AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 6:00 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 25 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 54 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:06 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:04 ರಿಂದ 07:40ರ ವರೆಗೆ, ಗುಳಿಕ ಕಾಲ 09:17 ರಿಂದ 10:53ರ ವರೆಗೆ.

ಸಿಂಹ: ನಿಮ್ಮ ಬಳಿ ಇರುವುದನ್ನು ಇನ್ನೊಬ್ಬರಿಗೆ ಕೊಡುವ ಮನಸ್ಸು ಇರದು. ಅಧಿಕವಾದ ಮಾತುಗಳು ನಿಮ್ಮ ಸ್ವಭಾವವನ್ನು ತಿಳಿಸುವುದು. ಎಷ್ಟೋ ದಿನದ ಕನಸು ನನಸಾಗುವ ಸಾಧ್ಯತೆ ಇದೆ. ನಿಮ್ಮ ಬಗ್ಗೆ ನಿಮಗೆ ಬೇಸರ ಎನಿಸಬಹುದು. ಸಾಲವನ್ನು ಮರಳಿ ಪಡೆಯಲು ತಂತ್ರವನ್ನು ಬಳಸುವಿರಿ. ಪ್ರೀತಿಯನ್ನು ಹಂಚಿಕೊಳ್ಳಲು ಸಮಯಕ್ಕಾಗಿ ಕಾಯಬಹುದು. ಹೊಸ ತಂತ್ರಜ್ಞಾನವನ್ನು ಕಲಿಯುವ ಮನಸ್ಸಾದೀತು. ಹಿರಿಯರ ಮಾತಿಗೆ ಎದುರಾಡುವುದು ಅಭ್ಯಾಸವಾದೀತು. ಈ ವಿಚಾರದಲ್ಲಿ ನಿಮ್ಮನ್ನು ಬದಲಿಸಿಕೊಳ್ಳಬೇಕಾದೀತು. ನಿಮ್ಮ ಉದ್ಯೋಗಕ್ಕೆ ಹೊಸ ದಿಕ್ಕು ಬರಬಹುದು.

ಕನ್ಯಾ: ನಿಮ್ಮ ಉಪಕಾರವನ್ನು ಸ್ಮರಿಸುವ ಜನರು ನಿಮಗರ ಸಿಗುವರು. ನಿಮ್ಮ ಭಾವನೆಗಳನ್ನು ಹಾಸ್ಯ ಮಾಡುವರು. ಸೌಂದರ್ಯಕ್ಕೆ ಆಕರ್ಷಿತರಾಗುವಿರಿ. ಕೆಲಸದಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ಉದ್ಯೋಗದ ಸ್ಥಾನವನ್ನು ಬದಲಿಸುವ ನಿಮ್ಮನ್ನು ಬಿಟ್ಟುಕೊಡಲು ಕಛೇರಿಯು ಸಿದ್ಧವಿರುವುದಿಲ್ಲ. ನೀವೇ ಹಾಕಿಕೊಂಡ ಚೌಕಟ್ಟನ್ನು ನೀವು ಮುರಿಯಬೇಕಾದೀತು.‌ ನಿರ್ಧಾರವಾದ ವಿವಾಹವು ಮುಂದೆ ಹೋದೀತು. ನಿಮ್ಮ ಬಗ್ಗೆಯೇ ನಿಮಗೆ ತಪ್ಪಿತಸ್ಥಭಾವವು ಮೂಡಬಹುದು. ಆಪ್ತರ ಬಗ್ಗೆ ಇರುವ ನಿಮ್ಮ ಸುಪ್ತಭಾವವು ಇಂದು ಪ್ರಕಟವಾದೀತು.

ತುಲಾ: ನೀವು ಅಂದುಕೊಂಡದ್ದು ಮಾತ್ರ ಸತ್ಯ ಎನ್ನುವ ನಿರ್ಧಾರಕ್ಕೆ ಬರುವುದು ಬೇಡ.‌ ಇನ್ನೊಂದು ಮುಖವನ್ನೂ ನೊಡುವುದು ಉತ್ತಮ. ಹಣಕಾಸಿನ ವಿಚಾರದಲ್ಲಿ ಹೆಚ್ಚು ತಲೆಕೆಡಿಸಿಕೊಳ್ಳುವವರಿದ್ದೀರಿ. ನೀವು ಶಿಕ್ಷಕರಾಗಿ ಇದ್ದರೆ ನಿಮಗೆ‌ ನಿಮ್ಮ‌ ವಿದ್ಯಾರ್ಥಿಗಳ ಸಹಾಯವು ಇಂದು ಸಿಗಲಿದೆ. ಸ್ನೇಹಿತರ ನಿಮ್ಮ ಜೊತೆ ಕಳೆಯಲು ಬಯಸಬಹುದು. ನೆರೆಹೊರೆಯವರು ನಿಮ್ಮನ್ನು ಗಮನಿಸಬಹುದು.‌ ಆಹಾರ ಉತ್ಪನ್ನದ ಮಾರಾಟವು ನಿಮಗೆ ಲಾಭದಾಯಕವಾಗಲಿದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ದುರಭ್ಯಾಸವನ್ನು ರೂಢಿಸಿಕೊಳ್ಳುವ ಸಾಧ್ಯತೆ ಇದೆ.

ವೃಶ್ಚಿಕ: ಉದ್ಯೋಗದಲ್ಲಿ ನಿಮ್ಮ ಲಾಭದ ಅಂಶವನ್ನು ಹೆಚ್ಚು ಮಾಡಿಕೊಳ್ಳಲು ಯೋಜನೆಯನ್ನು ಹಾಕಿಕೊಳ್ಳುವಿರಿ. ಹರಟೆಯಿಂದ ಇಂದಿನ ದಿನವು ಮುಕ್ತಾಯವಾಗುವುದು. ಕಛೇರಿಯ ಕೆಲಸದ ಒತ್ತಡದಲ್ಲಿ ಮನೆಯ ಕೆಲಸಗಳು ಮರೆಯಾಗಬಹುದು. ಜೀವನೋಪಾಯಕ್ಕೆ ಯಾವುದಾದರೂ‌ ಇನ್ನೊಂದು ವೃತ್ತಿಯನ್ನು ಆಶ್ರಯಿಸುವಿರಿ. ಅವಸರದಲ್ಲಿ ಏನಾನ್ನಾದರೂ ಮಾಡಿಕೊಳ್ಳಬೇಕಾದೀತು. ಇನ್ನೊಬ್ಬರನ್ನು ನೋಡಿ ನಗುವುದು ಬೇಡ. ಎಲ್ಲ ಸಂದರ್ಭದಲ್ಲಿಯೂ ನಿಮ್ಮ ವರ್ತನೆಯು ಬೇರೆಯವರಿಗೆ ಸರಿಯಾಗದು.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!