AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಸಂಗಾತಿಯ ಜೊತೆ ದೂರದ ಊರಿಗೆ‌ ಪ್ರಯಾಣ ಮಾಡುವರು

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 25 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಸಂಗಾತಿಯ ಜೊತೆ ದೂರದ ಊರಿಗೆ‌ ಪ್ರಯಾಣ ಮಾಡುವರು
ಈ ರಾಶಿಯವರು ಸಂಗಾತಿಯ ಜೊತೆ ದೂರದ ಊರಿಗೆ‌ ಪ್ರಯಾಣ ಮಾಡುವರು
ಗಂಗಾಧರ​ ಬ. ಸಾಬೋಜಿ
|

Updated on: Jun 25, 2024 | 12:02 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜೂನ್. 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಶ್ರವಣಾ, ಯೋಗ: ವೈಧೃತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ 15:50 ರಿಂದ 17:27ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:21 ರಿಂದ 10:58ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:35 ರಿಂದ 14:13ರ ವರೆಗೆ.

ಮೇಷ ರಾಶಿ :ಇಂದು ನಿಮಗೆ ಗೊತ್ತಿಲ್ಲದೇ ಸುಕೃತವು ನಿಮ್ಮನ್ನು ಸೇರಿಸುವ ಸ್ಥಳಕ್ಕೆ ಸೇರಿಸುವುದು. ಕೆಲವೇ ಕೆಲವು ಮಿತ್ರರ ಬಳಗವನ್ನು ಹೊಂದಿರುವಿರಿ. ನಿಮಗೆ ಎಂದು ಯಾರ ಬಳಿಯೂ ಏನನ್ನೂ ಹೇಳಬೇಕು ಎಂದು ಅನ್ನಿಸದಿರಬಹುದು. ನಿಮ್ಮ ಬಗ್ಗೆ ಹಗುರವಾದ ಮಾತುಗಳು ಬರಬಹುದು. ಖಾಸಗಿ ಉದ್ಯೋಗದಲ್ಲಿ ಇದ್ದವರಿಗೆ ಮುಖ್ಯವಾದ ಅಧಿಕಾರ ಸಿಗಲಿದೆ. ವೈಯಕ್ತಿಕ ಜೀವನವನ್ನು ಕೆಲವರು ಅನುಸರಿಸಲು ಇಷಗಟಪಡಬಹುದು. ನೀವಂದಕೊಂಡಿದ್ದೇ ಸತ್ಯ ಎಂಬುದನ್ನು ಬಿಟ್ಟು ಸಂತೋಷದದಿಂದ‌ ಮಾತನಾಡಿ. ನಗುಮುಖವು ನಿಮ್ಮನ್ನು ಮತ್ತಷ್ಡು ಆಪ್ತವಾಗಿಸೀತು. ಪ್ರಾಮಾಣಿಕವಾದ‌ ಪ್ರಯತ್ನವು ಇರಲಿ. ಸುಲಭವಾದ ಕಾರ್ಯವನ್ನು ಮೊದಲು ಮಾಡಿ ಮುಗಿಸಿ. ಫಲವೂ ಉತ್ತಮವಾದುದೇ ಸಿಗುವುದು. ಹೆಚ್ಚಿನ ನೀರಿಕ್ಷೆಯನ್ನು ಮಾಡಿ ಕೊರಗಬೇಡಿ ಆನಂತರದ‌ ಜೀವನದಲ್ಲಿ. ನೀವು ಯಾರಿಂದಲೂ ಸಲಹೆಯನ್ನು ಪಡೆಯಲು ಇಷ್ಟಪಡುವುದಿಲ್ಲ.

ವೃಷಭ ರಾಶಿ :ಮನಸ್ಸಿನ ನಿಯಂತ್ರಣದಿಂದ ಇಂದಿನ ಎಲ್ಲ ಒತ್ತಡವನ್ನೂ ಸರಿಮಾಡಿಕೊಳ್ಳುವಿರಿ. ಅತಿಯಾದ ಪ್ರಯಾಣದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ. ಕುಟುಂಬದ ವಿರೋಧದ ನಡುವೆಯೂ ನೀವು ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ನಂಬಿಕೆಯನ್ನು ಕಳೆದುಕೊಳ್ಳುವುದು ಸುಲಭ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಬಂಧುಗಳ ನಡುವೆ ಭಿನ್ನಾಭಿಪ್ರಾಯವು ಬರಲಿದೆ. ಬರುವ ಹಣದ ನಿರೀಕ್ಷೆಯಲ್ಲಿ ಇರುವುದು ಬೇಡ. ನಿಮ್ಮವರ ಆರೋಗ್ಯದ ಬಗ್ಗೆ ಗಮನಕೊಡುವಿರಿ. ರಾಜಕೀಯಕ್ಕೆ ಪ್ರವೇಶಿಸಬೇಕು ಎನ್ನುವ ಹಂಬಲ ಪೂರ್ಣವಾಗದೇ ಇರಬಹುದು. ಸಕಾರಾತ್ಮಕ ಚಿಂತನೆಯನ್ನು ಮಾಡಿ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ. ಅಧಿಕ ಓಡಾಟದಿಂದ ದಣಿವಾಗಲಿದೆ. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ.

ಮಿಥುನ ರಾಶಿ :ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸದ ಕಡೆ ಗಮನವಿಡಿ. ಅದೇ ಉತ್ತರವಾಗಲಿದೆ. ನಿಮ್ಮ ಎಂದಿನ‌ ನಿಚ್ಚಲ ಮನಸ್ಸಿನಿಂದ ವಿಚಲಿತರಾಗಬೇಡಿ. ನಿಮಗೆ ಯಾರಿಂದಲಾದರೂ ಕೆಲಸವಾಗಬೇಕಿದ್ದರೆ ಪ್ರೀತಿಯಿಂದ ಹೇಳಿ, ಅನಾಯಾಸವಾಗಿ ಆಗುವುದು. ನೀವಿಂದು ನಡವಳಿಕೆಯಿಂದ ಎಲ್ಲರ ಮನಗೆಲ್ಲುವಿರಿ. ವ್ಯಪಾರಕ್ಕೆ ವಿದೇಶದ ನಂಟು ಸಿಗುವ ಸಾಧ್ಯತೆ ಇದೆ. ನೀವಿಂದು ನಿಮ್ಮ ಗುರುಗಳನ್ನು ಕಾಣಬೇಕೆನಿಸಿ ಅವರನ್ನು ಭೇಟಿಯಾಗಲು ಇಚ್ಛಿಸುವಿರಿ. ಕೆಲಸಗಳನ್ನು ನಿರಾಸಕ್ತಿಯಿಂದ ಮಾಡಬೇಡಿ. ಪಾಲುದಾರಿಕೆ ನಿಮಗೆ ಸರಿಯಾಗದು. ಸಮಾಜದ ಬಗ್ಗೆ ಚಿಂತಕರಾಗಿದ್ದರೆ ಅತಿಥಿಯಾಗಿ ನೀವು ಇರುವಿರಿ. ಒತ್ತಾಯಕ್ಕೆ ನೀವು ಕಾರ್ಯವನ್ನು ಮಾಡಬೇಕಾಗುವುದು. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ. ನೀವು ಕಾರ್ಯದಲ್ಲಿ ಮಗ್ನರಾಗಿದ್ದು ಯಾವ ವಿಷಯಕ್ಕೂ ಭಾಗಿಯಾಗಲಾರಿರಿ.

ಕರ್ಕ ರಾಶಿ :ಇಂದು ನೀವು ಬಹಳ ದಿನಗಳ ಅನಂತರ ಸಂಗಾತಿಯ ಜೊತೆ ದೂರದ ಊರಿಗೆ‌ ಪ್ರಯಾಣ ಮಾಡುವಿರಿ. ನಿಮ್ಮೊಳಗಿದ್ದ ಮೋಡಗಟ್ಟಿದ ವಾತಾವರಣ, ಕರಗಿ‌ಹರೊಯವುದು. ಮಕ್ಕಳಿಂದ ಮಾನಸಿಕ ಹಿಂಸೆ ಎದುರಾದೀತು. ಸಾಧ್ಯವಾದಷ್ಟು ಇಂದು ಮೌನವಾಗಿ ಇರುವುದಕ್ಕೆ ಪ್ರಯತ್ನಿಸಿ. ಉದ್ಯೋಗದ ನಿಮಿತ್ತ ಹೊರ ಪ್ರದೇಶಕ್ಕೆ ನಡೆಯಬೇಕಾಗಬಹುದು. ವ್ಯಾಪಾರ ಮತ್ತು ವ್ಯವಹಾರಗಳಲ್ಲಿ ಚೇತರಿಕೆ ಕಂಡರೂ ಇನ್ನಷ್ಟು ಸಂಪಾದಿಸುವ ಆಸೆ ಇರಲಿದೆ. ಯಾರದೋ ಕಾರ್ಯವನ್ನು ನಿಮ್ಮದೆಂದು ಬಿಂಬಿಸುವುದು ಬೇಡ. ಸರ್ಕಾರದಿಂದ ಲಾಭವನ್ನು ಪಡೆಯದೇ ಸ್ವಂತವಾಗಿ ಉದ್ಯೋಗವನ್ನು ನಡೆಸುತ್ತೇನೆಂಬ ನಿರ್ಧಾರ ಮಾಡಲಿದ್ದೀರಿ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡಿ, ಹಣವನ್ನು ಖಾಲಿ ಮಾಡುವಿರಿ. ಇಂದು ಕಡಿಮೆ ಕಾರ್ಯದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಯಾರಿಗಾದರೂ ನೀವು ಹಣವನ್ನು ಕೊಡುವ ಸಂದರ್ಭವು ಬರಬಹುದು. ಜಾಣತನದಿಂದ ಇಂದಿನ ಕಾರ್ಯವನ್ನು ಮಾಡುವಿರಿ.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ