Horoscope: ದಿನಭವಿಷ್ಯ: ಇಂದು ಮಾನಸಿಕ ಒತ್ತಡದಿಂದ ನೀವು ಹೊರಬರಲು ಕಷ್ಟವಾದೀತು

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜೂ.01 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಇಂದು ಮಾನಸಿಕ ಒತ್ತಡದಿಂದ ನೀವು ಹೊರಬರಲು ಕಷ್ಟವಾದೀತು
ರಾಶಿ ಭವಿಷ್ಯ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 01, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಜೂ.​​​​​01ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ನವಮೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಪ್ರೀತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 57 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:17ರಿಂದ ಬೆಳಗ್ಗೆ 10:54ರ ವರೆಗೆ, ಯಮಘಂಡ ಕಾಲ 14:07 ರಿಂದ 15:44ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:04 ರಿಂದ ಬೆಳಿಗ್ಗೆ 07:41ರ ವರೆಗೆ.

ಸಿಂಹ ರಾಶಿ :ಇಂದು ನಿಮ್ಮವರು ಯಾರು ಮತ್ತು ನಿಮ್ಮವರಂತೆ ಕಾಣುವವರು ಯಾರು ಎಂಬುದರ ಸ್ಪಷ್ಟ ನಿಲುವು ಇರಲಿದೆ. ಮಕ್ಕಳಿಗೆ ನಿಮ್ಮ ಮೇಲಿನ ಪ್ರೀತಿ ಹೆಚ್ಚಾಗುವುದು. ವ್ಯಾಪರ ಅಥವಾ ಉದ್ಯಮವು ನಿಧಾನವಾಗಿ ಒಂದೊಂದೇ ಹೆಜ್ಜೆಯನ್ನು ಇಟ್ಟು ಮೇಲೇರಲು ಆರಂಭಿಸಿದೆ. ಕೃಷಿಯ ಕಾರ್ಯದಲ್ಲಿ ಮನಸ್ಸಾಗಿ ಕೆಲವು ಅಪರೂಪದ ಸಸ್ಯಗಳನ್ನು ನೆಡಲಿದ್ದೀರಿ. ಇಂದು ನೀವು ದಾರಿ ತಪ್ಪುವ ಸಂಭವವಿದೆ. ಸಂಗಾತಿಯನ್ನು ಹುಡುಕುವ ಕೆಲಸವು ನಿಮಗೆ ಬೇಸರವನ್ನು ತರಿಸುವುದು. ಮಾತುಗಳನ್ನು ಕಡೆ ಆಡುವುವಿರಿ. ಇಂದು ಪಾಲುದಾರಿಕೆಯಲ್ಲಿ ಯಾವುದೇ ಕೆಲಸವನ್ನು ಮಾಡಿದರೆ, ಅದು ನಿಮಗೆ ಒಳ್ಳೆಯದು. ನೆರೆ ಮನೆಯವರ ಜೊತೆ ಕಲಹವಾಗಬಹುದು. ದಿನ ಮಾನಸಿಕ ಒತ್ತಡದಿಂದ ನೀವು ಹೊರಬರಲು ಕಷ್ಟವಾದೀತು. ಮನೋರಂಜನೆಯಲ್ಲಿ ನೀವು ಪಾಲ್ಗೊಳ್ಳುವಿರಿ. ಖರ್ಚಿನ ಮೇಲೆ‌‌ ನಿಯಂತ್ರಣ ಸಾಧಿಸಬೇಕಾಗಿ ಬರಬಹುದು.

ಕನ್ಯಾ ರಾಶಿ :ಭೂಮಿಯ ವಿಚಾರದಲ್ಲಿ ಸರಿಯಾದ ಮಾಹಿತಿ ಸಿಗದೇ ಮೋಸಹೋಗಬೇಕಾದೀತು. ಯಥಾಯೋಗ್ಯ ದಾನವನ್ನೂ ನೀವು ಮಾಡಲಿದ್ದೀರಿ. ಮಾತಗಾರರಾಗಿದ್ದರೆ ನಿಮಗೆ ಪ್ರಶಂಸೆಗಳು ಸಿಗಬಹುದು. ವಂಚನೆ ಮಾಡಿದ್ದೀರಿ ಎಂಬ ಅಪವಾದ ಬರಬಹುದು. ಹೊಸ ವಸ್ತ್ರಗಳನ್ನು ಧರಿಸುವಿರಿ. ಶ್ರಮವಹಿಸದೇ ಫಲವನ್ನು ಅಪೇಕ್ಷಿಸುವುದು ನಿಮ್ಮ ಅಸಾಮರ್ಥ್ಯವನ್ನು ತೋರಿಸುವುದು. ದಾನವಾಗಿ ಅಪರೂಪದ ವಸ್ತುಗಳು ಸಿಗಲಿವೆ. ನೀವು ಕೆಲವು ಇನ್ನೊಬ್ಬರಿಗೆ ತೊಂದರೆಯಾಗುವಂತಹ ಚಟುವಟಿಕೆಗಳನ್ನು ತಡೆಯಬೇಕು. ಜಾಣತನವು ಇಂದು ನಿಮ್ಮ ಉಪಯೋಗಕ್ಕೆ ಬರುವುದು. ಸ್ತ್ರೀಯರು ಅವರಿಗೆ ಬೇಕಾದ ಕಾರ್ಯವನ್ನು ಬಹಳ ನಾಜೂಕಿನಿಂದ ಮಾಡಿಸಿಕೊಳ್ಳುವರು. ಬಹಿಶ್ಶತ್ರುಗಳಿಗಿಂತ ಅಂತಶ್ಶತ್ರುಗಳ ಬಗ್ಗೆ ಎಚ್ಚರ ಅವಶ್ಯಕ. ತಾಯಿಯ ಆರೋಗ್ಯವನ್ನು ಸರಿಯಾಗಿ ನೋಡಿಕೊಳ್ಳಿ.

ತುಲಾ ರಾಶಿ :ಹೊಸ ಉದ್ಯೋಗವನ್ನು ಹುಡುಕುವ ಕೆಲಸಕ್ಕೆ ಹೆಚ್ಚು ಓಡಾಟ ಆಗಬಹುದು.‌ ನಿಮ್ಮ ಆಸೆಗಳನ್ನು ಪೂರೈಸಿಕೊಳ್ಳಲು ನಿರಂತರ ಯತ್ನವನ್ನು ಮಾಡುವಿರಿ. ಉತ್ತಮವಾದ ಆಹಾರವನ್ನು ತಿನ್ನಬೇಕು ಎಂದು ಬಯಸಿ ಮನೆಯಿಂದ ದೂರ ಹೋಗುವಿರಿ. ಮನೆಯನ್ನು ಕಟ್ಟುವ ವಿಚಾರವು ಪತ್ನಿಯಿಂದ ಬರಲಿದ್ದು ಬಹಳ ಸಂತೋಷವಾಗಲಿದೆ. ತಾಯಿಯ ಆರೋಗ್ಯವು ಕೆಡಲಿದ್ದು ಚಿಕಿತ್ಸೆಯನ್ನು ಕೊಡಿಸುವಿರಿ. ಅಲ್ಪ ಭೋಜನದಿಂದ ತೃಪ್ತಿ ಇರಲಿದೆ. ಯಾರನ್ನೋ ನಿಮಗೆ ಹೋಲಿಸಿಕೊಳ್ಳುವುದು ಬೇಡ. ಕ್ರಮಬದ್ಧವಾದ ಆಲೋಚನೆಗಳು ನಿಮಗೆ ಸ್ಫೂರ್ತಿಯನ್ನು ಕೊಡಬಹುದು. ಪರಸ್ಪರ ಸಹಕಾರದ ಭಾವನೆ ನಿಮ್ಮ ಮನಸ್ಸಿನಲ್ಲಿ ಉಳಿಯುತ್ತದೆ. ಮಕ್ಕಳಿಗೆ ಹಣವನ್ನು ಕೊಟ್ಟು ತಪ್ಪು ದಾರಿಗೆ ಕಳುಹಿಸುವಿರಿ. ನಿಮ್ಮ ಬಗ್ಗೆ ಸುಳ್ಳು ವದಂತಿಗಳು ಹರಡಬಹುದು. ನಿರ್ಮಾಣ ವ್ಯವಸ್ಥೆಯಲ್ಲಿ ಇರುವವರಿಗೆ ಸ್ವಲ್ಪ ಹಿನ್ನಡೆಯಾಗಲಿದೆ. ನಿಮಗೆ ಸಂಬಂಧವಿಲ್ಲದ ವಿಚಾರದಲ್ಲಿ‌ ಹಣವನ್ನು ಕಳೆದುಕೊಳ್ಳಬೇಕಾಗಬಹುದು.

ವೃಶ್ಚಿಕ ರಾಶಿ :ನಿಮಗೆ ಇಂದು ಸಂಬಂಧಗಳ ಬೆಲೆಯು ಅರ್ಥವಾಗಲಿದೆ. ಎಲ್ಲವುದನ್ನೂ ವಿರೋಧಿಸುವುದು ಸರಿಯಾಗದು. ಮನೆಯಲ್ಲಿಯೇ ಇದ್ದು ಬೇಸರವಾಗಲಿದೆ. ಯಾರ ಜೊತೆಗಾದರೂ ಹೊರಗೆ ಸುತ್ತಾಡಲು ಬಯಸುವಿರಿ. ಕಛೇರಿಯಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ನಿಮ್ಮ ಸೇವೆಗೆ ಮೆಚ್ವುಗೆ ಸಿಗಬಹುದು. ಸ್ನೇಹಿತರು ನಿಮ್ಮ ಮಾತಿಗೆ ಬೆಲೆ ಕೊಡುವರು. ಸಕಾರಾತ್ಮಕೆ ಚಿಂತನೆಯನ್ನು ಬೆಳೆಸಿಕೊಳ್ಳುವುದು ಉತ್ತಮ. ಅಪರಿಚಿತ ಕರೆಗಳಿಗೆ ಕಿವಿಗೊಡದೇ ನಿಮ್ಮ ಕೆಲಸವನ್ನು ಮಾಡಿ. ಇನ್ನೊಬ್ಬರನ್ನು ನೋಡಿ ನೀವು ಕಲಿಯುವುದು ಬಹಳಷ್ಟು ಇದೆ ಎಂದು ಅರಿವಾಗಬಹುದು. ನಿಮ್ಮ ದೀರ್ಘಾವಧಿಯ ಯೋಜನೆಗಳು ವೇಗವನ್ನು ಪಡೆಯಲಿ. ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ತಯಾರಿಯಲ್ಲಿ ಶ್ರಮಿಸಬೇಕಾಗುತ್ತದೆ. ವಾಹನದ ದಾಖಲೆಗಳನ್ನು ಪರಿಶೀಲಿಸಿಕೊಂಡು ಚಲಾಯಿಸಿ. ಹೂಡಿಕೆಯಿಂದ ನಿಮಗೆ ಲಾಭಾಂಶವು ಸಿಗುವುದು. ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಆಸಕ್ತಿ ಇದ್ದರೂ ಓದಿ ಜೀರ್ಣಿಸಿಕೊಳ್ಳಲು ಆಗದು.

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ