Horoscope 14 Nov: ದಿನಭವಿಷ್ಯ, ಅಜಾಗರೂಕತೆಯಿಂದ ನಿಮ್ಮ ವಸ್ತುವು ಇನ್ನೊಬ್ಬರ ಪಾಲಾಗಬಹುದು

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹಾಗಾದರೆ ಇಂದಿನ (2023 ನವೆಂಬರ್​ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

Horoscope 14 Nov: ದಿನಭವಿಷ್ಯ, ಅಜಾಗರೂಕತೆಯಿಂದ ನಿಮ್ಮ ವಸ್ತುವು ಇನ್ನೊಬ್ಬರ ಪಾಲಾಗಬಹುದು
ಇಂದಿನ ರಾಶಿಭವಿಷ್ಯImage Credit source: iStock Photo
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 14, 2023 | 12:02 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಶೋಭನ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 33 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಮಧ್ಯಾಹ್ನ 03:08 ರಿಂದ 04:34ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:25 ರಿಂದ 10:51ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:17 ರಿಂದ 13:43ರ ವರೆಗೆ.

ಮೇಷ ರಾಶಿ: ಮನೆಯ ಕೆಲಸದಲ್ಲಿ ಒತ್ತಡವಿರಲಿದ್ದು, ಒಂದೊಂದಾಗಿಯೇ ಪೂರೈಸುವಿರಿ. ಬಂಧುಗಳ ಆಗಮನವಾಗಲಿದೆ. ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೇ ಮುನ್ನಡೆಯುವಿರಿ. ಶರೀರದಲ್ಲಿ ಅಸಮತೋಲನವು ಇರಲಿದೆ. ಇಂದು ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ. ನಿಮ್ಮ ಅನುಪಸ್ಥಿತಿಯಲ್ಲಿ ಕಾರ್ಯಗಳು ಆಗುವುದು. ಸಂಗಾತಿಯ ಮಾತಿನಂತೆ ಇಂದು ನಡೆದುಕೊಳ್ಳಬೇಕಾಗುವುದು. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ‌ ಮನೋಗತವನ್ನು ಅರಿತುಕೊಳ್ಳುವಿರಿ. ಯಾರದೋ ಒತ್ತಾಯಕ್ಕೆ ಮಣಿದು ಬೇಸರಪಡುವಿರಿ. ಇಂದು ನಿಮ್ಮ ಬೆಂಬಲಕ್ಕೆ ಬರುವವರನ್ನು ಅತಿಯಾಗಿ ನಂಬುವಿರಿ.

ವೃಷಭ ರಾಶಿ: ಭೂಮಿಯಿಂದ ಅನಿರೀಕ್ಷಿತ ಲಾಭವು ಸಿಗಲಿದೆ. ಕೆಲವರ ತೆಗಳಿಕೆಯಿಂದ ನೀವು ಸಿಟ್ಟಾಗಬಹುದು. ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು. ಸಕಾಲಕ್ಕೆ ಭೋಜನವನ್ನು ಸ್ವೀಕರಿಸುವುದು ಸೂಕ್ತ. ಕೆಲವರು ನಿಮ್ಮ ದಾರಿ ತಪ್ಪಿಸಬಹುದು. ಮಿತ್ರರ ಸಹಾನುಭೂತಿಯು ನಿಮಗೆ ಉತ್ಸಾಹವನ್ನು ಕೊಡುವುದು. ಉತ್ತಮವಾದ ಉಡುಗೊರೆಯೊಂದು ನಿಮ್ಮ ಕೈ ಸೇರಬಹುದು. ಪ್ರಮುಖ ಅಂಶಗಳು ದೂರಾಗಿ ಅಪ್ರಧಾನಾಂಶಗಳೇ ಮುನ್ನೆಲೆಗೆ ಬರುವುದು. ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಂಡು ಹತಾಶರಾಗುವಿರಿ. ನಿಮ್ಮವರ ಮಾತು ನಿಮಗೆ ಅಸಮಾಧಾನವನ್ನು ಉಂಟುಮಾಡುವುದು. ಹೇಳಬೇಕಾದ ಮಾತನ್ನು ನೀವು ಹಿಡಿದಿಟ್ಟುಕೊಳ್ಳುವಿರಿ.

ಮಿಥುನ ರಾಶಿ: ಎಲ್ಲವನ್ನೂ ನಿಮ್ಮ ಅನುಭವದ ಮೂಲಕವೇ ತಿಳಿದುಕೊಳ್ಳಬೇಕೆಂದಿಲ್ಲ. ಇತರ ಅನುಭವವೂ ನಿಮಗೆ ಪಾಠವಾಗುವುದು. ಹಠದ ಸ್ವಭಾವದಿಂದ ಹೊರಬನ್ನಿ. ನಿಮ್ಮ ಸ್ವೇಚ್ಛಾಚಾರವು ಮನೆಯವರಿಗೆ ಇಷ್ಟವಾಗದು. ಅನಿರೀಕ್ಷಿತ ಧನಾಗಮನದಿಂದ ಸಂತೋಷವು ಇಮ್ಮಡಿಯಾಗಬಹುದು. ವೈದ್ಯರಿಗೆ ಹೆಚ್ಚಿನ ಅವಕಾಶವು ಸಿಗಬಹುದು. ನಿಮಗೆ ಸಿಕ್ಕ ಜವಾಬ್ದಾರಿಯಿಂದ ಬೀಗುವಿರಿ. ಹೊಸ ಪರಿಚಯವು ಅತಿಯಾಗಿ ಆಪ್ತವಾಗಬಹುದು. ಇನ್ನೊಬ್ಬರ ಗೌಪ್ಯತೆಯನ್ನು ಬಿಚ್ಚಿಡುವುದು ಸಂತೋಷದ ವಿಚಾರವಾಗುವುದು. ನಿಮ್ಮ ಬಗ್ಗೆ ನೀವೇ ಹೇಳಕೊಳ್ಳುವುದು ಜಂಭವೆನಿಸುವುದು. ಅತಿ ಲೋಭದಿಂದ ಧನಾರ್ಜನೆಯನ್ನು ಮಾಡುವಿರಿ. ನಿಮ್ಮಿಂದಾಗಿ ಕುಟುಂಬದ ಒತ್ತಡವು ಕಡಿಮೆ ಆಗುವುದು. ಅವಸರ ಮಾಡದೇ ಕೆಲಸವನ್ನು ಮಾಡಿ.

ಕರ್ಕ ರಾಶಿ: ಕಾರ್ಯಗಳಿಂದ ಅಧಿಕ ಶ್ರಮವಿರುವುದು. ಕೆಲವನ್ನು ಅನವಶ್ಯಕವಾಗಿ ತಂದುಕೊಳ್ಳುವಿರಿ. ನಿಂದಕರಿಗೆ ಉತ್ತರವನ್ನು ಕೊಡುವಿರಿ. ಧನಾಗಮನದ ನಿರೀಕ್ಷೆಯಲ್ಲಿ ಇರುವಿರಿ. ಭಾವುಕರಾಗುವ ಸಂದರ್ಭವು ಬರಬಹುದು. ನಿರಂತರ ಕಾರ್ಯದಿಂದ ವಿಶ್ರಾಂತಿಯನ್ನು ಪಡೆಯುವಿರಿ. ಕೆಲಸದ ಸಮಯವು ವ್ಯತ್ಯಾಸವಾಗಿದ್ದು ನಿಮಗೆ ಹೊಂದಿಕೊಳ್ಳುವುದು ಕಷ್ಟವಾದೀತು. ನಿಮ್ಮ ಮೇಲೆ ಸಹಾನುಭೂತಿ ಇರಬಹುದು. ವಿದೇಶೀ ವ್ಯಾಪಾರದಿಂದ ಆದಾಯವು ಹೆಚ್ಚಾಗಬಹುದು. ನಿಮ್ಮ ಅಜ್ಞಾನವನ್ನು ನೀವೇ ತೋರಿಸಿಕೊಳ್ಳುವಿರಿ. ನಮ್ಮದೇ ಸರಿ ಎನ್ನುವ ವಾದವು ಸರಿಯಾಗದು. ನೀವು ಇಂದು ಯಾರ ಜೊತೆಯೂ ಬೆರೆಯಲು ಇಷ್ಟಪಡುವುದಿಲ್ಲ. ಬಂಧುಗಳ ಒಡನಾಟವು ನಿಮ್ಮ ಆಲೋಚನೆಯ‌ ಕ್ರಮವನ್ನು ಬದಲಿಸುವುದು. ಪ್ರಶಾಂತವಾದ ಚಿತ್ತದಿಂದ ಅನೇಕ ಸಕಾರಾತ್ಮಕ ಅಂಶಗಳನ್ನು ಕಾಣುವಿರಿ.

ಸಿಂಹ ರಾಶಿ: ರಪ್ತು ವ್ಯವಹಾರದಲ್ಲಿ ಹಿನ್ನಡೆಯಾಗುವುದು. ನೌಕರರ ಬಗ್ಗೆ ನಿಮಗೆ ನಂಬಿಕೆ ಕಡಿಮೆ ಆಗಲಿದೆ. ಬಾಲಿಶ ಮಾತುಗಳು ನಿಮ್ಮ ವ್ಯಕ್ತಿತ್ವವನ್ನು ಹೇಳುವುದು. ಅಪಾತ್ರರಿಗೆ ನಿಮ್ಮ ವಸ್ತುವನ್ನು ಗೊತ್ತಿಲ್ಲದೇ ಕೊಡುವಿರಿ. ಅಮೇಧ್ಯವಾದ ಆಹಾರವನ್ನು ಸೇವಿಸುವ ಸಂದರ್ಭವು ಬರಬಹುದು. ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ಮಕ್ಕಳಲ್ಲಿ ಪ್ರೀತಿಯನ್ನು ತೋರುವಿರಿ. ಅಪರಿಚಿತರಿಗೆ ಮಾಡಿದ ಸಹಾಯವು ದುರುಪಯೋಗವಾಗುವುದು. ದೂರದ ಸ್ಥಳಕ್ಕೆ ಉದ್ಯೋಗಕ್ಕೆ ಹೋಗಲು ಮನೆಯಿಂದ ನಕಾರಾತ್ಮಕ ಸೂಚನೆ ಬರಬಹುದು. ಯಾರನ್ನೂ ಅವಲಂಬಿಸದೇ ನಡೆಯಬೇಕು ಎನ್ನುವ ಹಠವು ಬರುವುದು. ಪ್ರಶಂಸೆಯು ಇಲ್ಲದೇ ಕೆಲಸದಲ್ಲಿ ನಿಮ್ಮ ಆಸಕ್ತಿಯು ಕಡಿಮೆ‌ ಆಗಬಹುದು. ನಿಮ್ಮ ಕಾರ್ಯಕ್ಕೆ ಮಕ್ಕಳಿಂದ ವಿರೋಧವು ಇರಲಿದೆ. ಸ್ಥಳ ಬದಲಾವಣೆಯನ್ನು ಅನಿವಾರ್ಯವಾಗಿ ಮಾಡಬೇಕಾದೀತು.

ಕನ್ಯಾ ರಾಶಿ: ನಿಮ್ಮ‌ ಆಸೆಯನ್ನು ಪೂರೈಸುವಂತೆ ದೇವರಲ್ಲಿ ಪ್ರಾರ್ಥನೆಯನ್ನು ಸಲ್ಲಿಸುವಿರಿ.‌ ಹಳೆಯ ಬಯಕೆಯನ್ನು ಇಡೇರಿಸಿಕೊಂಡು ಖುಷಿಪಡುವಿರಿ. ಸಹೋದ್ಯೋಗಿಯೊಬ್ಬನಿಗೆ ಸಹಾಯ ಮಾಡುವ ಸ್ಥಿತಿಯು ನಿಮಗೆ ಬರಬಹುದು. ಆಗಬೇಕಾದ ಕಾರ್ಯಗಳು ಒತ್ತಡ ಇಲ್ಲದೇ ಆಗುವುದು. ಯಾರ ಬಲವಂತಕ್ಕೂ ಮಣಿಯುವುದಿಲ್ಲ. ರತ್ನ ವ್ಯಾಪಾರದಲ್ಲಿ ಹಿನ್ನಡೆಯಾಗಬಹುದು. ಇಂದಿನ ಸಮಯವನ್ನು ವ್ಯರ್ಥಮಾಡಿಕೊಂಡು ಬೇಸರಿಸುವಿರಿ.‌ ನಿಮ್ಮ‌ ಸ್ವಭಾವವು ಇತರರಿಗೆ ಅಸಹಜತೆಯಂತೆ ಕಾಣಿಸಬಹುದು. ಯಾರ ಮೇಲೂ ಹಿಡಿತ ಸಾಧಿಸುವ ಪ್ರಯತ್ನವು ಬೇಡ. ಸಮಯ ಮಾತ್ರ ವ್ಯರ್ಥವಾಗಬಹುದು. ವಹಿಸಿಕೊಂಡ ಕಾರ್ಯವನ್ನು ಸಮಯಕ್ಕೆ ಮುಗಿಸುವಿರಿ. ಕೃಷಿಕರು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವರು. ನಿಮ್ಮ ನಿರ್ಲಕ್ಷ್ಯದಿಂದ ಭೂಮಿಯ ಸ್ವಲ್ಪ ಭಾಗವನ್ನು ಕಳೆದುಹೋಗಬಹುದು. ಕಾನೂನಿಗೆ ಶರಣಾಗುವಿರಿ.

ತುಲಾ ರಾಶಿ: ಆತ್ಮವಿಶ್ವಾಸದಿಂದ ಇಂದಿನ‌ ದಿನವನ್ನು ಕಳೆಯುವಿರಿ. ಮಾತುಗಳೂ ಅತಿಯಾಗಿರುವುದು. ಅಹಾರದಲ್ಲಿ ಮಿತಿ ಇರಲಿ. ಮನಸ್ಸಿನ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಇಂದು ಕಷ್ಟವಾದೀತು. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಇಚ್ಛಿಸುವಿರಿ. ನಿಮ್ಮ ಅಸಹಕಾರದಿಂದ ಮಕ್ಕಳಿಗೆ ಬೇಸರವಾದೀತು. ಅಯಾಚಿತ ಭಾಗ್ಯದಿಂದ ಖುಷಿಯಾಗಲಿದೆ. ಯೋಜಿತ ಕಾರ್ಯಗಳು ಸಮಯಕ್ಕೆ ಸರಿಯಾಗಿ ಮುಗಿಯಲಿದ್ದು ನೆಮ್ಮದಿ ಇರುವುದು. ವ್ಯಾಪಾರದಲ್ಲಿ ಜನರ ಆಕರ್ಷಣೆಯನ್ನು ಮಾಡುವ ಕಲೆ ಸಿದ್ಧಿಸಿದೆ. ನಿಮ್ಮ ಅಸಮಾಧಾನವನ್ನು ಅಸ್ಥಾನದಲ್ಲಿ ಹೊರಹಾಕಿ ಮುಜುಗರಕ್ಕೆ ಒಳಗಾಗುವಿರಿ. ಬಂಧುಗಳಿಂದ ನಿಮಗೆ ಪ್ರಶಂಸೆಯು ಸಿಗುವುದು. ತಂದೆಯ ಮೇಲೆ‌ ನಿಮ್ಮ‌ ಗೌರವವು ಅಧಿಕಾಗಿದ್ದು ಅನಿರೀಕ್ಷಿತ ಉಡುಗೊರೆಯನ್ನು ಕೊಡುವಿರಿ. ಯಾರ ವಸ್ತುವನ್ನು ಕಸಿದುಕೊಳ್ಳುವ ಹಂತಕ್ಕೆ ಹೋಗುವುದು ಬೇಡ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ಅಡೆತಡೆಗಳು ಎದುರಾಗಬಹುದು. ನಿಮ್ಮ ಸಮತೋಲನ ಮನಃಸ್ಥಿತಿಯು ಕ್ಲಿಷ್ಟ ಸಂದರ್ಭವನ್ನು ಲೀಲಾಜಾಲವಾಗಿ ದಾಟಿಸುವುದು. ನೆರೆಹೊರೆಯರ ಮಾತು ನಿಮಗೆ ಬೇಸರ ತರಿಸಿ, ಪ್ರತಿಯಾಗಿ ಏನನ್ನಾದರೂ ಹೇಳಲು ಹೋಗುವಿರಿ. ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುವಿರಿ. ಮೇಲಧಿಕಾರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಡಬಹುದು. ಮಕ್ಕಳಿಗೆ ಜವಾಬ್ದಾರಿಯನ್ನು ಕೊಡಲು ಹಿಂಜರಿಯುವಿರಿ. ಕಷ್ಟವಾದರೂ ಸಾಲದ ಮರುಪಾವತಿಯನ್ನು ಮಾಡವಿರಿ. ಮನಸ್ಸಿಗೆ ಬೇರಸವಾಗುವ ಸಂಗತಿಯು ಹತ್ತಿರ ಬಂದಾಗ ಅದನ್ನು ದೂರವಿಡಲು ಪ್ರಯತ್ನಿಸಿ. ನಿಮಗೆ ಖುಷಿ ಕೊಡುವ ಸಂಗತಿಯ ಕಡೆಗೆ ಗಮನಹರಿಸಿ. ಹಲವು ದಿನಗಳಿಂದ ನಿರೀಕ್ಷಿಸುತ್ತಿದ್ದ ಉದ್ಯೋಗದ ಭಡ್ತಿಯು ಸಿಗಲಿದೆ. ಯಾವ ಜವಬ್ದಾರಿಯನ್ನೂ ಪಡೆಯಲು ಹಿಂಜರಿಯುವುದಿಲ್ಲ. ನಿಮ್ಮ ವಾಹನವನ್ನು ಬದಲಾಯಿಸುವ ಸಾಧ್ಯತೆ ಇದೆ.‌

ಧನು ರಾಶಿ: ಯಾರ ಜೊತೆಗೂ ಸ್ಪರ್ಧೆಗೆ ಇಳಿಯುವ ಮನಸ್ಸು ಮಾಡುವುದು ಬೇಡ. ನಿಮ್ಮ ಬಗ್ಗೆ ಯಾರಾದರೂ ಅಸೂಯೆಪಡಬಹುದು. ಉದ್ಧಟತನದ ಮಾತುಗಳಿಂದ ನಿಮ್ಮ ಸ್ವಭಾವವು ಸ್ಪಷ್ಟವಾಗುವುದು. ಅತಿಯಾದ ದೇಹದಂಡನೆಯಿಂದ ನಿಮಗೆ ಆಯಾಸವಾಗಲಿದೆ. ಕೊಟ್ಟ ಹಣವನ್ನು ನೀವು ಪುನಃ ಕೇಳುವಿರಿ. ನಿಮ್ಮಿಂದ ಸಹಾಯವನ್ನು ಪಡೆದ ಹಿರಿಯರು ಆಶೀರ್ವದಿಸುವರು. ಇದರಿಂದ ಸಂತೋಷವಾಗಲಿದೆ. ಸ್ನೇಹಿತರ ಸಹವಾಸದಿಂದ ದುರಭ್ಯಾಸವನ್ನು‌ಕಲಿಯವಿರಿ. ವಿದ್ಯಾಭ್ಯಾಸದ ಕಾರಣಕ್ಕೆ ಹಣವನ್ನು ಪಡೆದು ಅನ್ಯ ಕಾರ್ಯಕ್ಕೆ ಬಳಸಿಕೊಳ್ಳುವಿರಿ. ಸುಲಭ ದಾರಿಯನ್ನು ಆಯ್ಕೆ ಮಾಡಿಕೊಳ್ಳುವುದು ಸೂಕ್ತ. ನಂಬಿಕೆಯನ್ನು ಕಳೆದುಕೊಳ್ಳುವವ ಪ್ರಸಂಗವು ಬರಬಹುದು. ಉದ್ಯಮವನ್ನು ಮುನ್ನಡೆಸಲು ಉತ್ತಮ ವ್ಯಕ್ತಿಗಳ ಅನ್ವೇಷಣೆ ಮಾಡುವಿರಿ. ಅತಿಯಾದ ಶ್ರದ್ಧೆಯಿಂದ ದೇವರ ಆರಾಧನೆಯನ್ನು ಮಾಡುವಿರಿ.

ಮಕರ ರಾಶಿ: ಮಾನಸಿಕ‌ ಸ್ಥೈರ್ಯವು ಬಹಳ ಮುಖ್ಯವಾಗುವುದು. ಶೂನ್ಯದಿಂದ ಆರಂಭಿಸುವ ಕಲೆ ನಿಮಗೆ ಗೊತ್ತಿದೆ. ನಿರೀಕ್ಷಿತ ಗೌರವವು ನಿಮಗೆ ಸಿಗಲಿದೆ.‌ ಇಂದಿನ ಕೆಲವು ಮಾತುಗಳನ್ನು ನೀವು ನಿರ್ಲಕ್ಷಿಸುವಿರಿ. ಕಛೇರಿಯ ವ್ಯವಹಾರದಲ್ಲಿ ನಿಮಗೆ ಒತ್ತಡವು ಬರಬಹುದು. ಹಳೆಯ ಸ್ನೇಹಿತೆಯ ಸಖ್ಯವಾಗಬಹುದು. ಮಕ್ಕಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ವ್ಯವಹರಿಸುವುದು ಉತ್ತಮ. ಹೊಸ ಉದ್ಯೋಗದ ಅಭಿವೃದ್ಧಿಗೆ ದೇವರಲ್ಲಿ ಶರಣಾಗುವಿದರಿ. ಪ್ರಯತ್ನಗಳು ಆರಂಭವಾಗಲಿದೆ. ಪಿತ್ರಾರ್ಜಿತ ಆಸ್ತಿಯು ತಾನಾಗಿಯೇ ಬರಬಹುದು. ವಿದ್ಯಾಭ್ಯಾಸದಲ್ಲಿ ಆಸಕ್ತಿ ಬರುವಂತೆ ಮಾಡುವ ಹೊಣೆಗಾರಿಕೆ ಇರಲಿದೆ. ಹಿರಿಯರಿಂದ ಮಾರ್ಗದರ್ಶನವು ಸಿಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಓಡಾಟವು ವ್ಯರ್ಥಯವಾಗುವುದು. ಸ್ವತಂತ್ರವಾಗಿ ನಿಮ್ಮನ್ನು ಗುರುತಿಸಿಕೊಳ್ಳಲು ಇಷ್ಟಪಡುವಿರಿ.

ಕುಂಭ ರಾಶಿ: ಯಾವುದೋ ಚಿಂತೆಯಲ್ಲಿ ಇರುವ ಕಾರಣ ಮಾನಸಿಕ ಸ್ಥಿತಿಯು ನಿಮ್ಮ ಹಿಡಿತದಲ್ಲಿ ಇರದು. ಎಲ್ಲದಕ್ಕೂ ಕೋಪವನ್ನು ಮಾಡಿಕೊಳ್ಳುವಿ. ಹಳೆಯ ಬಂಧುಗಳ ಸಮಾಗಮವಾಗಲಿದ್ದು, ಸಂತೋಷವಾಗಲಿದೆ. ದೇವಾಲಯಕ್ಕೆ ಹೋಗಿ ನೆಮ್ಮದಿಯನ್ನು ಪಡೆದುಕೊಳ್ಳುವಿರಿ. ಸಂಗಾತಿಯ ಅನಪೇಕ್ಷಿತ ಆಸೆಗಳನ್ನು ದೂರ ಮಾಡುವಿರಿ. ನಿಮ್ಮ ಮಾತುಗಳು ಕಠೋರವಾಗಿ ಇರುವುದು. ಏನನ್ನೋ ಸಾಧಿಸಲು ಹೋಗಿ ಮತ್ತೇನನ್ನೋ ಮಾಡಿಕೊಳ್ಳುವಿರಿ. ವಾಹನದಿಂದ ಗಾಯವಾಗುವ ಸಾಧ್ಯತೆ ಇದೆ. ನಿಮಗೆ ಬೇಕಾದ ವಾತಾವರಣದಲ್ಲಿ ಇರುವುದು ಇಷ್ಟವಾಗುವುದು. ನಿಮ್ಮ ಕನಸನ್ನು ಸಕಾರ‌ ಮಾಡಿಕೊಳ್ಳಲು ಪ್ರಗತಿಯಲ್ಲಿ ಇರುವಿರಿ. ಸಹೋದರನ ಜೊತೆ ಸಣ್ಣ ವಿಷಯಕ್ಕೆ ವಿವಾದವಾಗಬಹುದು.‌ ಕಾರ್ಯದ ಅನಿವಾರ್ಯತೆಯು ಎದ್ದು ಕಾಣಿಸುವುದು. ಪರಿಚಿತರ ನಡುವೆ ಸಾಹೋದರ್ಯಭಾವವು ಇರುವುದು.

ಮೀನ ರಾಶಿ: ನಿಮ್ಮ ಸ್ಥಾನವನ್ನು ಬಿಟ್ಟುಕೊಡುವ ಮನಸ್ಸು ಮಾಡುವಿರಿ. ಹೊಸತನದ ಅಪೇಕ್ಷೆಯು ಅತಿಯಾಗಿ ಇರುವುದು. ಸಂತೋಷಕ್ಕೆ ಅಡ್ಡಿಯಾಗುವ ಕಾರ್ಯವನ್ನು ಮಾಡುವಿರಿ. ಅಜಾಗರೂಕತೆಯಿಂದ ನಿಮ್ಮ ವಸ್ತುವು ಇನ್ನೊಬ್ಬರ ಪಾಲಾಗಬಹುದು. ಕಳೆದ ವಿಚಾರವನ್ನು ಮತ್ತೆ ಮತ್ತೆ ನೆನಪಿಸಿಕೊಂಡು ದುಃಖಿಸುವಿರಿ. ಅಪರಿಚಿತ ಕರೆಗಳು ನಿಮ್ಮನ್ನು ಪೀಡಿಸಬಹುದು. ಇನ್ನೊಬ್ಬರ ಜವಾಬ್ದಾರಿಯನ್ನು ನೀವು ಕಸಿದುಕೊಳ್ಳುವ ಆಲೋಚನೆ ಮಾಡುವಿರಿ. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ‌ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು.ಲ. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ಸ್ನೇಹಿತರ ಸಂಪಾದನೆಯ ದಾರಿಯನ್ನು ಹಾಕಿಕೊಡುವಿರಿ. ಎಲ್ಲದಕ್ಕೂ ಕೂಡಲೇ ಉತ್ತರವನ್ನು ಕೊಡುವ ಅವಶ್ಯಕತೆ ಇರುವುದಿಲ್ಲ. ನಿಮ್ಮ ಅಧಿಕಾರದ ಮಾತುಗಳು ಅಹಂಕಾರದ ಮಾತಾಗುವುದು. ಅಶಕ್ತರಿಗೆ ನಿಮ್ಮ ಕೈಲಾದ ಸಹಕಾರವನ್ನು ಮಾಡುವಿರಿ.

ಲೋಹಿತಶರ್ಮಾ – 8762924271 (what’s app only)

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು