆಯಾಗುತ್ತಿರುವುದಕ್ಕೆ ಬೇಸರ ಮಾಡಿಕೊಳ್ಳುವಿರಿ. ಅದಕ್ಕೆ ನಿಮ್ಮ ಸ್ನೇಹಿತರು ಸಮಾಧಾನವನ್ನು ಮಾಡುವುದು ಬಿಟ್ಟು ಸೊಪ್ಪು ಹಾಕುವರು. ಎಷ್ಟೋ ದಿನದ ಹಿಂದೆ ಹೊಸ ವಸ್ತುಗಳನ್ನು ಖರೀದಿಸಿದ್ದು ಇಂದು ನಿಮಗೆ ನೆನಪಾಗುವುದು. ಆರೋಗ್ಯದ ಕಡೆ ಹೆಚ್ಚು ಗಮನವಹಿಸುವ ಅಗತ್ಯವಿದೆ. ದಿನಚರಿಯನ್ನು ಸರಿಮಾಡಿಕೊಳ್ಳಿ. ಎಲ್ಲ ವಿಚಾರದಲ್ಲಿ ಹಿನ್ನಡೆ ಇರಲಿದೆ. ನಿಮ್ಮ ಸ್ವಭಾವಕ್ಕೆ ಯೋಗ್ಯವಾದ ವ್ಯಕ್ತಿಯ ಗೆಳೆತನವಾಗಲಿದೆ. ಪ್ರೇಮವನ್ನು ನಿಭಾಯಿಸುವುದು ಕಷ್ಟವಾಗುವುದು. ಇಷ್ಟಪಟ್ಟ ವಸ್ತುವನ್ನು ಪಡೆಯಲು ಹಣದ ಅಭಾವವು ಕಾಣಿಸಬಹುದು.

ವೃಶ್ಚಿಕ ರಾಶಿ: ಇಂದು ಸಾಮಾಜಿಕ ಕಾರ್ಯಗಳಿಂದ ಸಂತೋಷವೂ ಹೊಸತನವೂ ನಿಮಗೆ ಸಿಗಲಿದೆ. ಹೊಸ ಒಪ್ಪಂದಗಳು ಬರುವ ಸಾಧ್ಯತೆ ಇದೆ. ಹುಣ್ಣನ್ನು ಕೆದಕಿದಷ್ಟೂ ಅದು ದೊಡ್ಡ ಗಾಯವಾಗುವುದು. ಅದೇ ರೀತಿ ಸಮಸ್ಯೆಯನ್ನು ಕೆದಕಿದಷ್ಟೂ ದೊಡ್ಡದಾಗುವುದು. ಮಾತನಾಡದೇ ಸುಮ್ಮನಿರಿ. ತಾನಾಗಿಯೇ ತಣ್ಣಗಾಗುವುದು. ನಿಧಾನಗತಿಯ ಕೆಲಸವು ನಿಮ್ಮ ಮನಃಸ್ಥಿತಿಗೆ ಹೊಂದಿಕೆಯಾಗಲಿದೆ. ಖರ್ಚನ್ನು ತಡೆಗಟ್ಟುವ ಸೂತ್ರವನ್ನು ಕಂಡುಕೊಳ್ಳಿ. ಲ ಮನಸ್ಸು ಹೇಳಿದಂತೆ ಕೇಳದೇ ಸಮಾಧಾನದಿಂದ ಇರಿ. ನಿಮಗೆ ಅವಶ್ಯಕತೆ ಇರುವ ಮಾಹಿತಿಯನ್ನು ಸರಿಯಾದ ಕಡೆಯಿಂದ ಪಡೆದುಕೊಳ್ಳಿ. ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ತಾಯಿಯ ಪ್ರೀತಿಯು ನಿಮಗೆ ಅಪರೂಪವೆನಿಸುವಂತೆ ಆಗುವುದು.‌ ನಿಮ್ಮ ಸ್ವಭಾವವನ್ನು ಬಿಟ್ಟು ಎಲ್ಲರ ಜೊತೆ ಹೊಂದಾಣಿಕೆಯಿಂದ ಇರುವಿರಿ.

ತಾಜಾ ಸುದ್ದಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು