Horoscope: ದಿನಭವಿಷ್ಯ: ಇಂದು ಅಪರಿಚಿತರ ಮಾತನ್ನು ನೀವು ನಂಬುವಿರಿ-ಎಚ್ಚರ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 10 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಇಂದು ಅಪರಿಚಿತರ ಮಾತನ್ನು ನೀವು ನಂಬುವಿರಿ-ಎಚ್ಚರ
ರಾಶಿ ಭವಿಷ್ಯ
Updated By: ಕಿರಣ್ ಹನುಮಂತ್​ ಮಾದಾರ್

Updated on: May 10, 2024 | 12:45 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಶೋಭನ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 50 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:54 ರಿಂದ 12:29ರ ವರೆಗೆ, ಯಮಘಂಡ ಕಾಲ 15:40 ರಿಂದ 17:15ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:43 ರಿಂದ 09:18ರ ವರೆಗೆ.

ಧನು ರಾಶಿ :ಇಂದು ನಿಮ್ಮ ಆಸ್ತಿಯ ಬಗ್ಗೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಉತ್ತಮ ಸಮಯವಲ್ಲ. ನಿಮ್ಮ ಅಗತ್ಯತೆಗಳ ಯಾದಿಯು ತುಂಬಾ ದೊಡ್ಡದಿದ್ದು ಅದನ್ನು ಪೂರೈಸಲು ಸತತ ಪ್ರಯತ್ನವನ್ನು ಮಾಡುವಿರಿ. ನೀವು ಕೈಗೊಂಡ ಕಾರ್ಯಗಳು ಸಫಲವಾಗಲಿಲ್ಲ ಎಂಬ ಹತಾಶಭಾವವೂ ಸಿಟ್ಟೂ ಏಕಕಾಲಕ್ಕೆ ಬರಲಿದೆ. ಅಪರಿಚಿತರನ್ನು ಆಪ್ತರನ್ನಾಗಿ ಮಾಡಿಕೊಳ್ಳಲು ಹೋಗಿ ಅನಾಹುತವಾದೀತು. ಅಹಂಕಾರವು ತಾನಾಗಿಯೇ ತೋರ್ಪಡುವುದು. ಅಲ್ಪ ಧನಲಾಭಕ್ಕೆ ಹೆಚ್ಚು ಶ್ರಮವಹಿಸುವಿರಿ. ನಿಮ್ಮ ವ್ಯಾಪಾರವನ್ನು ವಿಸ್ತರಿಸಲು ನೀವು ಸಾಲಕ್ಕೆ ಅರ್ಜಿ ಸಲ್ಲಿಸಬೇಕಾಗುವುದು. ಇಂದು ನಿಮ್ಮ ಶತ್ರುಗಳು ಅಸಮಾಧಾನಗೊಳ್ಳುವರು. ಇಂದು ಪೋಷಕರ ಬಗ್ಗೆ ವಿಶೇಷ ಕಾಳಜಿ ವಹಿಸಿ. ಅಪರಿಚಿತರ ಮಾತನ್ನು ನೀವು ನಂಬುವಿರಿ. ಪರೀಕ್ಷೆಯ ಭಯವನ್ನು ನೀವು ಕಳೆದುಕೊಳ್ಳಬೇಕಾಗುವುದು. ಆದಾಯದಲ್ಲಿ ಪೂರ್ಣತೃಪ್ತಿಯು ನಿಮಗೆ ಇರದು.

ಮಕರ ರಾಶಿ :ಅಪರಿಚಿತರೂ ಆಪ್ತರಂತೆ ವರ್ತಿಸಬಹುದು. ನಿಮ್ಮ ಎಲ್ಲ ವಿಚಾರಗಳನ್ನು ಬಿಟ್ಟುಕೊಡುವಿರಿ. ಹಗುರವಾದ ಮಾತುಗಳು ನಿಮಗೆ ಅಪಮಾನವನ್ನು ಮಾಡುವುದು. ನಿದ್ರೆಯಿಲ್ಲದೇ ಮನಸ್ಸು ಕಿರಿಕಿರಿಯನ್ನು ಅನುಭವಿಸುವುದು. ತಂದೆಯಿಂದ ಹಣವನ್ನು ಪಡೆದು ನಿಮಗೆ ಬೇಕಾದ ವಸ್ತುಗಳನ್ನು ಪಡೆಯುವಿರಿ. ಅಧಿಕ ತೂಕವು, ಭವಿಷ್ಯದಲ್ಲಿ ಗಂಭೀರ ಸಮಸ್ಯೆಯನ್ನು ಉಂಟುಮಾಡಬಹುದು. ವ್ಯಾಪಾರಸ್ಥರು ತಮ್ಮ ಗೆಳೆಯರ ಸಲಹೆಯನ್ನು ಆಲಿಸಬೇಕು. ನಕಾರಾತ್ಮಕ ಆಲೋಚನೆಗಳು ನಿಮ್ಮ ಗಮನವನ್ನು ಕಳೆದುಕೊಳ್ಳಲು ಕಾರಣವಾಗಬಹುದು. ನಿಮ್ಮನ್ನು ನಿಮ್ಮವರೇ ಅನುಮಾನಿಸಬಹುದು. ಏನನ್ನೂ ಹೇಳದೇ ನಿಮ್ಮಷ್ಟಕ್ಕೆ ಗಮನಿಸಿ. ಇಂದು ಅನಗತ್ಯ ವಸ್ತುಗಳಿಗಾಗಿ ವ್ಯರ್ಥವಾಗಿ ಖರ್ಚಾಗಬಹುದು. ಅದನ್ನು ತಪ್ಪಿಸಿಕೊಳ್ಳುವುದು ಉತ್ತಮ. ನೀವು ದೈಹಿಕಪೀಡೆಯಿಂದ ಬಳಲುತ್ತಿದ್ದರೆ ದುಃಖವು ಹೆಚ್ಚಾಗಬಹುದು. ಸಾಮಾಜಿಕ ಚಟುವಟಿಕೆಗಳಲ್ಲಿ ಅಡಚಣೆ ಇರುವುದು.

ಕುಂಭ ರಾಶಿ :ನಿಮ್ಮ ಸಂಬಂಧದಲ್ಲಿ ಕೆಲವು ಮಾತುಗಳು ಒಡಕು ತರುವಂತಹವು ಆಗಿರುತ್ತವೆ. ಒತ್ತಡದಿಂದ ನಿಮಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಇಲ್ಲವಾದರೆ ಮಾಡುವ ಕೆಲಸವು ಅಶಿಸ್ತಿನಿಂದ ಇರಬಹುದು. ದೂರದ ಬಂಧುಗಳು ನಿಮ್ಮ ಪರಿಚಯವನ್ನು ಮಾಡಿಕೊಂಡಾರು. ನೈಜ ಸಮಯದ ಆರ್ಥಿಕ ಲಾಭಗಳನ್ನು ನೋಡುವುದು ನಿಮ್ಮನ್ನು ಬಹಳಷ್ಟು ಪ್ರೇರೇಪಿಸುತ್ತದೆ. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ. ಯಾರ ಮಾತನ್ನೇ ಕೇಳುವುದಿದ್ದರೂ ನಿಮ್ಮ ಸಾಮರ್ಥ್ಯವನ್ನು ನೋಡಿಕೊಂಡು ತೀರ್ಮಾನಕ್ಕೆ ಬನ್ನಿ. ಇನ್ನೊಬ್ಬರ ವಸ್ತುಗಳನ್ನು ಬಹಳ ಜಾಗರೂಕತೆಯಿಂದ ಇಟ್ಟುಕೊಳ್ಳಿ. ಯಾರೂ ಇರದ ಪ್ರದೇಶದಲ್ಲಿ ನೀವೇ ದೊಡ್ಡವರಾಗುವಿರಿ. ಎಂದೋ ಸ್ಥಗಿತಗೊಂಡ ಕೆಲಸವನ್ನು ಪೂರ್ಣ ಮಾಡುವಿರಿ. ಇಂದು ನಿಮ್ಮ ಕೆಲಸವನ್ನು ಬದಲು ಮಾಡಿಕೊಳ್ಳಲಿದ್ದೀರಿ. ಶುಭ ಸಮಾರಂಭದಲ್ಲಿ ಭಾಗವಹಿಸಲು ನಿಮಗೆ ಅವಕಾಶ ಸಿಗುತ್ತದೆ. ಅಧಿಕಾರಕ್ಕೆ ಸಂಬಂಧಿಸಿದಂತೆ ಮಿತ್ರನಿಂದ ನಿಮಗೆ ವಂಚನೆಯಾಗಿರುವುದು ಗೊತ್ತಾಗುವುದು.

ಮೀನ ರಾಶಿ :ಇಂದು ನೀವು ನಿಮ್ಮ ಆಸಕ್ತಿಯ ವಿಚಾರವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳುವಿರಿ. ಹಣದ ಕೊರತೆಯಿಂದ ಸಾಲವನ್ನು ಮಾಡುವ ಸಾಧ್ಯತೆಯಿದೆ. ವಾಹನ ಖರೀದಿಯ ವಿಚಾರದಲ್ಲಿ ಗೊಂದಲಗಳು ಬರಬಹುದು. ಮನೆಯಲ್ಲಿ ಭಿನ್ನಾಭಿಪ್ರಾಯ ಇರಲಿದೆ. ಕೆಲವು ಸಮಸ್ಯೆಗಳು ನಿಮ್ಮೆದುರು ಬರಬಹುದು. ಉದ್ಯೋಗದ ನಿಮಿತ್ತ ಪರದೇಶಕ್ಕೆ ಪ್ರಯಾಣವನ್ನು ಮಾಡಬೇಕಾಗಿಬರಬಹುದು. ಸಂಗಾತಿಯ ಮಾತುಗಳನ್ನು ನೀವು ಸಹಿಸಲಾರಿರಿ. ನೀವು ಸರ್ಕಾರದಿಂದ ಹಣವನ್ನು ಪಡೆದುಕೊಳ್ಳುವ ಬಗ್ಗೆ ಚಿಂತಿಸುವಿರಿ. ಅನಪೇಕ್ಷಿತ ಮಾತುಗಳನ್ನು ನೀವು ಯಾರ ಜೊತೆಯೂ ಆಡುವುದು ಬೇಡ. ಇಂದಿನ ಕಾರ್ಯವನ್ನು ಸಾಧನೆ ಮಾಡಲು ಹೆಚ್ಚಿನ ಓಡಾಟವು ಬರಬಹುದು. ಧಾರ್ಮಿಕ ಆಚರಣೆಯಿಂದ ಸಂಕಷ್ಟಗಳು ದೂರಾಗುವ ನಂಬಿಕೆ ಇರಲಿದೆ. ರಾಜಕಾರಣಿಗಳು ಸಮಾರಂಭಗಳಿಗೆ ಭಾಗವಹಿಸುವರು. ಸರ್ಕಾರದ ಕಡೆಯಿಂದ ಆಗುವ ನಿಮ್ಮ ಕೆಲಸವನ್ನು ಪ್ರಭಾವಿ ವ್ಯಕ್ತಿಗಳ ಮೂಲಕ ಮುನ್ನಡೆಸುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)