ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮಾರ್ಚ್ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ :ಪೂರ್ಣಿಮಾ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ವೃದ್ಧಿ, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 34 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:05 ರಿಂದ 09:36ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:07 ರಿಂದ 12:39ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ02:10 ರಿಂದ 03:41 ರ ವರೆಗೆ.
ಮೇಷ ರಾಶಿ: ಇಂದು ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಾಗುವ ಸಾಧ್ಯತೆ ಇದೆ. ಧನಾಗಮನ ನಿರೀಕ್ಷೆಯಲ್ಲಿ ಸಫಲತೆ ಇರುವುದು. ನಿಮ್ಮ ಸಂಗಾತಿಯ ಜೊತೆ ಸಣ್ಣ ವಿಷಯಗಳಿಗೆ ಆಗುವ ವಿವಾದವನ್ನು ತಪ್ಪಿಸಿ. ವಿದ್ಯಾರ್ಥಿಗಳು ಕಲಿಕೆಗೆ ಹೊಸ ಸಾಧ್ಯತೆಗಳು ಹುಡುಕಿಕೊಳ್ಳುವುದು ಅಗತ್ಯ. ಸಂಬಂಧಿಕರ ಜೊತೆ ವ್ಯವಹರಿಸುವುದನ್ನು ತಪ್ಪಿಸಿ, ಇಲ್ಲವಾದರೆ ಸಂಬಂಧವು ಹದಗೆಡಬಹುದು. ಇಂದು ಹಲವಾರು ಒತ್ತಡಗಳ ನಡುವೆ ಇರುವಿರಿ. ಪುಣ್ಯ ಪ್ರದೇಶಗಳಿಗೆ ಪ್ರಯಾಣಿಸಿ ದಾನ-ಧರ್ಮದಲ್ಲಿ ಭಾಗಿಯಾಗಿಯಾಗುವಿರಿ. ಮಾನಸಿಕವಾಗಿ ಋುಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಕೊರೆಯಲಿವೆ. ನಿಮ್ಮ ಆಸಕ್ತಿಯಿಂದ ಉದ್ಯೋಗ ಕ್ಷೇತ್ರದಲ್ಲಿ ಕೆಲವು ಬದಲಾವಣೆಗಳಿರಬಹುದು. ನಿಮ್ಮ ಸಹೋದ್ಯೋಗಿಗಳು ನಿಮ್ಮ ಬಗ್ಗೆ ಅಸೂಯೆ ಪಡಬಹುದು. ಅಪರಿಚಿತರ ವ್ಯಕ್ತಿಗಳಿಂದ ನಿಮಗೆ ಸಂತೋಷವು ಸಿಗಲಿದೆ. ಮನೆಯಲ್ಲಿ ನಿಮ್ಮ ಕರ್ತವ್ಯದ ಕೆಲಸಗಳು ಇರಲಿದ್ದು, ಅದನ್ನು ನೀವು ಮಾಡಬೇಕಾಗುವುದು.
ವೃಷಭ ರಾಶಿ: ಇಂದು ನಿಮಗೆ ಸ್ಥಿರತೆಯನ್ನು ಕಾಯ್ದುಕೊಳ್ಳುವುದು ಕಷ್ಟವಾದೀತು. ಕೆಲವನ್ನು ನೀವೆ ತಂದುಕೊಳ್ಳುವಿರಿ. ಪರಿಸ್ಥಿತಿಯನ್ನು ಎದುರಿಸಲು ಸ್ಥೈರ್ಯ ಸಾಕಾಗದು. ಒಡಹುಟ್ಟಿದವರೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಪ್ರೀತಿಯಲ್ಲಿ ಮಾತಿನ ಕಠೋರತೆಯಿಂದ ಸಂಬಂಧಗಳಲ್ಲಿ ಬಿರುಕು ಬರಬಹುದು.ತಾಯಿಯ ಕಡೆಯಿಂದ ಸಂಬಂಧಗಳು ಸುಧಾರಿಸುತ್ತವೆ. ವ್ಯಾಪಾರ, ವ್ಯವಹಾರದಲ್ಲಿ ಡೋಲಾಯಮಾನವಾದ ಸ್ಥಿತಿ ಇರುವುದು. ಆರ್ಥಿಕವಾಗಿ ಖರ್ಚು ವೆಚ್ಚಗಳಲ್ಲಿ ಬಲವಾದ ಹಿಡಿತವಿರಲಿದೆ. ಒಂದೇ ವಿಚಾರವನ್ನು ಮತ್ತೆ ಮತ್ತೆ ಕೇಳಿ ಕಿರಿ ಕಿರಿ ಎನಿಸಬಹುದು. ವಿದ್ಯಾರ್ಥಿಗಳಿಗೆ ಕರ್ತವ್ಯವನ್ನು ನೆನಪಿಸುವಂತಾಗುತ್ತದೆ. ನಿಮ್ಮ ಸ್ಥಗಿತಗೊಂಡ ಕಾರ್ಯಗಳನ್ನು ಪೂರ್ಣಗೊಳ್ಳಬಹುದು. ಇಂದು ನೀವು ಸಂತೋಷವಾಗಿರುವುದರಿಂದ ಎಲ್ಲದರಲ್ಲೂ ಯಶಸ್ಸನ್ನು ಪಡೆಯುತ್ತೀರಿ. ಸಾಹಸಕ್ಕೆ ಹೋಗದೇ ಯಥಾಸಾಧ್ಯ ನಿರ್ವಹಿಸಿ.
ಮಿಥುನ ರಾಶಿ: ಇಂದು ನಿಮ್ಮ ನಂಬಿಕೆಗೆ ಘಾಸಿಯಾಗಬಹುದು. ವೃತ್ತಿಯಲ್ಲಿ ಉತ್ಸಾಹವು ಕಡಿಮೆ ಆಗದಂತೆ ನೋಡಿಕೊಳ್ಳಿ.ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ವೈದ್ಯರ ಸಲಹೆ ಪಡೆದು ಔಷಧೋಪಚಾರ ಮಾಡಿ. ನೌಕರರಿಂದ ಗೌರವವು ನಿಮಗೆ ಸಿಗುತ್ತದೆ. ಮದುವೆಯಾಗಲು ಪ್ರಯತ್ನಿಸುವವವರಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ಹೆತ್ತವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ. ಯಾವುದೇ ಜಗಳ ಮತ್ತು ವಿವಾದಗಳಿಗೆ ಸಿಲುಕಬೇಡಿ. ಉದ್ಯೋಗಿಗಳಿಗೆ ಉದ್ಯಮದಲ್ಲಿಉತ್ತಮ ಅವಕಾಶಗಳು ಬರಲಿವೆ. ಮೌಲ್ಯಯುತವಾದ ಏನನ್ನಾದರೂ ಪಡೆಯುವ ಬಯಕೆಯನ್ನು ಇಂದು ಪೂರೈಸಬಹುದು. ನಿಮ್ಮ ವಸ್ತುವು ಕಳೆದುಹೋಗಬಹುದು. ಯಾವುದೇ ಉದ್ವೇಗಕ್ಕೆ ಒಳಗಾಗುವುದು ಬೇಡ. ಹಿರಿಯರ ಸೇವೆಯಲ್ಲಿ ಆಸಕ್ತಿ ಇರುವುದು.
ಕಟಕ ರಾಶಿ: ಆರೋಗ್ಯದಲ್ಲಿ ವ್ಯತ್ಯಸವಾದ ಕಾರಣ ಉತ್ಸಾಹವೂ ಇರದು. ನಿಮ್ಮ ಬಗ್ಗೆ ಇಲ್ಲದೆ ಆರೋಪವು ಬರಬಹುದು. ನಿಮ್ಮ ಕೆಲಸವನ್ನು ನೋಡಿದ ವಿರೋಧಿಗಳು ನಿಮ್ಮನ್ನು ಹೊಗಳುತ್ತಾರೆ. ವ್ಯವಹಾರವನ್ನು ಹೆಚ್ಚಿಸಲು ಕುಟುಂಬದೊಂದಿಗೆ ಸಮಾಲೋಚನೆ ಮಾಡಬೇಕಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿಮಗೆ ಅವಕಾಶಗಳು ಸಿಗುತ್ತವೆ. ಹಣಕಾಸಿನ ವಿಚಾರದಲ್ಲಿ ಮುಖ್ಯವಾಗಿ ಖರ್ಚು ವೆಚ್ಚಗಳ ಬಗ್ಗೆ ಯೋಚಿಸುವಂತಾಗಲಿದೆ. ರಾಜಕೀಯವಾಗಿ ಕೆಲವು ಬದಲಾವಣೆಗಳು ಆಗುವುದು. ದೈವಭಕ್ತಿಯನ್ನು ಬೆಳೆಸಿಕೊಂಡು ಸಾಗಬೇಕಾಗುವುದು. ನೀವು ಭಾವನಾತ್ಮಕವಾಗಿ ತೆಗೆದುಕೊಳ್ಳುವ ನಿರ್ಧಾರಗಳು ನಿಮ್ಮ ಸ್ಥಾನವನ್ನು ದುರ್ಬಲಗೊಳಿಸಬಹುದು. ನಿಮ್ಮದಾದ ವಸ್ತುವನ್ನು ಇತರರಿಗೆ ಕೊಡಬೇಕಾಗುವುದು. ಇಂದು ನಿಮಗೆ ಮಾತಿಗಿಂತ ಮೌನವೇ ಹೆಚ್ಚು ಸೂಕ್ತ ಎನಿಸಬಹುದು.