AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಇಂದು ಅನಿರೀಕ್ಷಿತ ವೆಚ್ಚವನ್ನ ಮಾಡಬೇಕಾಗಬಹುದು

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಇಂದಿನ (ಮಾರ್ಚ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ಇಂದು ಅನಿರೀಕ್ಷಿತ ವೆಚ್ಚವನ್ನ ಮಾಡಬೇಕಾಗಬಹುದು
ದಿನ ಭವಿಷ್ಯ
TV9 Web
| Edited By: |

Updated on: Mar 09, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್​​​​​ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಮಾಘ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಶಿವ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:44  ರಿಂದ 11:14 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:13 ರಿಂದ 03:42 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:15 ರಿಂದ 08:15ರ ವರೆಗೆ.

ಸಿಂಹ ರಾಶಿ : ನೀವು ಗುಟ್ಟನ್ನು ಮಾಡಲು ಹೋಗಿ ಸಿಕ್ಕಿಬೀಳುಬಿರಿ. ಪರಿಚಿತರಿಂದ ನಿಮಗೆ ಉಡುಗೊರೆ ಸಿಗಲಿದೆ. ನಿಮ್ಮ ಅವ್ಯವಸ್ಥೆಗೆ ಯಾರನ್ನೋ‌ ದೂಷಿಸುವುದು ಬೇಡ. ಪಾಲಕರ ಜೊತೆ ಸುಂದರ ಸಮಯವನ್ನು ಕಳೆಯುವಿರಿ. ಕೊರತೆಯನ್ನು ನೆನೆದು ದುಃಖಿಸುವುದು ಬೇಡ. ಕಾಲಕ್ಕೆ ಸಿಗಬೇಕಾದುದು ಸಿಗಲಿದೆ. ಎಂದಿಗಿಂತ ವ್ಯಾಪಾರದಲ್ಲಿ ಹಿನ್ನಡೆ ಇರಲಿದೆ. ಚಿಂತೆಯು ಕಾಡಬಹುದು. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ನ್ಯಾಯಾಲಯದಲ್ಲಿ ನಿಮ್ಮ ಪರವಾಗಿ ಸಾಕ್ಷಿಯು ಸಿಗದೇಹೋಗಬಹುದು. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಸರ್ಕಾರಿ ನೌಕರರು ಅಧಿಕಾರಿಗಳಿಂದ ಸಮಸ್ಯೆಯನ್ನು ಎದುರಿಸಬೇಕಾದೀತು. ಪ್ರವಾಸದಿಂದ ತೊಂದರೆಯಾಗಬಹುದು. ನಿಮ್ಮ ಪ್ರಾಮಾಣಿಕ ಪ್ರಯತ್ನವನ್ನು ಬಿಡದೇ ಮುಂದುವರಿಸುವಿರಿ.

ಕನ್ಯಾ ರಾಶಿ : ಇಂದು ನೀವು ಆಲಸ್ಯದಿಂದ ಮಾಡಬೇಕಾದ ಕೆಲಸವನ್ನು ಮಾಡದೇ ಇರುವಿರಿ. ತುರ್ತು ವಿಚಾರವನ್ನು ಮರೆಯುವಿರಿ. ಹಿರಿಯರ ಸೇವೆಯನ್ನು ಮಾಡುವಿರಿ. ಆಪ್ತರನ್ನು ದೂರವಿರಿಸಿಕೊಂಡು ಸಂಕಟಪಡುವಿರಿ. ವಿಶ್ವಾಸಘಾತವಾದರೆ ನಿಮಗೆ ನೋವಾಗಲಿದೆ. ವಿದ್ಯಾರ್ಥಿಗಳ ಶ್ರಮವು ವ್ಯರ್ಥವಾಗುವುದು. ಅತಿಯಾದ ಚಿಂತೆಯು ನಿಮ್ಮ ಜೊತೆಗಿರುವವರ ಮನಸ್ಸನ್ನೂ ಕೆಡಿಸೀತು. ಮನೆಯ ಸ್ಥಳವನ್ನು ಬದಲಾಯಿಸಬೇಕಾಗಬಹುದು. ನಿಮ್ಮ ವಸ್ತುಗಳು ಕಳ್ಳತನವಾಗಬಹುದು. ನಿಮ್ಮ ನಿಯಮಗಳನ್ನು ನೀವೇ ಭಂಗ ಮಾಡಿಕೊಳ್ಳುವಿರಿ. ಎಚ್ಚರಿಕೆಯಿಂದ ನಿಮ್ಮ ಹೆಜ್ಜೆಯನ್ನು ಇಡಿ. ಅಳುಕಿನಿಂದ ಇರುವಿರಿ. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ತೃಪ್ತಿ ಸಿಗದು. ನಿಮ್ಮ ಉತ್ಸಾಹಕ್ಕೆ ಯಾರಾದರೂ ಭಂಗಮಾಡಬಹುದು. ಮಕ್ಕಳ ಜೊತೆ ಎಲ್ಲಿಗಾದರೂ ಸುತ್ತಾಡಲು ಹೋಗುವಿರಿ. ಮೂರನೇ ವ್ಯಕ್ತಿಗಳ ಮೂಲಕ ನೀವು ಶತ್ರುಗಳ ಯೋಜನೆಯನ್ನು ತಿಳಿಯುವಿರಿ.

ತುಲಾ ರಾಶಿ : ನಿಮ್ಮ‌‌‌ ಮೇಲಿರುವ ಅಪವಾದವನ್ನು ಕಳೆದುಕೊಳ್ಳಲು ಬೇಕಾದ ಪ್ರಯತ್ನದಲ್ಲಿ ಇರುವಿರಿ. ಯಾವ ಯಶಸ್ಸನ್ನು ಪಡೆಯಲೂ ನೀವು ಯೋಚಿಸಲಾರಿರಿ. ಕಾನೂನಿನ ಸಮರದ ಬಗ್ಗೆ ಹೊಸ ದಾರಿಯಲ್ಲಿ ಸಾಗುವಿರಿ. ಅಪರಿಚಿತರ ಸಂಪರ್ಕವನ್ನು ಬಳಸಿಕೊಂಡು ಲಾಭ ಮಾಡಿಕೊಳ್ಳುವಿರಿ. ಉತ್ಪನ್ನಗಳನ್ನು ಮಾರಾಟ ಮಾಡಿ ಆದಾಯವನ್ನು ಹೆಚ್ಚಿಸಿಕೊಳ್ಳುವಿರಿ. ಸಾಮಾಜಿಕ ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ದುಡುಕಿ ಮಾತನಾಡಿ ಸತ್ಯವನ್ನು ಹೇಳುವಿರಿ. ದೈವಭಕ್ತಿಯಿಂದ ಮನಸ್ಸಿನ ಗೊಂದಲವನ್ನು ಪರಿಹರಿಸಿಕೊಂಡು ಸ್ಥೈರ್ಯವನ್ನು ತಂದುಕೊಳ್ಳುಬಿರಿ. ವಿನಾಕಾರಣ ಯಾರ ಮೇಲಾದರೂ ಅಧಿಕಾರವನ್ನು ಚಲಾಯಿಸುವಿರಿ. ಇಂದಿನ ಆಹಾರವು ಆರೋಗ್ಯವನ್ನು ಕೆಡಿಸಬಹುದು. ಅಲ್ಪರ ಸಹವಾಸದಿಂದ ಅಭಿಮಾನಕ್ಕೆ ತೊಂದರೆಯಾಗುವುದು. ಹಣಕಾಸಿನ ವ್ಯವಹಾರವು ಪಾರದರ್ಶಕವಾಗಿ ಇರಲಿ. ಮಕ್ಕಳ ಖರ್ಚಿಗೆ ಹಣವನ್ನು ಕೊಡುವಿರಿ.

ವೃಶ್ಚಿಕ ರಾಶಿ : ಇಂದು ದೂರ ಪ್ರಯಾಣವನ್ನು ಯೊಚಿಸಿ ಮಾಡುವುದು ಉತ್ತಮ. ಉದ್ಯೋಗದಲ್ಲಿ ಉನ್ನತ‌ಸ್ಥಾನದ ಸುದ್ದಿಯನ್ನು ನೀವು ಕೇಳಬಹುದು. ಮಾನಸಿಕ ಸ್ಥಿತಿಯನ್ನು ಎಲ್ಲ ಸಂದರ್ಭದಲ್ಲಿಯೂ ಸಮತೋಲನದಿಂದ ಇಟ್ಟುಕೊಳ್ಳಿ. ನಿಮ್ಮ ಹಣದ ನಷ್ಟಕ್ಕೆ ಮಾತ್ಯಾರನ್ನೋ ದೂರುವುದು ಬೇಡ. ಹೊಸ ಉದ್ಯೋಗವು ನಿಮಗೆ ಆರ್ಥಿಕತೆಯಿಂದ ನೆಮ್ಮದಿಯನ್ನು ನೀಡುವುದು. ಗೃಹ ನಿರ್ಮಾಣದ ಬಗ್ಗೆ ಯೋಗ್ಯ ವ್ಯಕ್ತಿಗಳ ಜೊತೆ ಸಂವಹನ‌ ನಡೆಸಿ. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವ ಇಚ್ಛೆ ಇರಲಿದೆ. ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಸಂಗಾತಿಯ ಬೆಂಬಲವು ಸಿಗದೇಹೋಗಬಹುದು. ನಿಮ್ಮ ಹಿತೈಷಿಗಳಾದರೂ ಅವರ ಜೊತೆಗಿನ ಒಡನಾಟವು ಮಿತಿಯಲ್ಲಿ ಇರಲಿ. ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಬರುವಂತೆ ವರ್ತಿಸುವಿರಿ.

ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?