Astrology: ರಾಶಿ ಭವಿಷ್ಯ: ಇಂದು ಸಾಲ ಮಾಡುವ ಸ್ಥಿತಿ ಎದುರಾಗಬಹುದು
ಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜೂ.21 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ(ಜೂನ್. 21) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಶುಭ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:58 ರಿಂದ 12:35ರ ವರೆಗೆ, ಯಮಘಂಡ ಕಾಲ 15:49ರಿಂದ 17:26ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:43ರಿಂದ ಬೆಳಗ್ಗೆ 09:20ರ ವರೆಗೆ.
ಸಿಂಹ ರಾಶಿ :ಇಂದು ಅನಿರೀಕ್ಷಿತ ಬಂಧುಗಳ ಆಗಮನದಿಂದ ಯೋಜಿತವಾದ ಕಾರ್ಯಗಳನ್ನು ಬದಲಿಸಬೇಕಾಗುವುದು. ಕೈಗೆ ಸಿಕ್ಕ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತೆ ಆಗುವುದು. ನಿಮ್ಮ ಕೆಲಸದ ಬಗ್ಗೆ ನಿಮ್ಮ ಗಮನವಿರಲಿ. ಇನ್ನೊಬ್ಬರ ಕುರಿತು ಟೀಕೆ ಮಾಡುವುದನ್ನು ನಿಲ್ಲಿಸಿ. ಅಶ್ಲೀಷಪದಗಳನ್ನು ಬಳಸಿ ಮನೆಯಲ್ಲಿ ಬೈಗುಳ ತಿನ್ನುವಿರಿ. ಹೊಸ ಆದಾಯದ ಮೂಲವನ್ನು ಕಂಡುಕೊಳ್ಳುವಿರಿ. ಕಛೇರಿಯ ಹಾಗೂ ಮನೆಯ ಕೆಲಸವನ್ನು ನಿಭಾಯಿಸುವುದು ನಿಮಗೆ ಕಷ್ಟವೇ. ಆದರೂ ಅನಿವಾರ್ಯವಾಗಿರುತ್ತದೆ. ಉದಾಸೀನದಿಂದ ಅವಕಾಶದಿಂದ ವಂಚಿತರಾಗುವಿರಿ. ಕಾರ್ಯಕ್ಕಾಗಿ ಇಂದಿನ ಓಡಾಟವು ವ್ಯರ್ಥವೇ ಸರಿ. ನಿನ್ನೆಯ ಘಟನೆಯನ್ನು ನೆನಪಿಸಿಕೊಳ್ಳದೇ ಕಾರ್ಯಪ್ರವೃತ್ತರಾಗಿ. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು.
ಕನ್ಯಾ ರಾಶಿ :ನೀವು ಇಂದು ಯಾವುದಾದರೂ ಸತ್ಕಾರ್ಯದಲ್ಲಿ ಜೋಡಿಸಿಕೊಳ್ಳುವಿರಿ. ಸಾಲವನ್ನು ಮಾಡುವ ಸ್ಥಿತಿಯು ಅನಿರೀಕ್ಷಿತವಾಗಿ ಎದುರಾಗಬಹುದು. ವ್ಯರ್ಥವಾದ ಸುತ್ತಾಟವು ನಿಮಗೆ ಬೇಸರ ತರಿಸಬಹುದು. ಇಷ್ಟು ವರ್ಷದ ಪರಿಶ್ರಮವು ಇಂದು ವ್ಯರ್ಥವಾಗುವುದು. ವಿಶೇಷವಾಗಿ ವಿದ್ಯಾರ್ಥಿಗಳು ಈ ವಿಚಾರದಲ್ಲಿ ಹತಾಶೆಗೊಳ್ಳುವರು. ಭವಿಷ್ಯಕ್ಕೆ ಹಣವನ್ನು ಹೂಡುವ ಮನಸ್ಸಿದ್ದರೂ ಹಣದ ಕೊರತೆ ಇರಲಿದೆ. ಸ್ನೇಹಿತರ ಜೊತೆ ಭೋಜನಕೂಟ ಏರ್ಪಾಡಾಗಲಿದೆ. ನಿಮ್ಮ ಕಲ್ಮಶ ಮನಸನ್ನು ಯಾರಿಗೂ ತೋರಿಬೇಡಿ. ನಿಮ್ಮ ಬಗ್ಗೆ ಇರುವ ಭಾವನೆ ಬದಲಾಗುವುದು. ಪ್ರೇಯಸಿಯನ್ನು ಕಾಣದೇ ಬೇಸರಿಸುವಿರಿ. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳುವುದು ಉತ್ತಮ. ಬೇಡವಾದುದರ ಬಗ್ಗೆ ಆಸೆ ಬೇಡ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು.
ತುಲಾ ರಾಶಿ :ನಿಮ್ಮ ಪ್ರಯತ್ನವು ಹೇಗೇ ಇದ್ದರೂ ದೈವದ ಯೋಜನೆ ಬೇರೆಯೇ ಇರುತ್ತದೆ. ದುಃಖಿಸದೇ ಧೈರ್ಯದಿಂದ ಮುಂದಿನ ಕಾರ್ಯದ ಕಡೆ ಗಮನವಿರಲಿ. ಉನ್ನತ ಅಧಿಕಾರಕ್ಕೆ ಹೋಗುವ ಸಂಭವಿದ್ದರೂ ಹಿತಶತ್ರುಗಳ ಪಿತೂರಿಯಿಂದ ಅಥವಾ ಹಿಂದೆಂದೋ ಆಡಿದ ಮಾತಿನ್ನೇ ಇಟ್ಟುಕೊಂಡು ನಿಮಗೆ ಹುದ್ದೆಯನ್ನು ಕೊಡದೇಹೋಗಬಹುದು. ಯಾರನ್ನೂ ನಿಯಂತ್ರಿಸಲು ಹೋಗುವುದು ಬೇಡ. ಕೈಗೆ ಸಿಗಲಾರರು. ನೀವು ಬೀಳಲೆಂದೇ ಸ್ತ್ರೀಯೋರ್ವಳು ದೊಡ್ಡ ಕಂದಕವನ್ನು ಕೊರೆದಿರುವಳು. ಹೇಳಬೇಕಾದುದನ್ನು ನೇರವಾಗಿ ಸಂಕ್ಷೇಪವಾಗಿ ಹೇಳಿ. ಸಿಟ್ಟು ಬರುತ್ತದೆ ಎಂದು ಗೊತ್ತಿದ್ದರೂ ಅದನ್ನು ನಿಗ್ರಹಿಸಲು ಶ್ರಮವಹಿಸದೇ ಇರುವುದು ವಿಷಾದಕರ ಸಂಗತಿಯಾಗುವುದು. ಸ್ನೇಹಿತರ ನಡುವೆ ಸೈದ್ಧಾಂತಿಕ ಭಿನ್ನತೆ ಬರುವುದು. ಸಂಗಾತಿಯಿಂದ ಧನಸಹಾಯವನ್ನು ಪಡೆಯುವಿರಿ. ಉದ್ಯೋಗವನ್ನು ಬಿಡುವ ಆಲೋಚನೆ ಇದ್ದು, ಮನೆಯ ಸ್ಥಿತಿಯನ್ನು ಕಂಡು ಈ ತೀರ್ಮಾನಕ್ಕೆ ಬನ್ನಿ.
ವೃಶ್ಚಿಕ ರಾಶಿ :ನಿಮ್ಮ ಅಂತರಂಗದ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಯೋಚಿಸುವಿರಿ. ಮನೆಯಲ್ಲಿ ನಡೆಯುವ ಕಲಹದಿಂದ ನೀವು ಬೇಸರಗೊಳ್ಳಬಹುದು. ನಿಮ್ಮ ಮಾತನ್ನೇ ಎಲ್ಲರೂ ಪಾಲಿಸಬೇಕು ಎನ್ನುವ ನಿಮ್ಮ ಧೋರಣೆಯನ್ನು ಬದಲಿಸಿಕೊಳ್ಳಿ. ಅನಿವಾರ್ಯದ ಪ್ರಯಾಣವು ನಿಮ್ಮನ್ನು ಹೈರಾಣ ಮಾಡುವುದು. ಆರ್ಥಿಕವಾದ ಹೂಡಿಕೆಯತ್ತ ನಿಮ್ಮ ಗಮನ ಹರಿಸುವಿರಿ. ಗೃಹನಿರ್ಮಾಣ ಯೋಜನೆಯನ್ನು ಮನೆಯವರ ಜೊತೆ ಸೇರಿ ಸಿದ್ಧಪಡಿಸುವಿರಿ. ನಿಮ್ಮ ಕುಟುಂಬ ಸದಸ್ಯರಿಗೆ ಸಮಯ ನೀಡಿ. ಏಕಾಗ್ರತೆಯಿಂದ ಕೆಲಸ ಮಾಡಿದರೆ ಅನಾಯಾಸವಾಗಿ ಗುರಿಯನ್ನು ತಲುಪಬಹುದು. ಆಯ್ಕೆಗಳ ವಿಚಾರದಲ್ಲಿ ನೀವು ಹಿಂದುಳಿಯಬಹುದು. ಲಾಭಾಕ್ಕಾಗಿ ವ್ಯಾಪಾರದಲ್ಲಿ ಹೊಸದಾದ ಆಕರ್ಷಕ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಮಕ್ಕಳ ಜೊತೆ ಚಿಂತೆಯನ್ನೆಲ್ಲ ಬಿಟ್ಟು ಸಂತೋಷದಿಂದ ಕಾಲವನ್ನು ಕಳೆಯುವಿರಿ.
Published On - 12:30 am, Fri, 21 June 24