Horoscope Today June 24, 2024: ಸೋಮವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?

2024 ಜೂನ್ 24 ದಿನ ಭವಿಷ್ಯ: ಸೋಮವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today June 24, 2024: ಸೋಮವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?
ಸೋಮವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jun 23, 2024 | 8:46 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸೋಮವಾರ (ಜೂನ್ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಐಂದ್ರ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:44 ರಿಂದ 09:21ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:58 ರಿಂದ 12:35ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:12 ರಿಂದ 03:49ರ ವರೆಗೆ.

ಮೇಷ ರಾಶಿ: ಹಣಕಾಸನ್ನು ನೋಡಿಕೊಳ್ಳುವವರು ಪಾರದರ್ಶಕತೆಯನ್ನು ಇಟ್ಟುಕೊಳ್ಳಬೇಕಾಗುವುದು. ನಿಮ್ಮಿಂದ ಕುಟುಂಬಕ್ಕೆ ಉತ್ತಮವಾದ ಹೆಸರು ಬರಲಿದೆ. ನೀವೇ ಆಯ್ಕೆ‌ ಮಾಡಿಕೊಂಡ ಉದ್ಯೋಗದ ಸ್ಥಳದಿಂದ ನಿಮಗೆ ತೊಂದರೆಯಾಗಿ ಕೆಲಸವನ್ನು ಬಿಡಲಿದಗದೀರಿ. ನಿಮ್ಮನ್ನು ನೆರೆಹೊರೆಯವರು ಆಡಿಕೊಂಡಾರು. ಆಪ್ತರು ಸಕಾರಣವಾಗಿ ನಿಮ್ಮಿಂದ ದೂರಾಗುವರು. ಅದು ಕಷ್ಟವಾದರೆ ಎಲ್ಲಿಗಾದರೂ ಹೋಗಿಬನ್ನಿ. ಭೂಮಿಯ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದ್ದರೂ ಇನ್ನೊಬ್ಬರಿಗೆ ಕೊಟ್ಟೇ ಖಾಲಿಯಾಗುವುದು. ಆಪ್ತರೆನಿಸಿಕೊಂಡವರೆ ವಿಶ್ವಾಸವಿಲ್ಲದೇ ಇದ್ದಿದ್ದು, ಇನ್ಮು ನಂಬಿಕೆ‌‌ ಬರಲಿದೆ. ಯಾರನ್ನೂ ಗೆಲ್ಲುವೆನು ಎಂಬ ಹುಂಬುತನ ಬೇಡ. ಸಿಟ್ಟಗೊಂಡು ಮಾತನಾಡಬೇಕಾದ ಅವಶ್ಯಕತೆ ಇಲ್ಲ. ಸಮಾಧಾನಚಿತ್ತರಾಗಿ ಮಾತನಾಡಿ. ಹೂಡಿಕೆಯ ವಿಚಾರದಲ್ಲಿ ಯಾರಾದರೂ ದಾರಿಯನ್ನು ತಪ್ಪಿಸಿಯಾರು.

ವೃಷಭ ರಾಶಿ: ಇಂದು ಚರಾಸ್ತಿಯ ವಿಚಾರಕ್ಕೆ ಸಹೋದರರ ನಡುವೆ ವಾಗ್ವಾದ ನಡೆಯಬಹುದು. ಇಂದು ಯಾವುದೇ ಪ್ಲಾನ್ಇಲ್ಲದೇ ಮಾಡಿದ ವ್ಯವಹಾರಗಳಲ್ಲಿ ಲಾಭವು ಅಧಿಕವಿಲ್ಲ. ಓದಿನಲ್ಲಿ ಆಸಕ್ತಿ ಕಡಿಮೆ‌ ಇರುವುದು ಸ್ಪಷ್ಟವಾಗಿ ಕಾಣುವುದು. ಸ್ತ್ರೀ ಸಂಬಂಧದಿಂದ ದ್ವೇಷವನ್ನು ಕಟ್ಟಿಕೊಳ್ಳುವಿರಿ. ದೈಹಿಕ ಶ್ರಮದಿಂದ ಕೆಲಸ ಮಾಡುವರವರು ಸ್ವಲ್ಪ ವಿಶ್ರಾಂತಿ ಪಡೆಯುವಿರಿ. ಶಕ್ತಿ ಮೀರಿ ಏನನ್ನೂ ಮಾಡುವುದು ಬೇಡ. ರಾಜಕೀಯ ವ್ಯಕ್ತಿಗಳು ಎಂದಿಗಿಂತಲೂ ಹೆಚ್ಚು ವಾಗ್ವಾದವನ್ನು ಮಾಡುವರು. ಯಾರನ್ನೋ ಗಾಬರಿಗೊಳಿಸವುದು ಸರಿಯಲ್ಲ. ಬೇಕೆಂದೇ ಸಮಸ್ಯೆಗಳನ್ನು ನಿಮ್ಮ ಬುಡಕ್ಕೆ ಎಳೆದುಕೊಳ್ಳಬೇಡಿ. ಹೇಳಬೇಕಾದ‌ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ.‌ ಆದುದರ ಬಗ್ಗೆ ನಿಮಗೆ ಯಾವುದೇ ಬೇಸರವನ್ನು ಮಾಡಿಕೊಳ್ಳುವುದಿಲ್ಲ. ಬೇರೆಯವರನ್ನು ಗೊಂದಲಕ್ಕೆ ಸಿಕ್ಕಿ ಹಾಕಿಸುವುದು ಬೇಡ.

ಮಿಥುನ ರಾಶಿ: ಇಂದು ನಿರುಪಯೋಗಿ ವಸ್ತುಗಳನ್ನು ಅನ್ಯರಿಗೆ ಕೊಡುವಿರಿ. ಎಲ್ಲವನ್ನೂ ಮಾತಿನಿಂದಲೇ ಬಗೆಹರಿಸಲಾಗದು. ನಿಶ್ಚಿತ ಆದಾಯವು ನಂಬಿ ಸಾಲವನ್ನು ಪಡೆಯುವಿರಿ.‌ ಇಂದಿನ‌ ಪ್ರಯಾಣದ‌ ಪ್ರಯಾಸವನ್ನು ನೂತನ ವಾಹನವನ್ನು ಖರೀದಿಸುವ ಯೋಚನೆ ಮಾಡುವಿರಿ. ನಿಮ್ಮ ಇಂದಿನ ಮಾತು ಕೇಳಿ ನೀವೊಬ್ಬ ವಾಚಾಳಿ ಎಂಬ ಬಿರುದನ್ನು ಪಡೆಯುವಿರಿ. ಸರ್ಕಾರದಿಂದ‌ ಬರುವ ಹಣವು ವಿಳಂಬವಾಗಿ ಬರಲಿದೆ. ವಾಹನದಲ್ಲಿ ಸುತ್ತಾಡುವ ಬಯಕೆ ಇರಲಿದೆ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸುವ ಸ್ಥಿತಿ‌‌ವಬಂದಾಗ ಒಮ್ಮೆ‌ ಪರಿಶೀಲಿಸಿ ವಸ್ತುಗಳನ್ನು ತರುವಿರಿ. ಹೊಸ ಯೋಜನೆಗಳೂ ಅವರಿಗೆ ಸಿಗಲಿದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು. ಅಯಾಚಿತ ಸಹಾಯವನ್ನು ನೀವು ತಿರಸ್ಕರಿಸುವಿರಿ.

ಕಟಕ ರಾಶಿ: ಅವಿವಾಹಿತರಿಗೆ ಇಂದು ವಿವಾಹಕ್ಕೆ ಯೋಗ್ಯವಾದ ಮಾತುಗಳು ಕೇಳಿಸಬಹುದು. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ಇಂದು ಪತಿಯ ವರ್ತನೆಯು ಬದಲಾದಂತೆ ತೋರುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಓದಲು ಸಮಯವಿಲ್ಲದೇ, ಅನ್ಯಮನಸ್ಕರಾದಕಾರಣ ಹಿನ್ನಡೆಯು ಆಗಬಹುದು. ಸುಮ್ಮನೇ ಎಲ್ಲರನ್ನು ಅನುಮಾನದ ಕಣ್ಣಿನಿಂದ ನೋಡಿ, ಮನಸ್ಸನ್ನು ಹಾಳುಮಾಡಿಕೊಳ್ಳುವಿರಿ. ತೈಲದ ವ್ಯಾಪಾರದಲ್ಲಿ ಅಭಿವೃದ್ಧಿಯು ಕುಂಠಿತವಾಗಿರುತ್ತದೆ. ಸ್ಥಿರಾಸ್ತಿಯನ್ನು ಅಗ್ಗದ ಬೆಲೆಗೆ ಮಾರಾಟಕ್ಕೆ ಇಟ್ಟರೂ ಖರೀದಿಯಾಗದೇ ಇರುವುದು ಆತಂಕವನ್ನು ತರಿಸುವುದು. ಕಂಡಿದ್ದನ್ನು ಕಂಡಂತೆ ಹೇಳುವುದು ಸರಿಯೇ. ಸ್ಪರ್ಧೆಗಾಗಿ ನಡೆಸಿದ ನಿಮ್ಮ ಶ್ರಮವು ವ್ಯರ್ಥವಾದೀತು. ನಿಮ್ಮ‌ ಮೇಲಿರುವ ಭಾವನೆಯು ದೂರಾಗಬಹುದು. ಅಮೂಲ್ಯ ಸಮಯವನ್ನು ಆಲಸ್ಯದಿಂದ ಕಳೆಯುವಿರಿ. ಹಿರಿಯರಲ್ಲಿ ವಿನಮ್ರತೆ ಇರಲಿ.

ಸಿಂಹ ರಾಶಿ: ಇಂದು ಮನೆಯನ್ನು ನೋಡಿಕೊಳ್ಳುವ ಹೊಣೆ ನಿಮಗೆ ಸಿಗಲಿದೆ. ತುಂಬಾ ದಿನಗಳಿಂದ ಕಾಡುವ ಸಮಸ್ಯೆಗೆ ಇಂದು ಪರಿಹಾರ ದೊರಕಲಿದೆ. ಅಪವಾದಗಳು ಬರಬಹುದು.‌ ನೀವು ದೊಡ್ಡ ವ್ಯಕ್ತಿಗಳ ಸಹವಾಸವನ್ನು ಮಾಡಿ ಬ್ಯುಸಿನೆಸ್ ಮಾಡಲು ಅವರ ಜೊತೆ ಚರ್ಚಿಸುವಿರಿ. ನಿಮ್ಮ ನಡೆ ಅನುಮಾನವನ್ನು ತರಿಸಬಹುದು. ಕಛೇರಿಯ ವ್ಯವಹಾರವು ಸಾಕೆನಿಸುವಷ್ಟು ಒತ್ತಡ ಬರಬಹುದು. ಭಾವೋದ್ವೇಗದಲ್ಲಿ ಏನನ್ನಾದರೂ ಹೇಳುವಿರಿ. ಸಾಲ ಮಾಡುವ ಸಂದರ್ಭವು ಬಂದರೆ ನಿಮಗೆ ಬೇಕಾದಷ್ಟು ಮಾತ್ರ ಪಡೆಸುಕೊಂಡು ತೀರಿಸಲು ಯತ್ನಿಸಿ. ಸಿಗುವಷ್ಟನ್ನೂ ಆಸೆಯಿಂದ ತೆಗೆದುಕೊಳ್ಳಬೇಡಿ. ಭವಿಷ್ಯತ್ತಿನಲ್ಲಿ ತೊಂದರೆಯಾದೀತು. ಸಂತಾನದ ವಿಚಾರದಲ್ಲಿ ಅಶಾಂತಿ ಮೂಡಬಹುದು. ನಿಮ್ಮವರೆಂದುಕೊಂಡವರು ನಿಮ್ಮವರಾಗದೇ ಇರಬಹುದು. ಅಪರಿಚಿತರ ನಡೆಯಿಂದ ಸಂದೇಹವು ಬರಲಿದೆ.

ಕನ್ಯಾ ರಾಶಿ: ಇಂದು ನಿಮ್ಮ ಉದ್ಯಮದಲ್ಲಿ ಆದ ನಷ್ಟದಿಂದ ಮನಸಿನೊಳಗೆ ಸಂಕಟಪಡುವಿರಿ. ಧಾರ್ಮಿಕ ಕಾರ್ಯಗಳನ್ನು ಮಾಡುವವರಿಗೆ ಇಂದು ಹೆಚ್ಚಿನ ಲಾಭವನ್ನು ನಿರೀಕ್ಷಿತ ಲಾಭವನ್ನು ಕಾಣಬಹುದಾಗಿದೆ. ಕಾರಣಾಂತರಗಳಿಂದ ಧನವ್ಯಯವಾದೀತು. ವಿದೇಶದಿಂದ ಹಣದ ವ್ಯವಹಾರವನ್ನು ಇಟ್ಟುಕೊಂಡರೆ ಕಷ್ಟವಾದೀತು. ನಿಮ್ಮ ಸ್ನೇಹಿತರ ನಡುವೆ ಬಾಂಧವದಲ್ಯವು ಬಲವಾಗಲಿದೆ. ಪರೀಕ್ಷೆಯನ್ನು ಎದುರಿಸಲು ಸಕಲರೀತಿಯಲ್ಲಿಯೂ ಸಜ್ಜಾಗಲಿದ್ದೀರಿ. ನೀವು ಮಾಡುವ ಕಾರ್ಯದಲ್ಲಿ ಪ್ರಯತ್ನವು ಪೂರ್ಣವಿರಲಿ. ಫಲದ ಅಪೇಕ್ಷೆಯನ್ನು ಬಿಡುವುದು ಉತ್ತಮ. ಇನ್ನೊಬ್ಬರ ವಿಶ್ವಾಸ ಗಳಿಸಿ, ಅವರಿಂದ ಕೆಲಸವನ್ನು ಪಡೆಯುವಿರಿ. ಕುಟುಂಬದಿಂದ‌ ನಿಮಗೆ ಬೇಕಾದ ಸಹಕಾರ ಸಿಗಲಿದೆ. ಮಕ್ಕಳು ನಿಮ್ಮನ್ನು ಪ್ರೀತಿಸುವರು. ಅನಾರೋಗ್ಯದ ಕಾರಣ ಉತ್ಸಾಹದ ಯಾವ ಕಾರ್ಯವನ್ನೂ ಮಾಡಲಾಗದು. ಮಾಡುವ ಕಾರ್ಯದಲ್ಲಿ ನಂಬಿಕೆ ಇರಲಿ.

ತುಲಾ ರಾಶಿ: ನಿಮ್ಮ ಕಾರ್ಯದಕ್ಷತೆಗೆ ಜವಾಬ್ದಾರಿಗಳು ಬದಲಾಗಲಿವೆ. ಮಾನಸಿಕ ತೊಂದರೆಯನ್ನು ಅನುಭವಿಸುವಿರಿ. ಅವಕಾಶಗಳು ನಿಮ್ಮ ಕೈತಪ್ಪುವ ಸಾಧ್ಯತೆ ಇದೆ. ಇಷ್ಟು ದಿನ ಹಿಡಿದಿಟ್ಟುಕೊಂಡ ಕೋಪವು ಸ್ಫೋಟವಾಗಿ ಮನೆಯು ರಣಾಂಗಣದಂತೆ ಕಾಣಬಹುದು. ನೀವು ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಚಿಂತಿಸಿ. ಎಲ್ಲದಕ್ಕೂ ಕಾರಣ ಬೇಕೆಂದಿಲ್ಲ. ಖುಷಿ ಪಡಿ ಸಾಕು. ನಿಮ್ಮ ಪ್ರೀತಿಪಾತ್ರರು ನಿಮ್ಮಿಂದ ದೂರವಾಗುವರು. ನಿಮ್ಮ ಖ್ಯಾತಿ ಮತ್ತು ಸ್ಥಾನಮಾನಗಳು ಹೆಚ್ಚಾಗಬಹುದು. ನೀವು ಬದಲಾಗಬೇಕು ಎಂದುಕೊಂಡರೂ ಸ್ನೇಹಿತರ ಬಳಗ ನಿಮ್ಮನ್ನು ಸುಮ್ಮನೆ ಬಿಡದು.‌ ತಂದೆ-ತಾಯಿಗಳು ಮಕ್ಕಳ‌ ಮೇಲೆ ಕಣ್ಣಿಡುವುದು ಒಳ್ಳೆಯದು. ಮಕ್ಕಳ‌ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ. ಅವಶ್ಯಕತೆಯನ್ನು ನೋಡಿ. ಪೂರ್ವಾಗ್ರಹದಿಂದ ನಿಮ್ಮ ಸತ್ಯವಾದ ಮಾತನ್ನು ನಂಬಲಾರರು.

ವೃಶ್ಚಿಕ ರಾಶಿ: ನಿಮಗೆ ಸಿಗುವ ಸಾಮಾಜಿಕವಾಗಿ ಮನ್ನಣೆಯು ಅಧಿಕ ಕಾರ್ಯವನ್ನು ಮಾಡುವಂತೆ ಮಾಡೀತು. ಬಂಗಾರದ ವ್ಯಾಪರಿಗಳಿಗೆ ಲಾಭವಾಗಲಿದೆ. ಮಾನಸಿಕ ನೆಮ್ಮದಿಯನ್ನು ಪಡೆದುಕೊಳ್ಳಲಿದ್ದೀರಿ. ಕುಟುಂಬದಿಂದ ಅಶುಭವಾದ ಸುದ್ದಿಯು ನಿಮಗೆ ತಿಳಿಯಲಿದೆ‌. ಇಂದು ರಾಜಕೀಯ ವ್ಯಕ್ತಿಗಳು ಹೆಚ್ಚು ಉತ್ಸಾಹದಿಂದ ತಮ್ಮ ಕಾರ್ಯದಲ್ಲಿ ತೊಡಗಿರುವರು. ವಿದೇಶದಲ್ಲಿರುವ ಮಕ್ಕಳಿಂದ ಬೇಸರದ ಸಂಗತಿಯನ್ನು ಕೇಳುವಿರಿ. ಕೆಲವನ್ನು ಕಳೆದುಕೊಂಡು ಸುಖಪಡುವುದೇ ಉತ್ತಮ. ಕುಟುಂಬದಲ್ಲಿ ಸಮೃದ್ಧಿ ಬೇಕಾದರೆ ಒಬ್ಬರೇ ತೀರ್ಮಾನಕ್ಕೆ ಬರಬೇಕು. ಎಲ್ಲರನ್ನೂ ಅನುಸರಿಸಿದರೆ ಕೆಲಸ ಕೆಡುವುದು. ಆಸ್ತಿಯ ಖರೀದಿಯ ವಿಚಾರಗಳನ್ನು ಆದಷ್ಟು ವೇಗವಾಗಿ ತೀರ್ಮಾನ ಮಾಡಿ ಮುಗಿಸಿಕೊಳ್ಳಿ. ದೇಹದಂಡನೆಗೆ ಸರಿಯಾದ ಮಾರ್ಗವನ್ನು ಅನುಸರಿಸಿ. ನಿಮ್ಮ‌ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸಿ ಪಡೆದುಕೊಳ್ಳುವಿರಿ.

ಧನು ರಾಶಿ: ಇಂದು ನಿಮ್ಮ ದಾಂಪತ್ಯದ ಬಿರುಕು ನ್ಯಾಯಾಲಯದ ಮೆಟ್ಟಿಲೇರಿಸಲೂಬಹುದು. ಆಸ್ತಿಯ ವಿಚಾರದಲ್ಲಿ ಕಲಹಗಳು ಉಂಟಾಗಬಹುದು. ನಿಮ್ಮ ಬಗ್ಗೆ ಅಪಪ್ರಚಾರಗಳು ಕೇಳಿ ಬರಬಹುದು. ಹಣಕಾಸಿನ ಅಧಿಕಾರಿಗಳು ನಿಮ್ಮ ಆದಾಯದ ಮೂವನ್ನು ವಿಚಾರಿಸಿಯಾರು. ಆಕರ್ಷಣೆಗೆ ಮನಸೋತು ದಾರಿ ಮೋಸ ಹೋಗಬಹುದು. ಆಸ್ತಿಯ ದಾಖಲೆಗಳನ್ನು ನೀವು ನೀಡಬೇಕಾದೀತು. ನಿಮ್ಮ ಗುರಿಯ ಕಡೆಗೆ ಹೆಚ್ಚಿನ ದೃಷ್ಟಿ ಇರಲಿ. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ದೂರದ ಊರಿನಲ್ಲಿ ಅವಕಾಶ ಸಿಕ್ಕರೂ ಹೋಗಲು ಆಗದ ಸ್ಥಿತಿ ಇರುವುದು. ಕೆಲಸದ ಸ್ಥಳದಲ್ಲಿ ನಿಮ್ಮ ವ್ಯವಸ್ಥಾಪಕರ ಜೊತೆ ಉತ್ತಮ ಹೊಂದಾಣಿಕೆಯನ್ನು ಇಟ್ಟುಕೊಂಡಿರುವಿರಿ. ವಂಚಿಸುವ ಯೋಚನೆ ಮಾಡಿದ್ದರೆ ಅದನ್ನು ಮರೆತುಬಿಡಿ. ಎಲ್ಲದಕ್ಕೂ ಯಾರನ್ನಾದರೂ ಕಾರಣವಾಗಿಸುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ.

ಮಕರ ರಾಶಿ: ನಿಮ್ಮ ಬೆನ್ನನ್ನೇ ನೀವು ತಟ್ಟಿಕೊಳ್ಳುವುದು ಔಚಿತ್ಯವಿಲ್ಲ. ಹಣದ ಪ್ರಾಮುಖ್ಯವನ್ನು ತಿಳಿದುಕೊಳ್ಳುವ ಸಮಯವಿಂದು. ನಿಮ್ಮ ವಿದ್ಯುದುಪಕರಣದಿಂದ ನಿಮಗೆ ನಷ್ಟವಾಗಲಿದೆ. ನಿಮ್ಮ ಶತ್ರುಗಳನ್ನು ನೀವು ಸಂಪೂರ್ಣವಾಗಿ ಸೋಲಿಸಿದ್ದೇನೆ ಎಂಬ ಭಾವನೆ ಇರಬಹುದು. ಆದರೆ ನಿಮ್ಮ ಉನ್ನತಿಯನ್ನು ಸಹಿಸದೇ ಮತ್ಯಾರೋ ಶತ್ರುಗಳಾಗುವರು. ಕೃಷಿ ಚಟುವಟಿಕೆಯಲ್ಲಿ ಹೆಚ್ಚು ಪಾಲ್ಗೊಳ್ಳುವಿರಿ. ನಿಮ್ಮ ತೀರ್ಮಾನಕ್ಕೆ ಇತರರ ಬೆಂಬಲವೂ ಸಿಕ್ಕಿ ನಿಮಗೆ ಬಲಬಂದಂತಾಗುವುದು. ಮಕ್ಕಳ ಕಾರಣದಿಂದ ನಿಮಗೆ ನೀವು ತಲೆ ತಗ್ಗಿಸುವಿರಿ. ಬುದ್ಧಿವಾದವನ್ನು ಮಕ್ಕಳಿಗೆ ಹೇಳುವಿರಿ. ಸಾಲಕೊಡುವಾಗ ವಿವೇಚನೆ ಇರಲಿ. ಅತಿಯಾದ ವಿನಯವು ನಿಮ್ಮ ಮೇಲೆ ಅನುಮಾನ‌ವು ಬರುವಂತೆ ಮಾಡುವುದು. ನಿಮ್ಮ ಇಂದಿನ ಸಮಯವನ್ನು ನೀವು ಸದುಪಯೋಗ ಮಾಡಿಕೊಳ್ಳಿ. ನಿಮ್ಮ ಖಾಸಗಿ ತನಕ್ಕೆ ತೊಂದರೆಯಾಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ನಿಮ್ಮ‌ ವಸ್ತುಗಳ ಮೇಲೆ ಅತಿಯಾದ ಮೋಹವು ಇರುವುದು.

ಕುಂಭ ರಾಶಿ: ಸಜ್ಜನರ ಭೇಟಿಯಾಗುವ ಸಾಧ್ಯತೆ ಇದೆ. ಆಪ್ತರ ಜೊತೆ ಉದ್ಯೋಗಕ್ಕೆ ಸಂಬಂಧಿಸಿದ ಸಮಾಲೋಚನೆಯನ್ನು ನಡೆಸುವಿರಿ. ನಿಮ್ಮ ಶತ್ರುಗಳು ನಿಮ್ಮನ್ನು ಸೋಲಿಸಲು ತಯಾರಾಗಿರುವರು. ನಿಮ್ಮ ಬಳಿ ಇರುವ ಕೆಲವು ವಸ್ತುಗಳನ್ನು ಇನ್ನೊಬ್ಬರಿಗೆ ನೀಡುವಿರಿ. ನೀವು ಮಕ್ಕಳ ವೃತ್ತಿಜೀವನದ ಬಗ್ಗೆ ಹೆಚ್ಚು ಆತಂಕಪಡಬೇಕಾದ ಅವಶ್ಯಕತೆ ಇರುವುದಿಲ್ಲ‌. ಮುಳುಗುತ್ತಿರುವವನಿಗೆ ಸಣ್ಣ ಹುಲ್ಲು ಕಡ್ಡಿಯೂ ಆಸರೆಯೇ. ಆತ್ಮವಿಶ್ವಾಸದಿಂದ ನಿಮಗೆ ಇನ್ನಷ್ಟು ಬಲ ಬರಲಿದೆ. ಪ್ರವಾಸದಿಂದ ನಿಮಗೆ ಆಯಾಸವಾಗಲಿದೆ. ಜೋಪಾನಮಾಡಿ ಇಟ್ಟುಕೊಳ್ಳಿ. ಸಾಧಿಸುವ ಛಲವಿದ್ದರೂ ಪರಿಸ್ಥಿತಿ ಅನುಕೂಲವಾಗಿ ಇರದು. ಸದಾ ನಿದ್ರೆ ಮಾಡುವ ಯೋಚನೆ ಇರಲಿದೆ. ನಿಮ್ಮ ಅಂದಾಜು ಮೀರಬಹುದು. ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಮಾರಾಟದ ವಿಷಯದಲ್ಲಿ ಹಿನ್ನಡೆಯಾಗಲಿದೆ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ನಿಮ್ಮನ್ನು ನೀವು ಬದಲಿಸಿಕೊಳ್ಳಬೇಕಾಗುವುದು.

ಮೀನ ರಾಶಿ: ಒತ್ತಡದ ನಡುವೆಯೂ ಕಾರ್ಯನಿರ್ವಹಣೆ ಮಾಡಿದ ಕೌಶಲಕ್ಕೆ ಪ್ರಂಶಸೆಗಳು ಸಿಗಲಿವೆ. ಹಣದ ಸಮಸ್ಯೆಗಳಿಂದ ಮುಕ್ತರಾಗುವಿರಿಸಿ. ಅನೇಕ ಅವಕಾಶಗಳು ನಿಮ್ಮನ್ನು ಅರಸಿ ಬರಲಿವೆ. ಇಂದು ವಿದ್ಯಾರ್ಥಿಗಳು ದೂರದ ಊರಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹೋಗಲು ಚಿಂತಿಸುವರು. ಕಛೇರಿಯಲ್ಲಿ ಅತಿಯಾದ ಕಾರ್ಯನಿಮಿತ್ತ ನಿಮ್ಮ ಮುಖ್ಯ ಕೆಲಸವನ್ನೇ ಮರಡಯುವಿರಿ. ವ್ಯಾಪಾರಸ್ಥರಿಗೆ ಖ್ಯಾತಿಯೂ ಹಣವೂ ಸಿಗಲಿದೆ. ನಿಮ್ಮ ಧಾರ್ಮಿಕ ಭಾವನೆಗಳಿಗೆ ತೊಂದರೆ ಕೊಡಬಹುದು. ಯಾರಾದರೂ ತೊಂದ ಹೊಸ ಯೋಜನೆಯ ಕೆಲಸವನ್ನು ನೀವು ಪ್ರಾರಂಭಿಸುವಿರಿ. ವೃತ್ತಿಜೀವನದಲ್ಲಿ ಮುಂದುವರಿಯಲು ನೂತನ ಅವಕಾಶಗಳು ನಿಮಗೆ ಸಿಗಲಿವೆ. ಜೀವನದ ಹಾದಿಯಲ್ಲಿ ಹೆಚ್ಚು ಏರಿಳಿತಗಳು ಇರದೇ ಆರಾಮಾಗಿ ಹೋಗುವಿರಿ. ಕೆಲಸವು ಶೀಘ್ರವಾಗಿ ಪೂರ್ಣಗೊಳಿಸಿಕೊಂಡು ನೀವು ಖುಷಿಪಡುವಿರಿ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ.

ಲೋಹಿತ ಹೆಬ್ಬಾರ್ – 8762924271 (what’s app only)

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ