Horoscope: ದಿನ ಭವಿಷ್ಯ; ಹಿರಿಯರಿಂದ ಅವಮಾನವಾಗುವ ಸಾಧ್ಯತೆ ಇದೆ-ಎಚ್ಚರ
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 27 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಪರಿಘ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:22 ರಿಂದ 10:56 ರ ವರೆಗೆ, ಯಮಘಂಡ ಕಾಲ 14:05 ರಿಂದ 15:39 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:13 ರಿಂದ 07:47 ರ ವರೆಗೆ
ಸಿಂಹ ರಾಶಿ :ಉದ್ಯೋಗದಲ್ಲಿ ನಿಮಗೆ ಬದಲಾವಣೆ ಬೇಕು ಎನಿಸುವುದು. ಅಪರಿಚಿತ ದೂರವಾಣಿಯ ಕರೆಯಿಂದ ನಿಮಗೆ ಲಾಭವಾಗುವುದು. ವಿದೇಶದ ವ್ಯಾಪಾರದ ಕುರಿತು ಚರ್ಚಿಸುವಿರಿ. ಸರ್ಕಾರಿ ಕೆಲಸಗಳಿಗೆ ಓಡಾಟ ಮಾಡುವಿರಿ. ಅಪ್ತರ ಮೇಲೆ ಅನುಮಾನವಿದ್ದು ಅದನ್ನು ಬಹಳ ಚಾತುರ್ಯದಿಂದ ನಿಭಾಯಿಸುವಿರಿ. ಅತಿಯಾಗಿ ಅನಾರೋಗ್ಯವು ಉಂಟಾದೀತು. ಪರಸ್ಥಳವಾಸವು ಎದುರಾಗಬಹುದು. ರಾಜಕಾರಣವನ್ನು ವೃತ್ತಿಯಾಗಿ ನೀವು ಸ್ವೀಕರಿಸುವ ಸಾಧ್ಯತೆ ಇದೆ. ಹೊಸ ವಾಹನದ ಖರೀದಿಯಿಂದ ಸಂತೋಷವಾಗುವುದು. ನಿಮ್ಮ ಸ್ವಭಾವವನ್ನು ದುರುಪಯೋಗ ಮಾಡಿಕೊಳ್ಳಬಹುದು. ನಿಮ್ಮ ಮೌನವು ಕುಟುಂಬದಲ್ಲಿ ಭಯವನ್ನು ಉಂಟುಮಾಡೀತು. ನಿರಂತರ ಕಾರ್ಯದಿಂದ ದೇಹಕ್ಕೆ ಆಯಾಸವಾಗಬಹುದು. ಸುಖಜೀವನದ ನಿರೀಕ್ಷೆಯಲ್ಲಿ ಇರುವಿರಿ. ಸಮಾರಂಭಗಳಿಗೆ ಆಹ್ವಾನವಿದ್ದರೂ ಹೋಗುವ ಮನಸ್ಸಾಗದು. ಲೆಕ್ಕಪತ್ರದ ವ್ಯವಹಾರದಲ್ಲಿ ಕಲಹವಾಗವುದು.
ಕನ್ಯಾ ರಾಶಿ :ಇಂದು ನೀವು ದಾಂಪತ್ಯದಲ್ಲಿ ಕಲಹ ಸಹಜವೆಂದು ಸುಮ್ಮನಿರಬೇಡಿ. ಮರ್ಯಾದೆಯನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಹಿರಿಯರಿಂದ ಅವಮಾನವಾಗುವ ಸಾಧ್ಯತೆ ಇದೆ. ಒಂದನ್ನು ಪಡೆಯಲು ಹೋಗಿ ಎರಡನ್ನು ಕಳೆದುಕೊಳ್ಳುವಿರಿ. ಇಂದು ಮನೆಗೆ ಅತಿಥಿಗಳ ಆಗಮನವಾಗಲಿದೆ. ಇಂದು ನಿಮ್ಮನ್ನು ಕಂಡರೆ ಸಮಸ್ಯೆಗಳು ಬಂದಂತೆ ಕಾಣಬಹುದು. ತಾಳ್ಮೆ ಬೇಕು. ಸಮಯವು ಎಲ್ಲವನ್ನೂ ಸರಿ ಮಾಡುತ್ತದೆ. ನೀವಾಗಿಯೇ ಕೆರೆದು ಮಾಯದ ಹುಣ್ಣನ್ನು ಮಾಡಿಕೊಳ್ಳಬೇಡಿ. ಕೇವಲ ಕೊರತೆಯನ್ನು ನೀವು ಹೆಚ್ಚು ಚಿಂತಿಸುವಿರಿ. ವ್ಯಾಪರದ ನಷ್ಟಕ್ಕೆ ಸಮಸ್ತ ತಂತ್ರವನ್ನು ಮಾಡುವಿರಿ. ಅತಿಯಾದ ಕೋಪದ ಕಾರಣ ನೀವು ಒಂಟಿಯಾಗಬೇಕಾದೀತು. ಕಹಿ ಘಟನೆಯನ್ನು ಮರೆಯಲು ಬಹಳ ಶ್ರಮ ಪಡುವಿರಿ. ವಿದ್ಯಾಭ್ಯಾಸದಲ್ಲಿ ಹಿನ್ನಡೆಯನ್ನು ಕಾಣಲಿದ್ದು ಕುಟುಂಬದಲ್ಲಿ ಅಸಮಾಧನ ಇರಲಿದೆ. ಎಲ್ಲವನ್ನೂ ನೀವು ನಿಮ್ಮ ಊಹೆಯ ಆಧಾರದ ಮೇಲೆ ನಿರ್ಣಯಿಸುವಿರಿ. ನಿಮ್ಮ ಉನ್ನತ ಶಿಕ್ಷಣದ ಆಸೆಯು ಭಗ್ನವಾಗಬಹುದು.
ತುಲಾ ರಾಶಿ :ದೇಹಾಯಾಸದಿಂದ ವಿಶ್ರಾಂತಿಯನ್ನು ಪಡೆಯಬೇಕಾಗಿ ಬರಬಹುದು. ಬಂಧುಗಳ ಮನೆಗೆ ಹೋಗಿ ಬರಲಿದ್ದೀರಿ. ಧನಸಂಗ್ರಹದ ವಿಚಾರ ನಿಮ್ಮ ದಾರಿಯು ಸರಿಯಾಗಿದೆ ಎಂದು ನಿಮ್ಮವರಿಗೆ ಅನ್ನಿಸಬಹುದು. ಅಮೂಲ್ಯವಾದ ವಸ್ತುವೊಂದು ನಿಮ್ಮ ಸ್ನೇಹಿತರಿಗೆ ಕೊಡುಗೆಯಾಗಿ ನೀಡಲಿದ್ದೀರಿ. ಧಾರ್ಮಿಕ ಕ್ಷೇತ್ರಕ್ಕೆ ಪ್ರಯಾಣ ಬೆಳೆಸುವ ಸಾಧ್ಯತೆ ಇರುತ್ತದೆ. ಒತ್ತಡವಿದ್ದರೂ ಯುಕ್ತಿಯನ್ನು ಕಾರ್ಯವನ್ನು. ಇಂದು ನಿಮ್ಮ ಪರೀಕ್ಷಿಯೆ ಕಾಲವಾಗಿರುವುದು. ಹಣವನ್ನು ಬಹಳ ಗೌಪ್ಯವಾಗಿ ಇಟ್ಟುಕೊಳ್ಳುವಿರಿ. ನಿಮ್ಮ ಹಿಂದೆ ಆಡುವ ಮಾತುಗಳಿಗೆ ಹೆಚ್ಚು ಬೆಲೆ ಕೊಡುವುದು ಬೇಡ. ಹಣದ ಹೂಡಿಕೆಯನ್ನು ಮಾಡುವ ಯೋಚನೆ ಇರಲಿದೆ. ಆಕಸ್ಮಿಕವಾಗಿ ಪ್ರೇಮದಲ್ಲಿ ಬೀಳುವಿರಿ. ವ್ಯಕ್ತಿಯ ಬಗ್ಗೆ ನಿಮಗೆ ಪೂರ್ಣ ವಿಶ್ವಾಸವಿರದು. ಹಳೆಯ ಖಾಯಿಲೆಗೆ ಔಷಧವು ಸಿಗದೇ ಹೋಗಬಹುದು. ನಿಮ್ಮ ಪ್ರಯತ್ನಕ್ಕೆ ಇಂದೇ ಫಲವು ಸಿಗಬೇಕೆಂಬ ಆತುರ ಬೇಡ. ನಿಮ್ಮನ್ನು ದ್ವೇಷಿಸುವ ಜನರನ್ನು ನೀವು ನಿರ್ಲಕ್ಷಿಸಿ ಮುನ್ನಡೆಯಿರಿ.
ವೃಶ್ಚಿಕ ರಾಶಿ :ಮುಂದೆ ಆಗಬೇಕಾಸ ಕೆಲವು ಕಾರ್ಯಗಳ ನಿರ್ಧಾರವು ಮಾಡುವಿರಿ. ದೂರಪ್ರಯಾಣವು ನಿಮಗೆ ಕಷ್ಟವಾಗಬಹುದು. ತಪ್ಪುಗಳು ನಿಮ್ಮ ಸ್ವಭಾವವನ್ನು ತೋರಿಸುವುದು. ಆಲೋಚನೆಗೆ ತಕ್ಕಂತೆ ಯಾವುದೂ ನಡೆಯದು ಎಂಬ ಬೇಸರವು ಹೆಚ್ಚಾಗಿ ಕಾಡಬಹುದು. ವೈಮನಸ್ಯ ಎದುರಾದಾಗ ಹೊಂದಾಣಿಕೆಯ ಜೊತೆ ಹೊಂದಾಣಿಕೆ ಮಾಡಿಕೊಳ್ಳಿ. ಬಂಧುಗಳ ಆಗಮನ ನಿಮಗೆ ಕಿರಿಕಿರಿಯನ್ನು ತರಬಹುದು. ಕರ್ಮಗಳು ನ್ಯಾಯೋಚಿತವಾಗಿ ಇರಲಿ. ನಿಮ್ಮ ವರ್ತನೆಗಳು ತಂದೆಯ ಅಸಮಾಧಾನಕ್ಕೆ ಕಾರಣವಾಗಬಹುದು. ಮನಶ್ಚಾಂಚಲ್ಯದಿಂದ ಕೆಲವು ಕಹಿಯಾದ ಅನುಭವಗಳು ಆಗಬಹುದು. ಸಹೋದ್ಯೋಗಿಗಳ ಮಾತನ್ನು ಸಹಿಸಿಕೊಳ್ಳಲು ಕಷ್ಟವಾಗದು. ಸ್ನೇಹಿತರ ಜೊತೆ ಪ್ರವಾಸ ಹೋಗುವಿರಿ. ನಟರಿಗೆ ಅವಕಾಶವು ಸಿಗಲಿದೆ. ಎಲ್ಲ ಘಟನೆಗಳನ್ನೂ ಒಂದೇ ರೀತಿಯಲ್ಲಿ ನೋಡುವುದು ಸರಿಯಾಗದು.




