Nitya Bhavishya: ಇಂದಿನ ರಾಶಿಭವಿಷ್ಯ, ಈ ರಾಶಿಯವರ ಸಣ್ಣ ನಡೆಯೂ ದೊಡ್ಡ ಸುದ್ದಿಗೆ ಕಾರಣವಾಗಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 31) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nitya Bhavishya: ಇಂದಿನ ರಾಶಿಭವಿಷ್ಯ, ಈ ರಾಶಿಯವರ ಸಣ್ಣ ನಡೆಯೂ ದೊಡ್ಡ ಸುದ್ದಿಗೆ ಕಾರಣವಾಗಬಹುದು
ಇಂದಿನ ರಾಶಿಭವಿಷ್ಯImage Credit source: freepik
Follow us
Rakesh Nayak Manchi
|

Updated on: May 31, 2023 | 12:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 31 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ಸಿಂಹ: ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿದ್ದು ಒಪ್ಪಿಕೊಳ್ಳುವಿರಿ. ಪ್ರಭಾವಶಾಲಿ ವ್ಯಕ್ತಿಯ ಭೇಟಿಯಾಗುವುದು. ಓದಿನಲ್ಲಿ ಆಸಕ್ತಿ ಹೆಚ್ಚಾಗಬಹುದು.‌ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುವಿರಿ. ಆಹಾರ ವ್ಯತ್ಯಾಸದಿಂದ ಅನಾರೋಗ್ಯ ಕಾಡಬಹುದು. ತಾಯಿಯ ಜೊತೆ ವಾದವನ್ನು ಮಾಡುವಿರಿ. ಸಂಗಾತಿಗೆ ಹಿರಿಯರ ಆಸ್ತಿ ಸಿಗಬಹುದು. ಸೂಕ್ತ ವೈವಾಹಿಕ ಸಂಬಂಧವು ದೊರೆಯುವ ಸಾಧ್ಯತೆ ಇದೆ. ಹಿರಿಯರಿಂದ ನಿಮ್ಮ ಕುಟುಂಬದ ಬಗ್ಗೆ ಹೆಚ್ಚಿನ ಹೆಚ್ಚಿನ ಮಾಹಿತಿ ಲಭ್ಯವಾಗುವುದು.

ಕನ್ಯಾ: ಸ್ನೇಹಿತರ ಜೊತೆ ವ್ಯವಹಾರ ಮಾಡುವಾಗ ಅಪನಂಬಿಕೆಗಳು ಬಾರದಂತೆ ಎಚ್ಚರವಹಿಸಿರಿ. ಸ್ವಂತ ವ್ಯವಹಾರದಲ್ಲಿ ನಷ್ಟವಾಗಬಹುದು. ನಿಮ್ಮ ಮಾತುಗಳು ನಿಮಗೆ ಗೌರವ ತರಲಿ.‌ ಉದಾಸೀನ ಮನಃಸ್ಥಿತಿಯಿಂದ ವ್ಯಾಪಾರದಲ್ಲಿ ನಷ್ಟವಾದರೂ ಗುಣಮಟ್ಟ ಹಾಗೆಯೇ ಇರಲಿದೆ. ಕಲಾವಿದರಿಗೆ ಹೆಚ್ಚಿನ ಅವಕಾಶಗಳು ಬರಬಹುದು. ನೌಕರರಿಗೆ ಹೆಚ್ಚು ಒತ್ತಡವಾಗಬಹುದು. ಕೃಷಿಯು ನಿಮಗೆ ಆಸಕ್ತಿಯ ವಿಷಯವಾಗಿದ್ದು ತೊಡಗಿಕೊಳ್ಳಲು ತೊಡಕುಗಳು ಇರಲಿದೆ. ನೀವು ತೆರಿಗೆಯ ವಿಚಾರದಲ್ಲಿ ಸರಿಯಾಗಿ ಇರಬೇಕಾಗಬಹುದು.

ತುಲಾ: ಮಹಿಳೆಯರು ಸಕಾರಾತ್ಮಕ ಚಿಂತನೆಯತ್ತ ಗಮನಕೊಡುವುದು ಉತ್ತಮ. ಅಧಿಕಾರಿಗಳನ್ನು ಭೇಟಿ ಮಾಡುವ ಮೂಲಕ ಉದ್ಯೋಗದಲ್ಲಿ ನಿಮ್ಮ ಛಾಪನ್ನು ಮೂಡಿಸಿಕೊಳ್ಳುವಿರಿ. ಆದಾಯವು ನಿರೀಕ್ಷಿತ ಮಟ್ಟದಲ್ಲಿದ್ದು ಖರ್ಚು ಇನ್ನೂ ಅಧಿಕವಾಗಬಹುದು. ಸಂಸಾರದಲ್ಲಿ ಕಲಹವಾಗಬಹುದು. ವಿದೇಶದಲ್ಲಿದ್ದು ಸಂಗಾತಿಯನ್ನು ಹುಡುಕುತ್ತಿದ್ದರೆ ಸಂಗಾತಿಯು ಸಿಗುವ ಸಾಧ್ಯತೆ ಇದೆ. ಕೃಷಿ ಸಂಬಂಧಿಸಿದ ವ್ಯವಹಾರಗಳಲ್ಲಿ ಸ್ವಲ್ಪಮಟ್ಟಿನ ಹಿನ್ನಡೆಯಾಗಬಹುದು. ಸರ್ಕಾರಿ ಉದ್ಯೋಗಿಗಳಿಗೆ ಹೆಚ್ಚಿನ ಹುದ್ದೆಯನ್ನು ನೀಡುವ ಪ್ರಸ್ತಾಪವೂ ಬರಬಹುದು.

ವೃಶ್ಚಿಕ: ಉನ್ನತ ಅಧಿಕಾರಿಗಳಿಗೆ ಮುಂಬಡ್ತಿ ದೊರೆಯುವ ಸಾಧ್ಯತೆ ಇದೆ. ವಾಹನ ಚಾಲನೆ ವೇಳೆ ಅವಸರ ಬೇಡ. ಖರ್ಚನ್ನು ನಿಭಾಯಿಸುವುದು ನಿಮಗೆ ಬಹಳ ಕಷ್ಟವಾದೀತು. ಸಹೋದ್ಯೋಗಿಗಳ ಜೊತೆ ಹೆಚ್ಚಿನ ವಿವಾದಗಳು ಬೇಡ. ಸಾಮಾಜಿಕ ಜೀವನದಲ್ಲಿ ಹೆಚ್ಚು ಪ್ರಗತಿ ಕಾಣುವಿರಿ. ಹಲವು ದಿನಗಳಿಂದ ಕಣ್ಮರೆಯಾಗಿದ್ದ ಸರ್ಕಾರಿ ದಾಖಲೆಗಳು ಇಂದು ಸಿಗಬಹುದು. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚು ಶ್ರದ್ಧೆಯು ಬರಬಹುದು. ನಿಮ್ಮನ್ನು ಕಛೇರಿಯಲ್ಲಿ ಗಮನಿಸಬಹುದು. ಹಾಗಾಗಿ ಸಣ್ಣ ನಡೆಯೂ ದೊಡ್ಡ ಸುದ್ದಿಗೆ ಕಾರಣವಾಗಬಹುದು.

-ಲೋಹಿತಶರ್ಮಾ ಇಡುವಾಣಿ

ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ