Astrology: ದಿನಭವಿಷ್ಯ: ದಾಂಪತ್ಯ ಜೀವನದಲ್ಲಿ ಬಹಳ ಗೊಂದಲ, ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡುವಿರಿ

|

Updated on: Jun 05, 2024 | 12:02 AM

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 05 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ದಿನಭವಿಷ್ಯ: ದಾಂಪತ್ಯ ಜೀವನದಲ್ಲಿ ಬಹಳ ಗೊಂದಲ, ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡುವಿರಿ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜೂನ್ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಭರಣೀ, ಯೋಗ: ಅತಿಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ, ರಾಹು ಕಾಲ 12:31 ರಿಂದ 14:08 ವರೆಗೆ, ಯಮಘಂಡ ಕಾಲ ಬೆಳಗ್ಗೆ 07:41 ರಿಂದ 09:18ರ ವರೆಗೆ, ಗುಳಿಕ ಕಾಲ 10:54 ರಿಂದ ಬೆಳಿಗ್ಗೆ 12:31ರ ವರೆಗೆ.

ಮೇಷ ರಾಶಿ: ನಿಮ್ಮ ಹಿಂದಿನ ಶ್ರಮಕ್ಕೆ ಫಲವು ಪ್ರಾಪ್ತವಾಗಿ ಖುಷಿ ಎನಿಸುವುದು. ಜೀವನದಲ್ಲಿ ನಮಗಾಗಿ ನಾವು ಬದುಕಬೇಕೇ ಹೊರತು ಬೇರೆಯವರಿಗೋಸ್ಕರವಲ್ಲ ಎಂಬ ಯೋಚನೆ ಬರುವುದು. ನೀವು ಕೆಲಸದಲ್ಲಿ ಇತರರಿಗೆ ಸಹಾಯ ಮಾಡಬಹುದು, ಆದರೆ ಅವರ ಕೆಲಸದಲ್ಲಿ ಹಸ್ತಕ್ಷೇಪ ಮಾಡದಂತೆ ಎಚ್ಚರಿಕೆ ವಹಿಸಿ. ಪ್ರವಾಸ ಮತ್ತು ಸಾರಿಗೆ ಉದ್ಯಮಿಗಳಿಗೆ ಉತ್ತಮ ಲಾಭ ದೊರೆಯುವ ಸಾಧ್ಯತೆ ಇದೆ. ಇಂದು ಸಂಗಾತಿಗೆ ನಿಮ್ಮ ಮೇಲೆ ಅಭಿಮಾನ ಬರಬಹುದು. ಅವಿವಾಹಿತರು ವಿವಾಹದ ಬಗ್ಗೆ ಬಂಧುಗಳ ಜೊತೆ ಚರ್ಚಿಸುವಿರಿ. ಮನಸ್ಸಿನ ನಿಯಂತ್ರಣವು ಲಯವನ್ನು ತಪ್ಪಬಹುದು. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ.

ವೃಷಭ ರಾಶಿ: ನಿಮ್ಮ ಸ್ವಭಾವಕ್ಕೆ ಜನರು ಸಕ್ಕರೆಯನ್ನು ಇರುವೆಗಳು ಮುತ್ತಿದಂತೆ ಜನರು‌ ಮುತ್ತುವರು. ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಪಿತ್ರಾರ್ಜಿತ ಸಂಪತ್ತು ನಿಮಗೆ ಉಪಯೋಗ ವಾಗಬಹುದು. ಕೆಲಸದ ಸ್ಥಳದಲ್ಲಿ ಹಿರಿಯರು, ಕಿರಿಯರು ಮತ್ತು ಮೇಲಧಿಕಾರಿಗಳಿಂದ ಕೆಲವು ಹೊಸ ಕಾರ್ಯಗಳನ್ನು ಕಲಿಯುವ ಅವಕಾಶವನ್ನು ನೀವು ಪಡೆಯುತ್ತೀರಿ. ವ್ಯಾಪಾರ ವೆಚ್ಚಗಳಿಗಾಗಿ ನೀವು ಕೆಲವು ದಿನಗಳವರೆಗೆ ಕಾಯಬೇಕಾಗುತ್ತದೆ. ಕ್ರಿಯಾಶೀಲತೆಗೆ ನಿಮಗೆ ಯಾವುದೇ ಪ್ರಶಂಸೆ ಸಿಗದಿರುವುದು ನಿಮಗೆ‌ ಕಷ್ಟವಾದೀತು. ಹಣಕಾಸಿನ ವಿಷಯದಲ್ಲಿ ಕೆಲವು ಲಾಭಗಳನ್ನು ನಿರೀಕ್ಷಿಸುವಿರಿ‌‌. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ಇಲ್ಲವಾದರೆ ದೇಹಾರೋಗ್ಯ ಕೆಡಬಹುದು. ಉತ್ತಮ ಆರೋಗ್ಯದಿಂದ ಆನಂದಿಸುವಿರಿ.

ಮಿಥುನ ರಾಶಿ: ಇಂದು ದಾಂಪತ್ಯ ಜೀವನದಲ್ಲಿ ಬಹಳ ಗೊಂದಲವಾಗಬಹುದು. ಇನ್ಮೊಂದು ಜೀವವನ್ನು ಗರ್ಭದಲ್ಲಿ ಹೊತ್ತಿರುವವರು ನಡಿಗೆಯಲ್ಲೂ ಮನಸ್ಸಿನಲ್ಲೂ ಮಾತಿನಲ್ಲೂ ಎಚ್ಚರ, ಸಾವಧಾನತೆಯಿರಲಿ. ಕಚೇರಿಯಲ್ಲಿ ಯಾವುದೇ ಕೆಲಸವನ್ನು ಮಾಡುವಾಗ ಬಹಳ ಎಚ್ಚರಿಕೆಯಿಂದ ಇರಿ. ನಿಮ್ಮ ಕೆಲಸವನ್ನು ಮರುಪರಿಶೀಲಿಸಬಹುದು. ಉದ್ಯಮಿಯು ವ್ಯವಹಾರದ ವಿಷಯಗಳಲ್ಲಿ ಚಿಂತನಶೀಲವಾಗಿ ಮುಂದುವರಿಯಬೇಕು. ಸಂಗಾತಿಯ ಜೊತೆ ಸಂತೋಷದಿಂದ ಸಮಯವನ್ನು ಕಳೆಯುವಿರಿ. ಗೊತ್ತಿಲ್ಲದೇ ಯಾರ ಬಗ್ಗೆಯೂ ನಿಮ್ಮ ಮಾತುಗಳನ್ನು ಹರಿ ಬಿಡುವುದು ಬೇಡ. ಅದೇ ನಿಮ್ಮ ತಲೆಯನ್ನು ದಿನವಿಡೀ ಕೊರೆಯಬಹುದು. ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ.

ಕಟಕ ರಾಶಿ: ನೀವು ಒಪ್ಪಿಕೊಂಡ ಕಾರ್ಯವನ್ನು ಬಿಡದೆ ಮುನ್ನಡೆಸುವ ಛಾತಿ ನಿಮ್ಮ ಯಶಸ್ಸಿನ ಗುಟ್ಟುಗಳಲ್ಲೊಂದು. ಗೊತ್ತಿದ್ದೂ ಉದ್ವೇಗಕ್ಕೆ ಒಳಗಾಗಬೇಡಿ. ಕೆಲಸದ ಸ್ಥಳದಲ್ಲಿ ಕೆಲವು ಅಪೂರ್ಣ ಕೆಲಸದ ಬಗ್ಗೆ ನೀವು ವಿಚಲಿತರಾಗುವಿರಿ. ಉದ್ಯೋಗಸ್ಥರು ನಿಮ್ಮ ಜೀವನದ ಪ್ರತಿಯೊಂದು ಅಂಶದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಬೇಕು. ಇದು ನಿಮ್ಮ ಯಶಸ್ಸಿನ ಸೂತ್ರವಾಗಿದೆ. ಯಾರನ್ನೂ ನೀವು ಪೂರ್ಣವಾಗಿ ನಂಬಲಾರಿರಿ. ಸಂಗಾತಿಯ ಬಗ್ಗೆ ಕುತೂಹಲವಿರಬಹುದು. ಅತಿಯಾಗುವುದು ಬೇಡ. ಆದರೆ ಅತಿರೇಕಕ್ಕೆ ಹೋಗುವ ಸಾಧ್ಯತೆ ಇದೆ. ದೈಹಿಕ ದಾರ್ಢ್ಯವನ್ನು ನೀವು ಚೆನ್ನಾಗಿರಿಸಿಕೊಳ್ಳುವಿರಿ. ಸುಲಭವಾಗಿ ಸಿಕ್ಕುವುದನ್ನು ಬಿಟ್ಟಕೊಳ್ಳುವಿರಿ. ನಿಮ್ಮ ಬೆರೆಯುವಿಕೆಯು ಕಡಿಮೆ ಆಗಬಹುದು. ನಿಮ್ಮ ತಿಳುವಳಿಕೆ ಮತ್ತು ಸಭ್ಯತೆಯಿಂದ ಎಲ್ಲರೂ ಬಹಳ ಪ್ರಭಾವಿತರಾಗಬಹುದು.