ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 25 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ಸಿಂಹ: ನಿಮ್ಮ ಬಳಿ ಇರುವುದನ್ನು ಇನ್ನೊಬ್ಬರಿಗೆ ಕೊಡುವ ಮನಸ್ಸು ಇರದು. ಅಧಿಕವಾದ ಮಾತುಗಳು ನಿಮ್ಮ ಸ್ವಭಾವವನ್ನು ತಿಳಿಸುವುದು. ಎಷ್ಟೋ ದಿನದ ಕನಸು ನನಸಾಗುವ ಸಾಧ್ಯತೆ ಇದೆ. ನಿಮ್ಮ ಬಗ್ಗೆ ನಿಮಗೆ ಬೇಸರ ಎನಿಸಬಹುದು. ಸಾಲವನ್ನು ಮರಳಿ ಪಡೆಯಲು ತಂತ್ರವನ್ನು ಬಳಸುವಿರಿ. ಪ್ರೀತಿಯನ್ನು ಹಂಚಿಕೊಳ್ಳಲು ಸಮಯಕ್ಕಾಗಿ ಕಾಯಬಹುದು. ಹೊಸ ತಂತ್ರಜ್ಞಾನವನ್ನು ಕಲಿಯುವ ಮನಸ್ಸಾದೀತು. ಹಿರಿಯರ ಮಾತಿಗೆ ಎದುರಾಡುವುದು ಅಭ್ಯಾಸವಾದೀತು. ಈ ವಿಚಾರದಲ್ಲಿ ನಿಮ್ಮನ್ನು ಬದಲಿಸಿಕೊಳ್ಳಬೇಕಾದೀತು. ನಿಮ್ಮ ಉದ್ಯೋಗಕ್ಕೆ ಹೊಸ ದಿಕ್ಕು ಬರಬಹುದು.
ಕನ್ಯಾ: ನಿಮ್ಮ ಉಪಕಾರವನ್ನು ಸ್ಮರಿಸುವ ಜನರು ನಿಮಗರ ಸಿಗುವರು. ನಿಮ್ಮ ಭಾವನೆಗಳನ್ನು ಹಾಸ್ಯ ಮಾಡುವರು. ಸೌಂದರ್ಯಕ್ಕೆ ಆಕರ್ಷಿತರಾಗುವಿರಿ. ಕೆಲಸದಲ್ಲಿ ವಿಳಂಬವಾಗುವ ಸಾಧ್ಯತೆ ಇದೆ. ಉದ್ಯೋಗದ ಸ್ಥಾನವನ್ನು ಬದಲಿಸುವ ನಿಮ್ಮನ್ನು ಬಿಟ್ಟುಕೊಡಲು ಕಛೇರಿಯು ಸಿದ್ಧವಿರುವುದಿಲ್ಲ. ನೀವೇ ಹಾಕಿಕೊಂಡ ಚೌಕಟ್ಟನ್ನು ನೀವು ಮುರಿಯಬೇಕಾದೀತು. ನಿರ್ಧಾರವಾದ ವಿವಾಹವು ಮುಂದೆ ಹೋದೀತು. ನಿಮ್ಮ ಬಗ್ಗೆಯೇ ನಿಮಗೆ ತಪ್ಪಿತಸ್ಥಭಾವವು ಮೂಡಬಹುದು. ಆಪ್ತರ ಬಗ್ಗೆ ಇರುವ ನಿಮ್ಮ ಸುಪ್ತಭಾವವು ಇಂದು ಪ್ರಕಟವಾದೀತು.
ತುಲಾ: ನೀವು ಅಂದುಕೊಂಡದ್ದು ಮಾತ್ರ ಸತ್ಯ ಎನ್ನುವ ನಿರ್ಧಾರಕ್ಕೆ ಬರುವುದು ಬೇಡ. ಇನ್ನೊಂದು ಮುಖವನ್ನೂ ನೊಡುವುದು ಉತ್ತಮ. ಹಣಕಾಸಿನ ವಿಚಾರದಲ್ಲಿ ಹೆಚ್ಚು ತಲೆಕೆಡಿಸಿಕೊಳ್ಳುವವರಿದ್ದೀರಿ. ನೀವು ಶಿಕ್ಷಕರಾಗಿ ಇದ್ದರೆ ನಿಮಗೆ ನಿಮ್ಮ ವಿದ್ಯಾರ್ಥಿಗಳ ಸಹಾಯವು ಇಂದು ಸಿಗಲಿದೆ. ಸ್ನೇಹಿತರ ನಿಮ್ಮ ಜೊತೆ ಕಳೆಯಲು ಬಯಸಬಹುದು. ನೆರೆಹೊರೆಯವರು ನಿಮ್ಮನ್ನು ಗಮನಿಸಬಹುದು. ಆಹಾರ ಉತ್ಪನ್ನದ ಮಾರಾಟವು ನಿಮಗೆ ಲಾಭದಾಯಕವಾಗಲಿದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ದುರಭ್ಯಾಸವನ್ನು ರೂಢಿಸಿಕೊಳ್ಳುವ ಸಾಧ್ಯತೆ ಇದೆ.
ವೃಶ್ಚಿಕ: ಉದ್ಯೋಗದಲ್ಲಿ ನಿಮ್ಮ ಲಾಭದ ಅಂಶವನ್ನು ಹೆಚ್ಚು ಮಾಡಿಕೊಳ್ಳಲು ಯೋಜನೆಯನ್ನು ಹಾಕಿಕೊಳ್ಳುವಿರಿ. ಹರಟೆಯಿಂದ ಇಂದಿನ ದಿನವು ಮುಕ್ತಾಯವಾಗುವುದು. ಕಛೇರಿಯ ಕೆಲಸದ ಒತ್ತಡದಲ್ಲಿ ಮನೆಯ ಕೆಲಸಗಳು ಮರೆಯಾಗಬಹುದು. ಜೀವನೋಪಾಯಕ್ಕೆ ಯಾವುದಾದರೂ ಇನ್ನೊಂದು ವೃತ್ತಿಯನ್ನು ಆಶ್ರಯಿಸುವಿರಿ. ಅವಸರದಲ್ಲಿ ಏನಾನ್ನಾದರೂ ಮಾಡಿಕೊಳ್ಳಬೇಕಾದೀತು. ಇನ್ನೊಬ್ಬರನ್ನು ನೋಡಿ ನಗುವುದು ಬೇಡ. ಎಲ್ಲ ಸಂದರ್ಭದಲ್ಲಿಯೂ ನಿಮ್ಮ ವರ್ತನೆಯು ಬೇರೆಯವರಿಗೆ ಸರಿಯಾಗದು.