Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 7) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 07, 2023 | 12:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜೂನ್ 7 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ : ರೋಹಿಣೀ, ಮಾಸ : ಜ್ಯೇಷ್ಠ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಶುಕ್ಲ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:31 ರಿಂದ 02:08ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:41 ರಿಂದ 09:18ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:54 ರಿಂದ ಮಧ್ಯಾಹ್ನ 12:31ರ ವರೆಗೆ.

ಸಿಂಹ: ನಿಮ್ಮ ಗುರಿಗಳು ಬದಲಾದಷ್ಟೂ ನಿಮ್ಮ‌ ಶ್ರಮವೂ ವ್ಯರ್ಥವಾಗಬಹುದು. ಸಂಗಾತಿಯ ಜೊತೆ ಹೆಚ್ಚು ಕಾಲ ಕಳೆಯುವ ಮನಸ್ಸಿದ್ದರೂ ಸಮಯದ ಅಭಾವದಿಂದ ಅದು ಸಾಧ್ಯವಾಗದು. ಇದೇ ನಿಮ್ಮ ನಡುವಿನ ಒಡಕು ಉಂಟಾಗಲು ಕಾರಣವಾಗಬಹುದು. ಆತ್ಮವಿಶ್ವಾಸವು ಇಂದು ನಿಮಗೆ ಕೈಕೊಡಬಹುದು. ನಿಮ್ಮನ್ನು ನಿಮ್ಮವರಿಗೆ ಪರಿಚಯ ಮಾಡಿಕೊಡುವ ಸನ್ನಿವೇಶ ಬರಬಹುದು. ಹಳೆಯ ಸ್ನೇಹಿತೆಯ ಭೇಟಿಯಾಗಿ ಮಾತುಕತೆ ನಡೆಸುವಿರಿ. ನಂಬಿಕೆಯನ್ನು ಮೋಸವಾಗಬಹುದು. ಇಟ್ಟುಕೊಳ್ಳಲು ಕೊಟ್ಟ ಹಣವು ಪುನಃ ಬಾರದೇ ಇದ್ದೀತು. ಹಿರಿಯರ ಎದುರು ಮಾತನಾಡಲು ನೀವು ಹೆದರುವಿರಿ.

ಕನ್ಯಾ: ದೀರ್ಘಕಾಲದ ನೋವನ್ನು ಕಡಿಮೆ ಮಾಡಿಕೊಳ್ಳಲು ಇಂದು ಪ್ರಯತ್ನಿಸುವಿರಿ. ವೈದ್ಯವೃತ್ತಿಯಲ್ಲಿ ತೊಡಗಿದ್ದರೆ ನಿಮಗೆ ಕೆಟ್ಟ ವಾರ್ತೆಯು ಬರಬಹುದು. ಉದ್ಯಮದಲ್ಲಿ ಹೊಸರೀತಿಯ ಲಾಭಾವನ್ನು ಪಡೆಯಲು ಆಲೋಚಿಸುವಿರಿ. ಮಾನಸಿಕ ಒತ್ತಡವು ನಿಮ್ಮ ಕೆಲಸಗಳನ್ನು ಹಾಳು ಮಾಡೀತು. ದಾಂಪತ್ಯದಲ್ಲಿ ಸಣ್ಣ ವಿರಸವು ಉಂಟಾಗಬಹುದು. ಮಕ್ಕಳ ವಿಚಾರದಲ್ಲಿ ನಿಮ್ಮ ವರ್ತನೆಯು ಬಾಲಿಶ ಎನಿಸಬಹುದು. ಯಾರನ್ನೋ ಮೆಚ್ಚಿಸಲು ನೀವು ಸಮಯವನ್ನು ಕಳೆಯಬೇಕಿಲ್ಲ. ಉತ್ತಮ‌ಭೋಜನವು ನಿಮಗೆ ಸಿಗಲಿದೆ. ಭೋಗವಸ್ತುಗಳನ್ನು ಖರೀದಿಸಿ ಹಣವನ್ನು ವ್ಯರ್ಥಮಾಡುವಿರಿ.

ತುಲಾ: ಪುಣ್ಯ ಕೆಲಸದಲ್ಲಿ ನೀವು ಹೆಚ್ಚು ಭಾಗಿಯಾಗುವಿರಿ. ಖರ್ಚನ್ನು ನೀವು ನಿಯಂತ್ರಣ ಮಾಡುವ ಅವಶ್ಯಕತೆ ಇಂದು ಬರಬಹುದು. ಮಹಿಳೆಯರು ನಿಮ್ಮಿಂದ ಸಹಾಯವನ್ನು ಪಡೆಯುವರು. ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಹುದು. ಹವಾಮಾನ ಬದಲಾವಣೆಯಿಂದ ನಿಮ್ಮ ದೇಹದ ಮೇಲೆ ವಿರುದ್ಧ ಪರಿಣಾಮವನ್ನು ಉಂಟುಮಾಡಬಹುದು. ನಿಮ್ಮ ಪ್ರಯಾಣವು ಸರಿಯಾದ ಯೋಜನೆಯಿಂದ ಇದ್ದಿರಲಿ. ನಿಮ್ಮವರನ್ನು ನೀವು ತಪ್ಪಾಗಿ ತಿಳಿಯುವರು. ಕಂಡಿದ್ದನ್ನು ನೇರವಾಗಿ ಹೇಳಲು ಮುಂದಾಗಬೇಡಿ. ದ್ವೇಷವಾಗಿ ಪರಿವರ್ತನೆ ಆಗಬಹುದು. ಯಾರನ್ನೂ ಅವಲಂಬಿಸಲು ಹೋಗಬೇಡಿ.

ವೃಶ್ಚಿಕ: ಅಧಿಕಾರದ ಬಲಾಬಲವನ್ನು ತಿಳಿದುಕೊಳ್ಳ ವಾಗ್ವಾದವು ಅಧಿಕಾರಿಗಳ ನಡುವೆ ನಡೆಯಬಹುದು. ವಾಹನಕ್ಕಾಗಿ ಹಣವನ್ನು ಖರ್ಚುಮಾಡಬೇಕಾದೀತು. ದಾಂಪತ್ಯದಲ್ಲಿ ಪ್ರೀತಿ ಬೆಳೆಯಲು ಇಬ್ಬರ ಸಹಕಾರ ಅಗತ್ಯ. ಒಬ್ಬರಿಂದ ಆಗದ್ದನ್ನು ಮಾಡಲು ಹೋಗಬೇಡಿ. ನಿಮ್ಮ ಅಹಂಕಾರವೇ ನಿಮ್ಮನ್ನು ಜನರಿಂದ ದೂರವಿರುವಂತೆ ಮಾಡಬಹುದು. ಸಾಲವನ್ನು ವೇಗವಾಗಿ ತೀರಿಸಲು ನೀವು ಇಂದು ಶ್ರಮ ಪಡುವಿರಿ. ಅದು ವಿಪರೀತ ಪರಿಣಾಮವನ್ನು ಉಂಟುಮಾಡೀತು. ಖರೀದಿಗಾಗಿ ಸಂಗಾತಿಯ ಹಣವನ್ನು ಕೇಳಬಹುದು. ನಿಮ್ಮ ಜೊತೆಗೆ ನಿಮ್ಮನ್ನು ದ್ವೇಷಿಸುವವರು ಇರುವರು. ಜಾಗರೂಕರಾಗಿರುವುದು ಉಚಿತ.

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್