Horoscope: ವಿದ್ಯಾರ್ಥಿಗಳಿಗೆ ಅನಾರೋಗ್ಯದಿಂದ ವಿದ್ಯಾಭ್ಯಾಸಕ್ಕೆ ತೊಂದರೆ, ವಿಶ್ರಾಂತಿ ಪಡೆಯಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜೂ.29 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ವಿದ್ಯಾರ್ಥಿಗಳಿಗೆ ಅನಾರೋಗ್ಯದಿಂದ ವಿದ್ಯಾಭ್ಯಾಸಕ್ಕೆ ತೊಂದರೆ, ವಿಶ್ರಾಂತಿ ಪಡೆಯಿರಿ
ವಿದ್ಯಾರ್ಥಿಗಳಿಗೆ ಅನಾರೋಗ್ಯದಿಂದ ವಿದ್ಯಾಭ್ಯಾಸಕ್ಕೆ ತೊಂದರೆ, ವಿಶ್ರಾಂತಿ ಪಡೆಯಿರಿ
Follow us
|

Updated on: Jun 29, 2024 | 12:10 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶನಿವಾರ (ಜೂನ್ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಸೌಭಾಗ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:22 ರಿಂದ 10:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:50ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:08 ರಿಂದ 07:45ರ ವರೆಗೆ.

ಸಿಂಹ ರಾಶಿ: ನಿಮ್ಮ ಅನಾರೋಗ್ಯದಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗಲಿದೆ. ಇಂದು ಪೂರ್ಣವಿಶ್ರಾಂತಿಯ ಕಡೆಗೆ ನೀವು ಹೋಗಬೇಕಾಗುವುದು. ಅರ್ಥಿಕತೆಯು ಏರಿಕೆಯಾಗಲಿದೆ. ನಿಮ್ಮವರ ಮೇಲೆ‌ ನಿಮಗೆ ಬೇಸರ ಉಂಟಾಗಬಹುದು. ವಿವಾಹವಾಗಬೇಕೆಂಬ ಆತುರ ಸರಿಯಲ್ಲ.‌ ಆಡಿದ ಮಾತನ್ನೇ ಮತ್ತೆ ಮತ್ತೆ ಹೇಳಿ ಕಿರಿಕಿರಿ ತರಿಸುವಿರಿ. ಕಾಲ ಬಂದಾಗ ಎಲ್ಲವೂ ಸರಿಯಾಗುತ್ತದೆ. ಪರಪುರುಷರ ಜೊತೆ ಮಾತನಾಡುವುದನದನು ಕಡಿಮೆ‌ ಮಾಡಿ. ಮನೆಯ ವಾತಾವರಣ ಹಿಡಿಸದೇ ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಭೂಮಿಯ ವ್ಯವಹಾರದಲ್ಲಿ ಅಲ್ಪಲಾಭವನ್ನು ಪಡೆಯಬಹುದು. ಯಾರನ್ನೂ ಒತ್ತಾಯಕ್ಕೆ ಬಳಸಿಕೊಳ್ಳುವುದು ಬೇಡ. ಅತಿಯಾದ ಆಸೆಯಿಂದ ಮೋಸ ಹೋಗಬೇಕಾಗಬಹುದು. ಎಚ್ಚರಿಕೆ ಇಂದ ವ್ಯವಹರಿಸಿ. ನಿಮ್ಮ ಕೈ ಮೀರಿದ ಕೆಲಸದಲ್ಲಿ ನಿಮಗೆ ಆತಂಕ ಬೇಡ. ಪ್ರೇಮವು ನಿಮಗೆ ಬಂಧನವಾಗಿ ಕಾಣಿಸುವುದು.

ಕನ್ಯಾ ರಾಶಿ: ಇಂದು ಮಾಡುವ ಕಾರ್ಯವು ನಿಮ್ಮ ಕುಟುಂಬಕ್ಕೆ ಯೋಗ್ಯವಾದ ಹೆಸರನ್ನು ತಂದುಕೊಡುವುದು. ವಿದೇಶಕ್ಕೆ ಹೋಗಲು ನಿಮಗೆ ಕಛೇರಿಯಲ್ಲಿ ಅನುಮೋದನೆ ಸಿಗಬಹುದು. ಗೊಂದಲವಿರುವ ವಿಚಾರದ ಬಗ್ಗೆ ಅತಿಯಾಗಿ ತಲೆ ಕಡಸಿಕೊಳ್ಳಬೇಡಿ.‌ ಸ್ವಲ್ಪ ದಿನ ಅದನ್ನು ತಲೆಯಿಂದ ತೆಗದು ಹಾಕಿ. ನಿಮ್ಮ ಗೊಂದಲವನ್ನು ಇನ್ನೊಬ್ಬರಿಗೆ ಹೇರುವುದು ಬೇಡ. ಮೇಲಧಿಕಾರಿಗಳನ್ನು ಚೆನ್ನಾಗಿ ನೋಡಿಕೊಳ್ಳಿ.‌ ಅವರ ಕೆಲಸಗಳಿಗೆ ಸ್ಪಂದಿಸಿ. ಅವರ ಕಾರ್ಯಗಳನ್ನು ಪ್ರೀತಿಯಿಂದ ಮಾಡಿಕೊಡುವಿರಿ. ನಿಮ್ಮೊಳಗಿನ ಜಗಳವು ಬೀದಿಗೆ ಬರಬಹುದು. ಪತ್ನಿಗೆ ನೂತನ ವಸ್ತ್ರವನ್ನು ಖರೀದಿಸಿ ಕೊಂಡೊಯ್ಯುವಿರಿ. ನಿಮ್ಮ ಬೆಳವಣಿಗೆತಿಂದ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ವೈದ್ಯವೃತ್ತಿಯಲ್ಲಿ ಒತ್ತಡವಿರುವುದು. ನೀವು ಕಷ್ಟವನ್ನೂ ಸಂತೋಷದಿಂದ ಕಳೆಯುವಿರಿ. ಇಂದು ಕೆಲಸಕ್ಕಿಂತ ಪ್ರಯಾಣವೇ ಹೆಚ್ಚಾಗಬಹುದು.

ತುಲಾ ರಾಶಿ: ಇಂದು ನಿಮಗೆ ಒಳ್ಳೆಯತನಕ್ಕೆ ಯಾವ ಫಲವಿಲ್ಲ ಎಂಬ ಬೇಸರವಾಗಬಹುದು. ಎಲ್ಲ ನಿರರ್ಥಕ ಎನ್ನುವ ಭಾವನೆಯು ನಿಮ್ಮಲ್ಲಿ ಬರಬಹುದು. ಒಂಟಿಯಾಗೆ ಸುತ್ತಾಡುವ ಬಯಕೆ ಉಂಟಾಗಲಿದೆ. ಅಧಿಕ ಸುತ್ತಾಟದಿಂದ ಆಯಾಸವಾಗಬಹುದು. ನಿಮ್ಮ ಶಕ್ತಿಯನ್ನು ಆಧರಿಸಿಕೊಂಡು ಮುಂದುವರಿಯಿರಿ. ಜೀವನಕ್ಕೆ ಅನುಭವಿಗಳ ಮಾರ್ಗದಶರ್ನವನ್ನು ಪಡೆದುಕೊಳ್ಳುವಿರಿ. ಹಣಕಾಸಿನ ವಿಷಯದಲ್ಲಿ ಸಾಕಷ್ಟು ಗೊಂದಲವಿರಬಹುದು. ಸಹಾಯಕ್ಕೆ ಯಾರೂ ಬರುವುದಿಲ್ಲ ಎಂಬ ಅನಾಥ ಪ್ರಜ್ಞೆಯು ಕಾಡಬಹುದು. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇದ್ದು ಅದನ್ನು ಆಪ್ತರ ಬಳಿ ಹೇಳಿಕೊಳ್ಳುವ ಮನಸ್ಸಾದೀತು. ಹಳೆಯ ನೋವುಗಳು ಬಾಧಿಸುವುದು. ನಿಮ್ಮ ವಾಹನವು ದುರಸ್ತಿಗೆ ಬರಬಹುದು. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ಇಂದು ಮನೋರಂಜನೆಯಿಂದ ನಿಮಗೆ ಸಮಾಧಾನ ಸಿಗಲಿದೆ. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ.

ವೃಶ್ಚಿಕ ರಾಶಿ: ಭವ್ಯ ಗೃಹದ ಕನಸನ್ನು ಯಾರ ಬಳಿಯಾದರೂ ಹೇಳಿಕೊಳ್ಳುವಿರಿ. ಕೃಷಿಯಲ್ಲಿ ಏನಾದರೂ ಮಾಡಬೇಕು ಎಂಬ ಆಸಕ್ತಿಯು ಬರವುದು. ವಾಹನಕ್ಕೋಸ್ಕರ ಸಾಲಮಾಡುವ ಸ್ಥಿತಿ. ಬಂಧುಗಳ ಸಹಕಾರ ಸಿಗದೇ ಅವರನ್ನು ದ್ವೇಷಿಸಬಹುದು. ಅತಿಯಾದ ಹಠವು ಒಳ್ಳೆಯದಲ್ಲ. ನೀವು ಏನನ್ನಾದರೂ ಪಡೆಯಲು ಪ್ರಯತ್ನಿಸಿದರೆ ಕೂಡಲೇ ಸಿಗುತ್ತದೆ ಎಂಬ ಭ್ರಮೆ ಬೇಡ. ಯಾರ ಹಂಗಿಲ್ಲದೇ ಸ್ವಾತಂತ್ರ್ಯವಾಗಿ ಇರಲು ಬಯಸುವಿರಿ. ಇಂದು ಮಾಡಬೇಕೆಂಬ ಕೆಲಸವನ್ನು ಮುಂದೂಡುವುದು ಒಳ್ಳೆಯದು. ಮನೆಯಿಂದ ದೂರವಿರುವವರಿಗೆ ಇಂದು ಮನೆಯ ನೆನಪಾಗಬಹುದು. ದ್ವಂದ್ವದಲ್ಲಿ ನಿಮ್ಮ ಮನಸ್ಸು ಇರಲಿದೆ. ದೇವರ ವಿಷಯದಲ್ಲಿ ನಂಬಿಕೆ ಕಡಿಮೆ ಆಗಬಹುದು. ಆಲಸ್ಯದಿಂದ‌ ಮಾಡಬೇಕಾದ ಕೆಲಸವನ್ನು ಮಾಡದೇ ಇರುವಿರಿ. ಪ್ರವಾಸ ಹೋಗುವ ಮನಸ್ಸಾದೀತು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು. ನಿಮಗೆ ಬೇಡ ಎನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿ ಬಂದು‌ ಮಾನಸಿಕ ಹಿಂಸೆಯಾದೀತು.

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?