Rashi Bhavishya: ಇಂದಿನ ರಾಶಿಭವಿಷ್ಯ, ಈ ರಾಶಿಯವರು ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಾಗಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಇಂದಿನ ರಾಶಿಭವಿಷ್ಯ, ಈ ರಾಶಿಯವರು ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಾಗಿರಿ
ಇಂದಿನ ರಾಶಿಭವಿಷ್ಯ (ಜೂನ್ 12)Image Credit source: istock
Follow us
Rakesh Nayak Manchi
|

Updated on: Jun 12, 2023 | 12:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜೂನ್ 12 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ನವಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಆಯುಷ್ಮಾನ್, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆಗೆ, ರಾಹು ಕಾಲ ಬೆಳಗ್ಗೆ 07:41 ರಿಂದ 09:18ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:55 ರಿಂದ ಮಧ್ಯಾಹ್ನ 12:32ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:09 ರಿಂದ 03:46ರ ವರೆಗೆ.

ಸಿಂಹ: ನಿಮ್ಮ ಅಸಭ್ಯ ಮಾತುಗಳು ವ್ಯಕ್ತಿತ್ವವನ್ನು ತೋರಿಸಲಿವೆ. ಸಮಸ್ಯೆಗಳನ್ನು ಬಹಳ ಉತ್ಸಾಹದಿಂದ ಎದುರಿಸುವಿರಿ. ಉದ್ಯೋಗದಲ್ಲಿ ನಿಮಗೆ ಉಂಟಾದ ಗೊಂದಲವನ್ನು ಮೇಲಧಿಕಾರಿಗಳಿಗೆ ತಿಳಿಸಿ. ಪರಿಹಾರವನ್ನು ಕಂಡುಕೊಳ್ಳಿ. ತಿಳಿಸದೇ ಇರಬೇಡಿ. ನೀವು ಇತರರನ್ನು ಟೀಕಿಸುವುದನ್ನು ನಿಲ್ಲಿಸಿದರೆ, ಸಂಬಂಧಗಳಿಂದ ಉತ್ತಮ ಪ್ರಯೋಜನವನ್ನು ಪಡೆಯುತ್ತೀರಿ. ಎಲ್ಲವೂ ಸಾಮಾನ್ಯವಾಗಿದ್ದರೂ ಮನಸ್ಸು ನಿರಾಸಕ್ತಿಯಿಂದ ಬಳಲುತ್ತದೆ. ನಿಮ್ಮ ಕಡಿಮೆಯಾಗುವ ಭಯವು ಕಾಡಬಹುದು. ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳುವಿರಿ. ತಂದೆಯ ಮಾತು ನಿಮಗೆ ಸರಿ ಕಾಣಿಸದೇ ಇರುವುದು.

ಕನ್ಯಾ: ಚಿಂತೆಗಳಿಂದ ಸುತ್ತುವರಿದ ಮನಸ್ಸನ್ನು ದೇವರಲ್ಲಿ ನೆಲೆಗೊಳಿಸಿ ಸಮಾಧಾನಪಟ್ಟುಕೊಳ್ಳಿ. ದೃಢವಾದ ನಿರ್ಧಾರವು ನಿಮ್ಮ ಮಾನಸಿಕತೆಯನ್ನು ತೋರಿಸುತ್ತದೆ. ಕೆಲಸದ ಸ್ಥಳದಲ್ಲಿ ಅನೂಹ್ಯ ಸನ್ನಿವೇಶಗಳು ಅಡ್ಡಿಯಾಗಬಹುದು. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ನಿಷ್ಕಾಳಜಿಯಿಂದ ಇರಬಾರದು. ಧಾರ್ಮಿಕ ನಾಯಕರಿಗೆ ಹೆಚ್ಚು ಲಾಭ ಹಾಗೂ ಯಶಸ್ಸು ಸಿಗಬಹುದು. ಪುಣ್ಯಸ್ಥಳಕ್ಕೆ ನೀವು ಹೋಗಲಿದ್ದೀರಿ. ಮಕ್ಕಳ ವಿಚಾರದಲ್ಲಿ ಮನಸ್ಸು ವ್ಯಾಕುಲತೆಯಿಂದ ಇರಲಿದೆ. ಇಂದು ಆಧ್ಯಾತ್ಮಿಕ ಭಾವನೆಗಳು ನಿಮ್ಮ ಮನಸ್ಸಿನ ಮೇಲೆ ಗಾಢವಾದ ಪರಿಣಾಮವನ್ನು ಬೀರಬಹುದು.

ತುಲಾ: ನಿಮ್ಮ ಮೇಲೆ ನೀವು ನಂಬಿಕೆಯಿಡಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ನಿಮ್ಮ ಸಾಮರ್ಥ್ಯವನ್ನು ಪರಿಚಯಿಸುವಿರಿ. ಬಹಳ ಕಾಲದಿಂದ ಮಾಡಬೇಕಿದ್ದ ಕೆಲಸವು ಅಪೂರ್ಣವಾಗಲಿದೆ. ಯೋಜಿತ ಕೆಲಸಗಳು ಫಲಪ್ರದವಾಗಲಿವೆ. ನೈತಿಕ ಮತ್ತು ಅನೈತಿಕತೆಯ ಬಗ್ಗೆ ಯೋಚಿಸುವ ಮನಸ್ಸು ಭೌತಿಕ ಪರಿಸರದೊಂದಿಗೆ ಹೆಜ್ಜೆ ಹಾಕಲು ಸಾಧ್ಯವಾಗುವುದಿಲ್ಲ. ರಹಸ್ಯ ಶತ್ರುಗಳ ಬಗ್ಗೆ ಎಚ್ಚರದಿಂದಿರಿ. ಹೊಸ ವ್ಯಾಪಾರ ಸಂಬಂಧಗಳು ತೀವ್ರಗೊಳ್ಳಬಹುದು. ಇಂದು ಹಿರಿಯರ ಬೆಂಬಲ ನಿಮಗೆ ಸಿಗಲಿದೆ. ಕೆಲಸದ ವಾತಾವರಣವು ಆಹ್ಲಾದಕರವಾಗಿರುತ್ತದೆ.

ವೃಶ್ಚಿಕ: ಕೆಲವು ಘಟನೆಗಳು ಇಂದು ಆರ್ಥಿಕ ಮತ್ತು ಕೌಟುಂಬಿಕ ಕಾಳಜಿಗಳ ಮನಸ್ಸಿನ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ. ನೀವು ಚಾತುರ್ಯದಿಂದ ಸಂಬಂಧದ ಪ್ರಯೋಜನವನ್ನು ಪಡೆದುಕೊಳ್ಳುವಿರಿ. ಕೆಲಸದ ಸ್ಥಳದಲ್ಲಿ ನಿಮ್ಮ ವಾಕ್ಚಾತುರ್ಯದಿಂದ ಲಾಭವನ್ನು ನೀವು ಪಡೆದುಕೊಳ್ಳುವಿರಿ. ಮನಸ್ತಾಪವನ್ನು ತಣಿಸಲು ಸಂಗಾತಿಯ ಜೊತೆ ಹೆಚ್ಚು ಕಾಲ ಕಳೆಯುವಿರಿ. ಅನನುಕೂಲದ ಸ್ಥಿತಿಯಲ್ಲಿಯೂ ಲಾಭವನ್ನು ಪಡೆಯವ ಕಲೆಯನ್ನು ನೀವು ತಿಳಿದಿರುವಿರಿ. ಕೆಲಸಗಳ ನಡೆವೆಯೂ ನೀವು ನಿಮ್ಮ ಸಂಗಾತಿಯ ಕುರಿತು ಆಲೋಚನೆ ಮಾಡುವಿರಿ.

-ಲೋಹಿತಶರ್ಮಾ ಇಡುವಾಣಿ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು