Horoscope: ದಿನಭವಿಷ್ಯ; ರಾಜಕೀಯ ವ್ಯಕ್ತಿಗಳಿಂದ ಪ್ರೇರಿತ, ವ್ಯವಹಾರದಲ್ಲಿ ತೊಡಕಾಗಬಹುದು

|

Updated on: May 28, 2024 | 12:10 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 28 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ; ರಾಜಕೀಯ ವ್ಯಕ್ತಿಗಳಿಂದ ಪ್ರೇರಿತ, ವ್ಯವಹಾರದಲ್ಲಿ ತೊಡಕಾಗಬಹುದು
ಪ್ರಾತಿನಿಧಿಕ ಚಿತ್ರ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಬ್ರಹ್ಮ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 56 ನಿಮಿಷಕ್ಕೆ, ರಾಹು ಕಾಲ 15:43ರಿಂದ 17:20ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:17 ರಿಂದ 10:54ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:30 ರಿಂದ 14:07ರ ವರೆಗೆ.

ಸಿಂಹ ರಾಶಿ: ಇಂದು ನೀವು ಹೊರಗೆ ಸುತ್ತಾಡುವಾಗ ಎಚ್ಚರವಿರಲಿ. ಇನ್ನೊಬ್ಬರಿಂದ ಅಪಘಾತವಾಗಬಹುದು. ಭಯದ ವಾತಾವರಣದಲ್ಲಿ ಇಂದು ಇರಲಿದ್ದೀರಿ. ವೈದ್ಯಕೀಯ ಕ್ಷೇತ್ರಕ್ಕೆ ಹೋಗಲು ಬಯಸುವವರು ತಮ್ಮ ನಿರ್ಧಾರವನ್ನು ಗಟ್ಟಿ ಮಾಡಳ್ಳಬೇಕಿದೆ. ಅಪರಿಚಿತರ ವಾಹನವನ್ನು ಹತ್ತಬೇಡಿ. ವಿನಾಕಾರಣ ಸಂತೋಷವಾಗಿ ಇರುವಿರಿ. ಕಛೇರಿಯ ಕೆಲಸವು ನಿಧಾನವಾಗಿ ಮೇಲಧಿಕಾರಿಗಳಿಂದ ಬೈಯಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಕೆಲಸದಲ್ಲಿ ನಿರಾಸಕ್ತಿಯೂ ಆಗಲಿದೆ. ಬೇಡದ ವಿಚಾರಕ್ಕೆ ತಲೆ ಹಾಕುವುದು ಬೇಡ. ಈ ದಿನ ನೀವು ಆಲಸ್ಯದಿಂದ ಇರುವಿರಿ. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ನೀಡಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ.

ಕನ್ಯಾ ರಾಶಿ: ಅತಿಯಾದ ಸಲುಗೆಯು ದ್ವೇಷಕ್ಕೆ ಕಾರಣವಾಗಬಹುದು. ನಿಮ್ಮ ದಾಂಪತ್ಯದ‌ ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಿದ್ದು ಅದಕ್ಕಾಗಿ ನಿಮ್ಮ ಹಣವನ್ನು ಖರ್ಚು ಮಾಡಬೇಕಾಗಿ ಬರಬಹುದು. ಭೂಮಿಯ ವ್ಯವಹಾರದಲ್ಲಿ ನೀವು ಹಣವನ್ನು ಸಂಪಾದಿಸಲಿದ್ದೀರಿ. ನೀವಿಂದು ಒಬ್ಬೊಂಟಿಯಾಗಿ ರಮಣೀಯ ಸ್ಥಳಕ್ಕೆ ಹೋಗಲಿದ್ದೀರಿ. ಯಾವುದನ್ನು ನಂಬಲು ಹಿಂದೇಟು ಹಾಕುವಿರಿ. ನೆಮ್ಮದಿಯು ನಿಮಗೆ ಆಗಲಿದೆ. ನಿಮ್ಮ ವ್ಯಾಪಾರವನ್ನು ಬಹಳ ಜಾಣ್ಮೆಯಿಂದ ಮಾಡಬೇಕಿದೆ. ಮೋಸ ಹೋಗುವ ಸಾಧ್ಯತೆಯು ಇರಲಿದೆ. ಕೈಯ್ಯಲ್ಲಿರುವ ಹಣವನ್ನು ಪೂರ್ತಿಯಾಗಿ ಖಾಲಿ ಮಾಡಿಕೊಳ್ಳುವಿರಿ. ಇನ್ನೊಬ್ಬರ ಬಗ್ಗೆ ತೋರುವ ಸಹಾನುಭೂತಿಯು ಬೇರೆಯವರಿಗೆ ಇಷ್ಟವಾಗುವುದು. ನಿಮ್ಮ ಸಂಗಾತಿಗೆ ಒತ್ತಡಕ್ಕೆ ಇಂದಿನ ಕಾರ್ಯವನ್ನು ಮಾಡಬೇಕಾಗುವುದು. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು. ಖ್ಯಾತಿಯನ್ನು ಪಡೆಯುವ ಆಸೆಯಾಗುವುದು.

ತುಲಾ ರಾಶಿ: ನಿಮ್ಮ ವಿದ್ಯಾಭ್ಯಾಸದ ಬಗ್ಗೆ ಎಲ್ಲರೂ ಕುಳಿತು ಚರ್ಚಿಸುವರು. ನಿಮ್ಮನ್ನು ಇಷ್ಟಪಡುವವರ ಜೊತೆ ನೀವು ಕೆಲವು ಸಮಯವಿರಬೇಕಾಗುತ್ತದೆ. ರಾಜಕೀಯ ವ್ಯಕ್ತಿಗಳಿಂದ ಪ್ರೇರಿತರಾಗಿ ಕಾರ್ಯವನ್ನು ಮಾಡುವಿರಿ. ನಿಮಗೆ ಇಂದು ಆದರ್ಶವ್ಯಕ್ತಿತ್ವವು ಸಿಗಲಿದ್ದು ಅವರನ್ನು ಅನುಸರಿಸುವ ಸಾಧ್ಯತೆ ಇದೆ. ಸರಳ ಸಮಾರಂಭದಲ್ಲಿ ಭಾಗಿಯಾಗಬಹುದು. ಸಮಯವನ್ನು ಕಳೆಯಲು ಬಹಳ ಪ್ರಯಾಸಪಡಲಿದ್ದೀರಿ. ಹೆಚ್ಚಿನ ಹೂಡಿಕೆಗೆ ಒತ್ತು ನೀಡುವಿರಿ. ಇಂದು ಮಹಿಳೆಯ ಪಾತ್ರ ನಿಮ್ಮ ಜೀವನದಲ್ಲಿ ಪ್ರಮುಖಗಬಹುದು. ಮಕ್ಕಳಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ. ಪ್ರೀತಿಯಿಂದ ನೀವು ಮೋಸಹೋಗುವ ಸಾಧ್ಯತೆ ಇದೆ. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ತೊಡಕಾಗಬಹುದು.

ವೃಶ್ಚಿಕ ರಾಶಿ: ಇಂದು ಅಪರಿಚಿತ ಕರೆಗಳು ನಿಮ್ಮನ್ನು ಕೆಲಸಕ್ಕೆ ತೊಂದರೆಕೊಡಬಹುದು. ಸಂಪೂರ್ಣ ಮಾಹಿತಿಯ ಜೊತೆ ಕೆಲಸಕ್ಕೆ ಮುಂದುವರಿಯಿರಿ. ವ್ಯಕ್ತಿಗಳ ನಿಂದನೆಯನ್ನು ಮಾಡುವ ಕೆಲಸಕ್ಕೆ ವಿರಾಮವನ್ನು ಹೇಳಿ. ಇಲ್ಲವಾದರೆ ನಿಮಗೇ ಕಂಟಕವಾದೀತು. ನಿರಂತರವಾದ ಶ್ರಮದಿಂದ ಬಳಲಲಿದ್ದೀರಿ. ಪಿತ್ರಾರ್ಜಿತ ಆಸ್ತಿಯ ಅನುಭವಿಸುವ ಬಯಕೆಯನ್ನು ಇಟ್ಟಿಕೊಂಡಿದ್ದೀರಿ. ಉದ್ಯೋಗದಲ್ಲಿ ಮೋಸವಾಗಬಹುದು. ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಕಲೆಯನ್ನು ಕರಗತ ಮಾಡಿಕೊಳ್ಳಿ. ನಿಮ್ಮ ಬಂಧುಗಳಿಗೆ ನಿಮ್ಮ ಬಗ್ಗೆ ಕೆಲವು ವಿಚಾರಗಳು ತಿಳಿಯಲಿವೆ. ಮಹಿಳೆಯ ಕಾರಣದಿಂದ ತೊಂದರೆಯಲ್ಲಿ ಸಿಕ್ಕಿಕೊಳ್ಳುವಿರಿ. ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ಬೇಡ. ಆರೋಗ್ಯದ ಸುಧಾರಣೆಗೆ ಖರ್ಚಾಗುವುದು. ಇನ್ಮೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ನೀವಾಡುವ ಮಾತುಗಳು ನಂಬಿಕೆ ಬರುವಂತಿರಲಿ. ಇಂದು ನಿಮಗೆ ಬಂಧನದಂತೆ ಅನ್ನಿಸಬಹುದು.‌