Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರImage Credit source: hindirush.com
Follow us
ಗಂಗಾಧರ​ ಬ. ಸಾಬೋಜಿ
|

Updated on: May 28, 2023 | 12:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 28 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ನವಮೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಶೂಲ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ 05:17 ರಿಂದ 6:58ರ ವರೆಗೆ, ಯಮಘಂಡ ಕಾಲ 12:30 ರಿಂದ 02:06ರ ವರೆಗೆ, ಗುಳಿಕ ಕಾಲ 03:43 ರಿಂದ 05:19ರ ವರೆಗೆ.

ಸಿಂಹ: ವ್ಯವಹಾರದಲ್ಲಿ ನಿಮಗೆ ತಿಳಿವಳಿಕೆ ಕೊರತೆ ಎಂದು ಗೊತ್ತಾಗಬಹುದು. ವಿವಾಹಜೀವನದ ಚಿಂತೆ ನಿಮ್ಮನ್ನು ಕಾಡಬಹುದು. ತಾಯಿಯಿಂದ ನಿಮಗೆ ಸಾಂತ್ವನ‌ ಸಿಕ್ಕೀತು. ಪತಿಯ ವರ್ತನೆಯನ್ನು ಸರಿಯಾಗಿ ಗಮನಿಸದೇ ಮಾತನಾಡುವಿರಿ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಅಧಿಕಾರಿಗಳು ಹಿಂಪಡೆಯುವ ಯೋಚನೆ ಮಾಡುವರು. ಕಷ್ಟವಾದರೂ ನಿಮ್ಮ ಮಾರ್ಗವನ್ನು ಬದಲಿಸಬೇಡಿ. ಉಳಿದವರು ಅಪಹಾಸ್ಯ ಮಾಡಿಯಾರು. ಗೊಂದಲಗಳ ನಿವಾರಣೆಗೆ ತಜ್ಞರನ್ನು ಭೇಟಿಯಾಗಿ. ಸಕಾಲದಲ್ಲಿ ನಿಮ್ಮ ಕೆಲಸವನ್ನು ಮುಗಿಸಿಕೊಳ್ಳಿ.

ಕನ್ಯಾ: ನಿಮ್ಮ ಯೋಚನೆಗಳಿಗೆ ಸಂಗಾತಿಯಿಂದ ಬೆಂಬಲ ಸಿಗಬಹುದು. ಅದರ ಅಭಿವೃದ್ಧಿಗೆ ಹೆಚ್ಚಿನ ಪ್ರಯತ್ನವೇ ಆಗಬೇಕಾದೀತು. ಉದ್ಯೋಗದಲ್ಲಿ ಭಡ್ತಿ ಸಿಗುವ ವಿಚಾರವು ನಿಮಗೆ ಸ್ನೇಹಿತರಿಂದ ತಿಳಿಯಲಿದೆ. ಮನೆಯಲ್ಲಿ ಇಂದು ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ. ಯಂತ್ರೋಪಕರಣದಿಂದ ಲಾಭವಾಗಲಿದೆ. ಬೇಕಾದ ಎಲ್ಲ ವಸ್ತುಗಳನ್ನು ಇಂದೇ ತೆಗೆದುಕೊಳ್ಳುವ ಅಗತ್ಯವಿಲ್ಲ. ಬೇಕಾದ್ದಷ್ಟನ್ನೇ ಪಡೆಯಿರಿ. ನಿಮ್ಮ ನೇರ ಮಾತು ಕಸಿವಿಸಿಯನ್ನು ಉಂಟುಮಾಡೀತು. ಸುಳ್ಳನ್ನು ಹೇಳುವುದು ಗೊತ್ತಾದೀತು.

ತುಲಾ: ನಿಮ್ಮ ಉದ್ಯಮದ ಪೂರ್ವಾವಲೋಕನ ಮಾಡಿದರೆ ನಿಮಗೆ ಸಂತೋಷವಾಗುವುದು.‌ ಸಂಬಂದಗಳಲ್ಲಿ ಮಿತಿಯನ್ನು ಇಟ್ಟುಕೊಳ್ಳುವುದು ಲೇಸು ಎನಿಸೀತು. ಅನುಭವಿಗಳಿಂದ ಹೆಚ್ಚಿನ ವಿಚಾರವನ್ನು ತಿಳಿದುಕೊಳ್ಳುವಿರಿ. ಇನ್ನೊಬ್ಬರ ಹಣವನ್ನು ತೀರಿಸಿ ಋಣಮುಕ್ತರಾಗುವಿರಿ. ಇದರಿಂದ ನಿಮಗೆ ಹೆಚ್ಚು ಸಮಾಧಾನ ಸಿಗಲಿದೆ. ನಿಮ್ಮವರು ಹಣವನ್ನು ಹೂಡಲು ಒತ್ತಾಯಿಸಬಹುದು. ಎತ್ತರದ ಪ್ರದೇಶಕ್ಕೆ ಸುತ್ತಾಡಲು ಸ್ನೇಹಿತ ಜೊತೆ ಹೋಗಲಿದ್ದೀರಿ. ನಿಮ್ಮ ಅಸ್ತಿತ್ವವನ್ನು ನೀವು ಉಳಿಸಿಕೊಳ್ಳಲು ಬಹಳ ಪ್ರಯತ್ನಪಡುವಿರಿ.

ವೃಶ್ಚಿಕ: ನಿಮ್ಮ ವೃತ್ತಿಯ ಬಗ್ಗೆ ಯಾರ ಬಳಿಯೂ ಹೇಳಿಕೊಳ್ಳವುದು ಬೇಡ. ನಿಮ್ಮ ವೇತನವನ್ನು ತಿಳಿದು ಆಡಿಕೊಳ್ಳಬಹುದು. ಸಾರ್ವಜನಿಕ ಸಮಾರಂಭಗಳಿಗೆ ಭಾಗವಹಿಸಲು ನೀವು ಹಿಂದೇಟು ಹಾಕಬಹುದು. ಉದ್ಯೋಗದಲ್ಲಿ ಕೆಲವು ನಿಯಮಗಳು ಬದಲಾಗಿದ್ದು ಅದನ್ನು ಒಪ್ಪಿಕೊಳ್ಳಲು ಹಿಂದೇಟು ಹಾಕುವಿರಿ. ನಿಮ್ಮ ಶ್ರಮಕ್ಕೆ ತಕ್ಕಂತೆ ಫಲವು ಲಭ್ಯವಾಗುವುದು.‌ ಎಂದೋ ಕಲಿತ ವಿದ್ಯೆಯು ಉಪಯೋಗಕ್ಕೆ ಬರುವುದು‌. ಅನಿಯಮಿತ ಕಾಲದಲ್ಲಿ ಆಹಾರವನ್ನು ಸ್ವೀಕರಿಸಿ ಅನಾರೋಗ್ಯವನ್ನು ಕೆಡಿಸಿಕೊಳ್ಳುವಿರಿ. ಕಾರ್ಯದ ನಿಮಿತ್ತ ಓಡಾಟದಿಂದ ಆಯಾಸವಾಗಬಹುದು.

ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?