Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 2) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jul 02, 2023 | 12:20 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜುಲೈ 2) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ:ಭಾನು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಮೂಲಾ, ಯೋಗ: ಶುಕ್ಲ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಂಜೆ 05:27 ರಿಂದ 07:04 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:36 ರಿಂದ 02:13 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:50 ರಿಂದ 05:27 ರ ವರೆಗೆ.

ಸಿಂಹ: ನಿಮ್ಮನ್ನು ಸಮಾರಂಭಗಳಿಗೆ ಅತಿಥಿಯಾಗಿ ಆಹ್ವಾನಿಸಬಹುದು. ಆಹಾರದ ವ್ಯತ್ಯಾಸವನ್ನು ಮಾಡಿಕೊಳ್ಳದೇ ಆರೋಗ್ಯವನ್ನು ಕಾಪಾಡಿಕೊಳ್ಳಿ. ನಿಮ್ಮ ಯೋಚನೆಯನ್ನು ಇತರರು ಲಾಭವನ್ನು ಪಡೆದುಕೊಳ್ಳಬಹುದು. ಭವಿಷ್ಯವನ್ನು ಆಲೋಚಿಸಿ ನೀವು ಮಂಕಾಗಬಹುದು. ಅಂತರಂಗದ ಕಲಹವು ಇಂದು ಪ್ರಕಡವಾದೀತು. ನಿಮ್ಮ ಪರಿಶ್ರಮವನ್ನು ಯಾರೂ ತಿಳಿಯಲಾರರು. ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳಬೇಕಾದೀತು. ಒಳ್ಳೆಯ ಕೆಲಸದ ಕಡೆ ನಿಮ್ಮ ಗಮನವಿರಲಿದೆ. ಮನೆಯಲ್ಲಿ ಏನಾನ್ನಾದರೂ ಕಳೆದುಕೊಳ್ಳಬಹುದು. ಇಂದು ಅದು ಬೇಕಾದೀತು.

ಕನ್ಯಾ: ನಿಮ್ಮ ನಡೆಯು ಕೆಲವರಿಗೆ ಅಸಮಾಧಾನವನ್ನು ಉಂಟುಮಾಡಲಿದೆ. ಪುಣ್ಯಸ್ಥಳಗಳಿಗೆ ಹೋಗಬೇಕು ಎಂದು ಅನಿಸಬಹುದು. ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹವು ಸಿಗಬಹುದು. ಇಂದು ನೀವು ಖರ್ಚನ್ನು ಮಾಡುವಾಗ ಸರಿಯಾದ ಲೆಕ್ಕಾಚಾರ ಇರಲಿ. ಹೊಸ‌ ಕೆಲಸದಲ್ಲಿ ನಿಮಗೆ ಗೊಂದಲಗಳು ಆಗಬಹುದು. ನಿಮ್ಮ ವಸ್ತುವು‌ ಕಾಣೆಯಾಗಲಿದೆ. ವಿರೋಧವನ್ನು ನೀವು ಎದುರಿಸಲು ಸಿದ್ಧರಾಗಿರುವಿರಿ. ನೈಪುಣ್ಯತೆಯನ್ನು ಕರಗತಮಾಡಿಕೊಳ್ಳುವ ಅಗತ್ಯವಿದೆ. ಯಾರ ಸಹಾಯವನ್ನೂ ಕೇಳಲು ಹೋಗುವುದಿಲ್ಲ. ನಿಮ್ಮದೇ ಗುಂಗಿನಲ್ಲಿ ಇರುವಿರಿ.

ತುಲಾ: ಉದ್ಯೋಗದಲ್ಲಿ ಬದಲಾವಣೆಯನ್ನು ಕಾಣಬಹುದಾಗಿದೆ. ಮಕ್ಕಳ ಜೊತೆ ಎಲ್ಲಿಗಾದರೂ ಹೋಗಿಬರುವಿರಿ. ವಿದೇಶಕ್ಕೆ ಹೋಗಿಬರಬೇಕಾಗಿಯೂ ಬರಬಹುದು. ಕ್ರೀಡೆಯಲ್ಲಿ ಹೆಚ್ಚಿನ ಉತ್ಸಾಹವು ಇರಲಿದೆ. ಸ್ವಲ್ಪ ಆಸ್ತಿಯನ್ನು ಕಳೆದುಕೊಳ್ಳಬೇಕಾದೀತು. ಅಧಿಕಾರಿಗಳ ಸಹಾಯದಿಂದ ನಿಮ್ಮ ಕೆಲಸವನ್ನು ಸಾಧ್ಯ ಮಾಡಿಕೊಳ್ಳುವಿರಿ. ಆಸ್ತಿಯ ವಿಚಾರವಾಗಿ ನೀವು ಮನೆಯಲ್ಲಿ ಕಲಹವಾಗಬಹುದು. ನಿಮ್ಮ ಸ್ಪಷ್ಟ ನಿರ್ಧಾರವು ಇಷ್ಟವಾಗದೇ ಹೋದೀತು. ಧಾರ್ಮಿಕ ವಿಚಾರಕ್ಕೆ ಹೆಚ್ಚಿನ ಸಮಯವನ್ನು ಕೊಡುವಿರಿ. ಆಪದ್ಧನವನ್ನು ಸಂಗ್ರಹಿಸಿಡಲು ಯೋಚಿಸುವಿರಿ. ಸಕಾರಾತ್ಮಕ ಬದಲಾವಣೆಗಳು ನಿಮ್ಮಲ್ಲಿ ಆಗಬಹುದು.

ವೃಶ್ಚಿಕ: ವಿಶ್ವಾಸವನ್ನು ಪಡೆಯಲು ನೀವು ಬಹಳ ಶ್ರಮವನ್ನು ವಹಿಸಬೇಕಾದೀತು. ಸರ್ಕಾರಿ ಉದ್ಯೋಗಿಗಳಾಗಿದ್ದರೆ ತೊಂದರೆಯಾಗಬಹುದು. ಬಂಧುಗಳ ಮಾತು ನಿಮ್ಮ ಉತ್ಸಾಹವು ಕುಗ್ಗಿಸಬಹುದು. ನಿಮ್ಮ ಮಕ್ಕಳಿಂದ ನೀವು ಪ್ರತ್ಯುತ್ತರವನ್ನು ಕೇಳುವಿರಿ. ಸಮಾಜದ ಜೊತೆ ಉತ್ತಮ‌ ಬಾಂಧವ್ಯವು ಇರಲಿದೆ. ಯಾರ ಮಾತೂ ನಿಮಗೆ ಸಹ್ಯವಾಗದು‌. ಸಮಯೋಚಿತ ಆಲೋಚನೆಯಿಂದ ಉದ್ಯೋಗದಲ್ಲಿ ಹೆಚ್ಚಿನ ಅಭಿವೃದ್ಧಿಯು ಸಾಧ್ಯವಾಗುವುದು. ಮನೆಯ ಕೆಲಸದಲ್ಲಿ ನೀವು ಹೆಚ್ಚು ಸಮಯವನ್ನು ಕಳೆಯುವಿರಿ. ಖರ್ಚುಗಳು ಸ್ವಲ್ಪ ಕಡಿಮೆ ಆಗಲಿದೆ. ಅಡುಗೆಯಲ್ಲಿ ಹೆಚ್ಚು ಆಸಕ್ತಿಯು ಇರಬಹುದು. ಇಂದು ನಿಮ್ಮ ಮುಖ್ಯ ವಿಷಯವೇ ಮರೆತುಹೋಗುವ ಸಾಧ್ಯತೆ ಇದೆ.

ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್