Daily Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯವರು ಸಂಗಾತಿ ವಿಷಯದಲ್ಲಿ ಬೇಸರವಾಗಲಿದ್ದೀರಾ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 24) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯವರು ಸಂಗಾತಿ ವಿಷಯದಲ್ಲಿ ಬೇಸರವಾಗಲಿದ್ದೀರಾ
ಜ್ಯೋತಿಷ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 24, 2023 | 6:28 AM

ಶುಭೋದಯ ಗೆಳೆಯರೇ.. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಕೆಲವರು ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವ ಹವ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಇಂದಿನ ರಾಶಿ ಭವಿಷ್ಯ ಏನು ಹೇಳುತ್ತದೆ ಅಥವಾ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜೂನ್​ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ : ಆರ್ದ್ರಾ, ಮಾಸ : ಆಷಾಢ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಸಿದ್ದಿ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:21 ರಿಂದ 10:58ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:12 ರಿಂದ 03:49ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:07 ರಿಂದ 07:44ರ ವರೆಗೆ.

ಸಿಂಹ: ಇಂದಿನ ನಿಮ್ಮ ಆಸೆಗಳು ಪೂರ್ಣವಾಗದು. ಇದಕ್ಕಾಗಿ ಎಲ್ಲರನ್ನೂ ಶಪಸುವುದು ಸರಿಯಲ್ಲ. ನಿಮ್ಮವರ ಸಲಹೆಯನ್ನು ಪಡೆದು ಕೆಲಸಕ್ಕೆ ಹೋಗುವುದು ಒಳ್ಳೆಯದು. ನಿಮ್ಮ ಪರೀಕ್ಷೆಯ ಕಾಲವಾಗಿದ್ದು ನೀವು ಅದನ್ನು ದಾಟಲು ಶ್ರಮಪಡಬೇಕಾದೀತು. ಆಕಸ್ಮಿಕವಾಗಿ ವಸ್ತುವನ್ನು ಕಳೆದುಕೊಳ್ಳುವಿರಿ. ಬಂಧುಗಳ ನಡುವೆ ಕಲಹವಾಗಬಹುದು. ಅವರು ನಿಮ್ಮಿಂದ ದೂರ ಉಳಿಯಬಹುದು. ಇನ್ನೊಬ್ಬರಿಗೆ ನೀಡುವ ವಿಚಾರದಲ್ಲಿ ನೀವು ಬಹಳ ನೊಂದುಕೊಳ್ಳುವಿರಿ. ನಿಮಗೆ ಕಿರಿಕರಿಯಾಗುವ ಸ್ಥಳದಿಂದ‌ ದೂರವಿರಲು ಪ್ರಯತ್ನಿಸುವಿರಿ. ಪ್ರಯಾಣವು ಶುಭವನ್ನು ತರಬಹುದು.

ಕನ್ಯಾ: ತಾಳ್ಮೆಯಿಂದ ಇರುವುದು ಇಂದು ನಿಮಗೆ ಕಷ್ಟವಾದೀತು. ನಿಮ್ಮ ಕೆಲಸಕ್ಕೆ ಮನೆಯವರ ಬೆಂಬಲ‌ಸಿಗುವುದು ಎಂಬ ಭ್ರಮೆಯಲ್ಲಿ ಇರುವಿರಿ. ಕೃಷಿಯಲ್ಲಿ ನೀವು ಹೊಸ ವಿಧಾನವನ್ನು ರೂಪಿಸಿಕೊಳ್ಳುವಿರಿ‌‌. ಸೌಂದರ್ಯಕ್ಕೆ ಹೆಚ್ಚಿನ ಮಹತ್ತ್ವವನ್ನು ಕೊಡಲಿದ್ದೀರಿ. ವಿದೇಶಕ್ಕೆ ಹೋಗುವುದು ಕಾರಣಾಂತರಗಳಿಂದ ನಿಂತುಹೋದೀತು. ಇದು ನಿಮಗೆ ಬೇಸರವಾದೀತು. ವಿವಾಹವು ಬಹಳ ವಿಳಂಬವಾಗುವ ಸಾಧ್ಯತೆ ಇದೆ. ಮಿತ್ರರ ಮೂಲಕ ವಿವಾಹವು ಸಂಭವಿಸುವುದು. ಶಿವಕವಚವನ್ನು ಪಠಿಸಿ‌.

ತುಲಾ: ಸಮಯದ ಬೆಲೆಯನ್ನು ನೀವು ಇಂದು ಅರ್ಥಮಾಡಿಕೊಳ್ಳುವಿರಿ. ನಿಮ್ಮ ಬಗ್ಗೆ ಇರುವ ಭಾವನೆಗಳು ಬದಲಾಗಬಹುದು. ಇಷ್ಟಪಟ್ಟಿದ್ದನ್ನು ನೀವು ಪಡೆದುಕೊಳ್ಳುವಿರಿ. ಮನೋವ್ಯಥೆಯನ್ನು ನೀವು ನಿಧಾನವಾಗಿ ಕಳೆದುಕೊಳ್ಳುವಿರಿ. ನಿಮಗೆ ಸಮ್ಮಾನ ಮಾಡಲು ಆಪ್ತರು ನಿಶ್ಚಯಿಸುವರು. ಮಕ್ಕಳ‌‌ ಅನಾರೋಗ್ಯದಿಂದ ನೀವು ದುರ್ಬಲರಾಗುವಿರಿ. ನೂತನ ವಸ್ತುಗಳನ್ನು ಪಡೆದುಕೊಳ್ಳುವವರಿದ್ದೀರಿ. ನಿಮ್ಮ ಸಿಟ್ಟಿಗೆ ಮನೆಯಲ್ಲಿ ಭಯ ಉಂಟಾಗಬಹುದು. ಗಣಪತಿಯನ್ನು ನೀವು ಆರಾಧಿಸಿ ಶುಭಫಲವನ್ನು ಪಡೆಯಿರಿ.

ವೃಶ್ಚಿಕ: ನಿಮ್ಮ ಉದ್ಯೋಗಕ್ಕೆ ಬೇಕಾದ ಸಲಹೆಗಳನ್ನು ನೀವು ತೆಗೆದುಕೊಳ್ಳಬೇಕಾಗಬಹುದು. ಹೆಚ್ಚಿನ ಕೆಲಸಗಳನ್ನು ನೀವು ಮುಂದೂಡಲಿದ್ದೀರಿ. ಎಲ್ಲದಕ್ಕೂ ನೀವು ಇನ್ನೊಬ್ಬರನ್ನು ಬೊಟ್ಟು ಮಾಡಿಸಲಿದ್ದೀರಿ. ಸಂಗಾತಿಯ ವಿಷಯದಲ್ಲಿ ನಿಮಗೆ ಬೇಸರವಾಗಲಿದೆ. ಸುಖವನ್ನು ಪಡೆಯಲು ನೀವು ಬೇರೆ ಮಾರ್ಗವನ್ನು ಹುಡುಕುವಿರಿ.‌ ಕೆಟ್ಟ ಅಭ್ಯಾಸವನ್ನು ಆರಂಭಿಸುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಸಾಮರ್ಥ್ಯವನ್ನು ತೋರಿಸುವಿರಿ. ನಿಮ್ಮ ಮಾತುಗಳು ಕಛೇರಿಯಲ್ಲಿ ನಡೆಯಬಹುದು. ಮನಸ್ಸಿನಲ್ಲಿ ಆತಂಕವು ಉಂಟಾಗಬಹುದು‌. ಹಣಸಂಪಾದನೆಯ ವಿಚಾರವೇ ತಲೆಯಲ್ಲಿ ಓಡಾಡಲಿದೆ‌. ಗುರುದರ್ಶನವನ್ನು ಪಡೆಯಿರಿ.

ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?