AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಅಪರಿಚಿತರಿಂದ ಮೋಸ ಹೋಗುವ ಸಾಧ್ಯತೆ ಇದೆ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜುಲೈ.04 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ಅಪರಿಚಿತರಿಂದ ಮೋಸ ಹೋಗುವ ಸಾಧ್ಯತೆ ಇದೆ
ಜ್ಯೋತಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 04, 2024 | 12:32 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಗುರುವಾರ (ಜುಲೈ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಶೂಲ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 14:14 ರಿಂದ 15:51ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:10 ರಿಂದ ಬೆಳಿಗ್ಗೆ07:46ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:23 ರಿಂದ 11:00ರ ವರೆಗೆ.

ಸಿಂಹ ರಾಶಿ :ಆತುರದಲ್ಲಿ ಇಂದು ಅಸಂಬದ್ಧವಾಗುವ ಸಾಧ್ಯತೆ ಇದೆ. ವಿವಾಹದ ಪ್ರಸ್ತಾಪಗಳು ಬಂದು ಮತ್ತೆ ಹೋಗುತ್ತವೆ ಅಷ್ಟೇ. ಎಲ್ಲ ಕೆಲಸಗಳನ್ನೂ ನೀವು ಒಬ್ಬರೇ ಮಾಡಬೇಕು ಎನ್ನುವ ನಿರ್ಧಾರವನ್ನು ಮಾಡಿಕೊಂಡು ಕೆಲಸಗಳು ಅಪೂರ್ಣವಾಗಲಿದೆ. ವಸ್ತ್ರಗಳನ್ನು ಮಾರಾಟ ಮಾಡುವವರು ನೀವು ಆಗಿದ್ದರೆ ಅಲ್ಪ‌ ಲಾಭವನ್ನೂ ಪಡೆಯುವಿರಿ. ಉದ್ಯೋಗದಲ್ಲಿ ನಿಮ್ಮ ಸಮೂಹದ ಜೊತೆ ಕಲಹ ಮಾಡಿಕೊಳ್ಳುವಿರಿ. ಯಾರಾದರೂ ಕೆಲಸ ಕೊಡಿಸುವ ಭರವಸೆ ಕೊಡಬಹುದು. ಕಲೆಗಳನ್ನು ಅಭ್ಯಾಸ ಮಾಡುತ್ತಿದ್ದರೆ ಇಂದು ನಿಮಗೆ ಅದು ಸಾಕು ಎನಿಸಬಹುದು. ಒಂದೇ ರೀತೀಯ ಕೆಲಸದಿಂದ ಬೇಸರವಾಗಿ ಸ್ವಲ್ಪ ವಿರಾಮವನ್ನು ತೆಗೆದುಕೊಂಡು ಸುತ್ತಾಟ ನಡೆಸುವಿರಿ. ಎಲ್ಲರೆದುರೂ ನಿಮ್ಮ ಸಾಹಸಪ್ರದರ್ಶನ ಬೇಡ. ಶ್ರಮಪಟ್ಟು ಆರಂಭಿಸಿದ ಕಾರ್ಯಗಳು ಪಿತೂರಿಯಿಂದ ಅರ್ಧಕ್ಕೆ ಸ್ಥಗಿತವಾಗಬಹುದು. ನಿಮ್ಮ ಗುರಿಯನ್ನು ಯಾರಾದರೂ ತಪ್ಪಿಸಬಹುದು.

ಕನ್ಯಾ ರಾಶಿ :ಇಂದು ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸದ ಆಸಕ್ತಿ ಹೆಚರಚಾಗುವುದು. ಔದ್ಯೋಗಿಕ ವಿಚಾರದಲ್ಲಿ ನೀವು ಹೆಚ್ಚಿನ ಗಮನ ಅವಶ್ಯಕ. ನೀವು ಮೇಲಧಿಕಾರಿಗಳನ್ನು ಚೆನ್ನಾಗಿ ಇರಿಸಿಕೊಂಡು ಅನುಕೂಲತೆಯನ್ನು ಇಟ್ಟುಕೊಳ್ಳುವಿರಿ.‌ ಧಾರ್ಮಿಕ ಕಾರ್ಯಗಳನ್ನು ಮಾಡಲು‌ ಮನಸ್ಸಾಗಲಿದೆ. ಅಪರಿಚಿತ ಕರೆಗೆ ನೀವು ಸ್ಪಂದಿಸಬೇಕಾಗಿಲ್ಲ. ಹಳೆಯ ರೋಗಕ್ಕೆ ಔಷಧೀಯು ಸಿಗಬಹುದು. ನಿಮ್ಮ ಇಷ್ಟದವರನ್ನು ನೀವು ಭೇಟಿಯಾಗಲಿದ್ದೀರಿ. ಅಶಿಸ್ತಿನ ವಿಚಾರಕ್ಕೆ ಕೋಪಗೊಳ್ಳುವಿರಿ. ಹೊಸ ಯೋಜನೆಯ ನಿಮಗೆ ಲಾಭದಾಯಕವಾಗಲಿದೆ. ವೈದ್ಯರನ್ನು ಭೇಟಿ ಮಾಡಿ ನಿಮಗೆ ಆಗುತ್ತಿರುವ ನಿಮ್ಮ ಮೇಲೆ ತಪ್ಪು ತಿಳಿವಳಿಕೆಯು ಬರಬಹುದು. ಆಪ್ತರ ಜೊತೆ ದೂರದ ಊರಿಗೆ ಪ್ರಯಾಣ ಮಾಡುವ ಸಾಧ್ಯತೆ ಇದೆ. ಸಂಗಾತಿಯ ಬಗ್ಗೆ ಪ್ರೀತಿ ಹೆಚ್ಚಾಗುವುದು. ಕಲಾವಿದರಿಗೆ ಮನ್ನಣೆ ಸಿಗಲಿದೆ. ನಿಮ್ಮ ಇಂದಿನ ಅಸಹಾಯಕತೆಯನ್ನು ಯಾರ ಎದುರೂ ಹೇಳುವುದು ಬೇಡ.

ತುಲಾ ರಾಶಿ :ನೀವು ಆಯ್ಕೆ ಮಾಡಿಕೊಳ್ಳುವ ಕೆಲಸವೇ ನಿಮ್ಮ ಭವಿಷ್ಯಕ್ಕೆ ಮಾರ್ಗವನ್ನು ತೋರಿಸುವುದು. ಅಧಿಕ ಸುತ್ತಾಟದ ಸುಸ್ತು ನಿಮ್ಮಲ್ಲಿ ಇದ್ದರೂ ಅದನ್ನು ಲೆಕ್ಕಿಸಲಾರಿರಿ. ಹಿರಿಯರ, ಅನುಭವಿಗಳ ಮಾರ್ಗದರ್ಶನವನ್ನು ಪಡೆಯಿರಿ. ನಿಮಗೆ ಅನ್ನಿಸಿದ್ದನ್ನು ಮಾಡುವುದಾದರೂ ಹಿರಿಯರ ಒಪ್ಪಿಗೆ ಪಡೆಯಿರಿ. ಕೃಷಿಗೆ ಸಂಬಂಧಪಟ್ಟ ಚಟುವಟಿಯಲ್ಲಿ ಭಾಗವಹಿಸುವಿರಿ. ಭೂಮಿಯ ಖರೀದಿಯಲ್ಲಿ ನಿಮ್ಮ ಪಾಲೂ ಇರುವುದು. ನಿಮ್ಮವರ ಮೇಲೆ ಅನುಮಾನ ಬೇಡ. ನಂಬಿಕೆಯಿಂದಲೇ ಮಾತನಾಡಿ.‌ ಪತಿಯನ್ನು ಪ್ರೀತಿಯ ಮಾತುಗಳಿಂದ ಓಲೈಸಿಕೊಳ್ಳುವಿರಿ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಷ್ಟವಾದೀತು. ಕೆಲವನ್ನು ನೀವು ಬುದ್ಧಿಪೂರ್ವಕವಾಗಿ ಮಾಡುವಿರಿ. ಮನೋವಿಕಾರವನ್ನು ಕಡಿಮೆ‌ ಮಾಡಿಕೊಳ್ಳಿ. ಕುಟುಂಬದಲ್ಲಿ ನಡೆಯುವ ಕಾರ್ಯಗಳಿಗೆ ನಿಮ್ಮಿಂದ ಹೆಚ್ಚಿನ ಹಣ ಖರ್ಚು ಮಾಡುವ ಸನ್ನಿವೇಶವು ಬರಬಹುದು.

ವೃಶ್ಚಿಕ ರಾಶಿ :ಮನೆಯ ಸಂತೋಷದ ವಾತಾವರಣವು ಪುಟ್ಟ ಕಾರಣಕ್ಕೆ ಹಾಳಾಗಬಹುದು. ತನಗೆ ಬೇಕಾದುದನ್ನು ಪಡೆಯುವ ಆತುರತೆ ಇರಲಿದೆ. ಕಂಡಿದ್ದನ್ನು ಕಂಡಂತೆ ಹೇಳುವವರಾದರೂ ತಾಳ್ಮೆ ಇಟ್ಟುಕೊಳ್ಳುವು ಒಳ್ಳೆಯದು. ಕಂಡಿದ್ದು ಮಾತ್ರ ಸತ್ಯವೆನ್ನಲು ಬಾರದು. ಉದ್ಯೋಗದ ನಿಮಿತ್ತ ದೂರ ಇದ್ದವರಿಗೆ ತೊಂದರೆಗಳು ಬರಬಹುದು. ನಿಮ್ಮ ತಿಳಿವಳಿಕೆಯ ಹಂತವು ಗೊತ್ತಾದೀತು. ಹೂಡಿಕೆಯ ಬಗ್ಗೆ ಸ್ವತಂತ್ರ ಆಲೋಚನೆ ಇರಲಿ. ನಿಮ್ಮನ್ನು ಗುಂಪಿನಿಂದ ಹೊರಗಿಡುವ ಯೋಚನೆಯನ್ನು ಮಾಡಿಯಾರು. ನಿಮಗೆ ಸಿಕ್ಕಷ್ಟರಲ್ಲಿಯೇ ಸುಖವನ್ನು ಅನುಭವಿಸಿ. ದೂರ ಪ್ರಯಾಣಕ್ಕೆ ಹೋಗಿದ್ದರೆ ತೊಂದರೆಯಾಗಬಹುದು. ಅಪರಿಚರಿಂದ ಮೋಸ ಹೋಗುವ ಸಾಧ್ಯತೆ ಇದೆ. ಹೊಸ ವಸ್ತುಗಳ ಬಗ್ಗೆ ಅಸೆ ಬರುವುದು. ನಿಧಾನವಾಗಿ ವರ್ಧಿಸುತ್ತಿರುವ ಆದಾಯದಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯು ಸುಧಾರಿಸುವುದು. ಅಗತ್ಯವಿಲ್ಲದ ವಸ್ತುಗಳನ್ನು ಮಾರಾಟ ಮಾಡಿ.

Published On - 12:32 am, Thu, 4 July 24

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!