Horoscope Today: ಇಂದಿನ ರಾಶಿಭವಿಷ್ಯ, ಈ ರಾಶಿಯವರು ಅಧಿಕವಾಗಿ ಮಾತನಾಡದೇ ಸುಮ್ಮನಿರುವುದು ಉತ್ತಮ

|

Updated on: Jun 27, 2023 | 12:30 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 27) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಇಂದಿನ ರಾಶಿಭವಿಷ್ಯ, ಈ ರಾಶಿಯವರು ಅಧಿಕವಾಗಿ ಮಾತನಾಡದೇ ಸುಮ್ಮನಿರುವುದು ಉತ್ತಮ
ಇಂದಿನ ರಾಶಿಭವಿಷ್ಯ
Image Credit source: Getty Images
Follow us on

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಜೂನ್​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ನವಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಪರಿಘ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:49 ರಿಂದ 05:26ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:21 ರಿಂದ 10:58 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:35 ರಿಂದ 02:12ರ ವರೆಗೆ.

ಸಿಂಹ: ಇಂದು ನೀವು ಅಧಿಕವಾಗಿ ಮಾತನಾಡದೇ ಸುಮ್ಮನಿರುವುದು ಉತ್ತಮ. ಕಾಲಹರಣಕ್ಕೆ ನಿಮಗೆ ಇನ್ನೊಬ್ಬರ ವಿಚಾರವನ್ನು ಆಡಿಕೊಳ್ಳುವಿರಿ. ನಿಮ್ಮಲ್ಲಿ ದೂರದರ್ಶಿತ್ವದ ಕೊರತೆ ಹೆಚ್ಚು ಕಾಣಬಹುದು. ಎಂದೋ ಮಾಡಿದ ಕೆಲಸಕ್ಕೆ ಇಂದು ಪಶ್ಚಾತ್ತಾಪ ಪಡಬೇಕಾದೀತು. ಸಂಗಾತಿಯ ಮನಸ್ಸನ್ನು ನೋಯಿಸಿ ಅದನ್ನು ಸರಿಪಡಿಸುವಿರಿ.‌ ಹಳೆಯ ಸ್ನೇಹಿತರ ಜೊತೆ ದೂರಪ್ರಯಾಣವನ್ನು ಮಾಡುವಿರಿ. ತಂದೆಯನ್ನು ನೋಡುವ ಹಂಬಲ ಅಧಿಕವಾಗುದು. ನಿಮ್ಮ‌ ಲೆಕ್ಕಾಚಾರವು ಬುಡಮೇಲಾದೀತು. ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರನ್ನು ಭೇಟಿಯಾಗಿ. ನಿಮ್ಮ ಒಳ್ಳೆಯ‌ ಸ್ವಭಾವದ ಬಗ್ಗೆ ಮಾತನಾಡುವರು.

ಕನ್ಯಾ: ಯಥೇಚ್ಛ ಸುತ್ತಾಟವು ನಿಮಗೆ ಆಯಾಸವನ್ನು ತಂದೀತು.‌ ಔಷಧ ವ್ಯಾಪಾರಿಗಳು ಹೆಚ್ಚಿನ ಲಾಭವನ್ನು ಗಳಿಸುವರು. ನಿಮಗೆ ಭೂಮಿಯನ್ನು ಕೊಡುವುದು ಅನಿವಾರ್ಯವಾಗಿದ್ದು ಅಲ್ಪ ಮೌಲ್ಯಕ್ಕೆ ಮಾರಾಟ ಮಾಡುವಿರಿ. ಇಂದು ಗುಂಪಿನಲ್ಲಿ ಕೆಲಸ‌ಮಾಡುವುದು ನಿಮಗೆ ಕಿರಿಕಿರಿಯಾದೀತು. ನಿಮಗೆ ಸಂಬಂಧಿಸದ ವಿಚಾರಕ್ಕೆ ತಲೆಹಾಕುವುದನ್ನು ನಿಲ್ಲಿಸಿ. ನಿಮ್ಮ ಸಂತೋಷವನ್ನು ಇತರರ ಜೊತೆ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ. ನೂತನವಾಗಿ ಖರೀದಿಸಿದ ಯಂತ್ರವು ಕೈ ಕೊಡಬಹುದು. ನಿಮ್ಮ ಮನಸ್ಸನ್ನು ಬದಲಿಸಲು ಬಹಳ ಪ್ರಯತ್ನ ನಡೆಯುವುದು.‌ ಹಿಂದಿನ ಘಟನೆಯೇ ಪುನರಾವರ್ತನೆ ಆಗುವುದು.

ತುಲಾ: ನಿಮ್ಮ ಪ್ರಯತ್ನಕ್ಕೆ ಪ್ರತಿಫಲವು ಸಿಗಬೇಕೆಂದು ನೀವು ಅಂದುಕೊಳ್ಳುವುದು ಸರಿಯಾಗದು. ನಿಮ್ಮವರಲ್ಲದವರ ಮೇಲೆ ದ್ವೇಷವನ್ನು ಬೆಳೆಸಿಕೊಳ್ಳುವುದು ಬೇಡ. ‌ಹಣಕಾಸಿನ ತೊಂದರೆಯನ್ನು ನೀವು ಕಡಿಮೆ‌‌ ಮಾಡಿಕೊಳ್ಳಲು ನಿಮಗೆ ಸರಳವಾದ ಮಾರ್ಗವು ಸಿಗುವುದು. ನಿಮ್ಮ ಇಂದಿನ ಮಾತಿನಿಂದ ಕುಟುಂಬದಲ್ಲಿ ಉಂಟಾಗುವ ಕಲಹವನ್ನು ತಪ್ಪಿಸಬಹುದು. ಆಪ್ತರನ್ನು ಕಳೆದುಕೊಂಡ ಸುದ್ದಿಯು ನಿಮಗೆ ದುಃಖವನ್ನು ತರಬಹುದು.‌ ಗೌರವಗಳನ್ನು ಪಡೆಯಲು ನಿಮಗೆ ಮನಸ್ಸಾಗದು. ಮಾಧ್ಯಮದ ವೃತ್ತಿಯನ್ನು ಮಾಡುವವರಿಗೆ ಹೆಚ್ಚಿನ ಭತ್ಯೆಯು ಸಿಗಬಹುದು.

ವೃಶ್ಚಿಕ: ಇಂದು ನೀವು ಗಟ್ಟಿ ಮನಸ್ಸಿನಿಂದ ಹೊರಡರೂ ಕಾರ್ಯಸ್ಥಳವು ನಿಮಗೆ ಕೆಲವು ಕಹಿಯನ್ನು ಕೊಟ್ಟು ಬೇಸರ ತರಿಸಬಹುದು. ಸಂಗಾತಿಯನ್ನು ಮಾತನಾಡಿಸಲು ಹೋಗಿ ಅವರ ಜೊತೆ ಕಲಹವಾಡಿ ಬರುವಿರಿ. ಮಕ್ಕಳಾಡದ ಮನಃಸ್ಥಿತಿ ಇಂದು ನಿಮ್ಮಲ್ಲಿ ಇರಲಿದೆ. ನಿಮಗೆ ಇಂದು ಕಲೆಯ ಬಗ್ಗೆ ನಿಮಗೆ ಆಸಕ್ತಿ ಕಡಿಮೆಯಾಗಬಹುದು. ದೇವಾಲಯದಲ್ಲಿ ಸ್ವಲ್ಪ ಕಾಲ ಕಳೆದು ಬರುವ ಮನಸ್ಸಾಗಲಿದೆ. ವಿದ್ಯಾರ್ಥಿಗಳು ಒಮ್ಮನಸ್ಸಿನಿಂದ ಓದಲು ಕುಳಿತುಕೊಳ್ಳುವುದು ಅವಶ್ಯಕ. ಧಾರ್ಮಿಕ ಆಚರಣೆಯಲ್ಲಿ ಭಾಗವಹಿಸಯವಿರಿ.

-ಲೋಹಿತಶರ್ಮಾ ಇಡುವಾಣಿ