Horoscope: ಈ ರಾಶಿಯವರು ದೊಡ್ಡ ಅನಾಹುತದಿಂದ ಸಣ್ಣ ಅಂತರದಲ್ಲಿ ತಪ್ಪಿಸಿಕೊಳ್ಳುವಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಇಂದಿನ (ಮಾರ್ಚ್​​​​​ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ದೊಡ್ಡ ಅನಾಹುತದಿಂದ ಸಣ್ಣ ಅಂತರದಲ್ಲಿ ತಪ್ಪಿಸಿಕೊಳ್ಳುವಿರಿ
ರಾಶಿ ಭವಿಷ್ಯ
Edited By:

Updated on: Mar 07, 2024 | 9:49 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ವರೀಯಾನ್, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 46 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:13 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:47 ರಿಂದ 08:16ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:45 ರಿಂದ 11:14ರ ವರೆಗೆ.

ಧನು ರಾಶಿ : ಇಂದು ಹಲವಾರು ಕಾರಣದಿಂದ ಕುಟುಂಬದ ಚಿಂತೆಗೆ ಒಳಗಾಗುವಿರಿ. ವ್ಯವಹಾರವನ್ನು ಆತುರಗೊಳ್ಳದೇ ಸಮಾಧಾನ ಚಿತ್ತದಿಂದ ಮಾಡಿ. ನಿಮ್ಮ ಅಗತ್ಯ ವಸ್ತುಗಳು ಕಾಣೆಯಾಗಬಹುದು. ವಿವಾದವಾಗುವ ಸಂಗತಿಯನ್ನು ಪ್ರೋತ್ಸಾಹಿಸಬೇಡಿ. ಯಾವುದಾದರೂ ವ್ಯಕ್ತಿಯ ಪ್ರಭಾವಕ್ಕೆ ಒಳಗಾಗುವಿರಿ. ಯಾರ ಮೇಲಾದರೂ ಪ್ರೀತಿ ಮೂಡಬಹುದು. ಬುದ್ಧಿವಂತಿಕೆಯಿಂದ ಲಾಭ ಹೆಚ್ಚಾಗುತ್ತದೆ. ಬೇರೆಯವರಿಗೆ ನಿಮ್ಮ ಬಗ್ಗೆ ನಕಾರಾತ್ಮಕ ಭಾವವು ಇರಬಹುದು. ಗುರಿಯನ್ನು ಬದಲಿಸದೇ ಮುನ್ನುಗ್ಗಿ. ಮಕ್ಕಳಿಗೆ ಪ್ರೋತ್ಸಾಹವನ್ನು ಕೊಡುವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ. ಆಪ್ತರ ಬಗ್ಗೆ ಇರುವ ನಕಾರತ್ಮಕ ಭಾವವನ್ನು ನೀವು ಅವರಿಗೆ ಹೇಳುವಿರಿ. ಭೂಮಿಯ ಉತ್ಪನ್ನಗಳಿಂದ ಲಾಭವು ಸಿಗುವುದು. ಆತುರದಲ್ಲಿ ಯಾವ ನಿರ್ಧಾರವನ್ನೂ ಮಾಡದೇ ಯೋಚಿಸಿ ಮುಂದುವರಿಯಬೇಕಾಗುವುದು. ಕುಟುಂಬದಲ್ಲಿ ಬಂದ ಭಿನ್ನಾಭಿಪ್ರಾಯವನ್ನು ನೀವು ಸರಿ ಮಾಡಲು ನೀವು ಸಮರ್ಥರಾಗುವಿರಿ.

ಮಕರ ರಾಶಿ : ಹೊಸ ವಸ್ತುಗಳ ಖರೀದಿಯಿಂದ ನಿಮಗೆ ಸಂತೋಷವಾಗಲಿದೆ. ಸಹೋದರರಿಂದ ಆರ್ಥಿಕ ಸಹಾಯವು ದೊರೆಯುವುದು. ಕಾನೂನಿನ ವಿಚಾರದಲ್ಲಿ ಸರಿಯಾದ ಕ್ರಮವನ್ನು ತೆಗೆದುಕೊಳ್ಳಿ. ಮನೆಯಲ್ಲಿ ಗೆಳೆಯರಿಂದ ಸಂತೋಷದ ವಾತಾವರಣ ಇರುತ್ತದೆ. ಇಂದು ನೀವು ಹೊಸ ಉದ್ಯಮ ಆರಂಭಿಸಲು ಯೋಜನೆ ರೂಪಿಸಬಹುದು. ನೀರಿನ ವ್ಯಾಪಾರದಲ್ಲಿ ಲಾಭವಿರುವುದು. ನಿಮ್ಮ ಯೋಜನೆಯು ಪೂರ್ಣ ವ್ಯತ್ಯಾಸವಾದ ಕಾರಣ ಮನೆಯಲ್ಲಿ ಕಲಹವಾಡುವಿರಿ. ಸೂಕ್ತ ಪರಿಹಾರದ ಕಡೆ ಗಮನವಿರಲಿ. ನಿವೃತ್ತಿಯ ಅಂಚಿನಲ್ಲಿದ್ದು ನಡತೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ಒಂದೇ ವಿಚಾರವನ್ನು ಎಲ್ಲರಿಂದಲೂ ಕೇಳಿ ಜಿಗುಪ್ಸೆ ಬಂದೀತು. ಮನೆಮಂದಿಯವರ ಜೊತೆ ಸಿಟ್ಟಗೊಂಡರೆ ನಿಮಗೇ ತೊಂದರೆಯಾದೀತು. ನಿಮ್ಮ ಇಂದಿನ ಕಾರ್ಯದಿಂದ ಕಛೇರಿಯಲ್ಲಿ ನಿರೀಕ್ಷೆ ಮೀರಿ ಪ್ರಶಂಸೆ ಸಿಗುವುದು. ವಿನೋದಕ್ಕೆಂದು ಆಡಿದ ಮಾತು ಗಂಭೀರ ಸ್ವರೂಪವನ್ನು ಪಡೆದೀತು.

ಕುಂಭ ರಾಶಿ : ಇಂದು ದೂರದ ಬಂಧುಗಳಿಂದ ಸಂತೋಷದ ಸುದ್ದಿಯನ್ನು ಕೇಳುವಿರಿ. ಮನೆಗೆ ಅತಿಥಿಗಳು ಆಗಮಿಸುವುದರಿಂದ ಖರ್ಚು ಹೆಚ್ಚಾದಂತೆ ತೋರುತ್ತದೆ. ಆತ್ಮವಿಶ್ವಾಸ ಕೃತಕವಾಗಿ ತಂದುಕೊಳ್ಳುವಿರಿ. ದೊಡ್ಡ ಅನಾಹುತದಿಂದ ಸಣ್ಣ ಅಂತರದಲ್ಲಿ ತಪ್ಪಿಸಿಕೊಳ್ಳುವಿರಿ. ನಿಮ್ಮ ಬುದ್ಧಿವಂತಿಕೆಯನ್ನು ಸ್ವಲ್ಪ ಬಳಸಿ. ಸ್ನೇಹಿತರ ಜೊತೆ ಉತ್ತಮ ಸಮಯವನ್ನು ಕಳೆಯುವಿರಿ. ಬಂಧುಗಳ ಒಡನಾಟ ನಿಮಗೆ ಸಿಗಲಿದೆ. ಸ್ನೇಹಿತರ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುವಿರಿ. ಹೊಸ ವಿಷಯಗಳತ್ತ ಉತ್ಸಾಹವೇ ಇರಲಿದ್ದು, ಇದು ತಾತ್ಕಾಲಿಕ ಅಷ್ಟೇ. ನೀವು ಖರೀದಿಸುವ ಭೂಮಿಯ ದಾಖಲೆಯನ್ನು ಸಮಾಧಾನಚಿತ್ತದಿಂದ ಕೂಲಂಕಷವಾಗಿ ಪರಿಶೀಲಿಸಿ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಆರೋಗ್ಯವನ್ನು ಕೆಡಿಸುವುದು. ಶ್ರಮದಿಂದ ನ್ಯಾಯಾಲಯಲ್ಲಿ ಗೆಲುವನ್ನು ಸಾಧಿಸುವಿರಿ. ನಿಮ್ಮಲ್ಲಿ ಅನಾರೋಗ್ಯದ ಭಯವು ಇರುವುದು.

ಮೀನ ರಾಶಿ : ನಿಮ್ಮ ಕಠಿಣ ಪರಿಶ್ರಮದಿಂದ ಫಲಿತಾಂಶವನ್ನು ಪಡೆಯುವಿರಿ. ಸಮಾಜಮುಖೀ ಕಾರ್ಯಗಳನ್ನು ಮಾಡುವ ಆಸಕ್ತಿ ಇರುತ್ತದೆ. ವ್ಯಾಪಾರವು ಅಪೇಕ್ಷಿತ ಲಾಭವನ್ನು ತರುತ್ತದೆ. ಕೆಲವು ಪ್ರಭಾವಿ ವ್ಯಕ್ತಿಗಳ ಪರಿಚಯದಿಂದ ದಿಕ್ಕು ಬದಲಾಗಬಹುದು. ಶಾರೀರಿಕ‌ ವೇದನೆಯನ್ನು ನಗಣ್ಯ ಮಾಡುವಿರಿ. ಆತಂಕ ಮತ್ತು ಉದ್ವೇಗ ಇರುತ್ತದೆ. ಪ್ರವಾಸದಿಂದ ಉತ್ಸಾಹವು ಹೆಚ್ಚಾಗುವುದು. ಕೆಟ್ಟ ಜನರಿಂದ ದೂರವಿರಿ. ಹೊಸತನಕ್ಕೆ ನೀವು ತೆರೆದುಕೊಳ್ಳುವಿರಾದರೂ ಗೊಂದಲಗಳು ನಿವಾರಣೆಯಾಗದೇ ಇರಬಹುದು. ದಾಂಪತ್ಯದ ವಾಗ್ವಾದವು ಅತಿರೇಕಕ್ಕೆ ಹೋಗಬಹುದು. ಮಿತ್ರರು ನಿಮ್ಮಆಸಕ್ತಿಯ ಕ್ಷೇತ್ರವನ್ನು ಬದಲಿಸಬಹುದು. ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ನಿಮ್ಮ ಗುಣಗಳನ್ನು ಇತರರು ಆಡಿಕೊಳ್ಳಬಹುದು. ಪೋಷಕರನ್ನು ಕಡೆಗಣಿಸಿದ್ದು ನಿಮಗೆ ಪಾಪಪ್ರಜ್ಞೆ ಕಾಡಬಹುದು. ಕುಟುಂಬದಲ್ಲಿ ಸಂತಸದ ವಾತಾವರಣವಿರುವಂತೆ ಮಾಡುವಿರಿ. ವಾಹನವನ್ನು ಚಲಾಯಿಸುವಾಗ ಹೆಚ್ಚು ಎಚ್ಚರಿಕೆ ಬೇಕು.

-ಲೋಹಿತ ಹೆಬ್ಬಾರ್ – 8762924271 (what’s app only)

Published On - 12:45 am, Thu, 7 March 24