Horoscope: ದಿನಭವಿಷ್ಯ: ಹಿತಶತ್ರುಗಳ ಬಗ್ಗೆ ನಿಮ್ಮ ಊಹೆಯು ಸುಳ್ಳಾಗಬಹುದು
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ, ರಾಶಿಯವರಾಗಿದ್ದರೆ, ಇಂದಿನ (ಮಾರ್ಚ್ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದಶಮೀ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಸಿದ್ಧಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 47 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:42 ರಿಂದ 05:11ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:46 ರಿಂದ 11:15ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:44 ರಿಂದ 02:13ರ ವರೆಗೆ.
ತುಲಾ ರಾಶಿ: ಇಂದಿನ ನಿಮ್ಮ ಬಿಡುವಿನ ವೇಳೆಯಲ್ಲಿ ದುರ್ಬಲರಿಗೆ ಸಹಾಯ ಮಾಡುವಿರಿ. ಅನೌಚಿತ್ಯದ ಮಾತುಗಳು ನಿಮ್ಮ ಬಗ್ಗೆ ತಿಳಿಸುವುದು. ಶತ್ರುಗಳ ಬಗ್ಗೆ ನಿಮಗೆ ಭಯವಿರುವುದು. ವ್ಯವಹಾರದಲ್ಲಿ ಸಂಬಂಧವನ್ನು ಬೆಸೆದು ವ್ಯವಹಾರವನ್ನೂ ಸಂಬಂಧವನ್ನೂ ಎರಡನ್ನೂ ಹಾಳುಮಾಡಿಕೊಳ್ಳುವಿರಿ. ನಿಮಗೆ ಬೇಡದ ವಸ್ತುಗಳನ್ನು ನೀವು ಇನ್ನೊಬ್ಬರಿಗೆ ದಾನವಾಗಿ ಕೊಡುವಿರಿ. ಯಾರಿಂದಲೋ ಪ್ರೇರಿತರಾಗಿ ಆಸ್ತಿಯನ್ನು ಪಡೆಯುವ ಹುನ್ನಾರ ನಡೆಸುವಿರಿ. ರಾಜಕೀಯದಲ್ಲಿ ವಿವಾದಸ್ಪದ ಮಾತುಗಳು ಆಡಿ ಎಲ್ಲರ ಕೆಂಗಣ್ಣಿಗೆ ಸಿಲುಕುವಿರಿ. ಮುಖಂಡರ ಜೊತೆ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಅಮೂಲ್ಯವಾದ ವಸ್ತುಗಳು ಪಡೆದುಕೊಳ್ಳುವಿರಿ. ಇಂದು ನಿಮ್ಮ ಮಾತಿನ ಆರಂಭವೇ ನೀವು ಎಂತಹವರು ಎನ್ನುವುದನ್ನು ತಿಳಿಸುತ್ತದೆ. ಕೆಲಸಗಳಲ್ಲಿ ನೀವು ಜಯವನ್ನು ಸಾಧಿಸಬಹುದು. ಸಾಧಿಸಲು ಆಗುವಂತಹ ಕೆಲಸವನ್ನು ಮಾಡಿ.
ವೃಶ್ಚಿಕ ರಾಶಿ: ಇಂದು ಆತ್ಮಗೌರವಕ್ಕೆ ಧಕ್ಕೆಯಾಗಬಹುದು. ಕೆಲವು ಮಾತುಗಳನ್ನು ನೀವು ಸಹಿಸಿಕೊಳ್ಳಬೇಕಾಗುವುದು. ಯಾರದೋ ಪ್ರಚೋದನೆಯಿಂದ ತಪ್ಪು ಹಾದಿಯಲ್ಲಿ ಹೋಗುವಿರಿ. ಗೌರವವು ಸಿಗಬೇಕಾದ ಕಡೆ ಸಿಗದೇ ಬೇಸರವಾಗುವುದು. ಇಂದು ನಿಮ್ಮ ಮಾರ್ಗದರ್ಶನವನ್ನು ಕೇಳಿಕೊಂಡು ಬರಬಹುದು. ನಿಮ್ಮ ಇಂದಿನ ಗಂಭೀರ ಮೌನಕ್ಕೂ ಅರ್ಥವು ಇರಲಿದೆ. ಮಕ್ಕಳ ಜೊತೆ ಅನ್ಯೋನ್ಯ ಸಂಬಂಧವು ಕಾಣಿಸಿಕೊಂಡೀತು. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ. ಅಧಿಕಾರಿಗಳು ನಿಮಗೆ ತೊಂದರೆ ಕೊಡಬಹುದು. ಶಿಸ್ತಿನ ವ್ಯವಹಾರವನ್ನು ಬಿಡದೇ ಮುಂದುವರಿಸುವಿರಿ. ನಿಮ್ಮ ಬಳಿ ಇರುವ ವಸ್ತುಗಳನ್ನು ಬಳಸಿಕೊಂಡು ನಿಮ್ಮ ಕಾರ್ಯವನ್ನು ಪೂರೈಸಿಕೊಳ್ಳಿ. ಪ್ರೀತಿಸಿದವರನ್ನು ಬಿಟ್ಟಿರಲಾಗದು.
ಧನು ರಾಶಿ: ಸಣ್ಣ ವಿಚಾರದಲ್ಲಿ ನೀವು ತಾಳ್ಮೆಯನ್ನು ಕಳೆದುಕೊಳ್ಳುವಿರಿ. ಆಕಸ್ಮಿಕ ಧನಾಗಮನವು ನಿಮ್ಮ ಮನೋಬಲವನ್ನು ಹೆಚ್ಚಿಸಬಹುದು. ಶಾರೀರಿಕ ಆಲಸ್ಯದಿಂದ ಇಂದು ಅಕಾಲದಲ್ಲಿ ಭೋಜನ ಮಾಡುವಿರಿ. ಅಜ್ಞಾತವಾಸದಿಂದ ಹೊರಬಂದಂತೆ ಎಲ್ಲರೂ ನಿಮ್ಮನ್ನು ಮಾತನಾಡಿಸಿಯಾರು. ನಿಮ್ಮವರು ನೀವಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳುವರು. ಕುಟುಂಬದಲ್ಲಿ ನಿಮ್ಮ ಪ್ರಾಮುಖ್ಯವು ಅರಿವಿಗೆ ಬರಬಹುದು. ಬೇಡದ ಆಲೋಚನೆಯನ್ನು ದೂರಮಾಡಿಕೊಳ್ಳಿ. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು. ಹಿತಶತ್ರುಗಳ ಬಗ್ಗೆ ನಿಮ್ಮ ಊಹೆಯು ಸುಳ್ಳಾಗಬಹುದು. ಆರೋಗ್ಯವು ಬಡವಾದಂತೆ ತೋರುವುದು. ಸೋಲಿನ ಚಿಂತೆಯನ್ನು ಬಿಟ್ಟು ಸ್ಪರ್ಧೆಯಲ್ಲಿ ತೊಡಗಿ. ಭಾತೃತ್ವ ಭಾವವನ್ನು ಬೆಳೆಸಿಕೊಳ್ಳುವ ಇಚ್ಛೆ ಇರುವುದು. ಉದ್ಯೋಗವನ್ನು ಬಿಡುವ ಸಂದರ್ಭವೂ ಬರಬಹುದು.
ಮಕರ ರಾಶಿ: ಇಂದು ಸ್ವಂತ ಉದ್ಯಮವನ್ನು ನಡೆಸುತ್ತಿದ್ದರು ಒತ್ತಡದಿಂದ ಇರುವರು. ಅನೇಕ ಕಾರ್ಯಗಳು ತುರ್ತಿನಲ್ಲಿ ಆಗಬೇಕಾದ ಕಾರಣ ಯಾವುದನ್ನು ಮೊದಲು ಮಾಡಬೇಕು ಎಂಬ ಗೊಂದಲ ಸೃಷ್ಟಿಯಾಗುವುದು. ಮನೆಯಿಂದ ಹೊರಗೆ ಇಂದು ನಿಮ್ಮ ವಾಸವಿರುವುದು. ನಿಮ್ಮ ನಡವಳಿಕೆಯನ್ನು ಇತರರಿಗೆ ಸಾಬೀತುಮಾಡಬೇಕಿಲ್ಲ. ಉದ್ಯೋಗಿಗಳಿಗೆ ಉನ್ನತ ಅಧಿಕಾರಿಗಳ ಜೊತೆ ಸರಿಯಾದ ಹೊಂದಾಣಿಕೆಯನ್ನು ಮಾಡಿಕೊಳ್ಳುವಿರಿ. ಯಾವ ಬಲವನ್ನು ನಂಬದೇ ಸ್ವಪ್ರಯತ್ನದಿಂದ ಎಲ್ಲವನ್ನೂ ಮಾಡಲು ಬಯಸುವಿರಿ. ಮುರಿದ ಸಂಬಂಧಗಳು ಎಷ್ಟೇ ಆದರೂ ಸರಿಯಾಗಿ ಕೂಡಿಕೊಳ್ಳುವುದು ಕಷ್ಟವಾದೀತು. ಇಂದಿನ ಕಾರ್ಯಗಳಲ್ಲಿ ತೊಂದರೆಗಳು ಎದ್ದು ಕಾಣಿಸುವುದು. ಜಾಣ್ಮೆಯನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ಯಾರಾದರೂ ರಾಜಕೀಯ ವ್ಯಕ್ತಿಗಳ ಸಂಪರ್ಕವನ್ನು ನೀವು ಮಾಡುವಿರಿ.
ಕುಂಭ ರಾಶಿ: ನಿಮ್ಮ ಇಂದಿನ ಮಾತುಗಳು ಯಾರ ಮೇಲೂ ಪ್ರಭಾವಬೀರದೇ ಹೋಗಬಹುದು. ವ್ಯಾಪಾರದಲ್ಲಿ ಆಗುವ ಅಲ್ಪ ಲಾಭವನ್ನು ಖುಷಿಯಿಂದ ಸ್ವೀಕರಿಸುವಿರಿ. ಚರಾಸ್ತಿಯ ಮಾರಾಟಕ್ಕೆ ಯಾರಾದರೂ ಅಡ್ಡಗಾಲು ಹಾಕಬಹುದು. ವ್ಯಾಪಾರದಲ್ಲಿ ಅಜಾಗರೂಕರಾಗಿ ಇರುವುದು ಸರಿಯಲ್ಲ. ಅಮೂಲ್ಯ ವಸ್ತುವಿನ ಲಾಭದಿಂದ ಸಂತಸವಾಗಲಿದೆ. ಸಹಾಯವನ್ನು ಮಾಡಿ ಸಂತೃಪ್ತಿಯನ್ನು ಪಡೆಯುವಿರಿ. ಅಪರಿಚಿತರ ಜೊತೆ ವೃಥಾ ಕಲಹವಾಗಬಹುದು. ನಿಮ್ಮ ಇಂದಿನ ನಡೆಯು ಅನೂಹ್ಯವಾಗಿರುವುದು. ರಾಜಕೀಯದಲ್ಲಿ ಬದಲಾವಣೆಯನ್ನು ತರಿಸುವುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಕೆಲವು ಗೊಂದಲವು ಪರಿಹಾರವಾಗದೇ ಹಾಗೆಯೇ ಇರುವುದು. ನಿಮ್ಮ ಕೆಲಸಕ್ಕೆ ಅಧಿಕಾರಿಗಳು ಪ್ರಶಂಸಿಸುವರು. ಬಹಳ ದಿನಗಳಿಂದ ನಡೆಯುತ್ತಿದ್ದ ನ್ಯಾಯಾಲಯದ ವ್ಯವಹಾರವನ್ನು ಮುಕ್ತಾಯ ಮಾಡಿಕೊಳ್ಳುವಿರಿ.
ಮೀನ ರಾಶಿ: ಇಂದು ವಿದ್ಯಾರ್ಥಿಗಳು ತಮ್ಮ ಪ್ರಗತಿಯನ್ನು ಕಂಡು ಸಂತಸಪಡುವರು. ದೈನಂದಿನ ಕಾರ್ಯಗಳು ಯಾರದೋ ಕಾರಣದಿಂದ ಬದಲಾವಣೆಯಾಗಲಿದೆ. ಸ್ನೇಹಿತರ ಆಗಮನದಿಂದ ನಿಮಗೆ ಸಂತೋಷವು ಸಿಗುವುದು. ನಿಮಗೆ ಕಛೇರಿಯಲ್ಲಿ ಅನುಕೂಲಕರವಾದ ವಾತಾವರಣವು ಇರಲಿದೆ. ಸ್ನೇಹಿತರ ಜೊತೆಗೆ ದೂರಪ್ರಯಾಣವನ್ನು ಮಾಡುವಿರಿ. ನಿಮ್ಮನ್ನು ನೌಕರರು ಹೋಗಳುವರು. ಎದರುರಾಗು ಅಡ್ಡಿ, ಆತಂಕಗಳನ್ನು ನೀವು ಅನಾಯಾಸವಾಗಿ ದೂರ ಸರಿಸುವಿರಿ. ಸಹನೆಯ ಪರೀಕ್ಷೆಯಲ್ಲಿ ನೀವು ಗೆಲ್ಲುವಿರಿ. ನಿಮ್ಮನ್ನು ನಗಿಸುವ ಪ್ರಯತ್ನ ಮಾಡಿದರೂ ನೀವು ಯಾವುದೋ ಆಲೋಚನೆಯಲ್ಲಿಯೇ ಇರುವಿರಿ. ನಿಮ್ಮ ಇಂದಿನ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ. ನಿಮಗೆ ಕೆಲಸದಲ್ಲಿ ಅನೇಕ ಗೊಂದಲಗಳು ಇರಬಹುದು.




