Daily Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯವರ ಪ್ರೇಮಪ್ರಕರಣವು ಹೊಸ ರೂಪ ಪಡೆದುಕೊಳ್ಳಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 23) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯವರ ಪ್ರೇಮಪ್ರಕರಣವು ಹೊಸ ರೂಪ ಪಡೆದುಕೊಳ್ಳಬಹುದು
ಇಂದಿನ ರಾಶಿಭವಿಷ್ಯImage Credit source: istock
Follow us
Rakesh Nayak Manchi
|

Updated on: Jun 23, 2023 | 12:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜೂನ್ 23 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ : ಆರ್ದ್ರಾ, ಮಾಸ : ಆಷಾಢ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಮಘಾ, ಯೋಗ : ವಜ್ರ, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:57 ರಿಂದ 12:33ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ  03:49 ರಿಂದ 05:22ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:43 ರಿಂದ 09:20ರ ವರೆಗೆ.

ಸಿಂಹ: ವಿವಾಹಜೀವನಕ್ಕೆ ಕಾಲಿಟ್ಟ ನಿಮಗೆ ಕೆಲವು ಅಸ್ಪಷ್ಟವಾದ‌ ನಡತೆಯಿಂದ ದಿಗ್ಭ್ರಾಂತರಾಗುವ ಸಾಧ್ಯತೆ ಇದೆ. ನಿಮ್ಮ ಬಳಿ ಬಂದು ಕ್ಷಮಾಪಣೆ ಕೇಳಿದಲ್ಲಿ ಕ್ಷಮಿಸುವ ದೊಡ್ಡತನವನ್ನು ತೋರಿಸಿ.‌ ಮಕ್ಕಳಿಂದ ನಿಮಗೆ ಕಿರಿಕಿರಿಯಾಗಲಿದೆ. ಸಂತೋಷದಿಂದ ನೀವು ಇರುವಿರಿ. ಪ್ರೇಮಪ್ರಕರಣವು ಹೊಸ ರೂಪವನ್ನು ಪಡೆದುಕೊಳ್ಳಬಹುದು. ಮನೆಯ ಕಡೆಯಿಂದ‌ ಅನುಮತಿ ಸಿಗದೇ ದುಃಖಿಸಬೇಕಾಗಬಹುದು. ಬಹಳ ದಿನಗಳ ಅನಂತರ ಉದ್ಯೋಗಕ್ಕೆ ಸೇರಿಕೊಳ್ಳುವ ಅವಕಾಶ ಸಿಗಲಿದೆ. ವಾಹನದಿಂದ‌ ಬಿದ್ದು ಪೆಟ್ಟುಮಾಡಿಕೊಳ್ಳಬಹದು. ಜಾಗರೂಕತೆಯಿಂದ ವಾಹನವನ್ನು ಚಲಾಯಿಸಿ.

ಕನ್ಯಾ: ನಿಮ್ಮ ಪೂರ್ವ ನಿರ್ಧಾರವು ಬದಲಾಗಬಹುದು. ನಿಮ್ಮದಾದ ವಸ್ತುವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಅಮೂಲ್ಯವಾದ ವಸ್ತುವನ್ನು ನೀವು ಕಳೆದಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಕ್ಕೆ ಸಂಬಂಧಿಸಿದೆ ನಿಮ್ಮಲ್ಲಿ ಅನಿಶ್ಚಿತತೆ ಇರಲಿದೆ. ಸಂಶೋಧನೆಯಲ್ಲಿ ತೊಡಗಿದ್ದರೆ ಸ್ವಲ್ಪ ಹಿನ್ನಡೆಯೂ ಹಣದ ಕೊರತೆಯೂ ಆಗಬಹುದು.‌ ಯಾರಿಂದಲಾದರೂ ಅಪಮಾನವೂ ಆಗುವ ಸಾಧ್ಯತೆ ಇದೆ. ಧೃತಿಗೆಡದೆ ಮುನ್ನಡೆಯಬೇಕಾಗಬಹುದು. ಸಮೀಪದ ಕುಮಾರಸ್ವಾಮಿಯ ದೇಗುಲಕ್ಕೆ ಹೋಗಿ ಪೂಜೆಯನ್ನು ಸಲ್ಲಿಸಿ.

ತುಲಾ: ನಿಮಗೆ ಹೊಸ ಉದ್ಯಮವನ್ನು ಆರಂಭಿಸುವ ಆಲೋಚನೆ ಇದ್ದರೂ ಸಂಪೂರ್ಣ ಧೈರ್ಯವು ನಿಮಗೆ ಸಾಕಾಗದೇ ಹೋದೀತು. ಮನೆಯಲ್ಲಿ ಇಂದು ಹೆಚ್ಚಿನ‌ ಕೆಲಸವು ಆಗಬಹುದು. ನಿಮ್ಮ ಕ್ರಮಗಳು ಕೆಲವರಿಗೆ ಹಿಡಿಸದೇ ಇದ್ದೀತು. ನಿಮ್ಮನ್ನು ನಿಯಂತ್ರಿಸಲು ಯಾರಾದರೂ ಮೇಲಧಿಕಾರಿಯ ಕಿವಿ ಚುಚ್ಚಬಹುದು. ಹಳೆಯ ವಿಚಾರವು ಪುನಃ ಮುಖ್ಯವೇದಿಕೆ ಬರುವ ಸಾಧ್ಯತೆ ಇದೆ.‌ ಕುಟುಂಬದಲ್ಲಿ ಸಣ್ಣ ಕಲಹವೂ ಆಗಬಹುದು. ಸಮಾಜದಲ್ಲಿ ಉತ್ತಮ‌ ಕಾರ್ಯವನ್ನು ಮಾಡಲು ನೀವು ಬಯಸುವಿರಿ. ಸ್ನೇಹಿತರ ಜೊತೆ ಸೇರಿಕೊಳ್ಳುವಿರಿ.

ವೃಶ್ಚಿಕ: ಮನೆಯ ಕೆಲಸ ಹಾಗೂ ಕಛೇರಿಯ ಕೆಲಸಗಳನ್ನು ಸರಿದೂಗಿಸಿಕೊಂಡು ಹೋಗುವುದು ಕಷ್ಟವಾದೀತು. ಅನಾಯಾಸವಾಗಿ ಲಾಭವನ್ನು ಪಡೆಯುವ ಜಾಡ್ಯವು ಬರಬಹುದು. ಹೊಸ ಯೋಜನೆಯೊಂದು ನಿಮಗೆ ಸಿಗಲಿದ್ದು ಬಹಳ ಉತ್ಸಾಹವಿರಲಿದೆ. ನಿಮ್ಮನ್ನು ತಿಳಿದಿಕೊಳ್ಳಲು ಬಯಸುವವರು ನಿಮ್ಮ‌ ಒಡನಾಟವನ್ನು ಮಾಡಬಹುದು. ಬೇರೆಯವರ ನೇರವಾದ ನುಡಿಗಳು ನಿಮಗೆ ನಾಟಬಹುದು.‌ ಮನಸ್ಸು ಬಹಳ ತಳಮಳಗೊಳ್ಳಬಹುದು. ಇತರ ಕೆಲಸದಲ್ಲಿ ಮಗ್ನವಾಗಿ ಮಾಡಬೇಕಾದ ಮುಖ್ಯ ಕೆಲಸವು ನಿಂತುಹೋಗಬಹುದು. ಸ್ವಚ್ಛಂದವಾಗಿ ವಿಹರಿಸುವ ಮನಸ್ಸು ಇರಲಿದೆ.

-ಲೋಹಿತಶರ್ಮಾ ಇಡುವಾಣಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್