ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಭಾನುವಾರ (ಜೂನ್. 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಬ್ರಹ್ಮ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಸಂಜೆ 05:26 ರಿಂದ 07:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:35 ರಿಂದ 02:12ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:49 ರಿಂದ ಸಂಜೆ 05:26ರ ವರೆಗೆ.
ಮೇಷ ರಾಶಿ: ನಿಮ್ಮಲ್ಲಿರುವ ಆರೋಗ್ಯವೇ ನಿಮ್ಮ ದೊಡ್ಡ ಸಂಪತ್ತು. ಅದನ್ನು ಹಾಳು ಮಾಡಿಕೊಂಡು ಕಷ್ಟಪಡಬೇಡಿ. ಸಾಮಾಜಿಕವಾಗಿ ಮನ್ನಣೆ ಸಿಗುವ ದಿನ. ಇಂದು ನಿಮಗೆ ಹಣದ ಅಗತ್ಯತೆ ತುಂಬ ಇದ್ದು ಇದಕ್ಕೆ ತಾಯಿಯಿಂದ ಸಹಾಯ ಸಿಗಬಹುದು. ನೀವು ಆಯ್ಕೆ ಮಾಡಿಕೊಂಡ ವೃತ್ತಿಯ ಬಗ್ಗೆ ಸಂತೋಷವಿರುತ್ತದೆ. ವಾಹನ ಖರೀದಿಗೆ ನೀವು ಮನಸ್ಸು ಮಾಡುವಿರಿ. ನಿಮ್ಮ ಸ್ವಂತ ವಿವೇಚನೆಯಿಂದ ಕೆಲವೊಂದು ಕಲಹಗಳನ್ನು ನಿವಾರಣೆ ಮಾಡಿಕೊಳ್ಳುವಿರಿ. ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭವಿರುತ್ತದೆ. ಸಂಗಾತಿಯು ನಿಮಗೆ ಅನುಕೂಲಳಾಗಿರುವಳು. ಎಂತಹ ಚತುರನೂ ಮುಗ್ಗರಿಸಿ ಬೀಳಬೇಕಾಗುವುದು. ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ತಂತ್ರಜ್ಞಾನವನ್ನು ನೀವು ಅತಿಯಾಗಿ ಬಳಸುವಿರಿ. ನಿಮ್ಮದಾದ ಕೆಲವು ಸಿದ್ಧಾಂತಗಳನ್ನು ನೀವು ಬಿಡಲಾರಿರಿ.
ವೃಷಭ ರಾಶಿ: ಇಂದು ನೀವು ಸಾಲಗಾರರ ಕಾಟದಿಂದ ನೀವು ಮುಕ್ತರಾಗುವಿರಿ. ಅನಿರೀಕ್ಷಿತ ಧನಲಾಭವು ನಿಮ್ಮ ನಿಶ್ಚಿಂತೆಗೆ ಕಾರಣವಾಗಲಿದೆ. ದೀರ್ಘಪ್ರಯಾಣವನ್ನು ಇಚ್ಛಿಸುವ ನೀವು ಆರೋಗ್ಯದ ಮೇಲೂ ಗಮನವಿರಿಕೊಳ್ಳಿ. ಎಂದಿಗಿಂತ ಇಂದು ವ್ಯಾಪಾರದಲ್ಲಿ ವೃದ್ಧಿ ಇರಲಿದೆ. ಉದ್ಯೋಗದ ಸ್ಥಾನದಲ್ಲಿ ಒತ್ತಡವು ಹೆಚ್ಚಾಗಲಿ. ಮಾಧ್ಯಮಗಳಲ್ಲಿ ಕೆಲಸ ಮಾಡುವವರು ಬಹಳ ಒತ್ತಡದಲ್ಲಿ ಇರುವರು. ಎಲ್ಲದಕ್ಕೂ ಗ್ರಹ ಚಾರ ಎಂದು ಮೂದಲಿಸುವುದು ಬೇಡ. ನಿಮ್ಮ ಪ್ರಯತ್ನದಲ್ಲಿ ಲೋಪವು ಬಾರದಂತೆ ನಿರ್ವಹಿಸಿ. ಧಾವಂತದಲ್ಲಿ ಮೈ ಮರೆವು ಸಹಜ. ಎಚ್ಚರಿಕೆಯಲ್ಲಿ ನಿಮ್ಮ ನಡೆ ಇರಲಿ. ಸಣ್ಣ ವಿಚಾರಕ್ಕೆ ಪತ್ನಿಯ ಜೊತೆ ವಾಗ್ವಾದ ಬೇಡ. ಏನೇ ಹೇಳಿದರೂ ಕೇಳಿಸಿಕೊಂಡು ಬನ್ನಿ. ಕುಟುಂಬವು ನಿಮಗೆ ಕೊಡುವ ಕಿಮ್ಮತ್ತು ಕಡಿಮೆ ಆಗಿದೆ ಎಂದು ಅನ್ನಿಸುವುದು. ಸಂಗಾತಿಯಿಂದ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ.
ಮಿಥುನ ರಾಶಿ: ನಿಮ್ಮಲ್ಲಿರವ ದುರ್ಗುಣಗಳು ನಿಮಗೆ ಅರ್ಥವಾಗಿ ಅವುಗಳನ್ನು ಸರಿಮಾಡಿಕೊಳ್ಳುವಿರಿ. ಸಾಲ ಕೊಟ್ಟವರು ಕಟುವಾಗಿ ಮಾತನಾಡಬಹುದು. ಇಂದು ನೀವು ಅನಗತ್ಯ ವಿಷಯಗಳ ಬಗ್ಗೆ ಚರ್ಚೆ ಮಾಡಬೇಡಿ. ಸುಮ್ಮನೇ ಕಾಲಹರಣ ಮಾಡುವ ಬದಲು ಉಪಯುಕ್ತ ಕೆಲಸವನ್ನು ಮಾಡಲು ಆಲೋಚಿಸಿ. ಕರ್ತವ್ಯವವನ್ನು ಬಿಡದೇ ಮಾಡಿ. ಮಕ್ಕಳು ದುರಭ್ಯಾಸಗಳಿಗೆ ಬಲಿಯಾಗಬಹುದು. ನಿಮಗೆ ಬಂಧುಗಳಿಂದ ಹೆಚ್ಚಿನ ಗೌರವ ದೊರೆಯುವ ಸಾಧ್ಯತೆ ಇದೆ. ರಾಜಕೀಯ ವ್ಯಕ್ತಿಗಳ ಸಹವಾಸ ಮಾಡುವಿರಿ. ಗಳಿಸುವುದನ್ನು ಪ್ರಾಮಾಣಿಕವಾಗಿ ಗಳಿಸಿ. ಆಹಾರದಿಂದ ಆರೋಗ್ಯವು ಕೆಡಲಿದೆ. ವೇತನವು ಹೆಚ್ಚಾಗುವ ಸಾಧ್ಯತೆ ಇದೆ. ತಾಯಿಗೆ ಅಮೂಲ್ಯವಾದ ಉಡುಗೊರೆಯನ್ನು ಕೊಡುವಿರಿ. ನಿಮ್ಮ ಬಗ್ಗೆ ನೀವು ಹೇಳಿಕೊಳ್ಳದೇ ಇರುವ ಹಲವು ವಿಚಾರಗಳು ಸ್ನೇಹಿತರು ಹೇಳುವರು.
ಕರ್ಕ ರಾಶಿ: ಇಂದು ಹೆಚ್ವಿನ ಸಮಯವನ್ನು ಆಟ, ಓಟಗಳಲ್ಲಿ ಕಳೆಯುವಿರಿ. ಮಕ್ಕಳು ನಿಮ್ಮನ್ನು ಬಹಳ ಹಚ್ಚಿಕೊಳ್ಳುತ್ತಾರೆ. ಆತುರದ ನಿರ್ಧಾರಕ್ಕೆ ಹೋಗಬೇಡಿ. ಸಮಯಕ್ಕಾಗಿ ಕಾಯಿರಿ. ಎಲ್ಲವನ್ನೂ ಕಾಲವೇ ತಿಳಿಸುತ್ತದೆ. ಅದಕ್ಕೋಸ್ಕರ ನಿಮ್ಮ ಶ್ರಮವನ್ನು ವ್ಯರ್ಥಮಾಡಿಕೊಳ್ಳಬೇಡಿ. ಇಂದು ದೈಹಿಕವಾಗಿ ಹಾಗೂ ಮಾನಸಿಕವಾಗಿ ನೋವನ್ನು ಅನುಭವಿಸುವಿರಿ. ಕೃಷಿಕರು ಬೆಳೆಗಳಿಗೆ ಉತ್ತಮ ಬೆಲೆ ದೊರೆತ ಕಾರಣ ಸಂತೋಷಪಡಬಹುದು. ಇಂದು ನೆಮ್ಮದಿಯಿಂದ ಮನೆಯಲ್ಲಿಯೇ ಇದ್ದು ಕಾಲಕಳೆಯುವಿರಿ. ನಿರಂತರ ಸುತ್ತಾಟದಿಂದ ಬೇಸತ್ತ ನಿಮಗೆ ಇಂದು ಹಾಯೆನಿಸಬಹುದು. ನಿಮ್ಮವರ ಕಷ್ಟಗಳ ಮುಂದೆ ನಿಮ್ಮ ಕಷ್ಟ ಅಲದಪವೆನಿಸಬಹುದು. ನಿಮ್ಮ ಗುಪ್ತ ಆಲೋಚನೆಗಳು ಬಯಲಾಗಬಹುದು. ಬಂಧುಗಳ ಆಗಮನವು ನಿಮಗೆ ಸಂತೋಷವನ್ನು ಕೊಡುವುದು. ತಾಯಿಯ ಮೇಲೆ ನಿಮ್ಮ ಕೋಪವನ್ನು ತೋರಿಸುವಿರಿ.